Sexual Abuse: ತನ್ನ ಸ್ನೇಹಿತನ ಜತೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಒತ್ತಡ; ಇವನೆಂಥ ಗಂಡ! - Vistara News

Latest

Sexual Abuse: ತನ್ನ ಸ್ನೇಹಿತನ ಜತೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಒತ್ತಡ; ಇವನೆಂಥ ಗಂಡ!

Sexual Abuse: ಚೀನಾದಲ್ಲಿದ್ದಾಗ ಆಫ್ರಿಕನ್ ಯುವಕನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಒತ್ತಾಯಿಸಿದ್ದಾನೆ ಎಂದು ಆರೋಪಿಸಿ 40 ವರ್ಷದ ಮಹಿಳೆ ಪತಿಯ ವಿರುದ್ಧ ದೂರು ನೀಡಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪತಿ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ, ಅಲ್ಲದೇ ಅಶ್ಲೀಲ ವಿಡಿಯೊವನ್ನು ನೋಡುವಂತೆ ಒತ್ತಾಯಿಸುವ ಮೂಲಕ ಕಿರುಕುಳ ನೀಡುತ್ತಿದ್ದ. ಮತ್ತು ಅವಳು ಅದನ್ನು ವಿರೋಧಿಸಿದಾಗ ದೈಹಿಕವಾಗಿ ಹಲ್ಲೆ ಮಾಡುತ್ತಿದ್ದ ಎಂದು ಮಹಿಳೆ ದೂರು ನೀಡಿದ್ದಾಳೆ.

VISTARANEWS.COM


on

Sexual Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಲಕ್ನೋ: ಪತಿ ಪತ್ನಿಯ ಮಾನ ರಕ್ಷಣೆ ಮಾಡುವ ರಕ್ಷಕನಾಗಿರುತ್ತಾನೆ. ಯಾಕೆಂದರೆ ತನ್ನ ಪತ್ನಿಯನ್ನು ಕಾಮುಕರ ಕೆಟ್ಟ ದೃಷ್ಟಿಯಿಂದ ಕಾಪಾಡುವುದು ಅವನ ಜವಾಬ್ದಾರಿ ಎಂದು ನಮ್ಮ ಸಮಾಜ ಭಾವಿಸಿದೆ. ಪತ್ನಿ ಕೂಡ ತನ್ನ ಪತಿ ತನ್ನ ರಕ್ಷಣೆ ಮಾಡುತ್ತಾನೆ ಎಂಬ ನಂಬಿಕೆ ಹೊಂದಿರುತ್ತಾಳೆ. ಅದನ್ನು ಉಳಿಸಿಕೊಳ್ಳುವುದು ಅವನ ಕರ್ತವ್ಯವಾಗಿದೆ. ಅಂತಹದರಲ್ಲಿ ‘ಬೇಲಿಯೇ ಎದ್ದು ಹೊಲ ಮೇದಂತೆ’ ಎಂಬಂತೆ ಇಲ್ಲೊಬ್ಬ ಪತಿ ತನ್ನ ಪತ್ನಿಗೆ ಪರಪುರುಷನೊಂದಿಗೆ ಲೈಂಗಿಕ (Sexual Abuse) ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾನೆ.

ಚೀನಾದಲ್ಲಿದ್ದಾಗ ತನ್ನ ಸ್ನೇಹಿತ ಆಫ್ರಿಕನ್ ಯುವಕನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಒತ್ತಾಯಿಸಿದ್ದಾನೆ ಎಂದು ಆರೋಪಿಸಿ 40 ವರ್ಷದ ಮಹಿಳೆ ಪತಿಯ ವಿರುದ್ಧ ದೂರು ನೀಡಿದ ಘಟನೆ ಲಕ್ನೋದ ನಾಕಾದಲ್ಲಿ ನಡೆದಿದೆ. ಪತಿ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ, ಅಲ್ಲದೇ ಅಶ್ಲೀಲ ವಿಡಿಯೊವನ್ನು ನೋಡುವಂತೆ ಒತ್ತಾಯಿಸುವ ಮೂಲಕ ಕಿರುಕುಳ ನೀಡುತ್ತಿದ್ದ. ಮತ್ತು ಅವಳು ಅದನ್ನು ವಿರೋಧಿಸಿದಾಗ ದೈಹಿಕವಾಗಿ ಹಲ್ಲೆ ಮಾಡುತ್ತಿದ್ದ ಮತ್ತು ಅವಳ ಬಳಿ ಇರುವ ಹಣವನ್ನು ಕದಿಯುತ್ತಿದ್ದ ಎಂದು ಆರೋಪಿಸಿ ಮಹಿಳೆ ತನ್ನ ಪತಿಯ ವಿರುದ್ಧ ನಾಕಾ ಪೊಲೀಸರಿಗೆ ನೀಡಿದ್ದಾಳೆ.

ಅಲ್ಲದೇ, ಮಹಿಳೆ ಚೀನಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ಸಹಾಯವನ್ನು ಕೋರಿದ್ದು ಅವರ ಸಹಾಯದಿಂದ ಆತನಿಂದ ತಪ್ಪಿಸಿಕೊಂಡು ಲಕ್ನೋಗೆ ಮರಳಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ರಾಯಭಾರ ಕಚೇರಿಯ ಸಲಹೆಯ ಮೇರೆಗೆ, ಆಕೆ ನಾಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವರದಿ ಪ್ರಕಾರ, ಮಹಿಳೆ 2015 ರಲ್ಲಿ ಚೀನಾದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ ಗಂಜ್ ಮೂಲದ ವ್ಯಕ್ತಿಯನ್ನು ವಿವಾಹವಾದರು. ಮದುವೆಯಾದ ಮೊದಲ ವಾರದಲ್ಲೇ 15 ಲಕ್ಷ ರೂ.ಗಳ ವರದಕ್ಷಿಣೆ ನೀಡುವಂತೆ ಆಕೆಯ ಹೆತ್ತವರನ್ನು ಒತ್ತಾಯಿಸಿದ್ದಾನೆ. ನಂತರ ಆರಂಭದಲ್ಲಿ ಆತ ಏಕಾಂಗಿಯಾಗಿ ಚೀನಾಕ್ಕೆ ಮರಳಿದ್ದಾನೆ, ನಂತರ ಒಂದು ತಿಂಗಳ ನಂತರ ಮತ್ತೆ ಬಂದು ಆಕೆಗೆ ಹಿಂಸೆ ನೀಡಲು ಶುರುಮಾಡಿದ್ದಾನೆ.

