Viral Video: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌! - Vistara News

Latest

Viral Video: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

Viral Video: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೊದಲ್ಲಿ, ದಂಪತಿ ನೀರಿನಿಂದ ತುಂಬಿರುವ ಹೊಲದಲ್ಲಿ ಹಾವಿನಂತೆ ನೃತ್ಯ ಮಾಡಿದ್ದಾರೆ. ಅವರಿಬ್ಬರು ಹೊಲದಲ್ಲಿನ ಕೆಸರಿನಲ್ಲಿ ಮಲಗಿಕೊಂಡು, ನಂತರ ನಿಂತು ಹಾವಿನಂತೆ ಹೊರಳಾಡಿದ್ದಾರೆ. ಇಲ್ಲಿ ಮಹಿಳೆ ರೊಮ್ಯಾಂಟಿಕ್ ಭಂಗಿಯಲ್ಲಿ ಕುಣಿದಿದ್ದಾಳೆ. ಇನ್ನು ಹೊಲದಲ್ಲಿ ಕೆಸರೇ ತುಂಬಿರುವುದರಿಂದ ದಂಪತಿಯ ಬಟ್ಟೆ, ಮೈ ಕೇಸರಿನಿಂದ ಬಳಿದುಕೊಂಡಿದೆ. ಈ ದೃಶ್ಯವು ಅನೇಕ ವೀಕ್ಷಕರನ್ನು ರಂಜಿಸಿದೆ!

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ


ಜನರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವು ಬಗೆಯ ರೀಲ್ಸ್‌ಗಳನ್ನ ಮಾಡಿ ಹರಿಬಿಡುತ್ತಾರೆ. ಈ ರೀಲ್ಸ್ ಮೂಲಕ ಅನೇಕ ಪ್ರತಿಭೆಗಳು ಹೊರಗೆ ಬರುತ್ತವೆ. ಇದೀಗ ದಂಪತಿಯ ಅಂತಹದೊಂದು ಪ್ರತಿಭೆ ಹೊರಗೆ ಬಂದಿದೆ. ಇನ್ನೇನು ನಾಗರ ಪಂಚಮಿ ಹಬ್ಬ ಹತ್ತಿರ ಬರುತ್ತಿದೆ. ಜನರು ನಾಗದೇವರನ್ನು ನೆನೆದು ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಸಮಯದಲ್ಲಿ ಇದೀಗ ದಂಪತಿ ನಾಗಿನಿ ಡ್ಯಾನ್ಸ್ ಮೂಲಕ ಜನರಿಗೆ ನಾಗದೇವರ ದರ್ಶನ ನೀಡಿದ್ದಾರೆ. ಅವರ ಡ್ಯಾನ್ಸ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ. ಅವರ ಡ್ಯಾನ್ಸ್ ವೀಕ್ಷಕರ ಮುಖದಲ್ಲಿ ನಗುವನ್ನು ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೊದಲ್ಲಿ, ದಂಪತಿ ನೀರಿನಿಂದ ತುಂಬಿರುವ ಹೊಲದಲ್ಲಿ ಹಾವಿನಂತಹ ಚಲನೆಗಳಿಂದ ಸ್ಫೂರ್ತಿ ಪಡೆದ ನಾಗಿನ್ ಡ್ಯಾನ್ಸ್ ಅನ್ನು ಪ್ರದರ್ಶಿಸಿದ್ದಾರೆ. ಅವರಿಬ್ಬರು ಹೊಲದಲ್ಲಿನ ಕೆಸರಿನಲ್ಲಿ ಮಲಗಿಕೊಂಡು, ನಂತರ ನಿಂತು ಹಾವಿನಂತೆ ಬಳಕುತ್ತಾ ನೃತ್ಯ ಮಾಡಿದ್ದಾರೆ. ಇಲ್ಲಿ ಮಹಿಳೆ ರೊಮ್ಯಾಂಟಿಕ್ ಭಂಗಿಗಳನ್ನು ನೀಡಿದ್ದಾಳೆ. ಆ ಹೊಲದಲ್ಲಿ ಕೆಸರೇ ತುಂಬಿರುವುದರಿಂದ ದಂಪತಿಯ ಬಟ್ಟೆ, ಮೈ ಕೇಸರಿನಿಂದ ಬಳಿದುಕೊಂಡಿದೆ. ಈ ದೃಶ್ಯವು ಅನೇಕ ವೀಕ್ಷಕರನ್ನು ರಂಜಿಸಿದೆ ಮತ್ತು ಗೊಂದಲಕ್ಕೀಡು ಮಾಡಿದೆ.

