Site icon Vistara News

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Viral News

ಶಿಕ್ಷಕರು ವಿದ್ಯಾರ್ಥಿಗಳನ್ನು ಸರಿಯಾದ ಮಾರ್ಗದಲ್ಲಿ ನಡೆಸುವವರು ಎಂದು ಹೇಳುತ್ತಾರೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಜೈಲು ಪಾಲಾಗಿದ್ದಳು. ಯುನೈಟೆಡ್ ಕಿಂಗ್ ಡಮ್‌ನಲ್ಲಿ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಅವರಲ್ಲಿ ಒಬ್ಬರಿಂದ ಗರ್ಭಿಣಿಯಾದ ಆರೋಪದ ಮೇಲೆ ಬ್ರಿಟಿಷ್ ಮಹಿಳಾ ಶಿಕ್ಷಕಿಗೆ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಈಗ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ರೆಬೆಕಾ ಜಾಯ್ನೆಸ್ (30) ಜೈಲು ಶಿಕ್ಷೆಗೆ ಒಳಗಾದ ಶಿಕ್ಷಕಿ. ಈಕೆ ಇಬ್ಬರು ಹುಡುಗರಿಗೆ ಸೋಶಿಯಲ್ ಮೀಡಿಯಾದಲ್ಲಿ ಮೆಸೇಜ್ ಮಾಡುವ ಮೂಲಕ ಅವರ ಪರಿಚಯ ಮಾಡಿಕೊಂಡು ಈ ಕೃತ್ಯ ನಡೆಸಿದ್ದಾಳೆ. ಈ ಹಿಂದೆ ಈ ಶಿಕ್ಷಕಿಗೆ ಒಬ್ಬ ಬಾಲಕನ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಕ್ಕಾಗಿ ಕೋರ್ಟ್ ಶಿಕ್ಷೆ ವಿಧಿಸಿತ್ತು. ಆದರೆ ಜಾಮೀನಿನ ಮೇಲೆ ಹೊರಬಂದ ಶಿಕ್ಷಕಿ ಮತ್ತೆ ಇನ್ನೊಬ್ಬ ಬಾಲಕನೊಂದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದು, ಇದರಿಂದ ಗರ್ಭಿಣಿಯಾಗಿದ್ದಾಳೆ.

ಅಲ್ಲದೇ ಶಿಕ್ಷಕಿಯ ಜೊತೆಗಿನ ಲೈಂಗಿಕ ಸಂಬಂಧವನ್ನು ನಿರಾಕರಿಸಿದರೂ ಆಕೆ ತಮ್ಮನ್ನು ಬಲವಂತವಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾಳೆ. ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾಳೆ. ಹಾಗೇ ತಮ್ಮನ್ನು ಮಾನಸಿಕವಾಗಿ ನಿಂದಿಸಿದ್ದಾಳೆ. ಈ ಘಟನೆಯಿಂದ ಹೊರಬರಲು ತಾವು ಹೆಣಗಾಡುತ್ತಿರುವುದಾಗಿ ಬಾಲಕರು ಶಿಕ್ಷಕಿಯ ಮೇಲೆ ಆರೋಪ ಮಾಡಿದ್ದರು.

ಹಾಗಾಗಿ ವಾಯವ್ಯ ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಕ್ರೌನ್ ನ್ಯಾಯಾಲಯದ ನ್ಯಾಯಾಧೀಶರು ಆಕೆಯ ನಡವಳಿಕೆ ಆಕ್ಷೇಪಕಾರಿ ಆಗಿದೆ. ವಯಸ್ಕಳಾಗಿದ್ದೂ ಎಲ್ಲಾ ತಿಳಿವಳಿಕೆ ಹೊಂದಿದ್ದೂ ತನ್ನನ್ನು ತಾನು ನಿಯಂತ್ರಿಸಿಕೊಳ್ಳಬೇಕಿತ್ತು. ಆದರೆ ಅದರ ಬದಲಾಗಿ ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನ್ನ ಲೈಂಗಿಕ ದಾಹವನ್ನು ತೀರಿಸಿಕೊಳ್ಳಲು ಇಂತಹ ಘೋರ ತಪ್ಪು ಮಾಡಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಆಕೆಗೆ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಶಿಕ್ಷಕಿಗೆ ನ್ಯಾಯಾಲಯ ಈ ಹಿಂದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದದಂತೆ ಎಚ್ಚರಿಕೆ ನೀಡಿದರೂ ಅದನ್ನು ನಿರ್ಲಕ್ಷ್ಯ ಮಾಡಿ ಮತ್ತೊಂದು ಬಾಲಕನೊಂದಿಗೆ ಸಂಬಂಧ ಹೊಂದಿದ್ದಾಳೆ. ಹಾಗಾಗಿ ಶಿಕ್ಷೆಗೆ ಒಳಗಾದ ಶಿಕ್ಷಕಿಯು ಜನ್ಮ ನೀಡಿದ ಮಗುವನ್ನು ಆಕೆಯಿಂದ ತೆಗೆದುಕೊಂಡು ಆಕೆಯನ್ನು ಜೈಲಿಗೆ ಹಾಕಲಾಗಿದೆ.

ಈ ಘಟನೆ ನೋಡಿದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಮಾತ್ರ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿಲ್ಲ. ಜೊತೆಗೆ ಪುರುಷರು ಹಾಗೂ ಮಕ್ಕಳೂ ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ.

Exit mobile version