Sexual Abuse: ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ - Vistara News

Latest

Sexual Abuse: ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ

Sexual Abuse: ಹೆಣ್ಣು ಹೆತ್ತವರು ಆತಂಕ ಪಡುವ ಘಟನೆಗಳು ಹೆಚ್ಚುತ್ತಲೇ ಇವೆ. ಸಿರಾಜ್‌ ಎಂಬಾತನ ಕಿರುಕುಳ ಸಹಿಸಲಾಗದೇ ಬಾಲಕಿಯೊಬ್ಬಳು ತನ್ನ ಜೀವಕ್ಕೆ ಸಂಚಕಾರ ತಂದುಕೊಂಡ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಸಿರಾಜ್ ಅಹ್ಮದ್ ಎಂಬ ವ್ಯಕ್ತಿ ಪದೇಪದೇ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸುವುದಲ್ಲದೇ ಆಕೆಗೆ ಬೆದರಿಕೆಯೊಡ್ಡುತ್ತಿದ್ದ. ಇದರಿಂದ ಆಕೆ ಹೆದರಿ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಅವಳು ಮಾರುಕಟ್ಟೆಯ ಮಧ್ಯದಲ್ಲಿರುವ ಅಂಗಡಿಯಿಂದ ಚಾಕುವನ್ನು ತೆಗೆದುಕೊಂಡು ಕುತ್ತಿಗೆಗೆ ಅನೇಕ ಬಾರಿ ಇರಿದುಕೊಂಡಿದ್ದಾಳೆ. ಈ ಘಟನೆಯ ವಿಡಿಯೊ ಆಘಾತಕಾರಿಯಾಗಿದೆ.

VISTARANEWS.COM


on

Sexual Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದೆ. ವಿದ್ಯಾರ್ಥಿನಿಯರಿಗೆ ಎಲ್ಲೆಂದರಲ್ಲಿ ಯುವಕರು ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡುತ್ತಿದ್ದಾರೆ. ಇದರಿಂದ ಹೆದರಿದ ಎಷ್ಟೋ ಮಂದಿ ವಿದ್ಯಾರ್ಥಿನಿಯರು ಜೀವ ಕಳೆದುಕೊಳ್ಳಲು ಮುಂದಾಗುತ್ತಿದ್ದಾರೆ. ಇದೀಗ ಅಂತಹದೊಂದು ಘಟನೆ ಮಧ್ಯಪ್ರದೇಶದಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ. ಆಗಸ್ಟ್ 13ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಸೆಮಾರಿಯಾ ಪಟ್ಟಣದಲ್ಲಿ ವ್ಯಕ್ತಿಯೊಬ್ಬನಿಂದ ಪದೇಪದೇ ಕಿರುಕುಳಕ್ಕೆ (Sexual Abuse) ಒಳಗಾದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹಾಡಹಗಲೇ ಕುತ್ತಿಗೆಗೆ ಅನೇಕ ಬಾರಿ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಸಿರಾಜ್ ಅಹ್ಮದ್ ಎಂಬ ವ್ಯಕ್ತಿ ಪದೇಪದೇ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸುವುದಲ್ಲದೇ ಆಕೆಗೆ ಬೆದರಿಕೆಯೊಡ್ಡುತ್ತಿದ್ದನು. ಇದರಿಂದ ಆಕೆ ಹೆದರಿ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಅವಳು ಮಾರುಕಟ್ಟೆಯ ಮಧ್ಯದಲ್ಲಿರುವ ಅಂಗಡಿಯಿಂದ ಚಾಕುವನ್ನು ತೆಗೆದುಕೊಂಡು ಕುತ್ತಿಗೆಗೆ ಅನೇಕ ಬಾರಿ ಇರಿದುಕೊಂಡಿದ್ದಾಳೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಹುಡುಗಿ ತನ್ನ ಸ್ನೇಹಿತನೊಂದಿಗೆ ಚಮ್ಮಾರನ ಅಂಗಡಿಗೆ ಬಂದಿದ್ದಾಳೆ. ಅಲ್ಲಿ ಅವಳು ಅಂಗಡಿಯಲ್ಲಿಟ್ಟ ಹರಿತವಾದ ಚಾಕುವನ್ನು ಎತ್ತಿಕೊಂಡು ಪದೇ ಪದೇ ತನ್ನ ಕುತ್ತಿಗೆಗೆ ತಾನೇ ಇರಿದುಕೊಂಡಿದ್ದಾಳೆ.

