ಪ್ರತಿಯೊಂದು ಧರ್ಮದಲ್ಲೂ ವಿವಿಧ ಆಚರಣೆಗಳಿವೆ (rituals). ಅದರಲ್ಲೂ ಮುಖ್ಯವಾಗಿ ಸನಾತನ ಧರ್ಮದಲ್ಲಿ (sanatana dharma) ಸಾಕಷ್ಟು ವಿಶೇಷ ಮತ್ತು ಅರ್ಥಪೂರ್ಣವಾದ ಆಚರಣೆಗಳಿವೆ. ಕೆಲವೊಂದು ಆಚರಣೆಗಳ ಬಗ್ಗೆ ನಮಗೆ ಗೊತ್ತಿದ್ದರೂ ಮರಣಾನಂತರದ (post-death ceremony) ಕೆಲವು ಆಚರಣೆಗಳ ನಾವು ತಿಳಿದಿರುವುದಿಲ್ಲ. ಈ ಆಚರಣೆಗಳನ್ನು (Last Rites) ಪಾಲಿಸುವುದು ಬಹುಮುಖ್ಯ.
ಮರಣಾನಂತರದ ಆಚರಣೆಗಳಲ್ಲಿ 16 ಪ್ರಮುಖ ಆಚರಣೆಗಳಿವೆ. ಇದರಲ್ಲಿ ಅನೇಕ ನಿಯಮಗಳಿವೆ. ಅದನ್ನು ಪ್ರತಿಯೊಬ್ಬರೂ ಪಾಲಿಸುವುದು ಮುಖ್ಯವಾಗಿದೆ.
ಅಂತಿಮ ವಿಧಿವಿಧಾನಗಳಲ್ಲಿ ಅಜ್ಞಾನ ಅಥವಾ ಮಾಹಿತಿಯ ಕೊರತೆಯಿಂದಾಗಿ ಕೆಲವರು ಇಂತಹ ಆಚರಣೆಗಳನ್ನು ಮಾಡುವುದಿಲ್ಲ. ಇನ್ನು ಕೆಲವು ಮಾಡಬಾರದ ಆಚರಣೆಗಳನ್ನು ಮಾಡುತ್ತಾರೆ. ಶವಸಂಸ್ಕಾರ ಮಾಡಿದ ಅನಂತರ ಸ್ಮಶಾನದತ್ತ ಹಿಂತಿರುಗಿ ನೋಡುವುದನ್ನು ತಪ್ಪಿಸುವುದು ಇವುಗಳಲ್ಲಿ ಒಂದು.
ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಆತನ ಆತ್ಮವು ದೇಹವನ್ನು ತೊರೆಯುತ್ತದೆ. ಅಂತಿಮ ವಿಧಿಗಳನ್ನು ನಡೆಸಿದ ಬಳಿಕ ದೇಹವು ಬೂದಿಯಾಗುತ್ತದೆ. ಆದರೆ ಆತ್ಮವು ಅಲ್ಲೇ ಇರುತ್ತದೆ. ಆತ್ಮವನ್ನು ಶಾಶ್ವತ ಮತ್ತು ಅವಿನಾಶಿ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾನೆ. ಯಾವುದೇ ಕತ್ತಿ, ಬೆಂಕಿ ಅಥವಾ ನೀರು ಆತ್ಮವನ್ನು ನಾಶಮಾಡುವುದಿಲ್ಲ.
ಸ್ಮಶಾನ ಕಾರ್ಯದ ಬಳಿಕ ವ್ಯಕ್ತಿಯ ಆತ್ಮವು ಬೇರೆ ಲೋಕಕ್ಕೆ ಪ್ರಯಾಣ ಬೆಳೆಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಸತ್ತವರ ಕುಟುಂಬದ ಸದಸ್ಯರು ಅಂತ್ಯಕ್ರಿಯೆಯ ಅನಂತರ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಹಿಂತಿರುಗಿ ನೋಡಿದಾಗ ಕುಟುಂಬಕ್ಕೆ ಆತ್ಮದ ಬಾಂಧವ್ಯವು ಅದನ್ನು ಇನ್ನೊಂದು ಲೋಕಕ್ಕೆ ಹಾದುಹೋಗದಂತೆ ತಡೆಯುತ್ತದೆ.