ಇದನ್ನೂ ಓದಿ: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ, ಆತ ಮತ್ತೆ ವರದಕ್ಷಿಣೆ ಬೇಕೆಂದು ಕಿರುಕುಳ ನೀಡಲು ಶುರುಮಾಡಿದ್ದಾನೆ. ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ಲಕ್ನೋಗೆ ಹೋದಾಗ, ಪತಿ ಆಕೆಯ ವೀಸಾ, ವಿಮಾನ ಟಿಕೆಟ್ ಮತ್ತು 2 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾನೆ ಮತ್ತು ಮಹಿಳೆಯ 10ಲಕ್ಷ ರೂ ಮೌಲ್ಯದ ಆಭರಣಗಳನ್ನು ಕದ್ದಿದ್ದಾನೆ. ಅವಳು ಮಾರ್ಚ್ 4 ರಂದು ಅವನೊಂದಿಗೆ ಚೀನಾಕ್ಕೆ ಹೋಗಿದ್ದಾಳೆ. ಅಲ್ಲಿ ಆತನ ಹಿಂಸೆಯನ್ನು ಸಹಿಸಲಾರದೆ ಚೀನಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ಸಹಾಯದಿಂದ ಭಾರತಕ್ಕೆ ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Shravan 2024: ಶ್ರಾವಣ ಮಾಸದಲ್ಲೇಕೆ ಮಾಂಸಾಹಾರ ಮಾಡಬಾರದು? ಇದಕ್ಕಿದೆ ವೈಜ್ಞಾನಿಕ ಕಾರಣ!

shravan 2024: ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವಿಸದೇ ಇರುವುದಕ್ಕೆ ಕೆಲವು ವೈಜ್ಞಾನಿಕ ಕಾರಣಗಳೂ ಇವೆ. ಈ ಸಮಯದಲ್ಲಿ ಸೀಗಡಿ ಮತ್ತು ಮೀನುಗಳ ಸಂತಾನೋತ್ಪತ್ತಿ ಕಾರ್ಯ ನಡೆಯುತ್ತದೆ. ಇದರಿಂದ ಸಮುದ್ರಾಹಾರವನ್ನು ಸೇವಿಸುವುದರಿಂದ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ. ಇನ್ನು ಶ್ರಾವಣ ಮಾಸದಲ್ಲಿ ತಂಪಾದ ವಾತಾವರಣ ನಮ್ಮ ಜೀರ್ಣಕ್ರಿಯೆಯ ಮೇಲೂ ಪರಿಣಾಮ ಬೀರುತ್ತದೆ, ಅದಕ್ಕಾಗಿಯೇ ಅನೇಕ ಜನರು ಈ ಋತುವಿನಲ್ಲಿ ಮಾಂಸಾಹಾರವನ್ನು ಸೇವಿಸುವುದಿಲ್ಲ

VISTARANEWS.COM


on

shravan 2024
Koo


ಶ್ರಾವಣ ಮಾಸ ಎನ್ನುವುದು ಹಿಂದೂ ಧರ್ಮದಲ್ಲಿ ಬಹಳ ಪವಿತ್ರವಾದ (shravan 2024) ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತವೆ. ಹಾಗಾಗಿ ಈ ಮಾಸದಲ್ಲಿ ಶಿವನ ಆರಾಧನೆಯ ಜೊತೆಗೆ ವಿಷ್ಣು, ಲಕ್ಷ್ಮಿ, ಪಾರ್ವತಿ ಮುಂತಾದ ದೇವರುಗಳ ಪೂಜೆ ಪುನಸ್ಕಾರಗಳನ್ನು ವಿಶೇಷವಾಗಿ ಮಾಡಲಾಗುತ್ತದೆ. ಹಾಗಾಗಿ ಈ ಮಾಸದಲ್ಲಿ ಮಾಂಸಹಾರಗಳನ್ನು ಸೇವಿಸಬಾರದು ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆದಕಾರಣ ಹೆಚ್ಚಿನ ಜನರು ಶ್ರಾವಣ ಮಾಸದಲ್ಲಿ ಮಾಂಸಹಾರವನ್ನು ತ್ಯಜಿಸುತ್ತಾರೆ. ಆದರೆ ಶ್ರಾವಣ (Shravan 2024) ಮಾಸದಲ್ಲಿ ಮಾಂಸಹಾರ ಸೇವಿಸಬಾರದು ಎಂದು ಹೇಳುವುದು ನಮ್ಮ ನಂಬಿಕೆ ಮಾತ್ರವಲ್ಲ, ಇದರ ಹಿಂದೆ ಕೆಲವು ವೈಜ್ಞಾನಿಕ ಕಾರಣಗಳೂ ಇವೆ. ಅದೇನೆಂದು ತಿಳಿಯೋಣ.

ಆರೋಗ್ಯ ಕಾರಣ:

ಬೇಸಿಗೆ ಕಾಲದ ನಂತರ ಮಳೆಗಾಲ ಪ್ರಾರಂಭವಾಗುತ್ತದೆ. ಇದು ಬಿಸಿಲಿನ ಬೇಗೆಯಿಂದ ದಣಿದ ಜನರಿಗೆ ತಂಪಾದ ಅನುಭವವನ್ನು ನೀಡುತ್ತದೆ ನಿಜ. ಆದರೆ ಈ ಸಮಯದಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ತಂಪಾದ ಗಾಳಿಯಲ್ಲಿ ಬ್ಯಾಕ್ಟೀರಿಯಾಗಳು ಬೆಳೆದು ಹೊಟ್ಟೆಯ ಸೋಂಕುಗಳು, ಅತಿಸಾರ ಮತ್ತು ಅಜೀರ್ಣದಂತಹ ಸಮಸ್ಯೆಗಳು ಕಾಡುತ್ತವೆ. ಅಲ್ಲದೇ ಈ ವಾತಾವರಣ ನಮ್ಮ ಜೀರ್ಣಕ್ರಿಯೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಅನೇಕ ಜನರು ಈ ಋತುವಿನಲ್ಲಿ ಮಾಂಸಾಹಾರವನ್ನು ಸೇವಿಸುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಮೊಟ್ಟೆಗಳು, ಸಮುದ್ರಾಹಾರ, ಚಿಕನ್ ಮತ್ತು ಮಟನ್‌ನಿಂದ ದೂರವಿರಲು ಸಲಹೆ ನೀಡಲಾಗಿದೆ.