ಅವಳ ಸ್ನೇಹಿತ ಅವಳನ್ನು ತಡೆಯಲು ಪ್ರಯತ್ನಿಸಿದಳು ಆದರೆ ಅವಳು ಆಕೆಯನ್ನು ತಡೆದು ತನ್ನನ್ನು ತಾನೇ ಇರಿದುಕೊಳ್ಳುವುದನ್ನು ಮುಂದುವರಿಸಿದಳು. ಕೆಲವು ಕ್ಷಣಗಳ ನಂತರ, ಹುಡುಗಿ ನೆಲದ ಮೇಲೆ ಕುಸಿದುಬಿದ್ದಳು. ಆಗ ಅಲ್ಲೇ ಹತ್ತಿರದಲ್ಲಿದ್ದ ಜನರು ಅವಳ ಬಳಿಗೆ ಬಂದು ಅವಳ ಸ್ಥಿತಿಯನ್ನು ನೋಡಿ ತಕ್ಷಣ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯದಿದ್ದಾರೆ. ವೈದ್ಯರು ಆಕೆಯನ್ನು ರೇವಾ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಅಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇದನ್ನೂ ಓದಿ:  ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

ಬಾಲಕಿಯ ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸಿರಾಜ್ ಅಹ್ಮದ್ ಎಂಬುವವನ ವಿರುದ್ಧ ದೂರು ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತೀವ್ರವಾಗಿ ಗಾಯಗೊಂಡಿದ್ದರಿಂದ, ಅವಳ ಹೇಳಿಕೆಯನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಕಳೆದ ಕೆಲವು ದಿನಗಳಿಂದ ಸಿರಾಜ್ ತನ್ನನ್ನು ಹಿಂಬಾಲಿಸುತ್ತಿದ್ದ ಮತ್ತು ಹುಡುಗಿ ತುಂಬಾ ಅಸಮಾಧಾನಗೊಂಡಿದ್ದಳು ಎಂದು ಸಂಬಂಧಿಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಸಿರಾಜ್ ಶಾಲಾ ಆವರಣದಲ್ಲಿ ಮಾತ್ರವಲ್ಲದೆ ಹಳ್ಳಿಯಲ್ಲಿಯೂ ಅವಳನ್ನು ಹಿಂಬಾಲಿಸುತ್ತಿದ್ದನು ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಗ್ಯಾಜೆಟ್ಸ್

BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್‌ಎನ್‌ಎಲ್ ಈಗ ದೇಶದ ಎಲ್ಲಾ ಟೆಲಿಕಾಂ ವಲಯಗಳಲ್ಲಿ 4ಜಿ ಸೇವೆಗಳನ್ನು (BSNL 4G Plan) ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಬಿಎಸ್ ಎನ್ ಎಲ್ ನ 4ಜಿ ಸೇವೆಯನ್ನು ಈಗಾಗಲೇ ಹೊರತರಲಾಗಿದೆ.ಬಿಎಸ್‌ಎನ್‌ಎಲ್‌ನಿಂದ ಗ್ರಾಹಕರಿಗೆ ಹೆಚ್ಚಿನ ಲಾಭ ಕೊಡುವ ಒಂದು ರೀಚಾರ್ಜ್ ಯೋಜನೆಯನ್ನು ಈಗ ಪ್ರಕಟಿಸಿದೆ.

VISTARANEWS.COM


on

By

BSNL 4G Plan
Koo

ಬಿಎಸ್‌ಎನ್‌ಎಲ್ (BSNL 4G Plan) ತನ್ನ ಟೆಲಿಕಾಂ (telecom) ಬಳಕೆದಾರರಿಗೆ ಹಲವಾರು ಹೊಸ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳನ್ನು (new prepaid recharge plans) ಪರಿಚಯಿಸಿದೆ. ಇವುಗಳು ದೀರ್ಘಾವಧಿಯ ಲಾಭದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಅನಿಯಮಿತ ಧ್ವನಿ ಕರೆಗಳು ಮತ್ತು ಡೇಟಾದಂತಹ ಪ್ರಯೋಜನಗಳನ್ನು ನೀಡಲಿದೆ. ಜುಲೈನಲ್ಲಿ ಖಾಸಗಿ ಕಂಪನಿಗಳು ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿದ ಕಾರಣ ಅನೇಕ ಬಳಕೆದಾರರು ಬಿಎಸ್‌ಎನ್‌ಎಲ್‌ಗೆ ತಮ್ಮ ನಂಬರ್ ಗಳನ್ನು ಪೋರ್ಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯು ಈಗ ದೇಶದ ಎಲ್ಲಾ ಟೆಲಿಕಾಂ ವಲಯಗಳಲ್ಲಿ 4ಜಿ ಸೇವೆಗಳನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಬಿಎಸ್‌ಎನ್‌ಎಲ್ 4ಜಿ ಸೇವೆಯನ್ನು ಈಗಾಗಲೇ ಹೊರತರಲಾಗಿದೆ.


