Site icon Vistara News

Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

Lok Sabha Election-2024

ಲೋಕಸಭಾ ಚುನಾವಣೆ-2024ರಲ್ಲಿ (Lok Sabha Election 2024) ಶುಕ್ರವಾರ ನಡೆಯುವ ಮತದಾನ (voting) ಪ್ರಕ್ರಿಯೆಯಲ್ಲಿ ಒಟ್ಟು 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 1,120 ಮಂದಿ ತಮ್ಮ ಅದೃಷ್ಟವನ್ನು ಪರೀಕ್ಷೆಯನ್ನು ಮಾಡಲಿದ್ದಾರೆ. ಈ ಬಾರಿ ಹಲವು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿ ಇದ್ದು, ಇವರಲ್ಲಿ ಹೆಚ್ಚು ಶ್ರೀಮಂತ (richest) ಅಭ್ಯರ್ಥಿಗಳೂ (candidate) ಸೇರಿದ್ದಾರೆ.

ಶುಕ್ರವಾರ ನಡೆಯುವ ಎರಡನೇ ಹಂತದ ಚುನಾವಣೆಯ ಕಣದಲ್ಲಿರುವ ಕೆಲವು ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ​​​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಭಾಗವಹಿಸುತ್ತಿರುವ 1,210 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದ್ದು, 390 ಅಭ್ಯರ್ಥಿಗಳು ‘ಕೋಟ್ಯಧಿಪತಿಗಳು’ ಎಂದು ಹೇಳಿದೆ. ಇವರಲ್ಲಿ ಶೇ. 21ರಷ್ಟು ಅಭ್ಯರ್ಥಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣಗಳಿವೆ.

ಇದನ್ನೂ ಓದಿ: Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!


1. ವೆಂಕಟರಮಣ ಗೌಡ

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ಈ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. 622 ಕೋಟಿ ರೂ. ಗೂ ಅಧಿಕ ಆಸ್ತಿ ಹೊಂದಿದ್ದಾರೆ.


2. ಡಿ.ಕೆ. ಸುರೇಶ್

ಎರಡನೇ ಸ್ಥಾನವು ಕಾಂಗ್ರೆಸ್‌ನ ಅಭ್ಯರ್ಥಿ ಡಿ.ಕೆ. ಸುರೇಶ್‌ಗೆ ಸೇರಿದೆ. ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಿರುವ ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂ.


3. ಹೇಮಾ ಮಾಲಿನಿ

ಖ್ಯಾತ ನಟಿ ಹೇಮಾ ಮಾಲಿನಿ ಮೂರನೇ ಸ್ಥಾನ ಪಡೆದಿದ್ದು, ಉತ್ತರ ಪ್ರದೇಶದ ಮಥುರಾದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ. ಇವರು 278.9 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.


4. ಸಂಜಯ್ ಶರ್ಮಾ

ಮಧ್ಯಪ್ರದೇಶದ ಹೋಶಂಗಾಬಾದ್‌ನಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸಂಜಯ್ ಶರ್ಮಾ ಅವರ ಆಸ್ತಿ 232 ಕೋಟಿ ರೂ.


5. ಎಚ್.ಡಿ. ಕುಮಾರಸ್ವಾಮಿ

ಬಿಜೆಪಿಯೊಂದಿಗೆ ಸಮ್ಮಿಶ್ರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮುಖಂಡ ಹಾಗೂ ಮಂಡ್ಯ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ಅವರ ಆಸ್ತಿ 217 ಕೋಟಿ ರೂ.


6. ಕನ್ವರ್ ಸಿಂಗ್ ತನ್ವಾರ್

ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಬಿಜೆಪಿಯ ಕನ್ವರ್ ಸಿಂಗ್ ತನ್ವಾರ್ ಕಣಕ್ಕಿಳಿದಿದ್ದು, 214 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


7. ಎಂ ಎಸ್ ರಕ್ಷಾ ರಾಮಯ್ಯ

ಕರ್ನಾಟಕದ ಚಿಕ್ಕಬಳ್ಳಾಪುರದಿಂದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಎಂ.ಎಸ್. ರಕ್ಷಾ ರಾಮಯ್ಯ ಸ್ಪರ್ಧಿಸುತ್ತಿದ್ದು, 169 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


8. ಸುಖಬೀರ್ ಸಿಂಗ್

ಬಿಜೆಪಿಯಿಂದ ಬಂದಿರುವ ಸುಖಬೀರ್ ಸಿಂಗ್ ಜೌನಪುರಿಯಾ ಅವರು ರಾಜಸ್ಥಾನದ ಟೊಂಕ್-ಸವಾಯಿ ಮಾಧೋಪುರದಿಂದ ಸ್ಪರ್ಧಿಸುತ್ತಿದ್ದು, 142 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


9. ಪ್ರೊ. ಎಂ ವಿ ರಾಜೀವ್ ಗೌಡ

ಪ್ರೊಫೆಸರ್ ಎಂ.ವಿ. ರಾಜೀವ್ ಗೌಡ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಕರ್ನಾಟಕದ ಬೆಂಗಳೂರು ಉತ್ತರದಿಂದ ಕಣಕ್ಕಿಳಿದಿರುವ ಅವರು 134 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ.


10, ಉದೈಲಾಲ್ ಅಂಜನಾ

ಟಾಪ್‌ 10ನೇ ಸ್ಥಾನದಲ್ಲಿ ಕಾಂಗ್ರೆಸ್‌ನ ಉದಯಲಾಲ್ ಅಂಜನಾ ಅವರು ರಾಜಸ್ಥಾನದ ಚಿತ್ತೋರ್‌ಗಢದಿಂದ ಸ್ಪರ್ಧಿಸುತ್ತಿದ್ದಾರೆ. ಆಕೆಯ ಆಸ್ತಿ 118 ಕೋಟಿ ರೂ.

Exit mobile version