Passenger Arrest: ವಿಮಾನದಲ್ಲಿ ಗಗನಸಖಿ ನೀಡಿದ ನೀರು, ಆಹಾರ ಸೇವಿಸದ ಪ್ರಯಾಣಿಕನ ಬಂಧನ! ಕಾರಣ ಕುತೂಹಲಕರ! - Vistara News

Latest

Passenger Arrest: ವಿಮಾನದಲ್ಲಿ ಗಗನಸಖಿ ನೀಡಿದ ನೀರು, ಆಹಾರ ಸೇವಿಸದ ಪ್ರಯಾಣಿಕನ ಬಂಧನ! ಕಾರಣ ಕುತೂಹಲಕರ!

Passenger Arrest: ಜೆಡ್ಡಾದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಪ್ರಯಾಣಿಕನೊಬ್ಬನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಏರ್ ಹೋಸ್ಟೆಸ್ ಪ್ರಯಾಣಿಕರಿಗೆ ನೀರು, ಚಹಾ ಮತ್ತು ಆಹಾರ ಸೇರಿದಂತೆ ಉಪಾಹಾರವನ್ನು ನೀಡುತ್ತಿದ್ದಾಗ ಆರೋಪಿ ಐದೂವರೆ ಗಂಟೆಗಳ ಪ್ರಯಾಣದ ಅವಧಿಯಲ್ಲಿ ಅವೆಲ್ಲವನ್ನೂ ನಿರಾಕರಿಸಿದ್ದಾನೆ. ಆತ ಆಹಾರವನ್ನು ನಿರಂತರವಾಗಿ ನಿರಾಕರಿಸಿದ್ದರಿಂದ ಶಂಕೆಗೊಂಡ ಏರ್ ಹೋಸ್ಟೆಸ್ ಕ್ಯಾಪ್ಟನ್‌ಗೆ ಮಾಹಿತಿ ನೀಡಿದಳು. ವಿಮಾನ ಇಳಿದಾದ ಬಳಿಕ ಅಧಿಕಾರಿಗಳು ಆತನನ್ನು ವಿಚಾರಿಸಿದಾಗ ಅಕ್ರಮ ಚಿನ್ನ ಕಳ್ಳ ಸಾಗಾಣಿಗೆ ಬೆಳಕಿಗೆ ಬಂತು.

VISTARANEWS.COM


on

Passenger Arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ಜನರು ಅನೇಕ ರೀತಿಯಲ್ಲಿ ನಾನಾ ರೀತಿಯಲ್ಲಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಇದೀಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಅಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. ಜೆಡ್ಡಾದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಎಐ 992ರಲ್ಲಿ ಗುದದ್ವಾರದಲ್ಲಿ ಚಿನ್ನವಿಟ್ಟುಕೊಂಡು ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು (Passenger Arrest) ಅಧಿಕಾರಿಗಳು ಬಂಧಿಸಿದ್ದಾರೆ.

ಏರ್ ಹೋಸ್ಟೆಸ್ ಪ್ರಯಾಣಿಕರಿಗೆ ನೀರು, ಚಹಾ ಮತ್ತು ಆಹಾರ ಸೇರಿದಂತೆ ಉಪಾಹಾರವನ್ನು ನೀಡುತ್ತಿದ್ದಾಗ ಆರೋಪಿ ಐದೂವರೆ ಗಂಟೆಗಳ ಪ್ರಯಾಣದ ಅವಧಿಯಲ್ಲಿ ಅವೆಲ್ಲವನ್ನು ನಿರಾಕರಿಸಿದ್ದಾನೆ. ಆತ ಆಹಾರವನ್ನು ನಿರಂತರವಾಗಿ ನಿರಾಕರಿಸಿದ್ದರಿಂದ ಅನುಮಾನಗೊಂಡ ಏರ್ ಹೋಸ್ಟೆಸ್ ಕ್ಯಾಪ್ಟನ್‍ಗೆ ಮಾಹಿತಿ ನೀಡಿದಳು. ಅವರು ಏರ್ ಟ್ರಾಫಿಕ್ ಕಂಟ್ರೋಲ್ ಮೂಲಕ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿದರು. ವಿಮಾನದಿಂದ ಇಳಿದ ನಂತರ ಆರೋಪಿಯ ಮೇಲೆ ಕಣ್ಗಾವಲು ಇಡಲಾಗಿತ್ತು.

