Kolkata Doctor Murder Case: ಹೆಣ್ಣಿನ ಮೇಲೆ ಆಸೆಯಾದರೆ ನಮ್ಮ ಬಳಿ ಬನ್ನಿ; ಕಾಮುಕರಿಗೆ ಯುವತಿಯ ಮುಕ್ತ ಆಹ್ವಾನ! - Vistara News

Latest

Kolkata Doctor Murder Case: ಹೆಣ್ಣಿನ ಮೇಲೆ ಆಸೆಯಾದರೆ ನಮ್ಮ ಬಳಿ ಬನ್ನಿ; ಕಾಮುಕರಿಗೆ ಯುವತಿಯ ಮುಕ್ತ ಆಹ್ವಾನ!

Kolkata Doctor Murder Case: ನಿಮಗೆ ಹೆಣ್ಣಿನ ಮೇಲೆ ಅಷ್ಟೊಂದು ವ್ಯಾಮೋಹವಿದ್ದರೆ ನಮ್ಮ ಬಳಿಗೆ ಬನ್ನಿ. ದಯವಿಟ್ಟು ಮಹಿಳೆಯರ ಜೀವನವನ್ನು ಹಾಳು ಮಾಡಬೇಡಿ. ಅತ್ಯಾಚಾರವನ್ನು ಮಾಡುವ ಮೂಲಕ ಅವರ ಜೀವನವನ್ನು ನಾಶಪಡಿಸಬೇಡಿ” ಎಂದು ಲೈಂಗಿಕ ಕಾರ್ಯಕರ್ತೆ ಹೇಳಿದ ಮಾತು ಸಖತ್ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಅವಳನ್ನು ಹೀರೋ ಎಂದು ಹೊಗಳಿದ್ದಾರೆ. ‘ಅತ್ಯಾಚಾರಿಗಳು’ ಅವಳಿಂದ ಮಾನವೀಯತೆಯನ್ನು ಕಲಿಯಬೇಕೆಂದು ತಿಳಿಸಿದ್ದಾರೆ. ಈ ವಿಡಿಯೊ ನೋಡಿ.

VISTARANEWS.COM


on

Kolkata Doctor Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಕೋಲ್ಕತ್ತಾ : ಕೋಲ್ಕತಾದ ಆರ್ ಜಿಕೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ 31 ವರ್ಷದ ತರಬೇತಿ ವೈದ್ಯರ ಕ್ರೂರ ಅತ್ಯಾಚಾರ (Kolkata Doctor Murder Case) ಮತ್ತು ಕೊಲೆ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದೆ. ಈ ಕುರಿತು ವ್ಯಾಪಕ ಪ್ರತಿಭಟನೆಗಳು ನಡೆಸಿ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ತ್ವರಿತವಾಗಿ ವಿಚಾರಣೆಗೆ ಒಳಪಡಿಸಬೇಕೆಂದು ಒತ್ತಾಯಿಸಲಾಗಿದೆ. ಇಂತಹ ಆಕ್ರೋಶದ ಮಧ್ಯೆ, ಒಂದು ಹೃದಯಸ್ಪರ್ಶಿ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ವಿಡಿಯೊದಲ್ಲಿ ಕೋಲ್ಕತ್ತಾದ ಸೋನಾಗಚಿ ಕೆಂಪುದೀಪ ಪ್ರದೇಶದ ಮಹಿಳೆಯೊಬ್ಬರು ಕಾಮುಕರಲ್ಲಿ ವಿನಂತಿಯೊಂದನ್ನು ಮಾಡಿಕೊಂಡಿದ್ದಾಳೆ.

