Murder Case: ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದು ಕೊಳಕ್ಕೆ ಎಸೆದ ಮಗಳು! - Vistara News

Latest

Murder Case: ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದು ಕೊಳಕ್ಕೆ ಎಸೆದ ಮಗಳು!

Murder Case: ಪ್ರೀತಿಗೆ ಕುರುಡು ಅಂತಾರೆ. ಪ್ರೀತಿಯಲ್ಲಿ ಬಿದ್ದವರಿಗೆ ಆ ಕ್ಷಣದಲ್ಲಿ ಹೆತ್ತು ಹೊತ್ತು ಸಾಕಿ ಬೆಳೆಸಿದವರಿಗಿಂತ ತಮ್ಮ ಪ್ರಿಯತಮ/ಪ್ರಿಯಕರನೇ ಹೆಚ್ಚಾಗಿರುತ್ತಾರೆ! ಇಲ್ಲೊಂದು ಇಂತಹದ್ದೇ ಘಟನೆ ನಡೆದಿದೆ. ಮಗಳ ಪ್ರೀತಿಯನ್ನು ವಿರೋಧಿಸಿದ್ದಕ್ಕೆ ತಾಯಿ ತನ್ನ ಜೀವವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ತಾಯಿಯು ಮಗಳ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದ ಕೋಪಗೊಂಡ ಮಗಳು ಮತ್ತು ಆಕೆಯ ಪ್ರಿಯಕರ ತಮ್ಮ ಸಹಚರನ ಸಹಾಯದಿಂದ ಆಕೆಯನ್ನು ಕೊಲೆ ಮಾಡಿ ಶವವನ್ನು ಕೊಳಕ್ಕೆ ಎಸೆದಿದ್ದಾರೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಪ್ರೀತಿ ಎನ್ನುವ ಮಾಯೆ ಯಾವ ಮಟ್ಟದಲ್ಲಿ ಇಂದಿನ ಯುವ ಪೀಳಿಗೆಯನ್ನು ಆವರಿಸಿಕೊಂಡಿತೆಂದರೆ ಪ್ರೀತಿಗಾಗಿ ಅವರು ತಮ್ಮವರನ್ನೇ ಕೊಲ್ಲುವ ಮಟ್ಟಕ್ಕೂ ಹೋಗುತ್ತಾರೆ. ಕೆಲವರು ಅವರ ಪ್ರೀತಿಗೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದರೆ ತಮಗೆ ಯಾರು ಬೇಡವೆಂದು ತಮ್ಮವರನ್ನು ಬಿಟ್ಟು ತಾನು ಪ್ರೀತಿಸಿದವರ ಜೊತೆ ಓಡಿಹೋಗಿ ಬೇರೆ ಕಡೆ ಜೀವನ ಕಟ್ಟಿಕೊಳ್ಳುತ್ತಾರೆ. ಆದರೆ ಇನ್ನೂ ಕೆಲವರು ತಮ್ಮ ಪ್ರೀತಿಗೆ ವಿರೋಧಿಸಿದ ತಮ್ಮವರನ್ನು ಕೊಲೆ (Murder Case) ಮಾಡಿ ಬಿಡುತ್ತಾರೆ. ಅಂತಹದೊಂದು ಘಟನೆ ಇದೀಗ ಉತ್ತರ ಪ್ರದೇಶದ ಬಾಂದಾದಲ್ಲಿ ನಡೆದಿದೆ.

ತಾಯಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ಸೋಮವಾರ ಬಂಧಿಸಿದ್ದಾರೆ. ಕೊಲೆಗೆ ಸಹಾಯ ಮಾಡಿದ ಇನ್ನೊಬ್ಬ ವ್ಯಕ್ತಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ ಎನ್ನಲಾಗಿದೆ. ಬಲ್ಲನ್ ಗ್ರಾಮದಲ್ಲಿ ವಾಸಿಸುತ್ತಿದ್ದ ರಾಜುಲಿಯಾ (45) ಮಗಳ ಕೈಯಿಂದ ಕೊಲೆಯಾದ ದುರ್ದೈವಿ. ಅವರನ್ನು ಜುಲೈ 29 ರಂದು ಅವರ ಮಗಳಾದ ನೀತು ಮತ್ತು ಆಕೆಯ ಪ್ರಿಯಕರ ಅತುಲ್ ಅರ್ಕ್ ಇವರಿಬ್ಬರು ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದರು ಎಂಬುದಾಗಿ ತಿಳಿದುಬಂದಿದೆ.

