ಶ್ರಾವಣ ಮಾಸ ಎನ್ನುವುದು ಹಿಂದೂ ಧರ್ಮದಲ್ಲಿ ಬಹಳ ಪವಿತ್ರವಾದ (shravan 2024) ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತವೆ. ಹಾಗಾಗಿ ಈ ಮಾಸದಲ್ಲಿ ಶಿವನ ಆರಾಧನೆಯ ಜೊತೆಗೆ ವಿಷ್ಣು, ಲಕ್ಷ್ಮಿ, ಪಾರ್ವತಿ ಮುಂತಾದ ದೇವರುಗಳ ಪೂಜೆ ಪುನಸ್ಕಾರಗಳನ್ನು ವಿಶೇಷವಾಗಿ ಮಾಡಲಾಗುತ್ತದೆ. ಹಾಗಾಗಿ ಈ ಮಾಸದಲ್ಲಿ ಮಾಂಸಹಾರಗಳನ್ನು ಸೇವಿಸಬಾರದು ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆದಕಾರಣ ಹೆಚ್ಚಿನ ಜನರು ಶ್ರಾವಣ ಮಾಸದಲ್ಲಿ ಮಾಂಸಹಾರವನ್ನು ತ್ಯಜಿಸುತ್ತಾರೆ. ಆದರೆ ಶ್ರಾವಣ (Shravan 2024) ಮಾಸದಲ್ಲಿ ಮಾಂಸಹಾರ ಸೇವಿಸಬಾರದು ಎಂದು ಹೇಳುವುದು ನಮ್ಮ ನಂಬಿಕೆ ಮಾತ್ರವಲ್ಲ, ಇದರ ಹಿಂದೆ ಕೆಲವು ವೈಜ್ಞಾನಿಕ ಕಾರಣಗಳೂ ಇವೆ. ಅದೇನೆಂದು ತಿಳಿಯೋಣ.
ಆರೋಗ್ಯ ಕಾರಣ:
ಬೇಸಿಗೆ ಕಾಲದ ನಂತರ ಮಳೆಗಾಲ ಪ್ರಾರಂಭವಾಗುತ್ತದೆ. ಇದು ಬಿಸಿಲಿನ ಬೇಗೆಯಿಂದ ದಣಿದ ಜನರಿಗೆ ತಂಪಾದ ಅನುಭವವನ್ನು ನೀಡುತ್ತದೆ ನಿಜ. ಆದರೆ ಈ ಸಮಯದಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ತಂಪಾದ ಗಾಳಿಯಲ್ಲಿ ಬ್ಯಾಕ್ಟೀರಿಯಾಗಳು ಬೆಳೆದು ಹೊಟ್ಟೆಯ ಸೋಂಕುಗಳು, ಅತಿಸಾರ ಮತ್ತು ಅಜೀರ್ಣದಂತಹ ಸಮಸ್ಯೆಗಳು ಕಾಡುತ್ತವೆ. ಅಲ್ಲದೇ ಈ ವಾತಾವರಣ ನಮ್ಮ ಜೀರ್ಣಕ್ರಿಯೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಅನೇಕ ಜನರು ಈ ಋತುವಿನಲ್ಲಿ ಮಾಂಸಾಹಾರವನ್ನು ಸೇವಿಸುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಮೊಟ್ಟೆಗಳು, ಸಮುದ್ರಾಹಾರ, ಚಿಕನ್ ಮತ್ತು ಮಟನ್‌ನಿಂದ ದೂರವಿರಲು ಸಲಹೆ ನೀಡಲಾಗಿದೆ.