ಬಿಎಸ್‌ಎನ್‌ಎಲ್‌ನಿಂದ ಗ್ರಾಹಕರಿಗೆ ಹೆಚ್ಚಿನ ಲಾಭ ಕೊಡುವ ಒಂದು ರೀಚಾರ್ಜ್ ಯೋಜನೆಯು 160 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಈ ಪ್ರಿಪೇಯ್ಡ್ ಯೋಜನೆಯಲ್ಲಿ, ಬಳಕೆದಾರರು ಒಟ್ಟು 320 ಜಿಬಿ ಡೇಟಾವನ್ನು ಪಡೆಯುತ್ತಾರೆ. 997 ರೂ. ಬೆಲೆಯ ಈ ಪ್ಲಾನ್ ಪ್ರತಿದಿನ 100 ಉಚಿತ ಎಸ್‌ಎಂಎಸ್ ಜೊತೆಗೆ ದಿನಕ್ಕೆ 2ಜಿಬಿ ಹೈ-ಸ್ಪೀಡ್ ಡೇಟಾವನ್ನು ಒದಗಿಸುತ್ತದೆ.

ಹೆಚ್ಚುವರಿಯಾಗಿ ಬಳಕೆದಾರರು ದೇಶದ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಉಚಿತ ಧ್ವನಿ ಕರೆಗಳನ್ನು ಮಾಡಬಹುದಾಗಿದೆ. ಈ ಯೋಜನೆಯು ಭಾರತದಾದ್ಯಂತ ಉಚಿತ ರೋಮಿಂಗ್ ಮತ್ತು ಜಿಂಗ್ ಮ್ಯೂಸಿಕ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್‌ಗಳಂತಹ ಹಲವಾರು ಮೌಲ್ಯವರ್ಧಿತ ಸೇವೆಗಳೊಂದಿಗೆ ಬರುತ್ತದೆ.

ಇದನ್ನೂ ಓದಿ: Phone Charging Tips: ಫೋನ್‌ಗಳನ್ನು ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

BSNL 4G Plan
BSNL 4G Plan


ಬಿಎಸ್‌ಎನ್‌ಎಲ್‌ ಕೂಡ ಶೀಘ್ರದಲ್ಲೇ 5ಜಿ ಸೇವೆಗಳನ್ನು ಪ್ರಾರಂಭಿಸಲು ಕೆಲಸ ಮಾಡುತ್ತಿದೆ. ಕಂಪನಿಯು ತನ್ನ 4ಜಿ ಸೇವೆಗಾಗಿ ಎಲ್ಲಾ ಟೆಲಿಕಾಂ ವಲಯಗಳಲ್ಲಿ ಸಾವಿರಾರು ಹೊಸ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದೆ ಮತ್ತು 5ಜಿ ನೆಟ್‌ವರ್ಕ್ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದೆ.

ಮುಂಬರುವ ತಿಂಗಳುಗಳಲ್ಲಿ ಸರ್ಕಾರಿ ಟೆಲಿಕಾಂ ಕಂಪನಿಯು 5ಜಿ ಸೇವೆಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. ಇದಲ್ಲದೆ ದೆಹಲಿ ಮತ್ತು ಮುಂಬೈನಲ್ಲಿರುವ ಎಂಟಿಎನ್ ಎಲ್ ಬಳಕೆದಾರರು ಶೀಘ್ರದಲ್ಲೇ 4ಜಿ ಸೇವೆಗಳಿಗೆ ಪ್ರವೇಶವನ್ನು ಪಡೆಯುತ್ತಾರೆ. ಯಾಕೆಂದರೆ ಎಂಟಿಎನ್‌ಎಲ್ ಬಿಎಸ್‌ಎನ್‌ಎಲ್ ನ 4ಜಿ ಮೂಲಸೌಕರ್ಯವನ್ನು ಬಳಸುತ್ತಿದೆ.

