Site icon Vistara News

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

Sexual Abuse

ಶಾಲಾ ಕಾಲೇಜುಗಳೆಂದರೆ ವಿದ್ಯಾ ದೇಗಲವಿದ್ದಂತೆ. ಅಲ್ಲಿಗೆ ಬರುವ (Sexual Abuse) ಮಕ್ಕಳು ವಿದ್ಯೆ ಕಲಿತು ತಮ್ಮ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಂಡು ಜೀವನದಲ್ಲಿ ಉನ್ನತ ಮಟ್ಟಕ್ಕೇರಲು ಪ್ರಯತ್ನಿಸಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿದೆ. ಶಾಲಾ ಶಿಕ್ಷಕರಿಂದ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಿರುವುದು ಮಾತ್ರವಲ್ಲ ತಮ್ಮ ಸಹಪಾಠಿಗಳಿಂದಲೂ ಅತ್ಯಾಚಾರಕ್ಕೆ (Rape Case) ಒಳಗಾಗುತ್ತಿದ್ದಾರೆ. ಅಂತಹದೊಂದು ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಪ್ರತಿಷ್ಠಿತ ಶಾಲೆಯೊಂದರಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ.

ಜುಲೈ 13ರ ಶನಿವಾರ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಪ್ರತಿಷ್ಠಿತ ಶಾಲಾ ಆವರಣದಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ಅದೇ ಶಾಲೆಯ ಕಿರಿಯ ತರಗತಿಯಲ್ಲಿ ಓದುತ್ತಿದ್ದ 12 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ನಂತರ ಈ ಘಟನೆಯ ಬಗ್ಗೆ ತಿಳಿದ ಶಾಲೆಯ ಪ್ರಾಂಶುಪಾಲರು ಬಹೋದಾಪುರ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

Rape Case

ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಅಪ್ರಾಪ್ತ ವಯಸ್ಸಿನವರಾದ ಕಾರಣ ವಿಶೇಷ ಕಾಯಿದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಗ್ವಾಲಿಯರ್ ಎಎಸ್‍ಪಿ ನಿರಂಜನ್ ಶರ್ಮಾ, “ಗ್ವಾಲಿಯರ್ನ ಪ್ರತಿಷ್ಠಿತ ಶಾಲೆಯೊಂದರ ಪ್ರಾಂಶುಪಾಲರ ಗಮನಕ್ಕೆ ಬಂದಿದ್ದು, ಶಾಲೆಯ ವಿದ್ಯಾರ್ಥಿಯೊಬ್ಬ ಶಾಲೆಯ ಆವರಣದಲ್ಲಿ ಕಿರಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಶಾಲಾ ಪ್ರಾಂಶುಪಾಲರು ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ವರದಿ ಪ್ರಕಾರ, ಘಟನೆ ನಡೆದ ದಿನ, ಜುಲೈ 13ರಂದು ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಅನಾರೋಗ್ಯದ ಕಾರಣ ಶಾಲೆಯ ಆರೋಗ್ಯ ಕೇಂದ್ರಕ್ಕೆ ಹೋಗಿ ವಿಶ್ರಾಂತಿ ಪಡೆಯುತ್ತಿದ್ದರು. ಇದರ ನಂತರ ಆರೋಪಿ ವಿದ್ಯಾರ್ಥಿ, ವಿದ್ಯಾರ್ಥಿನಿಯನ್ನು ಶೌಚಾಲಯಕ್ಕೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ, ಸಂತ್ರಸ್ತೆ ಘಟನೆಯ ಬಗ್ಗೆ ಅಲ್ಲಿದ್ದ ನರ್ಸ್‍ಗೆ ಮಾಹಿತಿ ನೀಡಿದಳು. ಬಳಿಕ ಈ ವಿಷಯವು ಶಾಲಾ ಅಧಿಕಾರಿಗಳ ಗಮನಕ್ಕೆ ತಂದ ಕಾರಣ , ಅವರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Exit mobile version