Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ - Vistara News

Latest

Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

Viral Video: ಮುಂಬೈನ ಈಶಾನ್ಯ ಉಪನಗರವಾದ ಮುಲುಂಡ್ ನಿವಾಸಿಯಾದ ರೀಮಾ ಮುಖೇಶ್ ಪಟೇಲ್ ಎಂಬುವವರು ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಕುಳಿತು ಸಮುದ್ರಕ್ಕೆ ಹಾರಿ ಜೀವಕಳೆದುಕೊಳ್ಳಲು ಪ್ರಯತ್ನಿಸಿದ್ದರು. ಆಗ ಅವರ ಕಾರಿನ ಡ್ರೈವರ್ ಸಮಯಕ್ಕೆ ಸರಿಯಾಗಿ ಅವರ ಕೈ ಹಿಡಿದುಕೊಂಡಿದ್ದಾನೆ. ನಂತರ ಗಸ್ತು ವಾಹನವು ಸ್ಥಳಕ್ಕೆ ಸರಿಯಾಗಿ ಬಂದು ಡ್ರೈವರ್‌ಗೆ ಅವಳನ್ನು ಹಿಡಿದು ಮೇಲೆಳೆಯಲು ಸಹಾಯ ಮಾಡಿದ್ದಾರೆ. ಈ ಕುರಿತ ವಿಡಿಯೊ ಇಲ್ಲಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಮುಂಬೈ: ಮುಂಬೈನ ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ ಜಿಗಿಯಲು ಪ್ರಯತ್ನಿಸಿದ ಮಹಿಳೆಯನ್ನು ಕ್ಯಾಬ್ ಚಾಲಕ ಮತ್ತು ಪೊಲೀಸ್ ಸಿಬ್ಬಂದಿ ಶುಕ್ರವಾರ ಸಂಜೆ ರಕ್ಷಿಸಿದ್ದಾರೆ. ಈ ದೃಶ್ಯ ಅಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಕ ಮತ್ತು ಪೊಲೀಸರು ಮಹಿಳೆಯನ್ನು ಸುರಕ್ಷಿತವಾಗಿ ಎಳೆದೊಯ್ಯುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video)ಆಗಿದೆ.

ಮಹಿಳೆಯನ್ನು 56 ವರ್ಷದ ರೀಮಾ ಮುಖೇಶ್ ಪಟೇಲ್ ಎಂದು ಗುರುತಿಸಲಾಗಿದ್ದು, ಮುಂಬೈನ ಈಶಾನ್ಯ ಉಪನಗರವಾದ ಮುಲುಂಡ್ ನಿವಾಸಿ ಎಂಬುದಾಗಿ ತಿಳಿದುಬಂದಿದೆ. ವಿಡಿಯೊದಲ್ಲಿ, ಆಕೆ ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಕುಳಿತಿದ್ದಳು. ನಂತರ ಅವಳು ನದಿ ಹಾರಲು ಪ್ರಯತ್ನಿಸುತ್ತಾಳೆ. ಆಗ ಆಕೆಯ ಕಾರಿನ ಡ್ರೈವರ್ ಸಮಯಕ್ಕೆ ಸರಿಯಾಗಿ ಅವಳ ಕೈ ಹಿಡಿದುಕೊಂಡಿದ್ದಾನೆ. ನಂತರ ಗಸ್ತು ವಾಹನವು ಸ್ಥಳಕ್ಕೆ ಸರಿಯಾಗಿ ಬಂದು ಡ್ರೈವರ್‌ಗೆ ಅವಳನ್ನು ಹಿಡಿದು ಮೇಲೆಳೆಯಲು ಸಹಾಯ ಮಾಡಿದ್ದಾರೆ. ಒಂದು ನಿಮಿಷಕ್ಕೂ ಹೆಚ್ಚು ಕಾಲ ಡ್ರೈವರ್ ಹಾಗೂ ಪೊಲೀಸರು ಸಾಹಸ ಮಾಡಿ ಆಕೆಯನ್ನು ಮೇಲಕ್ಕೆ ಎಳೆದು ರಕ್ಷಿಸಿದ್ದಾರೆ.