Continue Reading

Latest

Viral Video: ಎಲ್ಲ ಬಿಟ್ಟು ಟ್ರಾನ್ಸ್‌ಫಾರ್ಮರ್‌ ಏರಿ ಸತ್ತ ಕರಡಿ; ಮೃತ ದೇಹದ ಮೇಲೆ ಕೂತ ಲೈನ್‌ಮನ್!

ಹಿಮಾಚಲ ಪ್ರದೇಶದ ಕಥಲಾಗ್ ಪ್ರದೇಶದಲ್ಲಿ‌ (Viral Video) ವಿದ್ಯುತ್ ಶಾಕ್ ತಗುಲಿ ಹೆಣ್ಣು ಕರಡಿ ಮತ್ತು ಅದರ ಮರಿ ಸಾವನಪ್ಪಿತ್ತು. ಆದರೆ ವ್ಯಕ್ತಿಯೊಬ್ಬ ಆ ಕರಡಿಯ ಮೃತದೇಹದ ಜೊತೆ ಪೋಸ್ ನೀಡುತ್ತಾ ಫೋಟೊಶೂಟ್ ಮಾಡಿದ್ದಲ್ಲದೇ ಅದರ ದೇಹವನ್ನು ಅಮಾನವೀಯವಾಗಿ ಎಸೆಯುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
Koo


ಮನಸ್ಸಿನಲ್ಲಿ ಕರುಣೆಯ ಭಾವನೆ ಇರುವವರನ್ನು ಮನುಷ್ಯರು ಎಂದು ಕರೆಯುತ್ತಾರೆ. ಆದರೆ ಇಂದಿನ ಕಾಲದ ಮನುಷ್ಯರಲ್ಲಿ ಮನುಷ್ಯತ್ವದ ಭಾವನೆ ಮಾಯವಾಗಿದೆ. ಸತ್ತ ದೇಹವನ್ನು ನೋಡಿ ಮಾನವೀಯತೆ ಇಲ್ಲದಂತಹ ಪ್ರಾಣಿಗಳು ಹೇಗೆ ವರ್ತಿಸುತ್ತವೆ ಹಾಗೇ ಇಂದಿನ ಜನರು ವರ್ತಿಸುತ್ತಿದ್ದಾರೆ. ಇದಕ್ಕೆ ಉದಾಹರಣೆಯೆಂಬಂತೆ ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ನಡೆದ ಘಟನೆಯೇ ಸಾಕ್ಷಿ. ಹಿಮಾಚಲ ಪ್ರದೇಶದ ಡಾಲ್‌ಹೌಸಿಯಲ್ಲಿ ಗುರುವಾರ ತಡರಾತ್ರಿ ವಿದ್ಯುತ್‌ ಶಾಕ್‌ ತಗುಲಿ ಹೆಣ್ಣು ಕರಡಿ ಮತ್ತು ಅದರ ಮರಿ ಸಾವನಪ್ಪಿದ ಘಟನೆ ನಡೆದಿದೆ. ಆದರೆ ವ್ಯಕ್ತಿಯೊಬ್ಬ ಆ ಕರಡಿಯ ಮೃತದೇಹದ ಜೊತೆ ಪೋಸ್ ನೀಡುತ್ತಾ ಫೋಟೊಶೂಟ್ ಮಾಡಿದ್ದಲ್ಲದೇ ಅದರ ದೇಹವನ್ನು ಅಮಾನವೀಯವಾಗಿ ಎಸೆಯುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕಥಲಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ವೈರಲ್ ವಿಡಿಯೊದಲ್ಲಿ ಟ್ರಾನ್ಸ್ ಫಾರ್ಮರ್ ಕಂಬದಲ್ಲಿ ಸಿಕ್ಕಿಬಿದ್ದ ಕರಡಿಯ ದೇಹವನ್ನು ತೆಗೆಯಲು ವ್ಯಕ್ತಿಯೊಬ್ಬರು ಮೇಲಕ್ಕೆ ಹತ್ತಿದ್ದಾರೆ. ಅವರು ಅದರ ದೇಹವನ್ನು ಕೆಳಗೆ ಎಸೆದಿದ್ದಾರೆ. ಆದರೆ ಈ ವ್ಯಕ್ತಿ ಅಧಿಕಾರಿಯೇ ಅಥವಾ ಸ್ಥಳೀಯರೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ಅವರು ಕರಡಿಯ ದೇಹವನ್ನು ಎಸೆದು ಅದರೊಂದಿಗೆ ಪೋಸ್ ನೀಡಿ ಫೋಟೊಶೂಟ್ ಮಾಡಿದ್ದಾರೆ. ನಂತರ ಅಮಾನುಷವಾಗಿ ಕರಡಿಯ ಮೃತದೇಹವನ್ನು ಎಸೆದಿದ್ದಾರೆ.