ನಿಮಗೆ ಹೆಣ್ಣಿನ ಮೇಲೆ ಅಷ್ಟೊಂದು ವ್ಯಾಮೋಹವಿದ್ದರೆ ನಮ್ಮ ಬಳಿಗೆ ಬನ್ನಿ. ದಯವಿಟ್ಟು ಮಹಿಳೆಯರ ಜೀವನವನ್ನು ಹಾಳು ಮಾಡಬೇಡಿ. ಅತ್ಯಾಚಾರವನ್ನು ಮಾಡುವ ಮೂಲಕ ಅವರ ಜೀವನವನ್ನು ನಾಶಪಡಿಸಬೇಡಿ ಎಂದು ಅವಳು ವಿಡಿಯೊ ಮೂಲಕ ಕರೆ ನೀಡಿದ್ದಾಳೆ. ಆಕೆಯ ಹೇಳಿಕೆಯ ವಿಡಿಯೊ ಈಗ ವೈರಲ್ ಆಗಿದ್ದು, ಆಕೆಯನ್ನು ಆನ್‍ಲೈನ್ ಸೆನ್ಸೇಷನ್ ಆಗಿಸಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಅವಳನ್ನು ಹೀರೋ ಎಂದು ಹೊಗಳಿದ್ದಾರೆ ಮತ್ತು ‘ಅತ್ಯಾಚಾರಿಗಳು’ ಅವಳಿಂದ ಮಾನವೀಯತೆಯನ್ನು ಕಲಿಯಬೇಕೆಂದು ತಿಳಿಸಿದ್ದಾರೆ.

“ನಾವು ಇಲ್ಲಿ ದೊಡ್ಡ ರೆಡ್ ಲೈಟ್ ಏರಿಯಾವನ್ನು ಹೊಂದಿದ್ದೇವೆ. ಇಲ್ಲಿ ಮಹಿಳೆಯರು 20-50 ರೂ.ಗಳಿಗೆಲ್ಲ ಸಿಗುತ್ತಾರೆ. ನಿಮಗೆ ಕಾಮ ಕೆರಳಿದಾಗ ಅತ್ಯಾಚಾರ ಮಾಡುವ ಬದಲು ಇಲ್ಲಿಗೆ ಬನ್ನಿ. ಆದರೆ ದಯವಿಟ್ಟು, ಕೇವಲ ಜೀವನೋಪಾಯಕ್ಕಾಗಿ ಕಷ್ಟಪಡುತ್ತಿರುವ ಮಹಿಳೆಯರನ್ನು ಗುರಿಯಾಗಿಸಬೇಡಿ. ಈ ಮನಸ್ಥಿತಿಯನ್ನು ಬದಲಾಯಿಸುವ ಸಮಯ ಬಂದಿದೆ” ಎಂದು ಲೈಂಗಿಕ ಕಾರ್ಯಕರ್ತೆ ಹೇಳಿದ್ದಾಳೆ.

ಈ ವಿಡಿಯೊಗೆ ಅನೇಕರು ಕಾಮೆಂಟ್ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. “ಹೆಚ್ಚಿನ ಅತ್ಯಾಚಾರಿಗಳು ಪಶ್ಚಾತ್ತಾಪದ ಕೊರತೆ, ಪ್ರಚೋದನೆ, ಅಧಿಕಾರದ ಆಸೆ ಮತ್ತು ಮಹಿಳೆಯರ ದೇಹದ ಮೇಲಿನ ಆಸೆಯಂತಹ ಕೆಲವು ಸಾಮಾನ್ಯ ಗುಣಲಕ್ಷಣಗಳನ್ನು ಹೊಂದಿರುತ್ತಾರೆ” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರೊಬ್ಬರು, ರಾಕ್ಷಸನು ವೇಶ್ಯೆಗೆ ಇದೆಲ್ಲವನ್ನೂ ಮಾಡಿದರೆ ಅದು ಸರಿಯೇ? ಅವಳು ಮನುಷ್ಯಳಲ್ಲವೇ? ಎಂದು ಬರೆದಿದ್ದಾರೆ.

ಇದನ್ನೂ ಓದಿ:ವಧುವಿನ ಮುಂದೆಯೇ ಆಕೆಯ ಸಹೋದರಿಗೆ ಕಿಸ್‌ ಕೊಟ್ಟ ವರ! ಮದುವೆಗೆ ಬಂದವರು ಕಕ್ಕಾಬಿಕ್ಕಿ!