ಕಸ್ಟಮ್ಸ್ ಕ್ಲಿಯರೆನ್ಸ್ ಮೂಲಕ ಹೊರಗೆ ಹೋಗಲು ಪ್ರಯತ್ನಿಸುತ್ತಿದ್ದಂತೆ ಅಧಿಕಾರಿಗಳು ಅವನನ್ನು ತಡೆದರು. ನಂತರ ಆತನನ್ನು ವಿಚಾರಿಸಿದಾಗ ಪ್ರಯಾಣಿಕನು ತನ್ನ ಗುದದ್ವಾರದಲ್ಲಿ ಚಿನ್ನದ ಪೇಸ್ಟ್ ಅನ್ನು ಅಡಗಿಸಿಟ್ಟಿದ್ದಾನೆ ಎಂಬುದು ಅಧಿಕಾರಿಗಳಿಗೆ ತಿಳಿದುಬಂದಿದೆ, ಅದನ್ನು ಅವನು ನಾಲ್ಕು ಅಂಡಾಕಾರದ ಕ್ಯಾಫ್ಸುಲ್‍ಗಳ ರೂಪದಲ್ಲಿ ಹೊರಗೆ ತೆಗೆದಿದ್ದಾನೆ ಎನ್ನಲಾಗಿದೆ. ಆ ಮೂಲಕ ಸುಮಾರು 69,16,169 ರೂ ಮೌಲ್ಯದ ಸುಮಾರು 1096.76 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಜೆಡ್ಡಾದಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದಾಗಿ ಪ್ರಯಾಣಿಕ ಒಪ್ಪಿಕೊಂಡಿದ್ದು, ಕಸ್ಟಮ್ಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಕಾರಿಗಳು ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

ವಿಮಾನ ಪ್ರಯಾಣದ ವೇಳೆ ಪ್ರಯಾಣಿಕರಿಗೆ ಏರ್ ಹೋಸ್ಟೆಸ್ ಆಹಾರ ಅಥವಾ ಪಾನೀಯಗಳನ್ನು ನೀಡುತ್ತಾರೆ. ಒಂದು ವೇಳೆ ಪ್ರಯಾಣಿಕರು ಪದೇ ಪದೇ ಅದನ್ನು ನಿರಾಕರಿಸಿದರೆ ಅವರನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಯಾಕೆಂದರೆ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೆಲವು ವೇಳೆ ಹೊರದೇಶಗಳಿಗೆ ಕಳ್ಳಸಾಗಾಣಿಕೆಗಳು ಮಾಡುತ್ತಿರುತ್ತಾರೆ. ಇಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ವಿಮಾನಯಾನ ಸಂಸ್ಥೆಗಳು ಮತ್ತು ಅಧಿಕಾರಿಗಳು ಪ್ರಯಾಣಿಕರ ಮೇಲೆ ಕಣ್ಗಾವಲು ಇಟ್ಟಿರುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

VISTARANEWS.COM


on

ಕೇರಳ: ಮದುವೆಯಾಗಿ ಒಂದೇ ತಿಂಗಳು ಆಗಿಲ್ಲ. ಅದಾಗಲೇ ಆಕೆ ಗರ್ಭಿಣಿ! ಹೌದು, ಕುಂಭಮೇಳ ಖ್ಯಾತಿಯ ಅರಳು ಗಣ್ಣಿನ ಬೆಡಗಿ ಮೋನಲಿಸಾ ಭೋಸ್ಲೆ ಫರ್ಹಾನ್‌ ಖಾನ್‌ ಎಂಬಾತನನ್ನು ವರಿಸಿದ್ದರು. ಆಕೆ ಗರ್ಭಿಣಿ ಅನ್ನೋ ವಿಷಯವನ್ನು ಆಕೆಯ ಪತಿ ಇದೀಗ ಬಹಿರಂಗಪಡಿಸಿದ್ದಾರೆ.
ಕಳೆದ ಮಾ.11 ರಂದು ಮೊನಲಿಸಾ, ಫರ್ಮಾರನ್ನು ಕೇರಳದಲ್ಲಿ ಮದುವೆಯಾಗಿದ್ದರು. ಇವರ ವಿವಾಹಕ್ಕೆ ಕೇರಳದ ಹಲವು ರಾಜಕೀಯ ಮುಖಂಡರು ಬೆಂಬಲಿಸಿ ನೇತೃತ್ವ ವಹಿಸಿದ್ದರು.
ಅಂತರ ಧರ್ಮಿಯ ಈ ಮದುವೆ, ಮೋನಾಲಿಸಾ ಭೋಸ್ಲೆ ಕುಟುಂಬದವರಿಗೆ ಇಷ್ಟ ಇರಲಿಲ್ಲ. ಇದನ್ನು ಲವ್ ಜಿಹಾದ್ ಎಂದು ಆರೋಪಿಸಿದ್ದರು. ಅದಾದ ಬಳಿಕ ಮೊನಲಿಸಾ, ಅಪ್ರಾಪ್ತೆ ಎಂದು ಆರೋಪಿಸಿ ಪತಿ ಫರ್ಮಾನ್ ಮೇಲೆ ಪೋಕ್ಸೊ ಕೇಸ್‌ ಸಹ ದಾಖಲಾಗಿತ್ತು.
ಈ ಘಟನೆಗಳ ಬಳಿಕ ಪತಿ ಫರ್ಮಾನ್ ಮೊನಾಲಿಸಾ ನಾಪತ್ತೆ ಆಗಿದ್ದಾಳೆ ಎಂದು ದೂರು ನೀಡಿದ್ದರು. ಈಗ ಮೊನಲಿಸಾ ಗರ್ಭಿಣಿ ಎಂದು ಫರ್ಮಾನ್ ಪೊಲೀಸರ ಬಳಿ ಹೇಳಿದ್ದಾರೆ.