ಕೆಲವು ವರದಿಗಳ ಪ್ರಕಾರ, ಆ ವ್ಯಕ್ತಿಯನ್ನು ಮುನ್ಸಿಪಲ್ ಕೌನ್ಸಿಲ್ ಜೂನಿಯರ್ ಎಂಜಿನಿಯರ್ ಸಂಜೀವ್ ಶರ್ಮಾ ಎಂದು ಗುರುತಿಸಲಾದ ವಿದ್ಯುತ್ ಇಲಾಖೆ ಸಿಬ್ಬಂದಿ ಎನ್ನಲಾಗಿದೆ. ಅವರು ಕೆಲವು ಅರಣ್ಯ ಇಲಾಖೆ ಅಧಿಕಾರಿಗಳ ಸಹಾಯದಿಂದ ವಿದ್ಯುತ್ ಆಘಾತಕ್ಕೊಳಗಾದ ಕರಡಿಯ ದೇಹವನ್ನು ಟ್ರಾನ್ಸ್ ಫಾರ್ಮರರ್‌ನಿಂದ ಕೆಳಗೆ ಇಳಿಸಿದ್ದಾರೆ ಎನ್ನಲಾಗಿದೆ.

ಆದರೆ ವ್ಯಕ್ತಿಯ ಈ ಅಮಾನವೀಯ ಕೃತ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕರಡಿಯ ಮೃತ ದೇಹದ ಜೊತೆ ಅವರು ವರ್ತಿಸಿದ ರೀತಿಯ ವಿರುದ್ಧ ಪ್ರಾಣಿ ಪ್ರಿಯರು ಮತ್ತು ಕಲ್ಯಾಣ ಕಾರ್ಯಕರ್ತರು ಧ್ವನಿ ಎತ್ತಿದ್ದಾರೆ. ಈ ವಿಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಾಗ, ವಿದ್ಯುತ್ ಆಘಾತಕ್ಕೊಳಗಾದ ಕರಡಿಯ ಮೃತ ದೇಹವನ್ನು ನಿರ್ದಯವಾಗಿ ಟ್ರಾನ್ಸ್ಫಾರ್ಮರ್ ನಿಂದ ಎಸೆದ ನಂತರ ಅದರ ಮೇಲೆ ಕುಳಿತು ಪೋಸ್ ನೀಡಿದ ವ್ಯಕ್ತಿಯ ಅಗೌರವ ಮತ್ತು ಅಮಾನವೀಯ ಕೃತ್ಯವನ್ನು ಖಂಡಿಸಿ ಜನರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ

“ಇದು ನೋಡಲು ನಾಚಿಕೆಗೇಡಿನ ದೃಶ್ಯವಾಗಿದೆ. ಸಾವಿನ ಬಗ್ಗೆ ಯಾವುದೇ ಗೌರವವಿಲ್ಲದ ಆತ ನಾಚಿಕೆಯಿಲ್ಲದ ವ್ಯಕ್ತಿ” ಎಂದು ಬಳಕೆದಾರರೊಬ್ಬರು ಬರೆದರೆ, ಇನ್ನೊಬ್ಬರು “ಮೃತ ದೇಹಗಳೊಂದಿಗೆ ಫೋಟೋ ತೆಗೆದುಕೊಳ್ಳುವುದು ಸಂಪೂರ್ಣವಾಗಿ ಭಯಾನಕ ಮತ್ತು ಸಂಪೂರ್ಣವಾಗಿ ಅಗೌರವದಿಂದ ಕೂಡಿದೆ” ಎಂದು ಬರೆದಿದ್ದಾರೆ.