ರೆಡ್ ಲೈಟ್ ಏರಿಯಾ ಮಹಿಳೆಯರು ಅಮಾನವೀಯರಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮತ್ತೊಬ್ಬ ಬಳಕೆದಾರರು ಹಂಚಿಕೊಂಡಿದ್ದಾರೆ. ಇನ್ನೊಬ್ಬರು ಹೇಳಿದರು, ಈ ಹೇಳಿಕೆ ಲೈಂಗಿಕ ಹಿಂಸಾಚಾರದ ವರ್ತನೆಗಳು, ನಡವಳಿಕೆಗಳು ಮತ್ತು ವ್ಯವಸ್ಥೆಗಳನ್ನು ಶಾಶ್ವತವಾಗಿ ಬದಲಾಯಿಸುವ ಕಠಿಣ ಕೆಲಸವನ್ನು ತಪ್ಪಿಸುವ ಮಾರ್ಗವಾಗಿದೆ. ಈ ವಿಧಾನವು ಹಾನಿಕಾರಕ ಮಾನದಂಡಗಳನ್ನು ಪ್ರಶ್ನಿಸುವ ಮತ್ತು ಪರಿವರ್ತಿಸುವ ಬದಲು ಉದ್ದೇಶಪೂರ್ವಕವಾಗಿ ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

CM Siddaramaiah: ಬುಡಕ್ಕೆ ನೀರು ಬಂದಾಗ ಬಿಜೆಪಿ ನಾಯಕರಿಗೆ ಜಾತಿ ನೆನಪಾಗುತ್ತದೆ! ಸಿದ್ದರಾಮಯ್ಯ ಗೇಲಿ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು ʼದಲಿತ ಗುರಾಣಿʼ ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಎಕ್ಸ್‌(ಟ್ವೀಟ್‌) ನಲ್ಲಿ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಟೀಕಿಸಿದ್ದಾರೆ.

ಗುರುವಾರ ಈ ಕುರಿತು ಎಕ್ಸ್‌(ಟ್ವೀಟ್‌)ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ ಎಂದಿದ್ದಾರೆ.

ಇದನ್ನೂ ಓದಿ: Gold Rate Today: ಸುವರ್ಣಪ್ರಿಯರಿಗೆ ಸಿಹಿ ಸುದ್ದಿ; ಇಂದೂ ಚಿನ್ನದ ದರದಲ್ಲಿ ಇಳಿಕೆ

ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರಚಂದ್ ಗೆಹ್ಲೋಟ್‌ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ‘‘ಪಂಜರದ ಗಿಣಿʼ ಯನ್ನಾಗಿ ಯಾಕೆ ಮಾಡಿದ್ದೀರಿ? ‘‘ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮʼ ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ಎಂದು ಕೇಳಿದ್ದಾರೆ.

ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ‘ಸಂಘಿ ಮನಸ್ಸು’ ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು. ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು ಎಂದು ಆರೋಪಿಸಿದ್ದಾರೆ.

ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ ಎಂದು ಸಿಎಂ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋತ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Continue Reading

Latest

Sexual Abuse: ಕಾಶ್ಮೀರದಲ್ಲಿ ಹಿಂದೂ ಬಾಲಕಿ ಮೇಲೆ ಅತ್ಯಾಚಾರ; ಬೃಹತ್‌ ಪ್ರತಿಭಟನೆ

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿರುವ (Sexual Abuse) ಮಾರ್ವಾದಲ್ಲಿ 15 ವರ್ಷದ ಹಿಂದೂ ಬಾಲಕಿಯ ಮೇಲೆ ಮುಸ್ಲಿಂ ಹುಡುಗ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಬಂಧಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆರೋಪಿ ಮತ್ತು ಅವರ ಕುಟುಂಬವನ್ನು ರಕ್ಷಿಸುತ್ತಿರುವುದಕ್ಕೆ ಸ್ಟೇಷನ್ ಹೌಸ್ ಅಧಿಕಾರಿ ಜಹೀರ್ ಇಕ್ಬಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