ತಾಯಿ ರಾಜುಲಿಯಾ ಮಗಳ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಕೋಪಗೊಂಡ ಮಗಳು ಮತ್ತು ಆಕೆಯ ಪ್ರಿಯಕರ ತಮ್ಮ ಸಹಚರ ದಾದುವಾ ರಾಯ್ದಾಸ್ ಸಹಾಯದಿಂದ ಆಕೆಯನ್ನು ಕೊಲೆ ಮಾಡಿ ಶವವನ್ನು ಕೊಳಕ್ಕೆ ಎಸೆದಿದ್ದಾರೆ. ನಂತರ ಆಕೆಯ ಶವವನ್ನು ಕೊಳದಲ್ಲಿ ಕಂಡವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಜುಲೈ 30 ರಂದು ಪೊಲೀಸರು ರಾಜುಲಿಯಾ ಅವರ ಶವವನ್ನು ಕೊಳದ ಬಳಿ ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಯಲ್ಲಿ ಮಹಿಳೆಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ, ಇದರ ಪರಿಣಾಮವಾಗಿ ಕುತ್ತಿಗೆ ಮೂಳೆ ಮುರಿದಿದೆ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಪತಿ ಬೈದಿದ್ದಕ್ಕೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ; ಬೆಚ್ಚಿ ಬೀಳಿಸುವ ವಿಡಿಯೊ

ಹಾಗಾಗಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಸೋಮವಾರ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಕೊಲೆಯಲ್ಲಿ ಮಾಡಿದ ಮಹಿಳೆಯ ಮಗಳು ನೀತು ಮತ್ತು ಆಕೆಯ ಪ್ರಿಯಕರ ಅತುಲ್ ಅರ್ಕ್ ಅವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ದಾದುವಾ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿದೇಶ

Sheikh Hasina: ತಂದೆ, ತಾಯಿ, ಮೂವರು ಸಹೋದರರ ಬರ್ಬರ ಹತ್ಯೆ; ಕಠಿಣ ಹಾದಿಯಲ್ಲಿ ಸಾಗಿ ಪ್ರಧಾನಿಯಾಗಿದ್ದ ಶೇಖ್‌ ಹಸೀನಾ

Sheikh Hasina: ಬಾಂಗ್ಲಾದೇಶದ ಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಪುತ್ರಿಯಾಗಿರುವ ಶೇಖ್ ಹಸೀನಾ (Sheikh Hasina life) ಅವರು ಆ ದೇಶದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಪ್ರಧಾನಮಂತ್ರಿಯಾಗಿದ್ದರು. ಮೂರು ದಶಕಗಳವರೆಗೆ ಆಡಳಿತ ನಡೆಸಿರುವ ಅವರು ಇದೀಗ ರಾಜೀನಾಮೆ ನೀಡಿ ದೇಶದಿಂದ ನಿರ್ಗಮಿಸಿದ್ದಾರೆ. ಇವರ ರಾಜಕೀಯ ದಾರಿ ಸುಲಭವಾಗಿರಲಿಲ್ಲ. ಸಾಕಷ್ಟು ಸವಾಲುಗಳನ್ನು ಎದುರಿಸಿ ಪ್ರಧಾನಿಯಾದ ಅವರು ಅನಂತರವೂ ಹಲವು ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಈಗ ಅವರ ಜೀವನ ಮತ್ತು ರಾಜಕೀಯ ಭವಿಷ್ಯ ತೂಗುಯ್ಯಾಲೆಯಲ್ಲಿದೆ.

VISTARANEWS.COM


on

By

Sheikh Hasina
Koo

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ (violent protests) ಪರಿಣಾಮ ಪ್ರಧಾನಿ (Bangladesh PM) ಶೇಖ್ ಹಸೀನಾ (Sheikh Hasina ) ಸೋಮವಾರ ರಾಜೀನಾಮೆ ನೀಡಿ ರಾಜಧಾನಿ ಢಾಕಾ (Dhaka) ತೊರೆದು ಭಾರತದಲ್ಲಿ ಆಸರೆ ಪಡೆಯುತ್ತಿದ್ದಾರೆ. 76 ವರ್ಷದ ಹಸೀನಾ 1996ರ ಜೂನ್‌ನಿಂದ 2001ರ ಜುಲೈವರೆಗೆ ಮತ್ತು 2009ರ ಜನವರಿಯಿಂದ 2024ರ ಆಗಸ್ಟ್ ವರೆಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಾಂಗ್ಲಾದಲ್ಲಿ ಸುದೀರ್ಘ ಕಾಲ ಪ್ರಧಾನಿಯಾಗಿ ಅಧಿಕಾರ ಚಲಾಯಿಸಿದ ಖ್ಯಾತಿ ಇವರಿಗಿದೆ.

ಬಾಂಗ್ಲಾದೇಶದ ಸಂಸ್ಥಾಪಕ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಪುತ್ರಿ ಹಸೀನಾ ಅವರು ದೇಶದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿದ್ದಾರೆ. ಒಟ್ಟಿಗೆ ಮೂರು ದಶಕಗಳವರೆಗೆ ಆಡಳಿತ ನಡೆಸಿರುವ ಅವರು, 1960ರ ದಶಕದದಲ್ಲಿ ಢಾಕಾ ವಿಶ್ವವಿದ್ಯಾನಿಲಯದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.

ತಂದೆಯ ರಾಜಕೀಯ ಸಂಪರ್ಕಾಧಿಕಾರಿ:

ಪಾಕಿಸ್ತಾನ ಸರ್ಕಾರವು ಇವರ ತಂದೆಯನ್ನು ಬಂಧಿಸಿದಾಗ ಇವರು ತಂದೆಯ ರಾಜಕೀಯ ಸಂಪರ್ಕಾಧಿಕಾರಿಯಾಗಿದ್ದರು. 1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕೆ ಕಾರಣವಾದ ವಿಮೋಚನಾ ಯುದ್ಧದ ಸಮಯದಲ್ಲಿ ದಂಗೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಹಸೀನಾ ಮತ್ತು ಅವರ ಕುಟುಂಬ ಸದಸ್ಯರನ್ನು ಬಂಧಿಸಲಾಗಿತ್ತು.