Continue Reading

ಬೆಂಗಳೂರು

Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಅಡ್ವೆಂಚರಸ್ ಕಾಮಿಡಿ (Kannada New Movie) ಕಥಾಹಂದರ ಒಳಗೊಂಡಿರುವ “ಫಾರೆಸ್ಟ್” ಚಿತ್ರದ ಟ್ರೈಲರ್ ಸದ್ದದಲ್ಲೇ ರಿಲೀಸ್‌ ಆಗಲಿದೆ. ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಎನ್.ಎಂ. ಕಾಂತರಾಜ್ ಅವರು ಚಿತ್ರವನ್ನು ನಿರ್ಮಿಸಿದ್ದಾರೆ. ಹಾಸ್ಯನಟ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂತ ಸ್ಟಾರ್ ಕಲಾವಿದರೇ ಅಭಿನಯಿಸಿದ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಅಡ್ವೆಂಚರಸ್ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ “ಫಾರೆಸ್ಟ್” ತನ್ನ ಟೈಟಲ್, ತಾರಾಗಣ ಹಾಗೂ ಕಾನ್ಸೆಪ್ಟ್ ಕಾರಣದಿಂದಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಎನ್.ಎಂ.ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಎನ್. ಎಂ. ಕಾಂತರಾಜ್ ಅವರು ಚಿತ್ರವನ್ನು (Kannada New Movie) ನಿರ್ಮಿಸಿದ್ದಾರೆ.

ಇದನ್ನೂ ಓದಿ: Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

ಈ ಸಿನಿಮಾ ಬಗ್ಗೆ ತುಂಬಾ ಕಾಳಜಿ ಇಟ್ಟುಕೊಂಡಿರುವ ನಿರ್ಮಾಪಕರು ಕ್ವಾಲಿಟಿ ವಿಷಯದಲ್ಲಿ ಎಲ್ಲೂ ಕಾಂಪ್ರಮೈಸ್ ಆಗದೆ, ಬಜೆಟ್ ಬಗ್ಗೆ ಯೋಚಿಸದೆ ಧಾರಾಳವಾಗಿ ಖರ್ಚು ಮಾಡಿದ್ದಾರೆ, ಡಬಲ್ ಇಂಜಿನ್ , ಬ್ರಹ್ಮಚಾರಿಯಂಥ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಮಾಡಿರುವ ಚಂದ್ರಮೋಹನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ, ಕಾಡಲ್ಲಿ ನಡೆಯುವ ಅಡ್ವೆಂಚರಸ್ ಕಾಮಿಡಿ ಸ್ಟೋರಿಯನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ.

ಹಾಸ್ಯನಟ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂತ ಸ್ಟಾರ್ ಕಲಾವಿದರೇ ಅಭಿನಯಿಸಿದ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ. ಫಾರೆಸ್ಟ್‌ನಲ್ಲಿ ನಡೆಯುವ ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್ ಇರುವ ಈ ಚಿತ್ರದ ಬಹುತೇಕ ಕಥೆ ಕಾಡಿನಲ್ಲಿಯೇ ನಡೆಯೋದು ಚಿತ್ರದ ಮತ್ತೊಂದು ವಿಶೇಷ. ಸದ್ಯದಲ್ಲೇ ಈ ಸಿನಿಮಾದ ಮೊದಲಪ್ರತಿ ಹೊರಬರಲಿದೆ. ಅತಿದೊಡ್ಡ ಕಳ್ಳತನವೊಂದರ ಸುತ್ತ ನಡೆಯುವ ಘಟನೆಗಳನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಸಂಪಾಜೆ ಫಾರೆಸ್ಟ್ ಹಾಗೂ ಮಲೆ ಮಾದೇಶ್ವರ ಬೆಟ್ಟದ ಸುತ್ತಮುತ್ತ 80 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆದಿದೆ. ಕೆಲವು ಕಡೆ ಡಬಲ್ ಕಾಲ್‌ಶೀಟ್ ಆಗಿದ್ದರಿಂದ ಶೂಟಿಂಗ್ ದಿನಗಳು ಹೆಚ್ಚಾಗಿದೆ ಎಂದು ನಿರ್ಮಾಪಕ ಕಾಂತರಾಜು ತಿಳಿಸಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಸಿದ್ದವಾಗಿದ್ದು, ಈ ತಿಂಗಳ ಅಂತ್ಯದಲ್ಲಿ ರಿಲೀಸ್ ಮಾಡವುದಾಗಿಯೂ ಹಾಗೂ ಸೆಪ್ಟೆಂಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ನಿರ್ಮಾಪಕ ಕಾಂತರಾಜು ಅವರು ಯೋಜನೆ ಹಾಕಿಕೊಂಡಿದ್ದಾರೆ.

ಅಲ್ಲದೆ ಚಿತ್ರದ ಮತ್ತೊಂದು ಹಾಡನ್ನು ಸದ್ಯದಲ್ಲೇ ರಿಲೀಸ್ ಮಾಡುವುದಾಗಿಯೂ ನಿರ್ಮಾಪಕರು ಹೇಳಿದ್ದಾರೆ, ಚೇತನ್ ಕುಮಾರ್ ಅವರ ರಚನೆಯ ಈ ಹಾಡಿಗೆ ಗಾಯಕ ಚಂದನ್ ಶೆಟ್ಟಿ ದನಿಯಾಗಿದ್ದಾರೆ.