VISTARANEWS.COM


on

Sexual Abuse
Koo


ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿರುವ ಮಾರ್ವಾದಲ್ಲಿ 15 ವರ್ಷದ ಹಿಂದೂ ಬಾಲಕಿಯ ಮೇಲೆ ಸ್ಥಳೀಯ ಯುವಕ ಅತ್ಯಾಚಾರ (Sexual Abuse) ಎಸಗಿದ್ದು, ಈ ಬಗ್ಗೆ ಅಧಿಕಾರಿಗಳು ಅತಿರೇಕವಾಗಿ ವರ್ತಿಸಿದ ಕಾರಣ ಈ ಪ್ರದೇಶದಲ್ಲಿ ಸನಾತನ ಧರ್ಮ ಸಭಾ ಸೇರಿದಂತೆ ಹಿಂದೂಗಳ ಬೃಹತ್ ಪ್ರತಿಭಟನೆಗೆ ಕಾರಣವಾಯಿತು. ಆಗಸ್ಟ್ 20ರಂದು ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪ್ರಾರಂಭಿಸಲಾಗಿದೆ. ಸ್ಟೇಷನ್ ಹೌಸ್ ಅಧಿಕಾರಿ ಜಹೀರ್ ಇಕ್ಬಾಲ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಬಂಧಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಂತಿಯುತವಾಗಿ ಹೋಗುತಿದ್ದ ಮಹಿಳಾ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಲು ಆದೇಶಿಸಿದ ಎಸ್ಎಚ್ಒ ಜಹೀರ್ ಇಕ್ಬಾಲ್ ಅವರು ಆರೋಪಿ ಮತ್ತು ಅವರ ಕುಟುಂಬವನ್ನು ರಕ್ಷಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪೊಲೀಸರ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ ನಂತರ, ಎಸ್ ಡಿಎಂ ಸಂತ್ರಸ್ತೆಯ ಕುಗ್ರಾಮಕ್ಕೆ ತೆರಳಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿತು. ಇದರ ನಡುವೆ ಕೋಪಗೊಂಡ ಜನರು ಆರೋಪಿಯ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಪ್ರಯತ್ನಿಸಿದರು. ಆಗ ಆರೋಪಿ ತನ್ನ ಕುಟುಂಬ ಸದಸ್ಯರೊಂದಿಗೆ ಅಲ್ಲಿಂದ ಓಡಿಹೋದನು.

9 ಮತ್ತು 10ನೇ ತರಗತಿಯ 12 ವಿದ್ಯಾರ್ಥಿಗಳಿಗೆ ಮಾರ್ವಾದಲ್ಲಿನ ತಮ್ಮ ಶಾಲೆಯನ್ನು ತಲುಪಲು ಕಾಡಿನ ಮೂಲಕ ನಡೆಯಬೇಕಾಗಿರುವುದರಿಂದ ಹಾಗೂ ಕಾಡು ಪ್ರಾಣಿಗಳಲ್ಲದೆ, ಮಾರ್ವಾದ ಕಾಡುಗಳಲ್ಲಿ ಇತರ ಸಂಭಾವ್ಯ ಅಪಾಯಗಳಿರುವ ಕಾರಣ ಆಡಳಿತವು ಇಬ್ಬರು ಶಿಕ್ಷಕರನ್ನು ಗ್ರಾಮಕ್ಕೆ ನಿಯೋಜಿಸಿದೆ ಎಂಬುದಾಗಿ ತಿಳಿದು ಬಂದಿದೆ. ಹಾಗೇ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ 20ರಿಂದ 30 ಮಹಿಳೆಯರ ಗುಂಪನ್ನು ತಡೆದು ಸಮಾಧಾನಪಡಿಸಲಾಗಿದೆ. ಆದರೆ ಪ್ರತಿಭಟನೆಯ ವೇಳೆ ಒಬ್ಬ ಹುಡುಗಿ ಗಾಯಗೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ವಧುವಿನ ಮುಂದೆಯೇ ಆಕೆಯ ಸಹೋದರಿಗೆ ಕಿಸ್‌ ಕೊಟ್ಟ ವರ! ಮದುವೆಗೆ ಬಂದವರು ಕಕ್ಕಾಬಿಕ್ಕಿ!

ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸನಾತನ ಧರ್ಮ ಸಭಾದ ನಿಯೋಗವು ಕಿಶ್ತ್ವಾರ್ ಜಿಲ್ಲಾಧಿಕಾರಿ ರಾಜೇಶ್ ಕುಮಾರ್ ಶಾವನ್ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿತು. ಹಂಜೆಲ್ ಮತ್ತು ಚಂಜರ್ ಪ್ರದೇಶಗಳಲ್ಲಿನ ಹಿಂದೂ ಅಲ್ಪಸಂಖ್ಯಾತರಿಗೆ ಭದ್ರತೆ ನೀಡುವಂತೆ ಮತ್ತು ಬಾಲಕಿಯರು ಶಾಲೆಗೆ ಹೋಗಲು ಅರಣ್ಯ ಪ್ರದೇಶಗಳ ಮೂಲಕ ಹೆಚ್ಚು ದೂರ ಪ್ರಯಾಣಿಸದಂತೆ ಹೊಸ ಯೋಜನೆಯನ್ನು ಜಾರಿ ಮಾಡುವಂತೆ ಕೋರಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ.

Continue Reading

ದೇಶ

Green Ammonia Export: ಜಪಾನ್‌ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು! ಒಪ್ಪಂದಕ್ಕೆ ಸಹಿ

ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್‌ಗೆ ಹಸಿರು ಅಮೋನಿಯಾ ರಫ್ತು (Green Ammonia Export) ಮಾಡಲು ಒಪ್ಪಂದ ಮಾಡಿಕೊಂಡಿದೆ. ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಜಪಾನ್‌ಗೆ ಇದೇ ಮೊದಲ ಬಾರಿ ಹಸಿರು ಅಮೋನಿಯ ರಫ್ತು ಯೋಜನೆ ಆಫ್‌ಟೇಕ್ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿದ್ದಾರೆ.

VISTARANEWS.COM


on

Green Ammonia Export
Koo

ನವದೆಹಲಿ: ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್‌ಗೆ ಹಸಿರು ಅಮೋನಿಯಾ ರಫ್ತು (Green Ammonia Export) ಮಾಡಲು ಒಪ್ಪಂದ ಮಾಡಿಕೊಂಡಿದೆ. ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಜಪಾನ್‌ಗೆ ಇದೇ ಮೊದಲ ಬಾರಿ ಹಸಿರು ಅಮೋನಿಯ ರಫ್ತು ಯೋಜನೆ ಆಫ್‌ಟೇಕ್ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ವೇಳೆ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ, ಜಪಾನ್‌ಗೆ ಹಸಿರು ಅಮೋನಿಯಾ ರಫ್ತು ಮಾಡುವ ಈ ಒಪ್ಪಂದ ಹಸಿರು ಹೈಡ್ರೋಜನ್ ಮತ್ತು ಅಮೋನಿಯಾ ಉತ್ಪಾದನೆಯಲ್ಲಿ ಭಾರತ ಜಾಗತಿಕ ನಾಯಕನಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: KPSC Exams : ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಭಾರತದಲ್ಲಿ ಹಸಿರು ಅಮೋನಿಯಾ ಉತ್ಪಾದನೆಗೆ ಸೆಂಬ್‌ಕಾರ್ಪ್ ಇಂಡಸ್ಟ್ರೀಸ್ ಮುಂದಾಗಿದ್ದು, ಇದಕ್ಕಾಗಿ ದೇಶದ ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿಕೊಳ್ಳುತ್ತದೆ ಎಂದರು. ಜಪಾನ್‌ ತನ್ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಬಳಕೆಯನ್ನು ಭಾಗಶಃ ಬದಲಾಯಿಸಿ ಹಸಿರು ಅಮೋನಿಯಾ ಬಳಕೆಗೆ ಮುಂದಾಗಿದ್ದು, ಭಾರತ ಹಸಿರು ಅಮೋನಿಯಾ ಪೂರೈಕೆ ಮಾಡುವ ಮೂಲಕ ಜಪಾನ್ ಈ ಕಾರ್ಯಕ್ಕೆ ಸಾಥ್ ನೀಡಲಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಸಿರು ಜಲಜನಕ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಹಸಿರು ಅಮೋನಿಯಾ ರಫ್ತು ಮಾಡುವ ಜಪಾನ್ ನೊಂದಿಗಿನ ಒಪ್ಪಂದ ನಿದರ್ಶನ ಎಂದು ಹೇಳಿದರು.

