Site icon Vistara News

Sexual Abuse: ಸ್ವಂತ ಮಗಳಿಗೆ ಬಲವಂತವಾಗಿ ಅಶ್ಲೀಲ ವಿಡಿಯೊ ತೋರಿಸಿ ಅತ್ಯಾಚಾರ; ಕಾಮುಕ ತಂದೆಯ ಬಂಧನ

Sexual Abuse


ತಂದೆಯನ್ನು ತನ್ನ ಹೆತ್ತ ಮಗಳನ್ನು ಕಾಯುವ ರಕ್ಷಕನೆಂದು ಕರೆಯುತ್ತಾರೆ. ಯಾವುದೇ ನೀಚರ ಕಣ್ಣು ತನ್ನ ಮಗಳ ಮೇಲೆ ಬೀಳದಂತೆ ತಂದೆ ಆಕೆಯನ್ನು ರಕ್ಷಿಸುತ್ತಾನೆ. ಆದರೆ ‘ಬೇಲಿಯೇ ಎದ್ದು ಹೊಲ ಮೇದಂತೆ’ ಎಂಬ ಮಾತಿನಂತೆ ಇಲ್ಲೊಬ್ಬ ತಂದೆ ತನ್ನ 12 ವರ್ಷದ ಅಪ್ರಾಪ್ತ ವಯಸ್ಸಿನ ಮಗಳಿಗೆ ಅಶ್ಲೀಲ ವಿಡಿಯೊ ನೋಡುವಂತೆ ಒತ್ತಾಯಿಸಿದ್ದಲ್ಲದೆ, ಮಗಳ ಮೇಲೆ ಕಳೆದ ಒಂದು ವರ್ಷದಿಂದ ಅತ್ಯಾಚಾರ (Sexual Abuse) ಎಸಗಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಬೆಳಕಿಗೆ ಬಂದಿದೆ.

ಆರೋಪಿ ಮಗಳಿಗೆ ಬಲವಂತವಾಗಿ ಅಶ್ಲೀಲ ವಿಡಿಯೊಗಳನ್ನು ತೋರಿಸುತ್ತಿದ್ದ. ಮಾತ್ರವಲ್ಲ ಎರಡು ದಿನಗಳ ಹಿಂದೆ ಅವನು ಮಗಳೊಂದಿಗಿನ ಅಶ್ಲೀಲ ಕೃತ್ಯದಲ್ಲಿ ತೊಡಗಿದ ದೃಶ್ಯವನ್ನು ವಿಡಿಯೊ ಮಾಡಿದ್ದಾನೆ. ಸಂತ್ರಸ್ತೆ ತನ್ನ ಚಿಕ್ಕಮ್ಮನಿಗೆ ಈ ಬಗ್ಗೆ ಮಾಹಿತಿ ನೀಡಿದಾಗ, ಅವಳು ಸಹ ಅದನ್ನು ನಂಬಲಿಲ್ಲ. ನಂತರ, ವಿಡಿಯೊ ನೋಡಿದಾಗ, ಅವಳು ಆಘಾತಕ್ಕೊಳಗಾಗಿದ್ದಳು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ಅಲ್ಲಿಂದ ಅವನನ್ನು ಜೈಲಿಗೆ ಕಳುಹಿಸಲಾಯಿತು ಎಂಬುದಾಗಿ ತಿಳಿದುಬಂದಿದೆ.

ವರದಿ ಪ್ರಕಾರ ಕೊಟ್ವಾಲಿ ಪ್ರದೇಶದ ಹಳ್ಳಿಯೊಂದರಲ್ಲಿ ವಾಸಿಸುವ ಆರೋಪಿ ಮದ್ಯ ಸೇವಿಸಿ ತನ್ನ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪತ್ನಿ ತನ್ನ ಮಗಳು ಮತ್ತು ಮಗನನ್ನು ಹಳ್ಳಿಯಲ್ಲಿ ಬಿಟ್ಟು ಒಂದು ವರ್ಷದ ಹಿಂದೆ ಎಲ್ಲೋ ಹೋಗಿದ್ದಳು. ಆಕೆಯನ್ನು ಹುಡುಕಾಡಿದ ಆರೋಪಿಗೆ ಆಕೆ ಸಿಗದಿದ್ದಾಗ ಆತ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ತನ್ನ 12 ವರ್ಷದ ಮಗಳ ಮೇಲೆ ಕಣ್ಣು ಹಾಕಿದ್ದಾನೆ. ಅವನು ಮಗಳಿಗೆ ಬೆದರಿಕೆ ಹಾಕುವ ಮೂಲಕ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅವನು ಮಗಳಿಗೆ ಅಶ್ಲೀಲ ಚಲನಚಿತ್ರಗಳನ್ನು ಬಲವಂತವಾಗಿ ತೋರಿಸುತ್ತಿದ್ದ.

ಇದನ್ನೂ ಓದಿ:11 ವರ್ಷಗಳ ಹಿಂದೆ ಸತ್ತಿದ್ದ ಗಂಡ ಕನಸಲ್ಲಿ ಬಂದು ʼಸೇರಿದʼ; ಹಾಗಾಗಿ ಮಗು ಹುಟ್ಟಿತು ಅಂತಿದ್ದಾಳೆ ಈ ಹೆಂಗಸು!

ಪೊಲೀಸರು ಮಂಗಳವಾರ ಬೆಳಗ್ಗೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಆರನೇ ತರಗತಿ ಓದುತ್ತಿದ್ದಾಳೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯ ಜೊತೆಗೆ, ಆಕೆಯ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Exit mobile version