shravan 2024
shravan 2024

ಮೀನುಗಳ ಸಂತಾನೋತ್ಪತ್ತಿ ಸಮಯ:

ಈ ಸಮಯದಲ್ಲಿ ಸೀಗಡಿ ಮತ್ತು ಮೀನುಗಳ ಸಂತಾನೋತ್ಪತ್ತಿ ಕಾರ್ಯವನ್ನು ನಡೆಯುತ್ತದೆ. ಹಿಂದೂ ಸಂಪ್ರದಾಯದ ಪ್ರಕಾರ ಸಂತಾನೋತ್ಪತ್ತಿ ಸಮಯದಲ್ಲಿ ಜೀವಿಗಳನ್ನು ಕೊಲ್ಲುವುದು ಮಹಾಪಾಪ. ಈ ಸಂಗತಿಯನ್ನು ಪರಿಗಣಿಸಿ ಹಿಂದೂಗಳ ನಂಬಿಕೆಯ ಆಧಾರದ ಮೇಲೆ ಈ ಸಮಯದಲ್ಲಿ ಮಾಂಸಾಹಾರ ಮತ್ತು ಮೊಟ್ಟೆಗಳನ್ನು ಸೇವಿಸುವುದರಿಂದ ದೂರ ಇರುತ್ತಾರೆ. ಸಾಮಾನ್ಯವಾಗಿ ಈ ಸಮಯದಲ್ಲಿ ಸಮುದ್ರದಲ್ಲಿ ಮೀನುಗಾರಿಗೆ ನಿಷೇಧ ಇರುತ್ತದೆ. ಆದಾಗ್ಯೂ ಈ ಅವಧಿಯಲ್ಲಿ ಸಮುದ್ರಾಹಾರವನ್ನು ಸೇವಿಸುವುದರಿಂದ ಸೋಂಕಿನ ಅಪಾಯ ಹೆಚ್ಚಾಗುತ್ತದೆ. ಇದೊಂದು ವೈಜ್ಞಾನಿಕ ಕಾರಣವೂ ಇದೆ.

ಅಲ್ಲದೇ ಈ ಸಮಯದಲ್ಲಿ ಕೀಟಗಳ ಹಾವಳಿ ಕೂಡ ಹೆಚ್ಚಾಗಿರುತ್ತದೆ. ಇದರಿಂದ ನೀವು ಮಾಂಸವಾಗಿ ಸೇವಿಸುವಂತಹ ಜೀವಿಗಳು ಈ ಕೀಟಗಳನ್ನು ಹೆಚ್ಚು ಸೇವನೆ ಮಾಡುತ್ತದೆ. ಇದನ್ನು ನಾವು ಸೇವಿಸಿದಾಗ ಅದರಿಂದ ನಮ್ಮ ಆರೋಗ್ಯ ಹಾಳಾಗುತ್ತದೆ. ಅದಕ್ಕಾಗಿಯೇ ಅನೇಕ ಜನರು ಈ ಋತುವಿನಲ್ಲಿ ಮಾಂಸಾಹಾರವನ್ನು ಸೇವಿಸುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಮೊಟ್ಟೆಗಳು, ಸಮುದ್ರಾಹಾರ, ಚಿಕನ್ ಮತ್ತು ಮಟನ್‌ನಿಂದ ದೂರವಿರಲು ಸಲಹೆ ನೀಡಲಾಗಿದೆ.

ಇದನ್ನೂ ಓದಿ: Shravan 2024: ಇಂದಿನಿಂದ ಶ್ರಾವಣ ಶುಭಾರಂಭ; ಈ ತಿಂಗಳ ವಿಶೇಷ ಏನು?

ಈ ಮಾಸದಲ್ಲಿ ಸಸ್ಯಹಾರವನ್ನು ಹೆಚ್ಚು ಸೇವಿಸಿ. ಯಾಕೆಂದರೆ ಸಸ್ಯಹಾರ ಸುಲಭವಾಗಿ ಜೀರ್ಣವಾಗುತ್ತವೆ. ಇದರಿಂದ ನಿಮ್ಮ ಜೀರ್ಣಕ್ರಿಯೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ತರಕಾರಿ, ಸೊಪ್ಪುಗಳಲ್ಲಿರುವ ಪೋಷಕಾಂಶಗಳು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸಿ ದೇಹದ ರೋಗ ನಿರೋಧಕ ಶಕ್ತಿಗಳನ್ನುಹೆಚ್ಚಿಸುವುದರ ಮೂಲಕ ನಿಮ್ಮ ಸಂಪೂರ್ಣ ಆರೋಗ್ಯವನ್ನು ಕಾಪಾಡುತ್ತವೆ. ಈ ಮೂಲಕ ಕಾಯಿಲೆ ಬೀಳುವುದನ್ನು ತಡೆಯಬಹುದು.

Continue Reading

Latest

Viral Video: ಮಗನನ್ನೇ ಹೊಡೆದು ಕೊಂದು, ಸುಟ್ಟು ಹಾಕಿ ಕೊಳಕ್ಕೆ ಎಸೆದ ತಂದೆ-ತಾಯಿ; ಹೃದಯ ತಲ್ಲಣಿಸುವ ವಿಡಿಯೊ