7.5 ಲಕ್ಷ ಟಿಪಿಎಗೆ ಟೆಂಡರ್

ಪ್ರಸ್ತುತದಲ್ಲಿ ಗ್ರೀನ್ ಅಮೋನಿಯಾದ 7.5 ಲಕ್ಷ ಟಿಪಿಎಗೆ ಟೆಂಡರ್ ಆಗಿದೆ. 4.5 ಲಕ್ಷ ಟಿಪಿಎ ಸಾಮರ್ಥ್ಯಕ್ಕೆ ಹೆಚ್ಚುವರಿ ಟೆಂಡರ್‌ಗಳನ್ನು ಸಹ ನಿರೀಕ್ಷಿಸಲಾಗಿದೆ ಎಂದು ಸಚಿವ ಜೋಶಿ ತಿಳಿಸಿದರು.

1 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ

ಭಾರತದಲ್ಲಿ ವಾರ್ಷಿಕ ಒಂದು ಮಿಲಿಯನ್ ಟನ್‌ಗಳಷ್ಟು ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ ಹೊಂದಿದ್ದು, ಇದಕ್ಕಾಗಿ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದೆ. ಹಸಿರು ಶಕ್ತಿ ಉತ್ಪಾದನೆಯಲ್ಲಿ ಭಾರತ ತ್ವರಿತ ಮತ್ತು ಅಭೂತಪೂರ್ವ ಸಾಧನೆ ತೋರುತ್ತಿದೆ ಎಂದರು.

ಇದನ್ನೂ ಓದಿ: Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಭಾರತ, ಜಪಾನ್ ಮತ್ತು ಸಿಂಗಾಪುರ ಈ ಮೂರು ದೇಶಗಳು ಇಂಧನ ದಕ್ಷತೆ ಮತ್ತು ನವೀಕರಿಸಬಹುದಾದ ಇಂಧನ ತಂತ್ರಜ್ಞಾನಗಳ ಮೇಲೆ ಸಹಯೋಗ ಮಾಡುತ್ತಿವೆ ಎಂದು ತಿಳಿಸಿದರು.

Continue Reading

ರಾಜಕೀಯ

TVK Party Flag Unveils: ತಮ್ಮ ರಾಜಕೀಯ ಪಕ್ಷದ ಧ್ವಜ, ಚಿಹ್ನೆ ಅನಾವರಣಗೊಳಿಸಿದ ನಟ ವಿಜಯ್

ತಮಿಳಗ ವೆಟ್ರಿ ಕಳಗಂ ಪಕ್ಷದ ಮೆರೂನ್ (ಕೆಂಗಂದು) ಮತ್ತು ಹಳದಿ ಬಣ್ಣದ ಧ್ವಜವನ್ನು (TVK Party Flag Unveils) ನಟ ವಿಜಯ್ ಅನಾವರಣಗೊಳಿಸಿದರು. ಧ್ವಜದ ಮಧ್ಯದಲ್ಲಿ ಎರಡು ಆನೆಗಳು ಮತ್ತು ನಕ್ಷತ್ರಗಳಿಂದ ಸುತ್ತುವರಿದ ನವಿಲಿನ ಗುರುತು ಇದೆ. ಈ ಧ್ವಜವನ್ನು ಪನೈಯೂರ್ ಪಕ್ಷದ ಕಚೇರಿಯಲ್ಲಿ ವಿಜಯ್ ಧ್ವಜಾರೋಹಣ ಮಾಡಿ ಬಳಿಕ ರಾಜಕೀಯ ಪಕ್ಷದ ಅಧಿಕೃತ ಹಾಡನ್ನು ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

By

TVK Party Flag Unveils
Koo

ತಮಿಳು ಚಿತ್ರರಂಗದ (Tamil cinema) ಸೂಪರ್ ಸ್ಟಾರ್ (Super star) ವಿಜಯ್ (actor vijay) ಅವರು ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂನ (Tamizhaga Vetri Kazhagam) ಧ್ವಜ ಮತ್ತು ಚಿಹ್ನೆಯನ್ನು (TVK Party Flag Unveils) ಗುರುವಾರ ಅನಾವರಣಗೊಳಿಸಿದರು.

