ನವದೆಹಲಿ: ಲೋಕ ಸಭಾ ಚುನಾವಣೆ (Lok Sabha Election) ಹಿನ್ನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಭಯಭೀತ ವಾತಾವರಣ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ಹಂಚಿಕೊಂಡ ವೀಡಿಯೊ ಸಂದೇಶದಲ್ಲಿ, ಸೋನಿಯಾ ಗಾಂಧಿ ರಾಷ್ಟ್ರವನ್ನು ಕಾಡುತ್ತಿರುವ ವ್ಯಾಪಕ ಸವಾಲುಗಳನ್ನು ಬೊಟ್ಟು ಮಾಡಿದ್ದಾರೆ.
ಸೋನಿಯಾ ಗಾಂಧಿ ಮಾತನಾಡಿದ ವಿಡಿಯೊ ಇಲ್ಲಿದೆ
मेरे प्यारे भाइयों और बहनों..
— Congress (@INCIndia) May 7, 2024
आज देश के हर कोने में युवा-बेरोजगारी, महिलाएं-अत्याचार, दलित, आदिवासी, पिछड़े और माइनॉरिटी-भयंकर भेदभाव झेल रहे हैं।
ऐसा माहौल प्रधानमंत्री नरेंद्र मोदी और BJP की नीयत की वजह से है। उनका ध्यान किसी भी कीमत पर सिर्फ सत्ता हासिल करने के पीछे है।… pic.twitter.com/GKHrafKQXf
ಇಂದು ದೇಶದ ಪ್ರತಿಯೊಂದು ಮೂಲೆಯಲ್ಲೂ ಯುವಕರು ನಿರುದ್ಯೋಗವನ್ನು ಎದುರಿಸುತ್ತಿದ್ದಾರೆ. ಮಹಿಳೆಯರು ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ದಲಿತರು, ಬುಡಕಟ್ಟುಗಳು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ಭಯಾನಕ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಹೇಳಿದರು.
“ಭಯದ ವಾತಾವರಣ ಸೃಷ್ಟಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಉದ್ದೇಶ ” ಎಂದು ಅವರು ಹೇಳಿದರು. ಅವರೆಲ್ಲರೂ ಸೇರಿಕೊಂಡು ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು ಕಾಂಗ್ರೆಸ್ ಪಕ್ಷವು ಯಾವಾಗಲೂ ಎಲ್ಲರ ಪ್ರಗತಿಗಾಗಿ, ವಂಚಿತರಿಗೆ ನ್ಯಾಯಕ್ಕಾಗಿ ಮತ್ತು ದೇಶವನ್ನು ಬಲಪಡಿಸಲು ಹೋರಾಡಿದೆ ಎಂದು ಪ್ರತಿಪಾದಿಸಿದರು.
ಸಮುದಾಯಗಳ ಬಲ
ಬಡವರನ್ನು ಮೇಲೆತ್ತಲು, ಯುವಕರು ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸಲು, ರೈತರು ಮತ್ತು ಕಾರ್ಮಿಕರನ್ನು ಬೆಂಬಲಿಸಲು ಕಾಂಗ್ರೆಸ್ ಪ್ರಣಾಳಿಕೆ ‘ನ್ಯಾಯ್ ಪತ್ರ’ವನ್ನು ಮಾಡಿದ್ದೇವೆ. ಅದರಲ್ಲಿರುವ ಅಂಶಗಳನ್ನು ಗಮನಿಸಿ ಬೆಂಬಲ ನೀಡುವಂತೆ ಅವರು ಕೋರಿಕೊಂಡರು.
11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿರುವ ಸಮಯದಲ್ಲಿ ಅವರ ವೀಡಿಯೊ ಸಂದೇಶ ಪ್ರಕಟಗೊಂಡಿದೆ. ಈ ಲೋಕಸಭಾ ಚುನಾವಣೆ ಸಂವಿಧಾನ ಮತ್ತು ಬುಡಕಟ್ಟು, ಬಡವರು ಮತ್ತು ಹಿಂದುಳಿದವರ ಹಕ್ಕುಗಳನ್ನು ಉಳಿಸಲು ಎಂದು ಕಾಂಗ್ರೆಸ್ ಪಕ್ಷ ಪ್ರತಿಪಾದಿಸುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: School Jobs: 25 ಸಾವಿರ ಶಿಕ್ಷಕರ ವಜಾ ಆದೇಶಕ್ಕೆ ಸುಪ್ರೀಂ ತಡೆ; ಮಮತಾ ಸರ್ಕಾರಕ್ಕೆ ಚಾಟಿ
ಇದಕ್ಕೂ ಮುನ್ನ ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದರು. ಬುಡಕಟ್ಟು ಜನರಿಗೆ ಸೇರಿದ ‘ಜಲ, ಜಂಗಲ್, ಜಮೀನ್’ ಅನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಲು ಬಯಸಿದ್ದಾರೆ ಎಂದು ಆರೋಪಿಸಿದ್ದರು. ಜಾರ್ಖಂಡ್ನ ಚೈಬಾಸಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ , “ಬುಡಕಟ್ಟು ಜನರ ‘ಜಲ, ಜಂಗಲ್, ಜಮೀನ್’ ಅನ್ನು 14-15 ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಲು ಪ್ರಧಾನಿ ಬಯಸಿದ್ದಾರೆ ಎಂದರು.