Viral Video: ಹೆತ್ತವರಿಗೆ ಹೆಗ್ಗಣ ಮುದ್ದು ಎನ್ನುವ ಮಾತಿದೆ. ತಮ್ಮ ಮಕ್ಕಳು ಹೇಗೇ ಇರಲಿ ತಾಯಿಯಾದವಳಿಗೆ ಆ ಮಗುವಷ್ಟು ಸುಂದರ ಈ ಪ್ರಪಂಚಲ್ಲಿ ಯಾರೂ ಇಲ್ಲ ಎಂಬಂತಹ ಭಾವ. ಆದರೆ ಇಲ್ಲೊಂದು ಘಟನೆ ಮಾತ್ರ ಇದಕ್ಕೆ ವ್ಯತಿರಿಕ್ತವಾಗಿದೆ. ಮಾನಸಿಕ ಅಸ್ವಸ್ಥ ಯುವಕನನ್ನು ಹೆತ್ತವರೇ ಹಾಡುಹಗಲೇ ನಿರ್ದಯವಾಗಿ ಕೊಂದ ಆಘಾತಕಾರಿ ಘಟನೆ ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ನಡೆದಿದೆ. ಯುವಕನ ತಾಯಿ ಅವನನ್ನು ಕೋಲುಗಳಿಂದ ಹೊಡೆಯುತ್ತಿರುವ ವಿಡಿಯೊವೊಂದು ಎಲ್ಲೆಡೆ ವೈರಲ್ ಆಗಿದೆ. ತಾಯಿ, ಚಿಕ್ಕಮ್ಮ ಮತ್ತು ತಂದೆ ಮೂವರು ಸೇರಿ ಮಾನಸಿಕ ಅಸ್ವಸ್ಥನಾದ ಯುವಕನನ್ನು ಹೊಡೆದು ಒಂದು ಕೋಣೆಯಲ್ಲಿ ಬಂಧಿಸಿ ಸುಟ್ಟು ಹಾಕಿ ಶವವನ್ನು ಸ್ಥಳೀಯ ಕೊಳದಲ್ಲಿ ಎಸೆದಿದ್ದಾರೆ.

VISTARANEWS.COM


on

Viral Video
Koo


ಕರೀಂಗಂಜ್: ಪೋಷಕರು ಯಾವಾಗಲೂ ತಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸುತ್ತಾರೆ ಮತ್ತು ಅವರನ್ನು ಕಣ್ಣಲ್ಲಿ ಕಣ್ಣಿಟ್ಟು ಸಾಕುತ್ತಾರೆ ಎಂದು ಹೇಳುತ್ತಾರೆ. ಅಲ್ಲದೇ ಪೋಷಕರಿಗೆ ತಮ್ಮ ಮಕ್ಕಳು ಹೇಗೆ ಇದ್ದರು ಅದು ಚೆನ್ನ. ಮಕ್ಕಳಿಗೆ ಯಾವುದೇ ಸಂಕಟ ಬರದಂತೆ ನೋಡಿಕೊಳ್ಳುತ್ತಾರೆ. ವಿಶೇಷವಾಗಿ ಪೋಷಕರು ತಮ್ಮ ಮಕ್ಕಳು ವಿಕಲಚೇತನರು ಆಗಿದ್ದರೆ ಅವರ ಬಗ್ಗೆ ಹೆಚ್ಚಿನ ಕಾಳಜಿ ತೋರಿಸುತ್ತಾರೆ. ಅವರು ಬದುಕಿರುವ ತನಗೆ ಅವರ ರಕ್ಷಣೆ ಮಾಡುತ್ತಾರೆ. ಅಂತಹದರಲ್ಲಿ ಇಲ್ಲೊಂದು ಕುಟುಂಬ ಮಾನಸಿಕ ಅಸ್ವಸ್ಥನಾದ ಮಗನನ್ನು ತಮಗೆ ಹೊರೆಯಾದ ಎಂದು ಕೊಂದು ಹಾಕಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಮಾನಸಿಕ ಅಸ್ವಸ್ಥ ಯುವಕನನ್ನು ಪೋಷಕರು ಹಾಡಹಗಲೇ ನಿರ್ದಯವಾಗಿ ಕೊಂದ ಆಘಾತಕಾರಿ ಘಟನೆ ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಈ ಘಟನೆಯನ್ನು ನೋಡುಗರು ವಿಡಿಯೊದಲ್ಲಿ ಸೆರೆಹಿಡಿದಿದ್ದಾರೆ. ಅದರಲ್ಲಿ ಯುವಕನ ತಾಯಿ ಅವನನ್ನು ಕೋಲುಗಳಿಂದ ಹೊಡೆಯುತ್ತಿದ್ದಾರೆ. ಮೂಲಗಳ ಪ್ರಕಾರ, ಖುದ್ ಪುರಹುರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 32 ವರ್ಷದ ಸುಹೈಲ್ ಅಹಮ್ಮದ್ ಚೌಧರಿ ಬಲಿಪಶುವಾಗಿದ್ದು, ತಾಯಿ ದಿಲುವಾರಾ ಬೇಗಂ, ಚಿಕ್ಕಮ್ಮ ಹಸ್ನಾ ಬೇಗಂ ಮತ್ತು ತಂದೆ ಅಬ್ದುಲ್ ಶಾಹಿದ್ ಎಂಬುವವರು ಆತನನ್ನು ಕೋಲುಗಳಿಂದ ಹೊಡೆಯುತ್ತಿದ್ದಾರೆ ಎನ್ನಲಾಗಿದೆ. ನಂತರ ಇಷ್ಟಕ್ಕೆ ಸುಮ್ಮನಾಗದ ಪೋಷಕರು ಅವನನ್ನು ಒಂದು ಕೋಣೆಯಲ್ಲಿ ಬಂಧಿಸಿ ಸುಟ್ಟು ಹಾಕಿ ಶವವನ್ನು ಸ್ಥಳೀಯ ಕೊಳದಲ್ಲಿ ಎಸೆದಿದ್ದಾರೆ ಎನ್ನಲಾಗಿದೆ.

ಕುಟುಂಬಕ್ಕೆ ಆತ ಹೊರೆಯಾದ ಕಾರಣ ಕುಟುಂಬವು ಈ ರೀತಿ ಯುವಕನನ್ನು ಕೊಂದಿದೆ ಮತ್ತು ಸಂತ್ರಸ್ತ ಸಣ್ಣ ಕಳ್ಳತನ ಮತ್ತು ಇತರ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತ ಯುವಕನ ಶವ ಕೊಳದಲ್ಲಿ ತೇಲುತ್ತಿದ್ದ ಹಿನ್ನಲೆಯಲ್ಲಿ ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಕೊಳದಿಂದ ಶವವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಯುವಕನ ದೇಹದ ಮೇಲೆ ಅನೇಕ ಗಾಯಗಳಾಗಿದ್ದು, ಅಧಿಕ ರಕ್ತಸ್ರಾವವಾಗಿದೆ. ಹಾಗೇ ಅವನ ಕೈಕಾಲಿನ ಮೂಳೆ ಮುರಿದಿದೆ ಎಂಬುದಾಗಿ ತಿಳಿದುಬಂದಿದೆ. ಆದರೆ ಇಂತಹ ಅಪರಾಧದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Continue Reading