ವಿನಯ್ ವಿಕೆ 9351 ಎಂಬ ಬಳಕೆದಾರರು ಯೂಟ್ಯೂಬ್‍ನಲ್ಲಿ ಹಂಚಿಕೊಂಡಿರುವ ಈ ವಿಡಿಯೊ ಶೀಘ್ರದಲ್ಲೇ ವೈರಲ್ ಆಗಿದ್ದು, ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ ಮತ್ತು ಅನೇಕರು ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಲೈಕ್‌ಗಳು ಮತ್ತು ವೀಕ್ಷಣೆಗಳ ಹಸಿವು ಜನರನ್ನು ಹುಚ್ಚರನ್ನಾಗಿ ಮಾಡುತ್ತಿದೆ” ಎಂದು ಒಬ್ಬ ವೀಕ್ಷಕರು ಕಾಮೆಂಟ್ ಮಾಡಿದರೆ, ಇನ್ನೊಬ್ಬರು “ನಾಗಿನ್ ಈ ರೀತಿ ನೃತ್ಯ ಮಾಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

ಸಾಮಾನ್ಯವಾಗಿ ಜನರು ಕೆಸರು ಕಾಲಿಗೆ ತಗುಲಿದರೆ ಅದನ್ನು ಕಂಡು ಅಸಹ್ಯಪಟ್ಟುಕೊಂಡು ಬೇಗನೆ ಹೋಗಿ ಸ್ವಚ್ಛಗೊಳಿಸಿಕೊಳ್ಳುತ್ತಾರೆ. ಅಂತಹದರಲ್ಲಿ ಈ ದಂಪತಿ ಕೆಸರು ಗದ್ದೆಯಲ್ಲೇ ಬಿದ್ದು ಉರುಳಾಡುತ್ತಿದ್ದಾರೆ. ಇದನ್ನು ನೋಡಿದರೆ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಜನರು ಎಷ್ಟು ದೂರ ಹೋಗುತ್ತಾರೆ ಮತ್ತು ಯಾವ ಕೆಲಸಕ್ಕೂ ಮುಂದಾಗುತ್ತಾರೆ ಎಂಬುದನ್ನು ಎತ್ತಿ ತೋರಿಸುತ್ತದೆ. ಕೆಲವು ವೀಕ್ಷಕರು ವಿಡಿಯೊವನ್ನು ಮನರಂಜನೆಯಾಗಿ ಕಂಡುಕೊಂಡರೆ, ಇತರರು ಆನ್‍ಲೈನ್‍ ಖ್ಯಾತಿಯಗಾಗಿ ಜನರು ಎಷ್ಟು ದೂರ ಹೋಗಬಹುದು ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

