Site icon Vistara News

Job Vacancies: ಸಾವಿರ ಮಹಿಳಾ ಪೊಲೀಸ್ ಕಾನ್‌‌ಸ್ಟೇಬಲ್ ಹುದ್ದೆಗಳಿಗೆ ಲಕ್ಷಕ್ಕೂ ಹೆಚ್ಚು ಅರ್ಜಿ! ಫುಟ್‌‌ಪಾತ್‌‌ನಲ್ಲೇ ಮಲಗಿದ್ದ ಮಹಿಳಾ ಅಭ್ಯರ್ಥಿಗಳು

Job Vacancies


ಮುಂಬೈ : ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಎಷ್ಟರ ಮಟ್ಟಿಗೆ ಇದೆ ಎಂದರೆ ಯಾವುದೇ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನಿಸಿದರೆ ಸಾಕು ಲಕ್ಷಾಂತರ ಜನರು ಆ ಕಚೇರಿಯ ಬಳಿ ಬರುತ್ತಾರೆ. ಅಷ್ಟೋ ಕಡೆ ನೂಕು ನುಗ್ಗುಲು ಕೂಡ ಉಂಟಾಗುತ್ತದೆ. ಇದೀಗ ಮಹಿಳಾ ಕಾನ್ಸ್ಟೇಬಲ್ ಮತ್ತು ಮಹಿಳಾ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳಿಗೆ 1,257 ಹುದ್ದೆ (Job vacancies)ಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಮುಂಬೈ ಪೊಲೀಸರು ರಾಜ್ಯಾದ್ಯಂತ 1.11 ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಅದರಂತೆ, ಸೋಮವಾರ ಮರೀನ್ ಡ್ರೈವ್‍ನಲ್ಲಿ ಡ್ರೈವರ್ ನೇಮಕಾತಿಗಾಗಿ ದೈಹಿಕ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಜಮಾಯಿಸಿದರು. ಅವರೆಲ್ಲಾ ಪುಟ್ಪಾತ್‍ನಲ್ಲಿ ಮಲಗಿದ್ದರು.

ವಿರೋಧ ಪಕ್ಷದ ನಾಯಕ ವಿಜಯ್ ವಡ್ಡೇಟಿವಾರ್ ಮಂಗಳವಾರ ತಡರಾತ್ರಿ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಇದಕ್ಕೆ ಸಂಬಂಧಪಟ್ಟ ವಿಡಿಯೊ ಮತ್ತು ಸಂದೇಶವನ್ನು ಪೋಸ್ಟ್ ಮಾಡುವ ಮೂಲಕ ಸರ್ಕಾರದ ಪಾತ್ರದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಲಾದ ಸಂದೇಶದಲ್ಲಿ, “ಮುಂಬೈನಲ್ಲಿ ಪೊಲೀಸ್ ನೇಮಕಾತಿಗಾಗಿ ಬಂದ ಹುಡುಗಿಯರು ಇದರಲ್ಲಿ ಕಂಡುಬರುತ್ತಾರೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಮುಂಬೈನಂತಹ ದೊಡ್ಡ ನಗರಗಳಿಗೆ ಬರುವ ಹುಡುಗಿಯರಿಗೆ ರಾತ್ರಿ ತಂಗಲು ಸರ್ಕಾರ ಮತ್ತು ಪೊಲೀಸ್ ಆಡಳಿತಕ್ಕೆ ವಸತಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲವೇ? ಮಳೆ ಬಂದಾಗ ಈ ಹುಡುಗಿಯರು ಎಲ್ಲಿ ಮಲಗುತ್ತಾರೆ? ಅವರ ಸುರಕ್ಷತೆಯ ಬಗ್ಗೆ ಏನು? ವಾಶ್ ರೂಮ್ ವ್ಯವಸ್ಥೆ ಬಗ್ಗೆ ಏನು? ಇದು ಬೇಜವಾಬ್ದಾರಿಯುತ ಕೆಲಸ “ ಎಂದು ತಿಳಿಸಿದ್ದಾರೆ. ಅಲ್ಲದೇ ಆಕಾಂಕ್ಷಿಗಳಿಗೆ ವಸತಿ ಸೌಕರ್ಯಗಳನ್ನು ಒದಗಿಸುವಂತೆ ವಡ್ಡೇಟಿವಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

ನಿರುದ್ಯೋಗ ಸಮಸ್ಯೆ ದೇಶದಲ್ಲಿ ಎಷ್ಟು ಕಾಡುತ್ತಿದೆ ಎಂಬುದಕ್ಕೆ ಈ ಹಿಂದೆ ಮುಂಬೈನಲ್ಲಿ ನಡೆದ ಈ ಘಟನೆಯೂ ಕೂಡ ಸಾಕ್ಷಿಯಾಗಿದೆ. ಈ ಹಿಂದೆ ಏರ್ ಇಂಡಿಯಾ ಏರ್ಪೋರ್ಟ್ ಸರ್ವೀಸಸ್ ಲಿಮಿಟೆಡ್ (ಎಐಎಎಸ್ಎಲ್) ಮುಂಬೈ ವಿಮಾನ ನಿಲ್ದಾಣದಲ್ಲಿ ಕೇವಲ 600 ಖಾಲಿ ಹುದ್ದೆಗಳಿಗೆ ಸ್ಪರ್ಧಿಸಲು 25,000 ಕ್ಕೂ ಹೆಚ್ಚು ಆಕಾಂಕ್ಷಿಗಳು ಹಾಜರಾಗಿದ್ದರಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಗೊಂದಲಕ್ಕೆ ಕಾರಣವಾಯಿತು. ಭಾರಿ ಜನಸಂದಣಿಯನ್ನು ನಿರ್ವಹಿಸಲು ಏರ್ ಇಂಡಿಯಾ ಸಿಬ್ಬಂದಿ ಹೆಣಗಾಡಬೇಕಾಯಿತು, ಇದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ಕೂಡ ಎದುರಾಗಿತ್ತು

Exit mobile version