Continue Reading

Latest

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

VISTARANEWS.COM


on

ಸೊರಬ: ನ್ಯಾಯಾಲಯದ ಆದೇಶದ ಪ್ರಕಾರ ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಲ್ಲಿನ ಬಂಗಾರಧಾಮದಲ್ಲಿ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಆ ಪ್ರಕಾರ ಅಂಕ ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ ಎಂದರು.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತಿಯ ಭಾಷೆಯಾದ ಹಿಂದಿ ಕಡ್ಡಾಯವಲ್ಲ ಎಂಬ ತೀರ್ಮಾನವನ್ನು ಸರ್ಕಾರ ಕೈಗೊಂಡಿತ್ತು.‌ ಕನ್ನಡವನ್ನು ಉಳಿಸುವ ದೃಷ್ಟಿಯಿಂದ ಈ ಕೆಲಸ ಮಾಡಲಾಗಿತ್ತು. ಸರ್ಕಾರ ಹಿಂದಿ ವಿರೋಧಿ ಅಲ್ಲ. ಆದರೂ ಹೈಕೋರ್ಟ್ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ ಎಂದು ತಿಳಿಸಿದರು.

Continue Reading

Latest

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

VISTARANEWS.COM


on

ದುಬೈ: ಮದ್ಯಪ್ರಾಚ್ಯ ಬಿಕ್ಕಟ್ಟು ಬಗೆಹರಿಸಲು ಇರಾನ್-‌ ಅಮೆರಿಕ ನಡುವೆ ಮಾತುಕತೆಗೆ ವೇದಿಕೆ ಸಜ್ಜುಪಡಿಸುತ್ತಿರುವಾಗಲೇ ಇರಾನ್‌ನಿಂದ ಹೊರಟ ಸರಕು ಸಾಗಣೆ ಹಡಗಿನ ಮೇಲೆ ಇಂದು ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ. ಹಡಗಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದ್ದು ಹಡಗು ಸಮುದ್ರದಲ್ಲಿ ನಿಂತಲ್ಲೇ ನಿಂತಿದೆ ಎಂದು ಬ್ರಿಟನ್‌ನ ಕಡಲ ವ್ಯಾಪಾರ ಕಾರ್ಯಾಚರಣೆ ಕೇಂದ್ರ ವರದಿ ಮಾಡಿದೆ.
ಈ ಘಟನೆ ಇರಾನ್‌ನ ಪಶ್ಚಿಮಕ್ಕೆ ಎಂಟು ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ನಡೆದಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅನಿರ್ದಿಷ್ಟಾವಧಿಗೆ ಕದನ ವಿರಾಮ ಘೋಷಿಸಿದ್ದರೂ ಗುಂಡಿನ ಚಕಮಕಿ ನಿಲ್ಲದೇ ಇರುವುದು ಎರಡನೇ ಸುತ್ತಿನ ಮಾತುಕತೆ ಬಗ್ಗೆ ಸಂಶಯ ಮೂಡಿಸಿದೆ.
ಅಮೆರಿಕವೇ ಈ ದಾಳಿ ನಡೆಸಿದೆ ಎಂದು ಇರಾನ್‌ ಶಂಕಿಸಿದೆ. ಇರಾನ್ ಬಂದರುಗಳ ಮೇಲೆ ದಿಗ್ಬಂಧನವನ್ನು ಮುಂದುವರಿಸಿದೆ. ಇರಾನ್‌ನಿಂದ ಹೊರಹೋಗುತ್ತಿದ್ದ ಸರಕು ಸಾಗಣೆ ಹಡಗಿನ ಮೇಲೆ ಗುಂಡು ಹಾರಿಸಲಾಗಿದೆ. ಈಗ ಅದು ಹೊರ್ಮುಜ್‌ ಜಲಸಂಧಿಯಲ್ಲಿ ನಿಂತಲ್ಲೇ ನಿಂತಿದೆ. ಯಾವುದೇ ಸಿಬ್ಬಂದಿಗೆ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ. ಹಡಗಿಗೆ ಯಾವುದೇ ಹಾನಿಯಾಗಿಲ್ಲ ಎಂದು ಬ್ರಿಟನ್‌ನ ಕಡಲ ವ್ಯಾಪಾರ ಕಾರ್ಯಾಚರಣೆ ಕೇಂದ್ರ ತಿಳಿಸಿದೆ.
ಅಮೆರಿಕದ ಈ ಕೃತ್ಯಕ್ಕೆ ಪ್ರತಿಕ್ರಿಯೆ ನೀಡಿರುವ ಇರಾನ್, ಶತ್ರುಗಳಿಗೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದೆ. ಅಮೆರಿಕ ನೆಲೆಗಳ ಮೇಲೂ ದಾಳಿ ನಡೆಸಲು ಹಿಂಜರಿಯುವುದಿಲ್ಲ ಎಂದೂ ತಿಳಿಸಿದೆ. ಹೊರ್ಮುಜ್ ಜಲಸಂಧಿಯಲ್ಲಿ ತನ್ನ ಎಚ್ಚರಿಕೆ ಮೀರಿ ಮುನ್ನುಗ್ಗುತಿದ್ದ ಹಡಗಿನ ಮೇಲೆ ಇರಾನ್‌ ರೆವಲ್ಯೂಷನರಿ ಗಾರ್ಡ್ಸ್ ಗುಂಡಿನ ದಾಳಿ ನಡೆಸಿದೆ.