ಮೆರೂನ್ (ಕೆಂಗಂದು) ಮತ್ತು ಹಳದಿ ಬಣ್ಣವಿರುವ ಧ್ವಜದ ಮಧ್ಯದಲ್ಲಿ ಎರಡು ಆನೆಗಳು ಮತ್ತು ನಕ್ಷತ್ರಗಳಿಂದ ಸುತ್ತುವರಿದ ನವಿಲಿನ ಗುರುತು ಇದೆ. ಈ ಧ್ವಜವನ್ನು ಪನೈಯೂರ್ ಪಕ್ಷದ ಕಚೇರಿಯಲ್ಲಿ ವಿಜಯ್ ಧ್ವಜಾರೋಹಣ ಮಾಡಿ ಬಳಿಕ ರಾಜಕೀಯ ಪಕ್ಷದ ಅಧಿಕೃತ ಹಾಡನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿಯಲ್ಲಿ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿ, ತಮಿಳುನಾಡಿನಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದರು. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷವು ಯಾವುದೇ ರಾಜಕೀಯ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ.

ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದ ಬಳಿಕ ಮಾತನಾಡಿದ ವಿಜಯ್, ನೀವೆಲ್ಲರೂ ನಮ್ಮ ಮೊದಲ ರಾಜ್ಯ ಸಮ್ಮೇಳನಕ್ಕಾಗಿ ಕಾಯುತ್ತಿದ್ದೀರಿ ಎಂದು ನನಗೆ ತಿಳಿದಿದೆ. ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ ಮತ್ತು ಶೀಘ್ರದಲ್ಲೇ ನಾನು ಅದನ್ನು ಘೋಷಿಸುತ್ತೇನೆ. ಅದಕ್ಕೂ ಮೊದಲು ನಾನು ಇಂದು ನಮ್ಮ ಪಕ್ಷದ ಧ್ವಜವನ್ನು ಅನಾವರಣ ಮಾಡಿದ್ದೇನೆ. ನನಗೆ ತುಂಬಾ ಹೆಮ್ಮೆ ಅನಿಸುತ್ತದೆ. ತಮಿಳುನಾಡಿನ ಅಭಿವೃದ್ಧಿಗೆ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ತಮಿಳುನಾಡಿನ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಅವರು, ಇನ್ನು ಮುಂದೆ ತಮಿಳುನಾಡು ಉತ್ತಮವಾಗಿರುತ್ತದೆ. ಗೆಲುವು ಖಚಿತ ಎಂದು ತಿಳಿಸಿದ್ದಾರೆ. ಉತ್ತರ ತಮಿಳುನಾಡಿನ ವಿಕ್ರವಾಂಡಿಯಲ್ಲಿ ಸಾರ್ವಜನಿಕರ ದೃಷ್ಟಿಯಲ್ಲಿ ಔಪಚಾರಿಕವಾಗಿ ಪಕ್ಷವನ್ನು ಪ್ರಾರಂಭಿಸಲು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಬೃಹತ್ ರಾಲಿಯನ್ನು ನಡೆಸಿ ಧ್ವಜವನ್ನು ಬಹಿರಂಗಪಡಿಸಲಾಗುತ್ತದೆ. ಚುನಾವಣಾ ಆಯೋಗದ ಅಡಿಯಲ್ಲಿ ಪಕ್ಷದ ನೋಂದಣಿ ಮುಂದುವರಿದ ಹಂತದಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು.