ಮೀನುಗಳ ಸಂತಾನೋತ್ಪತ್ತಿ ಸಮಯ:
ಈ ಸಮಯದಲ್ಲಿ ಸೀಗಡಿ ಮತ್ತು ಮೀನುಗಳ ಸಂತಾನೋತ್ಪತ್ತಿ ಕಾರ್ಯವನ್ನು ನಡೆಯುತ್ತದೆ. ಹಿಂದೂ ಸಂಪ್ರದಾಯದ ಪ್ರಕಾರ ಸಂತಾನೋತ್ಪತ್ತಿ ಸಮಯದಲ್ಲಿ ಜೀವಿಗಳನ್ನು ಕೊಲ್ಲುವುದು ಮಹಾಪಾಪ. ಈ ಸಂಗತಿಯನ್ನು ಪರಿಗಣಿಸಿ ಹಿಂದೂಗಳ ನಂಬಿಕೆಯ ಆಧಾರದ ಮೇಲೆ ಈ ಸಮಯದಲ್ಲಿ ಮಾಂಸಾಹಾರ ಮತ್ತು ಮೊಟ್ಟೆಗಳನ್ನು ಸೇವಿಸುವುದರಿಂದ ದೂರ ಇರುತ್ತಾರೆ. ಸಾಮಾನ್ಯವಾಗಿ ಈ ಸಮಯದಲ್ಲಿ ಸಮುದ್ರದಲ್ಲಿ ಮೀನುಗಾರಿಗೆ ನಿಷೇಧ ಇರುತ್ತದೆ. ಆದಾಗ್ಯೂ ಈ ಅವಧಿಯಲ್ಲಿ ಸಮುದ್ರಾಹಾರವನ್ನು ಸೇವಿಸುವುದರಿಂದ ಸೋಂಕಿನ ಅಪಾಯ ಹೆಚ್ಚಾಗುತ್ತದೆ. ಇದೊಂದು ವೈಜ್ಞಾನಿಕ ಕಾರಣವೂ ಇದೆ.
ಅಲ್ಲದೇ ಈ ಸಮಯದಲ್ಲಿ ಕೀಟಗಳ ಹಾವಳಿ ಕೂಡ ಹೆಚ್ಚಾಗಿರುತ್ತದೆ. ಇದರಿಂದ ನೀವು ಮಾಂಸವಾಗಿ ಸೇವಿಸುವಂತಹ ಜೀವಿಗಳು ಈ ಕೀಟಗಳನ್ನು ಹೆಚ್ಚು ಸೇವನೆ ಮಾಡುತ್ತದೆ. ಇದನ್ನು ನಾವು ಸೇವಿಸಿದಾಗ ಅದರಿಂದ ನಮ್ಮ ಆರೋಗ್ಯ ಹಾಳಾಗುತ್ತದೆ. ಅದಕ್ಕಾಗಿಯೇ ಅನೇಕ ಜನರು ಈ ಋತುವಿನಲ್ಲಿ ಮಾಂಸಾಹಾರವನ್ನು ಸೇವಿಸುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಮೊಟ್ಟೆಗಳು, ಸಮುದ್ರಾಹಾರ, ಚಿಕನ್ ಮತ್ತು ಮಟನ್‌ನಿಂದ ದೂರವಿರಲು ಸಲಹೆ ನೀಡಲಾಗಿದೆ.
ಇದನ್ನೂ ಓದಿ: Shravan 2024: ಇಂದಿನಿಂದ ಶ್ರಾವಣ ಶುಭಾರಂಭ; ಈ ತಿಂಗಳ ವಿಶೇಷ ಏನು?
ಈ ಮಾಸದಲ್ಲಿ ಸಸ್ಯಹಾರವನ್ನು ಹೆಚ್ಚು ಸೇವಿಸಿ. ಯಾಕೆಂದರೆ ಸಸ್ಯಹಾರ ಸುಲಭವಾಗಿ ಜೀರ್ಣವಾಗುತ್ತವೆ. ಇದರಿಂದ ನಿಮ್ಮ ಜೀರ್ಣಕ್ರಿಯೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ತರಕಾರಿ, ಸೊಪ್ಪುಗಳಲ್ಲಿರುವ ಪೋಷಕಾಂಶಗಳು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸಿ ದೇಹದ ರೋಗ ನಿರೋಧಕ ಶಕ್ತಿಗಳನ್ನುಹೆಚ್ಚಿಸುವುದರ ಮೂಲಕ ನಿಮ್ಮ ಸಂಪೂರ್ಣ ಆರೋಗ್ಯವನ್ನು ಕಾಪಾಡುತ್ತವೆ. ಈ ಮೂಲಕ ಕಾಯಿಲೆ ಬೀಳುವುದನ್ನು ತಡೆಯಬಹುದು.