Latest

Viral Video: ಎಸ್ಕಲೇಟರ್ ಮೇಲೆ ಮಗುವನ್ನು ನಿಲ್ಲಿಸಲು ತಾಯಿಯ ಕಸತ್ತು; ಮುಂದೇನಾಯ್ತು ನೋಡಿ

Viral Video: ಇಬ್ಬರೂ ಮಹಿಳೆಯರು ಮಗುವಿನ ಕೈಗಳನ್ನು ಹಿಡಿದುಕೊಂಡು ಎಸ್ಕಲೇಟರ್ ಹತ್ತಿದ್ದಾರೆ. ಎಸ್ಕಲೇಟರ್ ಹತ್ತುವಾಗ ಅವರು ಮಗುವನ್ನು ಮೇಲಕ್ಕೆತ್ತಿದ ಪರಿಣಾಮ ಸಮತೋಲನವನ್ನು ಕಳೆದುಕೊಂಡು ಮಗುವಿನೊಂದಿಗೆ ಕೆಳಗೆ ಬಿದ್ದಿದ್ದಾರೆ. ಮೊದಲಿಗೆ ಅವರಿಗೆ ಸಹಾಯ ಮಾಡಲು ಯಾರೂ ಬರಲಿಲ್ಲ. ನಂತರ ಇದ್ದಕ್ಕಿದ್ದಂತೆ ಒಬ್ಬ ವ್ಯಕ್ತಿ ಬಂದಿದ್ದಾನೆ. ಈ ವಿಡಿಯೊ ನೋಡಿ ಹಲವರು ಭಯಭೀತರಾಗಿದ್ದಾರೆ. ಕೆಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo


ಇತ್ತೀಚಿನ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳು, ಮಾಲ್‍ಗಳು ಮತ್ತು ರೈಲು ನಿಲ್ದಾಣಗಳಲ್ಲಿ ಎಸ್ಕಲೇಟರ್‌ಗಳು ಸಾಮಾನ್ಯ. ಒಂದು ಮಹಡಿಯಿಂದ ಮತ್ತೊಂದು ಮಹಡಿಗೆ ಹೋಗಲು ಈ ಎಸ್ಕಲೇಟರ್‌ಗಳನ್ನು ಬಳಸಲಾಗುತ್ತದೆ. ಇದರಿಂದ ನಿಮ್ಮ ಕೆಲಸ ಸುಲಭವಾಗುತ್ತದೆ. ಆದರೆ ಇದನ್ನು ಎಲ್ಲರೂ ಬಳಸುವುದಿಲ್ಲ, ಯಾಕೆಂದರೆ ಇದನ್ನು ಬಳಸುವ ವಿಧಾನ ಕೆಲವರಿಗೆ ತಿಳಿದಿರುವುದಿಲ್ಲ. ಕೆಲವರಿಗೆ ಬೀಳುತ್ತೇವೆ ಎಂಬ ಭಯ. ಇದೀಗ ಈ ರೀತಿಯ ಎಸ್ಕಲೇಟರ್‌ಗಳನ್ನು ಬಳಸಿ ಮಗುವಿನ ಜೊತೆಗೆ ಮಹಿಳೆಯರಿಬ್ಬರು ಬಿದ್ದ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿ ಆತಂಕ ಮೂಡಿಸುತ್ತಿದೆ.

ಈ ವೈರಲ್ ವಿಡಿಯೊದಲ್ಲಿ, ಇಬ್ಬರು ಮಹಿಳೆಯರು ಮಗುವಿನೊಂದಿಗೆ ಎಸ್ಕಲೇಟರ್ ಏರಲು ಪ್ರಯತ್ನಿಸುತ್ತಿದ್ದಾರೆ. ಬಳಿಕ ಇಬ್ಬರೂ ಮಹಿಳೆಯರು ಮಗುವಿನ ಕೈಗಳನ್ನು ಎತ್ತಿ ಹಿಡಿದು ಅದನ್ನು ಎಸ್ಕಲೇಟರ್‌ ಮೇಲೆ ನಿಲ್ಲಿಸಲು ಪ್ರಯತ್ನಿಸಿ ಹಿಡಿದುಕೊಂಡಿದ್ದಾರೆ. ಮಗುವನ್ನು ಮೇಲಕೆತ್ತಿದ ಪರಿಣಾಮ ತಮ್ಮ ಸಮತೋಲನವನ್ನು ಕಳೆದುಕೊಂಡು ಮಗುವಿನೊಂದಿಗೆ ಕೆಳಗೆ ಬಿದ್ದಿದ್ದಾರೆ. ಮೊದಲಿಗೆ ಅವರಿಗೆ ಸಹಾಯ ಮಾಡಲು ಯಾರೂ ಬರಲಿಲ್ಲ. ನಂತರ ಇದ್ದಕ್ಕಿದ್ದಂತೆ ಒಬ್ಬ ವ್ಯಕ್ತಿ ಓಡಿ ಬಂದಿದ್ದಾನೆ. ಮಗುವಿನೊಂದಿಗೆ ಬಿದ್ದು ಅಪಾಯದಲ್ಲಿದ್ದರೂ ಈ ವೇಳೆ ಅವರಿಬ್ಬರು ನಗುತ್ತಿರುವುದು ಕಂಡು ಬಂದಿದೆ. ಆದರೆ ಈ ವಿಡಿಯೊ ನೋಡಿ ಹಲವರು ಭಯಬೀತರಾಗಿದ್ದಾರೆ. ಹಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಏಕೆಂದರೆ ಸಣ್ಣ ತಪ್ಪು ಜೀವಕ್ಕೆ ಅಪಾಯವಾಗಬಹುದು.