ಬಾಂಗ್ಲಾ ಸ್ವಾತಂತ್ರ್ಯ ಪಡೆದ ಬಳಿಕ ಶೇಖ್‌ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಬಾಂಗ್ಲಾ ದೇಶದ ಮೊದಲ ಅಧ್ಯಕ್ಷರಾದರು. 1975ರ ಆಗಸ್ಟ್ ನಲ್ಲಿ ಆಗ ಅಧ್ಯಕ್ಷರಾಗಿದ್ದ ಶೇಖ್ ಮುಜಿಬುರ್ ರೆಹಮಾನ್ ಮತ್ತು ಅವರ ಪತ್ನಿ, ಮೂವರು ಪುತ್ರರನ್ನು ಅವರ ಮನೆಯಲ್ಲಿ ಬಂಡುಕೋರ ಮಿಲಿಟರಿ ಅಧಿಕಾರಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ದಾಳಿಯ ಸಮಯದಲ್ಲಿ ಶೇಖ್‌ ಹಸೀನಾ ವಿದೇಶದಲ್ಲಿದ್ದರು. ಅನಂತರ ಆರು ವರ್ಷಗಳ ಕಾಲ ಅವರು ದೇಶಭ್ರಷ್ಟರಾಗಿದ್ದರು. ಆಗಲೂ ಅವರಿಗೆ ಆಸರೆ ನೀಡಿದ್ದು ಭಾರತ.

ಅವಾಮಿ ಲೀಗ್ ನಾಯಕಿ

ಬಳಿಕ ಅವರ ತಂದೆ ಸ್ಥಾಪಿಸಿದ್ದ ರಾಜಕೀಯ ಪಕ್ಷವಾದ ಅವಾಮಿ ಲೀಗ್ ಅನ್ನು ಮುನ್ನಡೆಸಲು ಹಸೀನಾ ಅವರನ್ನು ಆಯ್ಕೆ ಮಾಡಲಾಯಿತು. ಇದು ಬಾಂಗ್ಲಾದೇಶದ ಅತಿದೊಡ್ಡ ರಾಜಕೀಯ ಸಂಘಟನೆಯಾಗಿದೆ. 1981ರಲ್ಲಿ ಬಾಂಗ್ಲಾದೇಶಕ್ಕೆ ಮರಳಿದ ಹಸೀನಾ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಲಿಷ್ಠ ನಾಯಕಿಯಾಗಿ ಹೊರಹೊಮ್ಮಿದರು. ಗೃಹಬಂಧನ ಸೇರಿ ಅನೇಕ ಸವಾಲುಗಳನ್ನು ಎದುರಿಸಿದ ಅವರು ಬಾಂಗ್ಲಾದೇಶದ ವಿರೋಧ ಪಕ್ಷದ ನಾಯಕಿಯಾದರು ಮತ್ತು ಮಿಲಿಟರಿ ಆಡಳಿತದ ಹಿಂಸಾಚಾರವನ್ನು ಧೈರ್ಯದಿಂದ ಎದುರಿಸಿದರು.


1990ರ ಡಿಸೆಂಬರ್ ನಲ್ಲಿ ಹಸೀನಾ ಅವರು ವ್ಯಾಪಕವಾದ ಸಾರ್ವಜನಿಕ ಬೆಂಬಲವನ್ನು ಪಡೆದುದರಿಂದ ಬಾಂಗ್ಲಾದೇಶದ ಕೊನೆಯ ಮಿಲಿಟರಿ ನಾಯಕರಾದ ಲೆಫ್ಟಿನೆಂಟ್ ಜನರಲ್ ಹುಸೇನ್ ಮೊಹಮ್ಮದ್ ಇರ್ಷಾದ್ ರಾಜೀನಾಮೆ ನೀಡಬೇಕಾಯಿತು. ವಿರೋಧ ಪಕ್ಷದ ನಾಯಕಿಯಾಗಿ ಹಸೀನಾ ಅವರು ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿಯ (BNP) ಚುನಾವಣಾ ವಂಚನೆಯ ಬಗ್ಗೆ ಧ್ವನಿ ಎತ್ತಿದರು. ಸಂಸತ್ತನ್ನು ಬಹಿಷ್ಕರಿಸಲು ನಿರ್ಧರಿಸಿದರು. ಇದು ದೇಶದಲ್ಲಿ ವ್ಯಾಪಕ ಪ್ರತಿಭಟನೆಗೆ ನಾಂದಿ ಹಾಡಿತು.