ಇದನ್ನೂ ಓದಿ: Jagan Mohan Reddy: ಬರೀ ಎಗ್‌ ಪಫ್ಸ್‌ಗಾಗಿ ಒಂದಲ್ಲ.. ಎರಡಲ್ಲ ಬರೋಬ್ಬರಿ 3.6 ಕೋಟಿ ರೂ. ವೆಚ್ಚ- ಜಗನ್‌ ಮತ್ತೊಂದು ಹಗರಣ ಬಯಲು

ಧ್ವಜ ಗೀತೆಯನ್ನು ಜನಪ್ರಿಯ ಸಂಗೀತ ನಿರ್ದೇಶಕ ಎಸ್. ಥಮನ್ ಸಂಯೋಜಿಸಿದ್ದು, ಸಾಹಿತ್ಯವನ್ನು ವಿ. ವಿವೇಕ್ ಬರೆದಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ 300ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ವಿಜಯ್ ಅವರ ಅಭಿಮಾನಿಗಳ ಸಂಘಗಳ ಸದಸ್ಯರನ್ನು ಆಹ್ವಾನಿಸಲಾಗಿದೆ ಎನ್ನಲಾಗಿದೆ.

Continue Reading
Advertisement
CM Siddaramaiah
ಬೆಂಗಳೂರು6 mins ago

CM Siddaramaiah: ಬುಡಕ್ಕೆ ನೀರು ಬಂದಾಗ ಬಿಜೆಪಿ ನಾಯಕರಿಗೆ ಜಾತಿ ನೆನಪಾಗುತ್ತದೆ! ಸಿದ್ದರಾಮಯ್ಯ ಗೇಲಿ

Jammu-Kashmir Election
ದೇಶ8 mins ago

Jammu-Kashmir Election: ರಂಗೇರಿದ ಚುನಾವಣೆ- ಫಾರೂಖ್‌ ಭೇಟಿಯಾದ ರಾಹುಲ್‌, ಖರ್ಗೆ; ಕಾಂಗ್ರೆಸ್‌-NC ಮೈತ್ರಿ ಕನ್ಫರ್ಮ್‌

Lung Cancer
ಆರೋಗ್ಯ10 mins ago

Lung Cancer: ಸಿಗರೇಟ್ ಮಾತ್ರವಲ್ಲ, ಶ್ವಾಸಕೋಶದ ಕ್ಯಾನ್ಸರ್‌‌ಗೆ ಇನ್ನೂ ಹಲವು ಕಾರಣಗಳಿವೆ!

Archana Kamath
ಕ್ರೀಡೆ51 mins ago

Archana Kamath: 24ನೇ ವಯಸ್ಸಿಗೆ ಟೇಬಲ್ ಟೆನಿಸ್​ಗೆ ವಿದಾಯ ಹೇಳಿದ ಕನ್ನಡತಿ, ಒಲಿಂಪಿಯನ್​ ಅರ್ಚನಾ ಕಾಮತ್

Belgavi News
ಬೆಳಗಾವಿ57 mins ago

Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

Kolkata Doctor murder case
ದೇಶ1 hour ago

Kolkata Doctor murder case: 36 ಗಂಟೆಗಳ ಶಿಫ್ಟ್‌ನಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವುದು ಅಮಾನವೀಯ- ಸುಪ್ರೀಂ ಅಭಿಪ್ರಾಯ

IND vs ENG Test Series 2025
ಕ್ರೀಡೆ2 hours ago

IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

sexual abuse
ದೇಶ2 hours ago

Badlapur Horror: ಶಾಲೆಗಳೇ ಸುರಕ್ಷಿತ ಸ್ಥಳವಲ್ಲದಿದ್ದ ಮೇಲೆ ಶಿಕ್ಷಣದ ಹಕ್ಕಿಗೆ ಅರ್ಥವೇನಿದೆ? ಬಾಂಬೆ ಹೈಕೋರ್ಟ್‌ ಗರಂ

Road Accident
ಕೋಲಾರ2 hours ago

Road Accident : ಬಂಗಾರಪೇಟೆಯಲ್ಲಿ ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ; ರಸ್ತೆ ದಾಟುತ್ತಿದ್ದವನಿಗೆ ಕಾರು ಡಿಕ್ಕಿ

muda scam papers
ಮೈಸೂರು3 hours ago

MUDA Scam: ಮುಡಾದಲ್ಲಿ ಇನ್ನೊಂದು ಗೋಲ್‌ಮಾಲ್, ಇಲ್ಲದ ವ್ಯಕ್ತಿ ಸೃಷ್ಟಿಸಿ ನಿವೇಶನ ಪಡೆದ ಅಧಿಕಾರಿಗಳು!

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