“ಎಂಟಿಎಚ್ಎಲ್ ಅಟಲ್ ಸೇತುವಿನಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯನ್ನು ರಕ್ಷಿಸಲು ಕರ್ತವ್ಯದಲ್ಲಿದ್ದ ಅಧಿಕಾರಿಗಳಾದ ಲಲಿತ್ ಶಿರ್ಸಾತ್, ಕಿರಣ್ ಮಹ್ತ್ರೆ, ಯಶ್ ಸೋನಾವಾನೆ ಮತ್ತು ಮಯೂರ್ ಪಾಟೀಲ್ ಅವರು ತಕ್ಷಣ ಪ್ರತಿಕ್ರಿಯಿಸಿ ಹಳಿಯ ಮೇಲೆ ಹಾರಿ ಆಕೆಯನ್ನು ರಕ್ಷಿಸಿದ್ದಾರೆ” ಎಂದು ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಜೀವನವು ನಮಗೆ ಸಿಕ್ಕ ಉಡುಗೊರೆ ಅದನ್ನು ಗೌರವಿಸಿ ಮತ್ತು ಯಾವುದೇ ಸಂದಿಗ್ಧ ಪರಿಸ್ಥಿತಿಯಲ್ಲೂ ಅದನ್ನು ಕಳೆದುಕೊಳ್ಳಲು ಪ್ರಯತ್ನಿಸಬೇಡಿ. ನಿಮ್ಮ ಪ್ರೀತಿಪಾತ್ರರಿಂದ ದೂರವಾಗಬೇಡಿ ಎಂದು ಮುಂಬೈ ಪೊಲೀಸ್ ಆಯುಕ್ತರು ಪೋಸ್ಟ್ ಮಾಡಿ ನಾಗರಿಕರಲ್ಲಿ ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ: ಅಪಹರಣಕಾರನಿಂದ ಪುಟ್ಟ ಮಗುವನ್ನು ರಕ್ಷಿಸಿದ ಸಾಕು ನಾಯಿ! ನಾಯಿಯ ಸಾಹಸದ ವಿಡಿಯೊ ನೋಡಿ

ಕಳೆದ ತಿಂಗಳು 38 ವರ್ಷದ ವ್ಯಕ್ತಿಯೊಬ್ಬರು ಸೇತುವೆಯಿಂದ ಜಿಗಿದು ಸಾವನ್ನಪ್ಪಿದ್ದರು. ಡೊಂಬಿವ್ಲಿ ನಿವಾಸಿಯಾಗಿದ್ದ ಎಂಜಿನಿಯರ್ ಕೆ.ಶ್ರೀನಿವಾಸ್ ಅವರು ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನ ನವಾ ಶೇವಾ ಎಂಡ್‍ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಕಾರನ್ನು ಪಾರ್ಕಿಂಗ್ ಮಾಡುತ್ತಿರುವುದನ್ನು ಸೇತುವೆಯ ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಿದ; ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ!

Viral Video: ಮಹಾರಾಷ್ಟ್ರದ ನಾಗ್ಪುರದಲ್ಲಿ ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಲು ಪ್ರಯತ್ನಿಸಿದ ಯುವಕನೊಬ್ಬ ನೀರಿಗೆ ಬಿದ್ದು ದುರಂತವಾಗಿ ಮುಳುಗಿ ಸಾವನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ. ಈ ಕುರಿತ ವರದಿ ಮತ್ತು ವಿಡಿಯೊ ಇಲ್ಲಿದೆ.

VISTARANEWS.COM


on

Viral Video
Koo


ಯುವಕರಿಗೆ ಸ್ಟಂಟ್ ಮಾಡುವ ಹುಚ್ಚು ಹೆಚ್ಚಾಗಿರುತ್ತದೆ. ಈ ರೀತಿ ಸ್ಟಂಟ್ ಮಾಡಲು ಹೋಗಿ ಅನೇಕರು ಅಪಾಯಕ್ಕೆ ಸಿಲುಕಿದ್ದಾರೆ. ಹಾಗೇ ಇನ್ನೂ ಅನೇಕರು ಸಾವನಪ್ಪಿದ್ದಾರೆ. ಇಷ್ಟಾದರೂ ಯುವ ಜನರು ಸ್ಟಂಟ್ ಮಾಡುವ ಹುಚ್ಚು ಬಿಡುತ್ತಿಲ್ಲ. ಈ ಸ್ಟಂಟ್ ಹುಚ್ಚಿನಿಂದ ಇತ್ತೀಚೆಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಲು ಪ್ರಯತ್ನಿಸಿದ ಯುವಕನೊಬ್ಬ ನೀರಿಗೆ ಬಿದ್ದು ದುರಂತವಾಗಿ ಮುಳುಗಿ ಸಾವನಪ್ಪಿದ ಆಘಾತಕಾರಿ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ (Viral Video)ಆಗಿದೆ.

