Site icon Vistara News

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral Video


ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.‌

ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್‌ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.

Exit mobile version