ತಮ್ಮ ಧರ್ಮ ಮರೆಮಾಚಿ ಹಿಂದೂ ಯುವತಿಯರನ್ನು ಪ್ರೇಮದ ಬಲೆಗೆ ಬೀಳಿಸುವ ಮತ್ತು ಅವರ ಮೇಲೆ ದೌರ್ಜನ್ಯ ಎಸಗುವ ಘಟನೆಗಳು ದೇಶದ ಹಲವು ಕಡೆ ನಡೆಯುತ್ತಲೇ ಇವೆ. ಲವ್ ಜಿಹಾದ್ (Love Jihad ) ಮೂಲಕ ಹಿಂದೂ ಯುವತಿಯರನ್ನು ಮತಾಂತರಗೊಳಿಸಿ ಮದುವೆಯಾಗುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಲೇ ಇದೆ. ಇದರಿಂದ ಎಷ್ಟೋ ಹಿಂದೂ ಯುವತಿಯರ ಜೀವನ ಹಾಳಾಗಿದೆ. ಇದೀಗ ಅಂತಹ ಇನ್ನೊಂದು ಪ್ರಕರಣ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.
ಸದಲ್ಪುರ್ ಪ್ರದೇಶದ ಮುಸ್ಲಿಂ ಯುವಕನೊಬ್ಬ ಹಿಂದೂ ಹೆಸರನ್ನು ಇಟ್ಟುಕೊಂಡು ತಾನು ಹಿಂದೂ ಎಂದು ಹೇಳಿಕೊಂಡು ಹಿಂದೂ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ತನ್ನ ಸ್ನೇಹಿತನ ಜೊತೆ ಸೇರಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ, ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಈ ಬಗ್ಗೆ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಿದ್ದಾರೆ.
ಆರೋಪಿ ಚೌಕಿ ಸೇವಾರಾ ನಿವಾಸಿ ಶಾರುಖ್, ಸದಲ್‌ಪುರದ ಯುವತಿಗೆ ‘ರೋಹಿತ್’ ಎಂದು ಹೆಸರು ಹೇಳಿಕೊಂಡು ಸ್ನೇಹ ಬೆಳೆಸಿದ್ದಾನೆ. ಆದರೆ ಆತನ ನಿಜವಾದ ಸ್ವರೂಪ ತಿಳಿದ ಆಕೆ ಆತನಿಂದ ದೂರವಾಗಲು ಪ್ರಯತ್ನಿಸಿದ್ದಾಳೆ. ಆಗ ಆರೋಪಿ ತನ್ನೊಂದಿಗೆ ಸ್ನೇಹ ಮುಂದುವರಿಸುವಂತೆ ಹೇಳಿ, ಇಲ್ಲವಾದರೆ ಆಕೆಯ ಪೋಟೊವನ್ನು ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೇ ತನ್ನ ಸ್ನೇಹಿತ ಜುನೈದ್ ನ ಜೊತೆ ಸೇರಿ ಆಕೆಗೆ ಕಿರುಕುಳ ನೀಡಿದ್ದಾನೆ. ಆತನ ಸ್ನೇಹಿತ ಜುನೈದ್ ಕೂಡ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಹಾಗೂ ತನ್ನ ಸ್ನೇಹಿತನನ್ನು ಮದುವೆಯಾಗುವಂತೆ ಒತ್ತಡ ಹೇರಿದ್ದಾನೆ. ಇಬ್ಬರೂ ಸೇರಿ ಒಂದು ದಿನ ಆಕೆಗೆ ಕಿರುಕುಳ ನೀಡುತ್ತಿದ್ದಾಗ ಆಕೆ ಕೂಗಾಡಿದ್ದಾಳೆ. ಆಕೆಯ ಕೂಗು ಕೇಳಿ ಸ್ಥಳೀಯರು ಆಕೆಯ ಸಹಾಯಕ್ಕೆ ಬಂದಿದ್ದಾರೆ. ಆದರೆ ಆರೋಪಿಗಳು ತಪ್ಪಿಸಿಕೊಂಡಿದ್ದರು. ಆ ಬಳಿಕ ಪೊಲೀಸರು ಬಂಧಿಸಿದರು.
ಇದನ್ನೂ ಓದಿ:ಮಕ್ಕಳನ್ನು ಖಾಸಗಿ ವಾಹನದಲ್ಲಿ ಶಾಲೆಗೆ ಕಳುಹಿಸುವ ಪೋಷಕರಲ್ಲಿ ಆತಂಕ ಮೂಡಿಸುವ ವಿಡಿಯೊ ಇದು!
ಈ ವಿಷಯ ತಿಳಿದ ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದರು. ಅವರ ಸಹಾಯದಿಂದ ಯುವತಿ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಬಗ್ಗೆ ಕಿರುಕುಳದ ಜೊತೆಗೆ ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ 2021ರ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಾಗೂ ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದಿನ ಬಾರಿ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ ಎನ್ನಲಾಗಿದೆ.