ವರದಿಗಳ ಪ್ರಕಾರ, ನಾಗ್ಪುರ ಜಿಲ್ಲೆಯ ಉಮ್ರೆಡ್ ಸಿಟಿ ಬಳಿಯ ಮಕರ್ಧೋಕಡ ಅಣೆಕಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಜೆ (ಆಗಸ್ಟ್ 15) ಈ ಘಟನೆ ನಡೆದಿದೆ. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಮಕರಧೋಕಡ ಅಣೆಕಟ್ಟಿನಲ್ಲಿ ಅನೇಕ ಪ್ರವಾಸಿಗರು ಬಂದಿದ್ದರು. ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿದ್ದರು. ಅವರಲ್ಲಿ ಒಬ್ಬ ಯುವಕ ಡ್ಯಾಮ್ ಮೇಲೆ ಹತ್ತಲು ಪ್ರಯತ್ನಿಸಿದ್ದಾನೆ. ಆದರೆ ಯುವಕ ಸಾಹಸ ಮಾಡಲು ಹೋಗಿ ದುರದೃಷ್ಟಕರವಾಗಿ ಸಾವಿಗೀಡಾಗಿದ್ದಾನೆ.

ಇದನ್ನು ಅಲ್ಲಿಗೆ ಬಂದಿದ್ದ ಪ್ರವಾಸಿಗರೊಬ್ಬರು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಈಗ ವೈರಲ್ ಆಗಿದೆ. ಈ ವೈರಲ್ ವಿಡಿಯೊ 27 ಸೆಕೆಂಡುಗಳ ಕಾಲವಿದ್ದು, ಇದರಲ್ಲಿ ವ್ಯಕ್ತಿಯೊಬ್ಬರು ಅಣೆಕಟ್ಟಿನ ಗೋಡೆಯ ಮೇಲೆ ನಿಂತಿದ್ದಾನೆ. ಆಗ ಇಬ್ಬರು ಯುವಕರು ಅವನನ್ನು ರಕ್ಷಿಸಲು ಪ್ರಯತ್ನಿಸಿದರು, ಒಬ್ಬರು ಅವನನ್ನು ಕೆಳಗಿಳಿಸಲು ಸಹಾಯ ಮಾಡಲು ಕೈ ಚಾಚಿದರು. ಆದಾಗ್ಯೂ, ಅವನು ಅವರ ಸಹಾಯವನ್ನು ನಿರಾಕರಿಸಿದ. ನಂತರ ಸಹಾಯಕ್ಕೆ ಬಂದ ಯುವಕರು ಕೆಳಗೆ ಜಾರಿ ಬಿದ್ದಿದ್ದಾರೆ. ಆಮೇಲೆ ಆ ವ್ಯಕ್ತಿ ಇದ್ದಕ್ಕಿದ್ದಂತೆ ಸಮತೋಲನವನ್ನು ಕಳೆದುಕೊಂಡು ಅಣೆಕಟ್ಟಿನ ಇನ್ನೊಂದು ಬದಿಯಲ್ಲಿ, ನದಿಗೆ ಬಿದ್ದು ಮುಳುಗಿ ಸಾವಿಗೀಡಾಗಿದ್ದಾನೆ. ಘಟನಾ ಸ್ಥಳದಲ್ಲಿ ನೂರಾರು ಜನರಿದ್ದರೂ, ಯುವಕನನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.

ಇದನ್ನೂ ಓದಿ:ಚಂದ್ರ ಮತ್ತು ದೆಹಲಿ; ಇವುಗಳಲ್ಲಿ ಯಾವುದು ದೂರದಲ್ಲಿದೆ? ಈ ಹುಡುಗನ ಉತ್ತರವನ್ನೊಮ್ಮೆ ಕೇಳಿ ಬಿಡಿ!