ಈ ವಿಡಿಯೊ ವೈರಲ್ ಆದ ಕೂಡಲೇ ವೀಕ್ಷಕರು ಕಮೆಂಟ್ ಮಾಡಿದ್ದಾರೆ. ಅನೇಕರು ಮಹಿಳೆಯರ ಈ ನಡೆಯನ್ನು ಪ್ರಶ್ನಿಸಿದ್ದಾರೆ. ಕೆಲವರು ಇದನ್ನು ತೀವ್ರ ಅಜಾಗರೂಕತೆಯ ಕೃತ್ಯ ಎಂದು ಕರೆದಿದ್ದಾರೆ. ಈ ವಿಡಿಯೊವನ್ನು ಆಗಸ್ಟ್ 3 ರಂದು ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ “ಘರ್ ಕೆ ಕಾಲೇಶ್” ಎಂಬ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಅಂದಿನಿಂದ, ಇದು 1.4 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಈ ಘಟನೆಯ ಬಗ್ಗೆ ನೆಟ್ಟಿಗರು ತಮ್ಮ ಹತಾಶೆ ಮತ್ತು ಕೋಪವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

ಈ ಹಿಂದೆ ಮಹಿಳೆಯೊಬ್ಬಳು ಎಸ್ಕಲೇಟರ್ ಮೇಲೆ ಜಿಗಿಯುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆ ಮಹಿಳೆ ‘ಸ್ಟಂಟ್ ಲವರ್’ ಮಾಲ್‌ನಲ್ಲಿದ್ದಂತೆ ಕಾಣುತ್ತಿತ್ತು, ಆ ಎಸ್ಕಲೇಟರ್‌ನಲ್ಲಿ ಇನ್ನೂ ಕೆಲವು ಜನರಿದ್ದರು. ಇದರಿಂದ ಆ ಮಹಿಳೆ ಮಾಡಿದ ಕೆಲಸ ತುಂಬಾ ಅಪಾಯಕಾರಿ ಎನಿಸಿತು. ಈ ಕ್ಲಿಪ್ ವೈರಲ್ ಆದ ಕೂಡಲೇ, ಜನರು ಆಕೆ ‘ಸ್ಟಂಟ್’ ಮಾಡುತ್ತಿದ್ದಾಳೆ ಎಂದು ಭಾವಿಸಿ ಅದು ಎಷ್ಟು ಅಪಾಯಕಾರಿ ಎಂದು ಟೀಕೆ ಮಾಡಿದ್ದರು. ಆದರೆ ಕೆಲವರು ಆ ಮಹಿಳೆ ಎಸ್ಕಲೇಟರ್ ಒಳಗೆ ಕಾಲಿಡಲು ಹೆದರುತ್ತಿದ್ದಳು, ಆದ್ದರಿಂದ ಜಿಗಿದಿದ್ದಾಳೆ ಎಂದು ಸಮಾಧಾನಪಡಿಸಿದ್ದಾರೆ.

Continue Reading

ಕರ್ನಾಟಕ

Kannada New Movie: ಸೂಪರ್‌ ಹಿಟ್‌ ಹಾಡುಗಳ ʼಕೃಷ್ಣಂ ಪ್ರಣಯ ಸಖಿʼ ಬಿಡುಗಡೆ ಯಾವಾಗ?

Kannada New Movie: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ “ಕೃಷ್ಣಂ ಪ್ರಣಯ ಸಖಿ” ಚಿತ್ರವು ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ ಅರ್ಜುನ್ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳು ಈ ಚಿತ್ರದಲ್ಲಿವೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರ ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

VISTARANEWS.COM


on

Golden Star Ganesh starring Krishnam Pranaya Sakhi movie release on August 15
Koo

ಬೆಂಗಳೂರು: ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರವು ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ ಅರ್ಜುನ್ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳು ಈ ಚಿತ್ರದಲ್ಲಿವೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರ (Kannada New Movie) ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ “ಕೃಷ್ಣಂ ಪ್ರಣಯ ಸಖಿ” ಪ್ರೇಕ್ಷಕರ ಮನ ತಲುಪಿದೆ. ನಿರೀಕ್ಷೆಗೂ ಮೀರಿ ಹಾಡುಗಳು ಹಿಟ್ ಅಗಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಚಿತ್ರದ ಆಡಿಯೋ ಹಕ್ಕು ಪಡೆದುಕೊಂಡಿರುವ ಆನಂದ್ ಆಡಿಯೋದವರು ಸಮಾರಂಭ ಆಯೋಜಿಸಿದ್ದರು. ಹಾಡುಗಳನ್ನು ಬರೆದಿರುವವರನ್ನು ಹಾಗೂ ಹಾಡಿದರವನ್ನು ಫಲಕ ನೀಡಿ ಸನ್ಮಾನಿಸಿದರು. ಗಾಯಕರಾದ ಚಂದನ್ ಶೆಟ್ಟಿ, ಜಸ್ಕರಣ್ ಸಿಂಗ್, ಗೀತರಚನೆಕಾರ ನಿಶಾನ್ ರೈ ಅವರನ್ನು ಹಾಗೂ ಚಿತ್ರತಂಡದ ಸದಸ್ಯರನ್ನು ಆನಂದ್ ಆಡಿಯೋ ಶ್ಯಾಮ್ ಮತ್ತು ಆನಂದ್ ಆತ್ಮೀಯವಾಗಿ ಸನ್ಮಾನಿಸಿದರು. ನಂತರ ಚಿತ್ರ ತಂಡದವರು ಮಾತನಾಡಿದರು.

ನಾಯಕ ಗಣೇಶ್ ಮಾತನಾಡಿ, ಇಂದು ನಾಲ್ಕನೇ ಹಾಡು ಬಿಡುಗಡೆಯಾಗಿದೆ. ಈವರೆಗೂ ಬಿಡುಗಡೆಯಾಗಿರುವ ಮೂರು ಹಾಡುಗಳು ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ‌. ಹಾಗಾಗಿ ಈ ಸಮಾರಂಭವನ್ನು ಆನಂದ್ ಆಡಿಯೋದವರು ಆಯೋಜಿಸಿದ್ದಾರೆ‌. ಅವರಿಗೆ ಧನ್ಯವಾದಗಳು. ಇತ್ತೀಚೆಗೆ ಹಾಡುಗಳು ಹಿಟ್ ಆಗುವುದು ಬಹಳ ಕಡಿಮೆ. ಮೊದಲೆಲ್ಲಾ ಆಡಿಯೋ ಹಿಟ್‍ ಅಂತ ಕಾರ್ಯಕ್ರಮ ಮಾಡುತ್ತಿದ್ದೆವು. ಇತ್ತೀಚೆಗೆ ಆಗಿರಲಿಲ್ಲ. ಮೂರನೇ ಹಾಡು ಯಶಸ್ವಿಯಾದಾಗ ಯಾಕೆ ಇಂಥದ್ದೊಂದು ಕಾರ್ಯಕ್ರಮ ಮಾಡಬಾರದು ಎಂದು ಆನಂದ್ ಆಡಿಯೋದವರು ಹೇಳುತ್ತಿದ್ದರು. ಆನಂದ್ ಆಡಿಯೋದವರ ಜತೆಗೆ ನನ್ನದು ಬಹಳ ದೊಡ್ಡ ಸಂಬಂಧ. ನನ್ನ ಚಿತ್ರ ಜೀವನದ ಯಶಸ್ಸಿಗೆ ಸಂಗೀತ ಮಹತ್ವದ ಪಾತ್ರ ವಹಿಸುತ್ತದೆ ಮತ್ತು ಆ ಕ್ರೆಡಿಟ್‍ ಆನಂದ್‍ ಆಡಿಯೋದವರಿಗೂ ಸಲ್ಲಬೇಕು ಎಂದರು.