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಅಲ್ಲದೆ ಸತ್ಯಶೌರ್ಯ ಸಾಗರ್ ಸಂಭಾಷಣೆ ರಚಿಸಿದ್ದಾರೆ. ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು ಫಾರೆಸ್ಟ್ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

Continue Reading

Latest

Viral Video: ಗಂಡ-ಹೆಂಡತಿ ಜಗಳ ಬಿಡಿಸಲು ಬಂದ ಕಾನ್‌ಸ್ಟೇಬಲ್‌ ತಾನೇ ಚಕ್ಕಂದ ಶುರು ಮಾಡಿದ!

ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಕಾನ್ಸ್ಟೇಬಲ್ ಒಬ್ಬರು ದಂಪತಿಯ ಜಗಳ (Viral Video) ಪರಿಹರಿಸಲು ಬಂದು ಆ ಮಹಿಳೆಯೊಂದಿಗೆ ಆಕ್ಷೇಪಾರ್ಹ ಪರಿಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಹಿಳೆಯ ಪತಿ ಅವರ ಸರಸಸಲ್ಲಾಪದ ದೃಶ್ಯವನ್ನು ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಂತರ ಇದು ವೈರಲ್ ಆಗಿದೆ. ಈ ಆಘಾತಕಾರಿ ದೃಶ್ಯವನ್ನು ನೋಡಿ ಆರೋಪಿ ಕಾನ್ಸ್ಟೇಬಲ್‌ ಅನ್ನು ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಮಾನತುಗೊಳಿಸಿದ್ದಾರೆ.

VISTARANEWS.COM


on

Viral Video
Koo


ಸಾರ್ವಜನಿಕರ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಬಗೆಹರಿಸುವುದು ಪೊಲೀಸರ ಕರ್ತವ್ಯವಾಗಿದೆ. ಆದರೆ ಇಲ್ಲೊಬ್ಬ ಪೊಲೀಸ್ ಕಾನ್ಸ್ಟೇಬಲ್ ಮಾಡಿದ ಕೆಲಸಕ್ಕೆ ಇಡೀ ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿದೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಕಾನ್ಸ್ಟೇಬಲ್ ಒಬ್ಬರು ದಂಪತಿಯ ಜಗಳ ಪರಿಹರಿಸಲು ಬಂದು ಆ ಮಹಿಳೆಯೊಂದಿಗೆ ಆಕ್ಷೇಪಾರ್ಹ ಪರಿಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video) ಆಗುತ್ತಿದೆ. ಇಲ್ಲಿ ಒಬ್ಬ ಮಾಡಿದ ಕೆಲಸದಿಂದ ಇಡೀ ಪೊಲೀಸ್ ಪಡೆಯ ಕೆಲಸದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ಮೊರಾದಾಬಾದಿ ಗೆಟಿ ಚೌಕಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯ ಪತಿ ಅವರ ಸರಸಸಲ್ಲಾಪದ ದೃಶ್ಯವನ್ನು ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಂತರ ಇದು ವೈರಲ್ ಆಗಿದೆ. ಈ ಆಘಾತಕಾರಿ ದೃಶ್ಯವನ್ನು ನೋಡಿ ಆರೋಪಿ ಕಾನ್ಸ್ಟೇಬಲ್‍ನನ್ನು ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಮಾನತುಗೊಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವರದಿ ಪ್ರಕಾರ, ಹಲವು ದಿನಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಆಗ ಈ ಜಗಳವನ್ನು ಪರಿಹರಿಸಲು ಅವರು ಪೊಲೀಸರ ಸಹಾಯವನ್ನು ಕೋರಿದಾಗ ಈ ಘಟನೆ ಶುರುವಾಗಿದೆ. ಮಧ್ಯಸ್ಥಿಕೆ ವಹಿಸಲು ಮತ್ತು ಸಮಸ್ಯೆಯನ್ನು ಪರಿಹರಿಸಲು ಆರೋಪಿ ಕಾನ್ಸ್ಟೇಬಲ್ ಅನ್ನು ನಿಯೋಜಿಸಲಾಯಿತು. ಆದರೆ ಆ ಅಧಿಕಾರಿ ಮಹಿಳೆಯ ಪರವಾಗಿ ನಿಂತು ಪತಿಯನ್ನು ಕಾನ್ಸ್ಟೇಬಲ್ ಖಂಡಿಸಿದ್ದಾರೆ. ಇದರಿಂದಾಗಿ ಕಾಲಾನಂತರದಲ್ಲಿ, ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಕಾನ್ಸ್ಟೇಬಲ್ ಆಗಾಗ ಭೇಟಿಯಾಗುತ್ತಿದ್ದರು. ಒಂದು ದಿನ, ತನ್ನ ಹೆಂಡತಿ ಹಾಗೂ ಕಾನ್ಸ್ಟೇಬಲ್ ಮನೆಯೊಳಗೆ ಸರಸವಾಡುತ್ತಿರುವುದು ಕಂಡು ಕೋಪಗೊಂಡ ಪತಿ ಅವರನ್ನು ಕೋಣೆಯಲ್ಲಿ ಕೂಡಿಹಾಕಿ, ಪತ್ನಿಯ ಮೇಲೆ ಹಲ್ಲೆ ನಡೆಸಿ ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದಾನೆ. ನಂತರ ಪತಿ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿ, ಅಮ್ರೋಹಾ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಈ ವಿಡಿಯೊ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಅಮ್ರೋಹಾ ಎಸ್ಪಿ ತಕ್ಷಣ ಗಮನ ಹರಿಸಿ ನಗರದ ಸರ್ಕಲ್ ಆಫೀಸರ್ (ಸಿಒ) ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ವಿಚಾರಣೆಯ ನಂತರ, ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವರದಿಯನ್ನು ಸಲ್ಲಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎನ್ನಲಾಗಿದೆ.

