Site icon Vistara News

Viral Video: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

Viral Video


ಮುಂಬೈ : ಯುವಕ ಯುವತಿಯರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ವಿವಿಧ ರೀತಿಯ ರೀಲ್ಸ್ ಗಳನ್ನು ಮಾಡಲು ಹೋಗಿ ಕೋಲಾಹಲವನ್ನು ಸೃಷ್ಟಿಸುತ್ತಿದ್ದಾರೆ. ಸಾಮಾನ್ಯವಾಗಿ ಯುವತಿಯರು ಸ್ನಾನ ಮಾಡಿ ಬಾತ್‍ರೂಂನಿಂದ ಹೊರಗೆ ಬರುವಾಗ ದೇಹಕ್ಕೆ ಟವೆಲ್ ಸುತ್ತಿಕೊಂಡು ಮನೆಯೊಳಗೆ ಓಡಾಡುವುದನ್ನು ನಾವು ನೋಡಿರುತ್ತೇವೆ. ಆದರೆ ಇಲ್ಲೊಬ್ಬ ಯುವತಿ ತನ್ನ ದೇಹವನ್ನು ಟವೆಲ್‍ನಿಂದ ಸುತ್ತಿಕೊಂಡು ರಸ್ತೆಗೆ ಬಂದಿದ್ದಾಳೆ. ಇವಳನ್ನು ನೋಡಿ ದಾರಿಹೋಕರು ದಿಗ್ಭ್ರಮೆಗೊಂಡಿದ್ದಾರೆ. ಈ ವಿಡಿಯೊ ಸೊಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದ್ದು, ವ್ಯಾಪಕ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ.

ಮಿಂತ್ರಾ ಫ್ಯಾಷನ್ ಸೂಪರ್ ಸ್ಟಾರ್ ವಿಜೇತೆ ಮತ್ತು ಇನ್ಸ್ಟಾಗ್ರಾಂನಲ್ಲಿ 37,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ತನುಮಿತಾ ಘೋಷ್ ಇತ್ತೀಚೆಗೆ ಮುಂಬೈನ ಜನರು ಓಡಾಡುತ್ತಿದ್ದ ಬೀದಿಗಳಲ್ಲಿ ದೇಹಕ್ಕೆ ಟವೆಲ್ ಸುತ್ತಿಕೊಂಡು ಪ್ರದರ್ಶನ ನೀಡಿದವರು. ಈ ವೈರಲ್ ಆಗಿರುವ ವಿಡಿಯೊದಲ್ಲಿ, ತನುಮಿತಾ ಟವೆಲ್ ಸುತ್ತಿಕೊಂಡು ಯಾವುದೇ ಮುಜುಗರವಿಲ್ಲದೇ ನಡೆಯುತ್ತಿದ್ದಾರೆ. ಇದನ್ನು ನೋಡಿದವರಿಗೆ ಆಕೆ ಬಾತ್‍ರೂಂನಿಂದ ಹೊರಬಂದಂತೆ ಕಾಣಿಸುತ್ತದೆ. ವಿಡಿಯೊದಲ್ಲಿ ‘ತೌಬಾ-ತೌಬಾ’ ಹಾಡು ಹಿನ್ನೆಲೆಯಲ್ಲಿ ಪ್ಲೇ ಆಗುತ್ತಿದೆ. ಈ ವಿಡಿಯೊ ಶೀರ್ಷಿಕೆಯಲ್ಲಿ, ಮುಂಬೈನ ಪ್ರೇಕ್ಷಕರು ತನ್ನ ನೋಟವನ್ನು ನೋಡಿ ‘ತೌಬಾ-ತೌಬಾ’ ಎಂದು ಉದ್ಗರಿಸುತ್ತಿದ್ದಾರೆ ಎಂದು ಅವರು ಹಾಸ್ಯಮಯವಾಗಿ ಬರೆದಿದ್ದಾರೆ.