ಈ ಚಿತ್ರದ ಆಡಿಯೋ ಹಕ್ಕುಗಳನ್ನು ಡಬ್ಬಲ್‍ ದುಡ್ಡು ಕೊಟ್ಟು ಆನಂದ್ ಆಡಿಯೋದವರು ಕೊಂಡಿದ್ದಾರೆ. ಮುಂದಿನ ಚಿತ್ರಕ್ಕೆ ಇನ್ನೂ ಡಬ್ಬಲ್‍ ದುಡ್ಡು ಕೊಡಲಿ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಪ್ರತಿಯೊಬ್ಬ ಗೀತರಚನೆಕಾರ, ಗಾಯಕರು ಎಲ್ಲರಿಗೂ ಧನ್ಯವಾದಗಳು. ಜಸ್ಕರಣ್ ಅವರು ವೇದಿಕೆ ಮೇಲೆ ನಿಂತು ಹಾಡಿದಾಗ ದೈವಿಕ ಭಾವನೆ ಮೂಡಿತು. ಇವರು ಯಾರೋ ನಮ್ಮ ತರಹದವರೇ ಅಂತನಿಸಿತು. ತುಂಬಾ ಚೆನ್ನಾಗಿ ಹಾಡಿದ್ದಾರೆ. ಅದರಲ್ಲೂ “ದ್ವಾಪರ” ಹಾಡಂತೂ ಸಮಾಜಿಕ ಜಾಲತಾಣಗಳಲ್ಲಿ ಬಹಳ ಫೇಮಸ್ ಆಗಿದೆ. ರೀಲ್ಸ್ ಮಾಡುತ್ತಿರುವವರ ಸಂಖ್ಯೆ ದಿನದಿನಕ್ಕೂ ಹೆಚ್ಚುತ್ತಿದೆ.

ಹಾಡುಗಳ ಯಶಸ್ಸಿನ ಹೆಚ್ಚಿನ ಭಾಗದ ಕ್ರೆಡಿಟ್ ನಿರ್ದೇಶಕರಿಗೆ ಹೋಗಬೇಕು. ಏಕೆಂದರೆ ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಬಹಳ ಬ್ಯುಸಿ. ಅವರನ್ನು ಹಿಡಿಯೋದೇ ಕಷ್ಟ. ಮಧ್ಯಾಹ್ನದ ಊಟ ಆಯ್ತಾ ಎಂದು ಫೋನ್ ಮಾಡಿದರೆ, ರಾತ್ರಿ ವಾಪಸ್ಸು ಮಾಡುತ್ತಾರೆ. ಅಷ್ಟು ಬ್ಯುಸಿ. ಅವರಿಂದ ಇಷ್ಟು ಕೆಲಸ ತೆಗೆದಿದ್ದಾರೆ. ಒಂದೊಂದು ಹಾಡು ಸಹ ದೊಡ್ಡ ಹಿಟ್‍ ಆಗುತ್ತದೆ, ಆ ತರಹ ಮಾಡುತ್ತೀನಿ ಎಂದು ಹೇಳುತ್ತಿದ್ದರು. ಅದನ್ನು ನಿಜ ಮಾಡಿ ತೋರಿಸಿದ್ದಾರೆ ಎಂದು ಗೋಲ್ಡನ್‌ ಸ್ಟಾರ್‌ ಗಣೇಶ್‌ ತಿಳಿಸಿದರು.

ಅರ್ಜುನ್‍ ಜನ್ಯ ಅವರು ಮ್ಯಾಜಿಕಲ್‍ ಕಂಪೋಸರ್ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಚಿತ್ರ ಒಂದು ಸಂಗೀತಮಯ ಚಿತ್ರವಾಗಬೇಕು ಎಂಬ ಆಸೆ ನನಗಿತ್ತು. ಆದರೆ, ಹೀಗೇ ಆಗುತ್ತದೆ ಎಂದು ಹೇಳುವುದು ಕಷ್ಟ. ಅರ್ಜುನ್‍ ಬಹಳ ಬ್ಯುಸಿಯಾಗಿದ್ದಾರೆ. ಅದರಲ್ಲೂ ನಮಗೆ ಸಮಯ ಕೊಟ್ಟು ಈ ರೀತಿ ಜನಪ್ರಿಯ ಹಾಡುಗಳನ್ನು ಮಾಡಿಕೊಟ್ಟಿರುವುದು ಬಹಳ ಖುಷಿಯ ವಿಷಯ. ಚಿತ್ರದಲ್ಲಿ ಮೊದಲು ಒಂಬತ್ತು ಹಾಡುಗಳಿದ್ದವು. ಕೊನೆಗೆ ಕಡಿಮೆಯಾಗಿ, ಏಳು ಹಾಡುಗಳಿವೆ. ಎಲ್ಲಾ ಹಾಡುಗಳು ಹಿಟ್ ಆಗುತ್ತವೆ ಎಂಬ ನಂಬಿಕೆ ನನಗೆ ಮೊದಲ ದಿನದಿಂದಲೇ ಇತ್ತು. ಅದು ಪ್ರೂವ್‍ ಆಗಿದೆ. ಈ ವಿಷಯದಲ್ಲಿ ಅರ್ಜುನ್‍ ಜನ್ಯ ಅವರಿಗೆ ಧನ್ಯವಾದ ತಿಳಿಸಬೇಕು.