Continue Reading

Latest

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

VISTARANEWS.COM


on

ಬೆಂಗಳೂರು: ಕೊಡಗು ಜಿಲ್ಲೆಯ ಹೋಮ್‌ಸ್ಟೇ ಒಂದರಲ್ಲಿ ವಿದೇಶಿ ಮಹಿಳೆ‌ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಈಗಾಗಲೇ ಹೋಮ್‌ಸ್ಟೇಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಅದರ ಪ್ರಕಾರ ಹೋಮ್‌ ಮಾಲೀಕರು ನಡೆದುಕೊಳ್ಳಬೇಕು. ಯಾರು ಹೋಮ್‌ಸ್ಟೇ ನಡೆಸುತ್ತಾರೆ, ಪರವಾನಗಿ ಇದೆಯೇ? ಹೋಮ್‌ಸ್ಟೇ ಮಾಡಲು ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಲಾಗಿದೆ ಎಂದರು.
ಅದನ್ನು ಮೀರಿ ಘಟನೆಗಳಾದಾಗ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಕೊಡಗಿನಲ್ಲಿ ನಡೆದ ಘಟನೆಯ ಬಗ್ಗೆ ಗೊತ್ತಾದ ತಕ್ಷಣ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳಿಂದ ರಾಜ್ಯಕ್ಕಾಗಲೀ ಅಥವಾ ಸಮಾಜಕ್ಕಾಗಲೀ ಒಳ್ಳೆಯ ಸಂದೇಶ ಕೊಡುವುದಿಲ್ಲ. ಹೊರ ರಾಜ್ಯ, ಹೊರದೇಶಗಳಿಂದ ಇಲ್ಲಿಗೆ ಪ್ರವಾಸಕ್ಕೆ ಬಂದವರ ಮೇಲೆ ಈ ರೀತಿ ದೌರ್ಜನ್ಯ ನಡೆದಾಗ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಆದ್ದರಿಂದ ಈ ವಿಚಾರದಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕೊಡಗು ಜಿಲ್ಲೆಯ ಕುಟ್ಟ ವ್ಯಾಪ್ತಿಯಲ್ಲಿ ವಿದೇಶಿ ಪ್ರಜೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ‌. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈತ ಜಾರ್ಖಂಡ್ ಮೂಲದವನು ಎಂದು ತಿಳಿದುಬಂದಿದೆ.
ಕಬ್ಬಡ್ಡಿ ಬೆಟ್ಟಿಂಗ್‌ ಕುರಿತು ಹೇಳಿದ್ದೇನು?:
ಬೆಟ್ಟಿಂಗ್ ಕುರಿತಂತೆ ನ್ಯಾಯಾಲಯ ಆದೇಶ ನೀಡಿದ್ದು, ಆ ಬಗ್ಗೆ ಹೆಚ್ಚು ಮಾತನಾಡಲು ಹೋಗುವುದಿಲ್ಲ. ಕಬ್ಬಡಿ ಆಟ ನಡೆಯುವಾಗ ಹಳ್ಳಿಯಲ್ಲಿ ಎಲ್ಲರೂ ಮಾತಾಡುವ ಹಾಗೆ ನಾನೂ ಮಾತನಾಡಿದ್ದೆ. ಕಾನೂನು ದೃಷ್ಟಿಯಿಂದ ಅದು ತಪ್ಪು. ಆದರೆ ನಾನು ಯಾವ ಅರ್ಥದಲ್ಲಿ ಹೇಳಿದ್ದೇನೆ ಎನ್ನುವುದು ಮುಖ್ಯ ಎಂದರು.