ಪ್ರಧಾನಿಯಾಗಿ ಆಯ್ಕೆ

ಅಂತಿಮವಾಗಿ ಖಲೀದಾ ಜಿಯಾ ರಾಜೀನಾಮೆ ನೀಡಿದರು. 1996ರ ಜೂನ್‌ನಲ್ಲಿ ನಡೆದ ಚುನಾವಣೆಯ ಅನಂತರ ಹಸೀನಾ ಪ್ರಧಾನಿಯಾದರು. ಅವರ ಮೊದಲ ಅವಧಿಯಲ್ಲಿ ದೇಶವು ಆರ್ಥಿಕ ಬೆಳವಣಿಗೆ ಮತ್ತು ಬಡತನದಲ್ಲಿ ಇಳಿಕೆ ಕಂಡಿತು. ಆದರೆ ರಾಜಕೀಯ ಅಸ್ಥಿರತೆ ಮುಂದುವರಿಯಿತು. 2001ರ ಜುಲೈನಲ್ಲಿ ಹಸೀನಾ ಅವರ ಅಧಿಕಾರವಧಿಯು ಕೊನೆಗೊಂಡಿತು. ಬಾಂಗ್ಲಾದೇಶದ ಪ್ರಧಾನಿಯೊಬ್ಬರು ದೇಶದ ಸ್ವಾತಂತ್ರ್ಯದ ಅನಂತರ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದು ಇದೇ ಮೊದಲು.

2006-2008ರ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸುಲಿಗೆ ಆರೋಪದ ಮೇಲೆ ಶೇಖ್‌ ಹಸೀನಾ ಅವರನ್ನು ಬಂಧಿಸಲಾಯಿತು. ಆದರೆ ಅವರ ಬಿಡುಗಡೆಯ ಅನಂತರ 2008ರ ಚುನಾವಣೆಯಲ್ಲಿ ಗೆದ್ದರು. ಪ್ರಮುಖ ಪಕ್ಷಗಳು ಬಹಿಷ್ಕರಿಸಿದ ಮತ್ತು ಅಂತಾರಾಷ್ಟ್ರೀಯ ವೀಕ್ಷಕರಿಂದ ಟೀಕೆಗೊಳಗಾದ ವಿವಾದಾತ್ಮಕ ಚುನಾವಣೆಯಲ್ಲಿ ಅವರು ಮತ್ತೆ 2014ರಲ್ಲಿ ಮೂರನೇ ಅವಧಿಗೆ ಮರು ಆಯ್ಕೆಯಾದರು.

2017ರಲ್ಲಿ ಮ್ಯಾನ್ಮಾರ್‌ನಲ್ಲಿ ಹಿಂಸಾಚಾರದಿಂದ ಪಲಾಯನ ಮಾಡುತ್ತಿರುವ ಸುಮಾರು ಒಂದು ಮಿಲಿಯನ್ ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ಮತ್ತು ಸಹಾಯ ನೀಡಿದ್ದಕ್ಕಾಗಿ ಹಸೀನಾ ಪ್ರಶಂಸೆಯನ್ನು ಪಡೆದರು.

ಇದನ್ನೂ ಓದಿ: Bangladesh Protest: ರಫೇಲ್ ಯುದ್ಧ ವಿಮಾನಗಳ ಹಾರಾಟ, ರಾಡಾರ್‌ ಮೂಲಕ ಮೇಲ್ವಿಚಾರಣೆ; ಶೇಖ್‌ ಹಸೀನಾ ಸುರಕ್ಷತೆಗೆ ಭಾರತ ಕೈಗೊಂಡ ಕ್ರಮಗಳಿವು


ಮೀಸಲು ವಿರೋಧಿ ಚಳವಳಿಯ ಬಿಸಿ

2018ರ ನಾಲ್ಕನೇ ಅವಧಿಯ ಚುನಾವಣೆಯಲ್ಲೂ ಜಯ ಸಾಧಿಸಿದ ಹಸೀನಾ ಅವರಿಗೆ ಸಾಕಷ್ಟು ಸವಾಲುಗಳು ಮತ್ತೆ ಎದುರಾಯಿತು. ಸರ್ಕಾರಿ ಉದ್ಯೋಗ ಕೋಟಾ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ ಬಳಿಕ ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಅಶಾಂತಿ ಪ್ರಾರಂಭವಾಯಿತು. ಇದನ್ನು ನಿಯಂತ್ರಿಸುವುದು ಶೇಖ್ ಹಸೀನಾ ಮತ್ತು ಅವರ ಆಡಳಿತಾರೂಢ ಅವಾಮಿ ಲೀಗ್ ಪಕ್ಷಕ್ಕೆ ಸವಾಲಾಗಿ ಪರಿಣಮಿಸಿತು. ತಿಂಗಳುಗಳ ಕಾಲ ವಿದ್ಯಾರ್ಥಿಗಳ ನೇತೃತ್ವದಲ್ಲಿ ಪ್ರತಿಪಕ್ಷಗಳ ಬೆಂಬಲದೊಂದಿಗೆ ಬಾಂಗ್ಲಾದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯಿತು. ನೂರಾರು ಜನರು ದಂಗೆಯಲ್ಲಿ ಸಾವಿಗೀಡಾದರು. ಬಾಂಗ್ಲಾ ವಿಮೋಚನೆ ಹೋರಾಟಗಾರರ ಕುಟುಂಬಗಳಿಗೆ ಉದ್ಯೋಗದಲ್ಲಿ ಶೇ.30ರಷ್ಟು ಮೀಸಲಾತಿ ನೀಡಬಾರದು ಎನ್ನುವುದು ಹೋರಾಟಗಾರರ ಆಗ್ರಹವಾಗಿತ್ತು. ಇದಕ್ಕೆ ಬೇರೆ ಬೇರೆ ಆಯಾಮಗಳು ಸೇರಿಕೊಂಡವು. ಕೊನೆಗೂ ಸುಪ್ರೀಂ ಕೋರ್ಟ್‌ ಮೀಸಲನ್ನು ಶೇ.5ಕ್ಕೆ ಸೀಮಿತಗೊಳಿಸಿತು. ಆದರೂ ಪ್ರತಿಭಟನೆ ನಿಲ್ಲಲಿಲ್ಲ. ಇದಕ್ಕೆ ಕಾರಣ ಏನೆಂದರೆ, ಈ ಪ್ರತಿಭಟನೆಗೆ ಪಾಕಿಸ್ತಾನ ಮತ್ತು ಚೀನಾದ ಕುಮ್ಮಕ್ಕಿತ್ತು. ಶೇಖ್‌ ಹಸೀನಾ ಯಾವತ್ತೂ ಭಾರತ ಪರ ನಿಲುವು ಹೊಂದಿರುವವರು. ಹಾಗಾಗಿ ಸಹಜವಾಗಿಯೇ ಅವರ ವಿರುದ್ಧ ಚೀನಾ ಮತ್ತು ಪಾಕಿಸ್ತಾನ ಮಸಲತ್ತು ನಡೆಸಿವೆ. ಶೇಖ್‌ ಹಸೀನಾ ಈಗ ಅಧಿಕಾರ ಕಳೆದುಕೊಂಡು, ತಾಯ್ನಾಡನ್ನೇ ತೊರೆದು ಅತಂತ್ರರಾಗಿದ್ದಾರೆ. ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