ಈ ಅಸಾಮಾನ್ಯ ಉಡುಗೆಯ ಜೊತೆಗೆ ಕಿವಿಯೋಲೆಗಳನ್ನು ಧರಿಸಿದ್ದರು ಮತ್ತು ಸ್ಟೈಲಿಶ್ ಸ್ಪೋರ್ಟ್ಸ್ ಶೂಗಳನ್ನು ಧರಿಸಿದ್ದರು. ಅವರು ಈ ವೇಷದಲ್ಲಿ ಬಸ್ ನಿಲ್ದಾಣದಿಂದ ಅಂಗಡಿಯ ಕಡೆಗೆ ಹೋಗುತ್ತಿದ್ದಾಗ, ಅಲ್ಲಿದ್ದ ದಾರಿಹೋಕರು ಇವರನ್ನು ದಿಟ್ಟಿಸಿ ನೋಡುತ್ತಿದ್ದಾರೆ. ಈ ವಿಡಿಯೊದ ಕೊನೆಯಲ್ಲಿ ತನುಮಿತಾ ತನ್ನ ಕೂದಲಿಗೆ ಹಾಗೂ ದೇಹಕ್ಕೆ ಸುತ್ತಿದ್ದ ಟವೆಲ್ ಅನ್ನು ತೆಗೆದಿದ್ದಾರೆ. ಆದರೆ ಅದರೊಳಗೆ ಅವರು ಬಟ್ಟೆ ಧರಿಸಿದರು. ಈ ವಿಡಿಯೊ ಪ್ರೇಕ್ಷಕರಿಗೆ ಹಾಗೂ ದಾರಿಹೋಕರಿಗೆ ಆಶ್ಚರ್ಯ ಮತ್ತು ಕುತೂಹಲವನ್ನುಂಟು ಮಾಡಿದಂತು ನಿಜ.

ಈ ವಿಡಿಯೊ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿದ್ದು, 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು ಸಾವಿರಾರು ಲೈಕ್‍ಗಳು ಮತ್ತು ಶೇರ್ ಗಳನ್ನು ಗಳಿಸಿದೆ. ಇದಕ್ಕೆ ಹಲವಾರು ಕಾಮೆಂಟ್‍ಗಳು ಸಹ ಬಂದಿವೆ, ಹೆಚ್ಚಿನವರು ಅವರ ಈ ಕಾರ್ಯದ ಉದ್ದೇಶ ಮತ್ತು ಪರಿಣಾಮವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಪ್ಯಾರಿಸ್‌ಗೆ ಹೋದರೂ ಅಂಬಾನಿ ಸೊಸೆ ಕರಿಮಣಿ ಮರೆಯಲಿಲ್ಲ! ಸೋಷಿಯಲ್‌ ಮೀಡಿಯಾದಲ್ಲೀಗ ಇದೇ ಚರ್ಚೆ!

ಆದರೆ ತನುಮಿತಾ ಅವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಮತ್ತು ಸೋನಾಕ್ಷಿ ಸಿನ್ಹಾ, ಶಲೀನಾ ನಥಾನಿ, ಮನೀಶ್ ಮಲ್ಹೋತ್ರಾ ಮತ್ತು ಡಿನೋ ಮೋರಿಯಾ ಅವರಂತಹ ಸೆಲೆಬ್ರಿಟಿಗಳಂತೆ ತಾನು ಮನರಂಜನೆಗಾಗಿ ಮಾಡಿರುವುದಾಗಿ ತಿಳಿಸಿದ್ದಾರೆ.ಅವರ ವಿವರಣೆಯ ಹೊರತಾಗಿಯೂ, ಕೆಲವು ಬಳಕೆದಾರರು ನಿರಾಶೆಯನ್ನು ವ್ಯಕ್ತಪಡಿಸುತ್ತಲೇ ಇದ್ದರು, ಇದು ಸಂಪ್ರದಾಯಸ್ಥ ಕುಟುಂಬದವರಿಗೆ ಮುಜುಗರವನ್ನುಂಟು ಮಾಡುವಂತಿದೆ ಎಂದು ಹೇಳಿದ್ದಾರೆ.

Exit mobile version