ಮುಂಬೈ: ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗಿದ್ದು, ಕಾಮುಕರು ಮಹಿಳೆಯರು, ಮಕ್ಕಳು ಹಾಗೂ ಪ್ರಾಣಿಗಳನ್ನೂ ತಮ್ಮ ಕಾಮದಾಟಕ್ಕೆ ಬಲಿ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 3 ವರ್ಷದ ಮಗುವಿನ ಮೇಲೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಅತ್ಯಾಚಾರ (Sexual Abuse) ಎಸಗಿದ್ದಾನೆ. ಆರೋಪಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮಗುವಿನ ತಂದೆಯ ದೂರಿನ ಮೇರೆಗೆ ಆತನ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಾಗೆಯೇ ಕೆಲವು ದಿನಗಳ ಹಿಂದೆ, ಕೃಷಿ ಇಲಾಖೆಯ ಸಹಾಯಕ ಅಭಿವೃದ್ಧಿ ಅಧಿಕಾರಿ (ಎಡಿಒ) ಉತ್ತರ ಪ್ರದೇಶದ ಬುಲಂದ್ಶಹರ್‌ನ ತನ್ನ ಮನೆಯಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ತನ್ನ ಕಾಮಬಯಕೆ ತೀರದಿದ್ದಕ್ಕೆ ಮತ್ತೆ ಮೇಕೆಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿರುವುದು ಕಂಡುಬಂದಿತ್ತು. ಈ ಘಟನೆಯನ್ನು ನೆರೆಹೊರೆಯವರು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದಾರೆ. ಘಟನೆಯ ನಂತರ, ಬಾಲಕಿಯ ಕುಟುಂಬವು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಂತರ ಪೊಲೀಸರು ಎಡಿಒ ಅವನನ್ನು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಅವಳ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಪಂಜಾಬ್‍ನಲ್ಲಿ ಯುವತಿಯೊಬ್ಬಳ ಸಹೋದರ ಆತನ ಗೆಳತಿಯ ಜೊತೆ ಓಡಿಹೋಗಿದ್ದಕ್ಕೆ ಸಹೋದರನ ಗೆಳತಿಯ ಕುಟುಂಬವು ಸೇಡಿಗಾಗಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಸಹೋದರನ ಗೆಳತಿಯ ತಂದೆ ಮತ್ತು ಇತರ ಮೂವರು ಕುಟುಂಬ ಸದಸ್ಯರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಅಪರಾಧವನ್ನು ತಮ್ಮ ಮೊಬೈಲ್ ಫೋನ್‍ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ!
ಈ ಘಟನೆಯು ಮೇ 1 ರಂದು ಸಂಭವಿಸಿದೆ ಎಂದು ವರದಿಯಾಗಿದೆ, ಆದರೆ, ಸಂತ್ರಸ್ತೆ ಆಘಾತಕ್ಕೊಳಗಾಗಿದ್ದ ಕಾರಣ ಬಹಳ ಸಮಯದ ನಂತರ ಚೇತರಿಸಿಕೊಂಡು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾಳೆ ಎನ್ನಲಾಗಿದೆ. ಕೋಲ್ಕತಾ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಆದರೆ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ ಮತ್ತು ಸಿಬಿಐ ಮಾತ್ರ ಈ ಬಗ್ಗೆ ಸರಿಯಾಗಿ ತನಿಖೆ ನಡೆಸಬಹುದು ಎಂಬುದನ್ನು ಮನಗೊಂಡ ಕೋಲ್ಕತ್ತಾ ಹೈಕೋರ್ಟ್ ಇದರ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದೆ ಎನ್ನಲಾಗಿದೆ.