Continue Reading

Latest

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

Amnesia Disease: ಫ್ರಾನ್ಸ್‌ನ ಲ್ಯಾಂಡೈಸ್ ಗ್ರಾಮವು ದೇಶದ ಇತರ ಸ್ಥಳಗಳಿಗಿಂತ ತುಂಬಾ ಭಿನ್ನವಾಗಿದೆ. ಯಾಕೆಂದರೆ ಇಲ್ಲಿ, ಪ್ರತಿಯೊಬ್ಬ ನಿವಾಸಿಯೂ ಮರೆಗುಳಿತನದಿಂದ ಬಳಲುತ್ತಿದ್ದಾರೆ. 2020ರಲ್ಲಿ ಅಲ್ಝೈಮರ್ ವಿರುದ್ಧ ಹೋರಾಡುವ ಜನರಿಗೆ ಪ್ರಾಯೋಗಿಕ ಸಮುದಾಯವಾಗಿ ಲ್ಯಾಂಡೈಸ್ ಗ್ರಾಮವನ್ನು ಸ್ಥಾಪಿಸಲಾಯಿತು. ಇದನ್ನು ಬೋರ್ಡೆಕ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಲಹೆ ಮೇರೆಗೆ ಸ್ಥಾಪಿಸಲಾಗಿದೆ. ಇದು ಅಲ್ಝೈಮರ್ ಪೀಡಿತ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

VISTARANEWS.COM


on

Unique Village
Koo


ಸಾಮಾನ್ಯವಾಗಿ ಮರೆಗುಳಿತನ ಸಮಸ್ಯೆ ವಯಸ್ಸಾದಂತೆ ಕಾಡುತ್ತದೆ. ಆದರೆ ಇತ್ತೀಚೆಗೆ ಇದು ಹೆಚ್ಚಿನ ಜನರಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ಆದರೆ ಇಲ್ಲೊಂದು ವಿಚಿತ್ರವಾದ ಗ್ರಾಮವಿದೆ. ಈ ಗ್ರಾಮದಲ್ಲಿ ಬರೀ ಮರೆಗುಳಿತನ (Amnesia Disease) ಸಮಸ್ಯೆಯಿಂದ ಬಳಲುತ್ತಿರುವ ಜನರೇ ತುಂಬಿದ್ದಾರೆ. ಇಲ್ಲಿನ ಜನರಿಗೆ ಹಣದ ಅವಶ್ಯಕತೆಯೇ ಇಲ್ಲವಂತೆ. ಹಾಗಾದ್ರೆ ಈ ಗ್ರಾಮದಲ್ಲಿನ ಜನರು ಯಾಕೆ ಹೀಗಿದ್ದಾರೆ? ಇದಕ್ಕೆ ಕಾರಣವೇನು ಎಂಬುದರ ಮಾಹಿತಿ ಇಲ್ಲಿದೆ.