ಗರುಡ ಪುರಾಣದಲ್ಲಿ ಉಲ್ಲೇಖಿಸಿದಂತೆ ಮರಣದ ಅನಂತರ ಸತ್ತ ವ್ಯಕ್ತಿಯ ಆತ್ಮವು ಸ್ಮಶಾನದಲ್ಲಿ ನಡೆಯುವ ಅವನ ಕೊನೆಯ ಚಟುವಟಿಕೆಗಳನ್ನು ವೀಕ್ಷಿಸುತ್ತದೆ. ಮೃತನ ಕುಟುಂಬದ ಸದಸ್ಯರು ಸ್ಮಶಾನದಲ್ಲಿ ಇರುವುದರಿಂದ ಸತ್ತ ವ್ಯಕ್ತಿಯ ಅಂತ್ಯಕ್ರಿಯೆಯ ಕಡೆಗೆ ಹಿಂತಿರುಗಿ ನೋಡಿದರೆ ಮೃತನ ಆತ್ಮವು ಆ ವ್ಯಕ್ತಿಯೊಂದಿಗೆ ಬರುತ್ತದೆ ಮತ್ತು ಆ ಬಂಧವನ್ನು ಮುರಿಯಲಾಗುವುದಿಲ್ಲ.
ಹೀಗಾಗಿ ಅಂತಿಮ ವಿಧಿಗಳನ್ನು ನಡೆಸಿದ ಅನಂತರ ತಿರುಗಬಾರದು ಎಂದು ಹೇಳಲಾಗುತ್ತದೆ. ಯಾಕೆಂದರೆ ಅಂತಹ ಸಂದರ್ಭದಲ್ಲಿ ಆತ್ಮವು ಮರಣಾನಂತರದ ಜೀವನಕ್ಕೆ ಪರಿವರ್ತನೆ ಕಷ್ಟವಾಗುತ್ತದೆ.
ಇದನ್ನೂ ಓದಿ: Vastu Tips: ಗಂಗಾ ಜಲ ಮನೆಯಲ್ಲಿಟ್ಟರೆ ಸಾಲದು; ಅದನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು?
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು 13 ದಿನಗಳ ಕಾಲ ಹಲವು ವಿಧಿವಿಧಾನಗಳನ್ನು ನಡೆಸಲಾಗುತ್ತದೆ. ಇದರ ಹೊರತಾಗಿ ಅಂತ್ಯಕ್ರಿಯೆಯಿಂದ ಹಿಂದಿರುಗಿದ ಅನಂತರ ಅನುಸರಿಸಬೇಕಾದ ಕೆಲವು ನಿಯಮಗಳಿವೆ.
ತಕ್ಷಣ ಸ್ನಾನ ಮಾಡಿ ಮತ್ತು ವ್ಯಕ್ತಿಯ ಬಟ್ಟೆಗಳನ್ನು ತೊಳೆಯಬೇಕು. ನಕಾರಾತ್ಮಕ ಶಕ್ತಿಗಳನ್ನು ತೊಡೆದುಹಾಕಲು ಗಂಗಾಜಲವನ್ನು ಇಡೀ ಮನೆಯಲ್ಲಿ ಸಿಂಪಡಿಸಬೇಕು. ವ್ಯಕ್ತಿ ಸತ್ತ ಮನೆಯಲ್ಲಿ ಮೃತರ ಆತ್ಮಕ್ಕೆ ಶಾಂತಿಗಾಗಿ 12 ದಿನಗಳ ಕಾಲ ದೀಪವನ್ನು ಬೆಳಗಿಸಬೇಕು. ಪಿತೃ ಪಕ್ಷದಲ್ಲಿ ಪಿಂಡದಾನ ಮಾಡಬೇಕು ಎಂಬೆಲ್ಲ ಉಲ್ಲೇಖ ಗರುಡ ಪುರಾಣದಲ್ಲಿದೆ.