ನಾನು ಬೆಟ್ಟಿಂಗ್ ಪ್ರಮೋಟ್ ಮಾಡಿ ಎಂದು ಹೇಳಿದ್ದರೆ ತಪ್ಪಾಗುತ್ತದೆ. ಜವಾಬ್ದಾರಿ ಸ್ಥಾನದಲ್ಲಿದ್ದು, ಬೆಟ್ಟಿಂಗ್‌ ಪ್ರೋತ್ಸಾಹಿಸುತ್ತೇನೆ ಎನ್ನುವುದು ಶುದ್ಧ ಸುಳ್ಳು. ಅರ್ಥೈಸಿಕೊಳ್ಳುವುದರ ಮೇಲೆ ಅರ್ಥ ಮಾಡಿಕೊಳ್ಳಬಹುದು. ಈಗ ತಮಾಷೆಯನ್ನೂ ಮಾಡುವಂತಿಲ್ಲ ಎಂಬಂತಾಗಿದೆ. ನಾನು ಕಾನೂನನ್ನು ಗೌರವಿಸುತ್ತೇನೆ. ಕಾನೂನು ರಕ್ಷಣೆ ಮಾಡುವ ಖಾತೆ ನಿಭಾಯಿಸುತ್ತಿದ್ದೇನೆ. ನಾನು ಕಾನೂನಿಗೆ ಗೌರವ ಕೊಡಬೇಕಲ್ಲವೇ? ಕಾನೂನು ತೆಗೆದುಕೊಳ್ಳುವ ಕ್ರಮಕ್ಕೆ ಬದ್ಧನಾಗಿರುತ್ತೇನೆ ಎಂದರು.
ಒಂದುವೇಳೆ ನನಗೆ ನೋಟಿಸ್‌ ಕೊಟ್ಟಿದ್ದರೆ ವಿವರಣೆ ನೀಡುತ್ತಿದ್ದೆ. ಆದರೆ ನೋಟಿಸ್ ಬಂದಿಲ್ಲ. ಏಕಾಏಕಿಯಾಗಿ ಆದೇಶ ಮಾಡಲಾಗಿದೆ. ಒಟ್ಟಿನಲ್ಲಿ ಕಾನೂನನ್ನು ಗೌರವಿಸುತ್ತೇನೆ ಎಂದು ಸಚಿವರು ಹೇಳಿದರು.

Continue Reading
Advertisement
Latest3 hours ago

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

Latest3 hours ago

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Latest4 hours ago

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

Latest4 hours ago

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

Latest5 hours ago

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

Latest5 hours ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

Latest5 hours ago

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

Latest5 hours ago

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

Latest6 hours ago

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

ಅವಿಭಾಗೀಕೃತ6 hours ago

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