ಮನುಷ್ಯರ ಜೀವನ ಎನ್ನುವುದು ನೀರ ಮೇಲಿನ ಗುಳ್ಳೆಯಂತೆ ಕ್ಷಣಿಕ. ಅದು ಯಾವ ಕ್ಷಣದಲ್ಲಾದರೂ ಒಡೆದು ಹೋಗಬಹುದು ಎಂಬುದಕ್ಕೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಭಾನುವಾರ ವೈದ್ಯರನ್ನು ಭೇಟಿ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಅಲ್ಲೇ ಸಾವನ್ನಪ್ಪಿದ್ದಾರೆ. ಪರದೇಸಿಪುರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಈ ಘೋರ ದೃಶ್ಯ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.
ಮೃತ ವ್ಯಕ್ತಿಯನ್ನು ಸೋನು ಎಂದು ಗುರುತಿಸಲಾಗಿದ್ದು, ಈತ ಆಟೋ ಚಾಲಕನಾಗಿದ್ದ ಎನ್ನಲಾಗಿದೆ. ಆಟೋ ಚಾಲಕ ಸೋನು ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ರಾತ್ರಿ 8 ಗಂಟೆಗೆ ಚಿಕಿತ್ಸೆಗಾಗಿ ಭಾಗ್ಯಶ್ರೀ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಇದ್ದಕ್ಕಿದ್ದಂತೆ, ಕುಸಿದುಬಿದ್ದು ಸಾವನಪ್ಪಿದ್ದಾರೆ.
इंदौर में डॉक्टर के सामने युवक को हार्ट अटैक से मौत pic.twitter.com/Ju1fIpXHOd
— Priya singh (@priyarajputlive) August 18, 2024
ಈ ಘೋರ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೋನು ವೈದ್ಯರೊಂದಿಗೆ ಮಾತನಾಡುತ್ತಿರುವುದನ್ನು ತೋರಿಸುತ್ತದೆ. ಅವರು ಅವನನ್ನು ಪರೀಕ್ಷಿಸಲು ಪ್ರಾರಂಭಿಸಿದರು. ಇದ್ದಕ್ಕಿದ್ದಂತೆ, ಸೋನು ವೈದ್ಯರ ಮುಂದೆ ಕುಸಿದುಬಿದ್ದರು. ಅವರನ್ನು ಬದುಕಿಸಲು ವೈದ್ಯಕೀಯ ಸಿಬ್ಬಂದಿ ತಕ್ಷಣದ ಪ್ರಯತ್ನ ಮಾಡಿದರೂ ಕೂಡ ಸೋನು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇಂದೋರ್‌ನ ಪರದೇಶಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯ ವ್ಯವಸ್ಥಾಪಕರು ಆಧಾರ್ ಕಾರ್ಡ್‍ನಲ್ಲಿ ಬರೆದ ವಿಳಾಸದಿಂದ ಈ ವಿಷಯದ ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡಿದರು. ನಂತರ ಈ ಇಡೀ ವಿಷಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ, ಪೊಲೀಸ್ ವೈದ್ಯರೊಂದಿಗೆ ಈ ಬಗ್ಗೆ ವಾದ ಪ್ರಾರಂಭಿಸಿದರು. ವಿವಾದದ ನಂತರ, ಈ ವಿಷಯದ ಬಗ್ಗೆ ಮಾಹಿತಿ ಹಿರಿಯ ಅಧಿಕಾರಿಗಳಿಗೆ ತಲುಪಿದಾಗ, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಿದರು ಮತ್ತು ಮರಣೋತ್ತರ ಪರೀಕ್ಷೆ ನಡೆಸಿದರು. ಮರಣೋತ್ತರ ಪರೀಕ್ಷೆಯಲ್ಲಿ, ಸೋನು ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಪರದೇಶಿಪುರ ಪೊಲೀಸ್ ಠಾಣೆಯ ಉಸ್ತುವಾರಿ ಪಂಕಜ್ ದ್ವಿವೇದಿ, ಈ ಘಟನೆಯ ಬಗ್ಗೆ ಮಾಹಿತಿಯನ್ನು ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಪಡೆಯಲಾಗಿದೆ ಎಂದು ಹೇಳಿದರು. ಅದರ ಆಧಾರದ ಮೇಲೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಆಟೋ ಚಾಲಕ ಸೋನು ಸ್ವತಃ ಚಿಕಿತ್ಸೆಗಾಗಿ ಆಸ್ಪತ್ರೆಗೆ ಧಾವಿಸಿದರು ಮತ್ತು ಹಠಾತ್ ಹೃದಯಾಘಾತಕ್ಕೆ ಒಳಗಾದರು. ನಂತರ ಅವರು ನಿಧನರಾದರು ಎಂದು ತೋರಿಸುತ್ತದೆ. ಮರಣೋತ್ತರ ವರದಿಯು ಹೃದಯ ಸ್ತಂಭನದಿಂದ ಸಾವು ಸಂಭವಿಸಿದೆ ಎಂದು ದೃಢಪಡಿಸಿದೆ ಎಂದು ತಿಳಿಸಿದ್ದಾರೆ.