ಫ್ರಾನ್ಸ್‌ನ ಲ್ಯಾಂಡೈಸ್ ಗ್ರಾಮವು ದೇಶದ ಇತರ ಸ್ಥಳಗಳಿಗಿಂತ ತುಂಬಾ ಭಿನ್ನವಾಗಿದೆ. ಯಾಕೆಂದರೆ ಇಲ್ಲಿ ಪ್ರತಿಯೊಬ್ಬ ನಿವಾಸಿಯೂ ಮರೆಗುಳಿತನದಿಂದ ಬಳಲುತ್ತಿದ್ದಾರೆ. 2020ರಲ್ಲಿ ಅಲ್ಝೈಮರ್ ವಿರುದ್ಧ ಹೋರಾಡುವ ಜನರಿಗೆ ಪ್ರಾಯೋಗಿಕ ಸಮುದಾಯವಾಗಿ ಲ್ಯಾಂಡೈಸ್ ಗ್ರಾಮವನ್ನು ಸ್ಥಾಪಿಸಲಾಯಿತು. ಇದನ್ನು ಬೋರ್ಡೆಕ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಲಹೆ ಮೇರೆಗೆ ಸ್ಥಾಪಿಸಲಾಗಿದೆ. ಇದು ಅಲ್ಝೈಮರ್ ಪೀಡಿತ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ಅಲ್ಲದೇ ಲಾಂಡೈಸ್ ಗ್ರಾಮದಲ್ಲಿ ವಾಸಿಸುವ ಯಾರೂ ಹಣವನ್ನು ಸಂಪಾದಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಅವರು ಆ ಗ್ರಾಮದಲ್ಲಿ ಎಲ್ಲಿಗೇ ಹೋಗುವುದಾದರೂ ತಮ್ಮ ಪರ್ಸ್‌ಗಳನ್ನು ತೆಗೆದುಕೊಂಡು ಹೋಗಬೇಕಾಗಿಲ್ಲ. ಯಾಕೆಂದರೆ ಈ ಗ್ರಾಮದಲ್ಲಿರುವ ಯಾವ ಅಂಗಡಿಗಳೂ ಹಣವನ್ನು ಸ್ವೀಕರಿಸುವುದಿಲ್ಲ. ಅಲ್ಲದೇ ಈ ಗ್ರಾಮದಲ್ಲಿ ವಾಸಿಸಲು ಗ್ರಾಮಸ್ಥರು ವಾರ್ಷಿಕ € 28,000 ಶುಲ್ಕವನ್ನು ಪಾವತಿಸಿದರೆ ಸಾಕು. ಹೆಚ್ಚಿನ ನಿರ್ವಹಣಾ ವೆಚ್ಚಗಳನ್ನು ಪ್ರಾದೇಶಿಕ ಫ್ರೆಂಚ್ ಸರ್ಕಾರ ನೋಡಿಕೊಳ್ಳುತ್ತದೆ.

ಈ ಗ್ರಾಮದಲ್ಲಿ ಒಂದು ಮಹಡಿಯ ಮನೆಗಳಿರುತ್ತದೆ. ಪ್ರತಿಯೊಂದೂ ಮನೆಯಲ್ಲಿ ಎಂಟು ನಿವಾಸಿಗಳು ವಾಸವಾಗಿರುತ್ತಾರೆ. ಪ್ರತಿ ಮನೆ ಅಡುಗೆಮನೆ, ಕುಳಿತುಕೊಳ್ಳುವ ಮತ್ತು ಊಟದ ಕೋಣೆಗಳನ್ನು ಹೊಂದಿರುತ್ತದೆ. ಈ ಗ್ರಾಮದಲ್ಲಿ ಸುಮಾರು 120 ಜನರಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಈ ಗ್ರಾಮದಲ್ಲಿ ರೋಗಿಗಳ ಸೇವೆ ಮಾಡಲು ವೈದ್ಯರು, ನರ್ಸ್‌ಗಳು , ಜೆರೊಂಟೋಲಾಜಿಕಲ್ ಸಹಾಯಕರು, ಮನಶ್ಶಾಸ್ತ್ರಜ್ಞರು, ಔದ್ಯೋಗಿಕ ಚಿಕಿತ್ಸಕ, ಸೈಕೋಮೋಟರ್ ಥೆರಪಿಸ್ಟ್, ಆನಿಮೇಟರ್ಗಳು, ಜೊತೆಗೆ ಅಡುಗೆಯವರು, ಆಡಳಿತ ಸಿಬ್ಬಂದಿ ಇತ್ಯಾದಿಗಳನ್ನು ಒಳಗೊಂಡ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ.

ಇದನ್ನೂ ಓದಿ:  ಎಸ್ಕಲೇಟರ್ ಮೇಲೆ ಮಗುವನ್ನು ನಿಲ್ಲಿಸಲು ತಾಯಿಯ ಕಸರತ್ತು; ಮುಂದೇನಾಯ್ತು ನೋಡಿ

65 ವರ್ಷದ ಪ್ಯಾಟ್ರೀಷಿಯಾ ಎಂಬ ಲಾಂಡೈಸ್ ನಿವಾಸಿಯೊಬ್ಬರು ಈ ಗ್ರಾಮದ ಬಗ್ಗೆ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿ, “ಅಲ್ಝೈಮರ್ ರೋಗಕ್ಕೆ ಒಳಗಾದರೆ ಜೀವನ ಅಷ್ಟೊಂದು ಸುಲಭವಲ್ಲ ಎಂದು ನನಗೆ ತಿಳಿದಿತ್ತು. ಹಾಗಾಗಿ ನಾನು ಭಯಭೀತನಾಗಿದ್ದೆ. ನನಗೆ ಆರೋಗ್ಯ ಸರಿಯಿರಲಿಲ್ಲ. ನಾನು ದಣಿದಿದ್ದೆ. ಹಾಗಾಗಿ ನನಗೆ ಸಹಾಯ ಮಾಡಬಹುದಾದ ಯಾವುದಾದರೊಂದು ಆಶ್ರಮದಲ್ಲಿ ಇರಲು ಬಯಸುತ್ತಿದ್ದೆ. ಆದರೆ ಲಾಂಡೈಸ್ ನನ್ನ ಜೀವನವನ್ನು ಮರಳಿ ನೀಡಿದೆ. ಅಲ್ಲಿ ನನಗಾಗಿ ಅಡುಗೆ ಮಾಡಲು ಒಬ್ಬ ಮಹಿಳೆ ಇದ್ದಳು. ಇತರ ಆರೈಕೆ ಮನೆಗಳಲ್ಲಿ ಈ ತರಹದ ಸೌಲಭ್ಯಗಳಿರುವುದಿಲ್ಲ. ಆದರೆ ಇಲ್ಲಿ, ಜೀವನ ತುಂಬಾ ಸುಂದರವಾಗಿತ್ತು” ಎಂದು ಹೇಳಿದ್ದಾರೆ.