Continue Reading
Advertisement
BSNL 4G Plan
ಗ್ಯಾಜೆಟ್ಸ್4 mins ago

BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

Viral Video
Latest19 mins ago

Viral Video: ಎಲ್ಲ ಬಿಟ್ಟು ಟ್ರಾನ್ಸ್‌ಫಾರ್ಮರ್‌ ಏರಿ ಸತ್ತ ಕರಡಿ; ಮೃತ ದೇಹದ ಮೇಲೆ ಕೂತ ಲೈನ್‌ಮನ್!

Karnataka Weather Forecast
ಮಳೆ37 mins ago

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Kannada New Movie
ಬೆಂಗಳೂರು47 mins ago

Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕ್ರೀಡೆ57 mins ago

Ishan Kishan : ಮ್ಯಾನ್​ ಆಫ್​ ದಿ ಮ್ಯಾಚ್​ ಪ್ರಶಸ್ತಿ ಪಡೆದು ಮೂಲಕ ಬಿಸಿಸಿಐಗೆ ಪ್ರತ್ಯುತ್ತರ ಕೊಟ್ಟ ಇಶಾನ್ ಕಿಶನ್​

Shiva Rajkumar new look with Yash on the movie set Why did the rocking star visit?
ಸ್ಯಾಂಡಲ್ ವುಡ್58 mins ago

Shiva Rajkumar: ಸಿನಿಮಾ ಸೆಟ್​ನಲ್ಲಿ ಯಶ್ ಜತೆ ಹೊಸ ಲುಕ್​ನಲ್ಲಿ ಶಿವಣ್ಣ; ರಾಕಿಂಗ್‌ ಸ್ಟಾರ್‌ ಭೇಟಿ ಮಾಡಿದ್ದೇಕೆ?

Muda Scam
ಕರ್ನಾಟಕ1 hour ago

Muda Scam: ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌; ರಿಟ್‌ ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿದ ಹೈಕೋರ್ಟ್‌

Namma Metro
ಬೆಂಗಳೂರು1 hour ago

Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

Viral Video
ವಿದೇಶ2 hours ago

Viral Video: ತ್ರಿವರ್ಣ ಧ್ವಜ ಹರಿದು, ಗೋ ಬ್ಯಾಕ್‌ ಇಂಡಿಯಾ ಘೋಷಣೆ- ಖಲಿಸ್ತಾನಿಗಳ ಅಟ್ಟಹಾಸ; ವಿಡಿಯೋ ವೈರಲ್‌

Viral Video
Latest2 hours ago

Viral Video: ಗಂಡ-ಹೆಂಡತಿ ಜಗಳ ಬಿಡಿಸಲು ಬಂದ ಕಾನ್‌ಸ್ಟೇಬಲ್‌ ತಾನೇ ಚಕ್ಕಂದ ಶುರು ಮಾಡಿದ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