VISTARANEWS.COM


on


ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ದರ್ಶನ್‌ ಕಾರಾಗೃಹ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ತನ್ನ ಪತ್ನಿ ವಿಜಯಲಕ್ಷ್ಮಿ ಮತ್ತು ಮಗನನ್ನು ಜೈಲಿನ ಕೊಠಡಿಯ ಒಳಗೆ ಭೇಟಿ ಮಾಡಲು, ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಲು ಅವಕಾಶ ಕೋರಿ ಕೇಂದ್ರ ಕಾರಾಗೃಹ ಎಸ್‌ಪಿ ಅಂಶುಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೈದಿಗಳನ್ನು ಭೇಟಿ ಮಾಡುವ ಸಂದರ್ಶನ ಕೊಠಡಿ ಬದಲು ಪ್ರತ್ಯೇಕವಾಗಿ ಸೆಲ್‌ ಒಳಗೆ ಭೇಟಿ ಅವಕಾಶ ಬೇಕೆಂದು ಕೋರಿದ್ದಾರೆ.
ಡಿಜಿಪಿ ಅಲೋಕ್‌ ಕುಮಾರ್‌ ಭೇಟಿ ಮಾಡಿದ ವಿಜಯಲಕ್ಷ್ಮಿ
ದರ್ಶನ್‌ ಜೈಲಧಿಕಾರಗಳಿಗೆ ಪತ್ರ ಬರೆದಿದ್ದರೆ. ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಮೇ.16ರಂದು ಡಿಜಿಪಿ ಅಲೋಕ್‌ ಕುಮಾರ್‌ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ದರ್ಶನ್‌ ಅವರನ್ನು ಜೈಲಿನ ಕೊಠಡಿಯ ಒಳಗೆ ಭೇಟಿ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆಂದು ಮಾಹಿತಿ ತಿಳಿದುಬಂದಿದೆ.

ನಾಳೆ ಮೇ 19 ದರ್ಶನ್‌, ವಿಜಯಲಕ್ಷ್ಮಿ ಅವರ 23ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ದರ್ಶನ್‌ ಭೇಟಿಗೆ ಅವರ ಪತ್ನಿ, ಮಗನಿಗೆ ಅವಕಾಶ ಸಿಗಲಿ ಅಂತ ಅಭಿಮಾನಿಗಳು ಬಯಸುತ್ತಿದ್ದಾರೆ.

Continue Reading

Latest

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

VISTARANEWS.COM


on

ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಆನೆಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಲು ಕರೆದೊಯ್ಯಲಾಗಿತು. ಈ ವೇಳೆ ಮಾರ್ತಾಂಡ ಆನೆಗೆ ಕಂಜನ್ ಆನೆ ತಿವಿದ ಪರಿಣಾಮ, ನಿಯಂತ್ರಣ ತಪ್ಪಿದ ಆನೆ ಪ್ರವಾಸಿ ಮಹಿಳೆಯ ಮೇಲೆ ಬಿದ್ದಿದೆ ಎನ್ನಲಾಗಿದೆ.

ಆನೆ ಕೆಳಗೆ ಸಿಲುಕಿದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಶಿಬಿರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

Latest

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

VISTARANEWS.COM


on

ನಟ ದರ್ಶನ್‌ ಅವರಿಗೆ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್‌ಟಾ ಪೇಜ್‌ನಲ್ಲಿ ಹಾರ್ಟ್‌ ಬ್ರೇಕ್‌ ಇಮೋಜಿ ಮತ್ತು ದರ್ಶನ್‌ ಭಾವಚಿತ್ರ ಹಂಚಿಕೊಂಡಿದ್ದಾರೆ.

ಜೈಲಿನಲ್ಲಿರುವ ದರ್ಶನ್‌ಗೆ ವಿಜಯಲಕ್ಷ್ಮಿ ಅವರು ಆಗಾಗ ಧೈರ್ಯ ತುಂಬುತ್ತಿದ್ದರು. ಕುಟುಂಬದ ಬೆಂಬಲವೇ ಅವರಿಗೆ ದೊಡ್ಡ ಶಕ್ತಿಯಾಗಿತ್ತು ಎನ್ನಲಾಗುತ್ತಿದೆ.

ಆದರೆ ಇತ್ತೀಚಿನ ಬೆಳವಣಿಗೆಗಳ ನಂತರ ದರ್ಶನ್‌ ಮೌನವಾಗಿದ್ದು, ಜೈಲಿನಲ್ಲಿ ಯಾರೊಂದಿಗೂ ಹೆಚ್ಚು ಮಾತನಾಡುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಇದೇ ವೇಳೆ ವಿಜಯಲಕ್ಷ್ಮಿಯವರು ಸಹ ಮೌನಕ್ಕೆ ಜಾರಿದ್ದು, ಇದೀಗ ಈ ಪೋಸ್ಟ್‌ ಮೂಲಕ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ.

Continue Reading

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading
Advertisement
Latest12 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest14 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest18 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