Continue Reading

ಕರ್ನಾಟಕ

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Kannada New Movie: ‘ಸಿ’ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಇದು ಕಿರಣ್ ಸುಬ್ರಮಣಿ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದ್ದು, ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

C Kannada movie release on August 23
Koo

ಬೆಂಗಳೂರು: ʼಸಿʼ ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ (Kannada New Movie) ಈಗಾಗಲೇ ಟೀಸರ್ ಮತ್ತು ಕಂದಾ ಕಂದಾ ಎನ್ನುವ ಹಾಡಿನ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಇದರ ಜತೆಗೆ ಸಿ ಸಿನಿಮಾಗೆ ನಟ ಯೋಗಿ ಮತ್ತು ಖ್ಯಾತ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರ ಬೆಂಬಲ ಕೂಡ ಸಿಕ್ಕಿದೆ‌.

ಅಂದಹಾಗೆ ‘ಸಿ’ ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ಸಿನಿಮಾ. ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ.

ವಿಶೇಷ ಎಂದರೆ ಈ ಹಾಡನ್ನು ಲೂಸ್ ಮಾದ ಖ್ಯಾತಿಯ ನಟ ಯೋಗಿ ರಿಲೀಸ್ ಮಾಡಿದ್ದಾರೆ. ಹಾಡಿನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಯೋಗಿ ಹೊಸ ಸಿನಿಮಾ ತಂಡದ ಬೆನ್ನಿಗೆ ನಿಂತಿರುವುದು ಸಿ ಚಿತ್ರತಂಡಕ್ಕೆ ಖುಷಿ ತಂದಿದೆ. ಇನ್ನು ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಕೂಡ ಸಿ ಸಿನಿಮಾದ ಹಾಡನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಇಡೀ ಸಿನಿಮಾಗೆ ಒಳ್ಳೆದಾಗಲಿ, ಕನ್ನಡ ಚಿತ್ರರಂಗ ಬೆಳೆಯಲಿ ಎಂದು ಅವರು ಹಾರೈಸಿದ್ದಾರೆ.

‘ಸಿ’ ಚಿತ್ರವು ಕಣ್ಣು ಕಾಣದ ಮಗಳು ಹಾಗೂ ಅಪ್ಪನ ನಡುವಿನ ಬಾಂಧವ್ಯದ ಬಗ್ಗೆ ಇದೆ. ಕಣ್ಣು ಕಾಣದ ಮಗಳ ಆಸೆಯನ್ನು ನೆರವೇರಿಸಲು ಅಪ್ಪ ಎಷ್ಟೆಲ್ಲ ಕಷ್ಟ ಪಡುತ್ತಾರೆ, ಮಗಳಿಗಾಗಿ ಅಪ್ಪನ ಹೋರಾಟದ ಕಥೆಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕಿರಣ್ ಸುಬ್ರಮಣಿ.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಇದನ್ನೂ ಓದಿ: Gold Rate Today: ಕೊನೆಗೂ ಇಳಿಯಿತು ಬಂಗಾರದ ದರ; ಇಂದು ಚಿನ್ನ ಇಷ್ಟು ಅಗ್ಗ

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ. ಸದ್ಯ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿ ಸಿನಿಮಾ ಆಗಸ್ಟ್‌ 23ಕ್ಕೆ ತೆರೆಗೆ ಬರುತ್ತಿದೆ.

Continue Reading

Latest

Konkan Railway: ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಆ. 8ರವರೆಗೆ ರದ್ದು

Konkan Railway: ಪಶ್ಚಿಮ ಘಟ್ಟ ಭಾಗದ ಎಡಕುಮೇರಿ – ಕಡಗರವಳ್ಳಿ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ರೈಲು ಹಳಿಗಳ ಮೇಲೆ ಮಣ್ಣು ಕುಸಿದ ಕಾರಣ ರೈಲು ಸಂಚಾರಕ್ಕೆ ತಡೆಯಾಗಿದೆ. ಹಾಗಾಗಿ ಇಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿದ್ದ ಹಿನ್ನಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರವನ್ನು ಆಗಸ್ಟ್ 8ರವರೆಗೆ ರದ್ದುಪಡಿಸಲಾಗಿದೆ