ಇದನ್ನೂ ಓದಿ: Gold Rate Today: ಸತತ ಎರಡನೆ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

ಈ ಹಾಡುಗಳನ್ನು ಪ್ರಮೋಟ್‍ ಮಾಡುತ್ತಿರುವ ಮತ್ತು ನನ್ನ ಮೇಲೆ ನಂಬಿಕೆ ಇಟ್ಟು ಚಿತ್ರಕ್ಕೆ ಹಣ ಹೂಡಿದ ನಿರ್ಮಾಪಕ ಪ್ರಶಾಂತ್‍ ಅವರಿಗೆ ಧನ್ಯವಾದಗಳು. ಈ ಚಿತ್ರ ಪ್ರಮುಖವಾಗಿ ಆಗುವುದಕ್ಕೆ ಗಣೇಶ್‍ ಕಾರಣ. ಅವರು ನನ್ನ ಮೇಲೆ ನಂಬಿಕೆ ಇಟ್ಟರು. ನನ್ನ ಜಾನರ್‌ನಿಂದ ಆಚೆ ಬಂದು ಚಿತ್ರ ಮಾಡುವುದಕ್ಕೆ ಪ್ರೋತ್ಸಾಹ ಕೊಟ್ಟರು. ಪ್ರತಿ ಹಂತದಲ್ಲೂ ತೊಡಗಿಸಿಕೊಂಡರು. ‘ದ್ವಾಪರʼ ವರೆಗೂ ಬೇರೆ ಬೇರೆ ರೀತಿಯ ಹಾಡುಗಳಿದ್ದವು. ಇನ್ನು ಮುಂದಿನ ಒಂದು ವಾರದಲ್ಲಿ ಮೆಲೋಡಿ ಹಾಡುಗಳು ಬರಲಿವೆ. ಈ ಚಿತ್ರಕ್ಕೆ ಟ್ರೇಲರ್ ಅವಶ್ಯಕತೆ ಇರಲಿಲ್ಲ ಎಂದು ಒಂದು ವರ್ಷದ ಹಿಂದೆ ಅನಿಸಿತ್ತು. ಇದೊಂದು ಮ್ಯೂಸಿಕಲ್‍ ಚಿತ್ರವಾದ್ದರಿಂದ, ಈ ಚಿತ್ರವನ್ನು ಹಾಡುಗಳಿಂದ ಮಾತ್ರ ಪ್ರಮೋಟ್‍ ಮಾಡುವುದು ನನ್ನ ಆಸೆ. ಹಾಗಾಗಿ, ಚಿತ್ರದ ಟ್ರೇಲರ್ ಬಿಡುಗಡೆ ಮಾಡುತ್ತಿಲ್ಲ. ಇದು ಈ ಚಿತ್ರಕ್ಕೆ ಮಾತ್ರ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.

ಇದನ್ನೂ ಓದಿ: Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

ನಟಿ ಶರಣ್ಯ ಶೆಟ್ಟಿ, ಹಿರಿಯ ನಟ ರಾಮಕೃಷ್ಣ, ಕಾರ್ಯಕಾರಿ ನಿರ್ಮಾಪಕ ಶರತ್, ಗಾಯಕರಾದ ಚಂದನ್ ಶೆಟ್ಟಿ, ಜಸ್ಕರಣ್ ಸಿಂಗ್, ಹಾಡು ಬರೆದಿರುವ ನಿಶಾನ್ ರೈ ಹಾಗೂ ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್ ಮತ್ತು ಆನಂದ್ ಹಾಡುಗಳು ಗೆದ್ದಿರುವ ಆನಂದವನ್ನು ಮಾತಿನ ಮೂಲಕ ಹಂಚಿಕೊಂಡರು.

Continue Reading
Advertisement
Paris Olympics 2024
ಪ್ರಮುಖ ಸುದ್ದಿ9 mins ago

Paris Olympics 2024 : ಕಂಚು ಕಳೆದುಕೊಂಡ ಲಕ್ಷ್ಯ ಸೇನ್​​; 2008ರ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಬ್ಯಾಡ್ಮಿಂಟನ್​ನಲ್ಲಿ ಪದಕವಿಲ್ಲ

shravan 2024
Latest39 mins ago

Shravan 2024: ಶ್ರಾವಣ ಮಾಸದಲ್ಲೇಕೆ ಮಾಂಸಾಹಾರ ಮಾಡಬಾರದು? ಇದಕ್ಕಿದೆ ವೈಜ್ಞಾನಿಕ ಕಾರಣ!

Paris Olympics 2024
ಪ್ರಮುಖ ಸುದ್ದಿ42 mins ago

Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

Viral Video
Latest45 mins ago

Viral Video: ಮಗನನ್ನೇ ಹೊಡೆದು ಕೊಂದು, ಸುಟ್ಟು ಹಾಕಿ ಕೊಳಕ್ಕೆ ಎಸೆದ ತಂದೆ-ತಾಯಿ; ಹೃದಯ ತಲ್ಲಣಿಸುವ ವಿಡಿಯೊ

Viral Video
Latest56 mins ago

Viral Video: ಎಸ್ಕಲೇಟರ್ ಮೇಲೆ ಮಗುವನ್ನು ನಿಲ್ಲಿಸಲು ತಾಯಿಯ ಕಸತ್ತು; ಮುಂದೇನಾಯ್ತು ನೋಡಿ

Martin Trailer
ಸಿನಿಮಾ1 hour ago

Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

A R Rahman
ಪ್ರಮುಖ ಸುದ್ದಿ1 hour ago

A R Rahman : ಒಲಿಂಪಿಕ್ಸ್ ನಡುವೆಯೇ ವೈರಲ್ ಆಯ್ತು ಎಆರ್​ ರೆಹಮಾನ್ ಸಂಗೀತದ’ ತಾಲ್​ ಸೆ ತಾಲ್​’ ಹಾಡು; ಪ್ರತಿಕ್ರಿಯೆ ನೀಡಿದ ಚಿತ್ರ ನಿರ್ದೇಶಕ

Rescue the injured national bird Peacock at gangavathi
ಕೊಪ್ಪಳ1 hour ago

Koppala News: ವಿದ್ಯುತ್‌ ತಂತಿಗೆ ತಗುಲಿ ಗಾಯಗೊಂಡಿದ್ದ ನವಿಲಿನ ರಕ್ಷಣೆ

Free eye checkup and surgery camp at Hagaribommanahalli
ವಿಜಯನಗರ1 hour ago

Vijayanagara News: ಹಗರಿಬೊಮ್ಮನಹಳ್ಳಿಯಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

KAS prelims exam
ಕರ್ನಾಟಕ1 hour ago

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