VISTARANEWS.COM


on

Karnataka Trains
Koo

ಬೆಂಗಳೂರು : ರಾಜ್ಯದೆಲ್ಲೆಡೆ ಭಾರೀ ಮಳೆ ಸುರಿಯುತ್ತಿರುವ ಕಾರಣ ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಭೂಕುಸಿತ ಉಂಟಾದ ಕಾರಣ ಬಸ್ ಹಾಗೂ ರೈಲ್ವೆ ಸಂಚಾರದಲ್ಲಿ ಸಮಸ್ಯೆ ಎದುರಾಗಿದೆ. ಪಶ್ಚಿಮ ಘಟ್ಟ ಭಾಗದ ಎಡಕುಮೇರಿ – ಕಡಗರವಳ್ಳಿ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ರೈಲು ಹಳಿಗಳ ಮೇಲೆ ಮಣ್ಣು ಕುಸಿದ ಕಾರಣ ರೈಲು ಸಂಚಾರಕ್ಕೆ ತಡೆಯಾಗಿದೆ. ಹಾಗಾಗಿ ಇಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿದ್ದ ಹಿನ್ನಲೆಯಲ್ಲಿ ಕೊಂಕಣ ರೈಲು (Konkan Railway) ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರವನ್ನು ಆಗಸ್ಟ್ 8ರವರೆಗೆ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ರದ್ದಾದ ರೈಲುಗಳ ವಿವರ ಹೀಗಿದೆ:

  • ರೈಲು ನಂ.16595 ಕೆಎಸ್ಆರ್ ಬೆಂಗಳೂರು- ಕಾರವಾರ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆಗಸ್ಟ್ 7ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.16596 ಕಾರವಾರ- ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.01595 ಕಾರವಾರ- ಮಡಗಾಂವ್ ಹಾಗೂ ರೈಲು ನಂ. 01596 ಮಡಗಾಂವ್-ಕಾರವಾರ ವಿಶೇಷ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.16585 ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು- ಮುರ್ಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆ.7ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.16586 ಮುರ್ಡೇಶ್ವರ- ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.16515 ಕೆಎಸ್ಆರ್ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲಿನ ಆ.7ರವರೆಗಿನ ಸಂಚಾರ ಸಂಪೂರ್ಣ ರದ್ದು.
  • ರೈಲು ನಂ.16516 ಕಾರವಾರ- ಕೆಎಸ್ಆರ್ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಆ.8ರವರೆಗಿನ ಸಂಚಾರವನ್ನು ಸಂಪೂರ್ಣವಾಗಿ ರದ್ದು ಪಡಿಸಲಾಗಿದೆ.

ಇದನ್ನೂ ಓದಿ: Railway Rules: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

ಈ ಕುರಿತು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರ ಪ್ರಕಟಣೆ ತಿಳಿಸಿದೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಕಹಿ ಸುದ್ದಿಯನ್ನು ನೀಡಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳ ಹಾಗೂ ಆಸುಪಾಸಿನಲ್ಲಿ ಗೂಡ್ಸ್ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಅವಕಾಶ ನೀಡಿಲ್ಲ. ಆದರೆ ಸದ್ಯದಲ್ಲೇ ದುರಸ್ಥಿ ಕಾರ್ಯ ಸಂಪೂರ್ಣವಾಗಲಿದ್ದು, ನಂತರ ರೈಲು ಸಂಚಾರ ಮುಂದುವರಿಯಲಿದೆ. ಅಲ್ಲಿಯವರೆಗೆ ರೈಲು ಪ್ರಯಾಣಿಕರು ಸಹಕರಿಸುವಂತೆ ವಿನಂತಿಸಲಾಗಿದೆ.

Continue Reading
Advertisement
Bangladesh unrest
ವಿದೇಶ1 min ago

Bangladesh Unrest: ಬಾಂಗ್ಲಾ ಸಂಸತ್‌ ವಿಸರ್ಜನೆ; ಮಾಜಿ ಪ್ರಧಾನಿ ಖಲೀದಾ ಜಿಯಾ ಜೈಲಿನಿಂದ ರಿಲೀಸ್‌

SSC Recruitment 2024
ಉದ್ಯೋಗ22 mins ago

SSC Recruitment 2024: ಗುಡ್‌ನ್ಯೂಸ್‌; 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Paris Olympics
ಕ್ರೀಡೆ33 mins ago

Paris Olympics: ಸೆಮಿ ಫೈನಲ್​ ಪ್ರವೇಶಿಸಿದ ವಿನೇಶ್ ಫೋಗಟ್

Money Guide
ಮನಿ-ಗೈಡ್46 mins ago

Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

Lalbagh Flower Show
ಕರ್ನಾಟಕ50 mins ago

Lalbagh Flower Show: ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

Physical Abuse
ಬೆಂಗಳೂರು53 mins ago

Physical Abuse : ಬೆಂಗಳೂರಿನಲ್ಲಿ ಶಾಲಾ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ ಯುವಕ

Paris Olympics
ಕ್ರೀಡೆ1 hour ago

Paris Olympics: ಫೈನಲ್​ ಪ್ರವೇಶಿಸಿದ ನೀರಜ್​ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್​ ಫೈನಲ್​ಗೆ

LK advani
ದೇಶ1 hour ago

L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

women PG bangalore
ಪ್ರಮುಖ ಸುದ್ದಿ2 hours ago

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

IND vs SL
ಕ್ರೀಡೆ2 hours ago

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