ಕೆಲವು ಸಮಯದ ಹಿಂದೆ ಮಹಾರಾಷ್ಟ್ರದ ಸತಾರಾದಲ್ಲಿ ಮಹಿಳೆಯೊಬ್ಬರು ಬೆಟ್ಟದ ಮೇಲೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಕಾಲು ಜಾರಿ 100 ಅಡಿ ಆಳದ ಕಮರಿಗೆ ಬಿದ್ದದ್ದಳು. ಆಶ್ಚರ್ಯಕರ ಸಂಗತಿಯೆಂದರೆ, ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದರಿಂದ ಸಾವಿನಿಂದ ಪಾರಾಗಿದ್ದಾರೆ ಮತ್ತು ಅದರ ವಿಡಿಯೊ ವೈರಲ್ ಆಗಿತ್ತು. ಮಹಾರಾಷ್ಟ್ರದ ಸತಾರಾದ ಉಂಗರ್ ರಸ್ತೆಯ ಬೋರ್ನ್ ಘಾಟ್ ನಲ್ಲಿ ಈ ಘಟನೆ ನಡೆದಿತ್ತು.

Continue Reading

Latest

Crorepati Sweeper: ಕಸ ಗುಡಿಸುವ ಕಾರ್ಮಿಕನ ಬಳಿ ಇತ್ತು ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ! ಆತ ಸಂಪಾದಿಸಿದ್ದು ಹೇಗೆ?

Crorepati Sweeper: ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ನೈರ್ಮಲ್ಯ ಕಾರ್ಮಿಕನಾಗಿ ನೇಮಕಗೊಂಡಿರುವ ಜೈಸ್ವಾಲ್ ಎಂಬುವವನ ಬಳಿ ಅಕ್ರಮವಾಗಿ ಸಂಪಾದಿಸಿದ ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ ಇದೆ ಎಂಬ ಮಾಹಿತಿ ಹೊರಬಿದ್ದಿದೆ.ಆತ ಅಧಿಕೃತ ದಾಖಲೆಗಳನ್ನು ನಕಲಿ ಮಾಡುವ ಮೂಲಕ ಅಕ್ರಮ ಆಸ್ತಿಗಳನ್ನು ಸಂಪಾದಿಸಿದ್ದಾನೆ. ಆತನ ಬಳಿ ಅನೇಕ ಐಷಾರಾಮಿ ಕಾರುಗಳು ಇರುವುದು ತಿಳಿದು ಬಂದಿದೆ. ತನಿಖಾಧಿಕಾರಿಗಳು ಈಗ ಅವನ ಆದಾಯದ ಮೂಲವನ್ನು ಪರಿಶೀಲಿಸಲು ಬ್ಯಾಂಕ್ ಖಾತೆಯ ವಿವರಗಳನ್ನು ಕಲೆಹಾಕುತ್ತಿದ್ದಾರೆ. ದಾಖಲೆಗಳನ್ನು ಪಡೆದ ನಂತರ, ಆರೋಪಿ ನೈರ್ಮಲ್ಯ ಕಾರ್ಮಿಕ ಸಂತೋಷ್ ಕುಮಾರ್ ಜೈಸ್ವಾಲ್ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Crorepati Sweeper
Koo


ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನೈರ್ಮಲ್ಯ ಕಾರ್ಮಿಕ ಸಂತೋಷ್ ಜೈಸ್ವಾಲ್ ಎಂಬಾತನನ್ನು ನೋಡಿದರೆ ತುಂಬಾ ವಿನಮ್ರ ಸ್ವಭಾವದ ಪಾಪದ ವ್ಯಕ್ತಿ ಎಂಬ ಭಾವನೆ ಮೂಡುತ್ತದೆ. ಆದರೆ, ಇವನೊಬ್ಬ ಗೋಮುಖ ವ್ಯಾಘ್ರನಂತೆ. ಇವನ ಬಗ್ಗೆ ತನಿಖೆ ಮಾಡಿದ ಪೊಲೀಸರು ಆತನ ಅಸಲಿ ಮುಖ ನೋಡಿ ದಂಗಾಗಿದ್ದಾರೆ. ಯಾಕೆಂದರೆ ಜೈಸಲ್ ಅಕ್ರಮವಾಗಿ ಐಷಾರಾಮಿ ಕಾರುಗಳು, ಕೋಟಿ (Crorepati Sweeper) ಮೌಲ್ಯದ ಆಸ್ತಿಯನ್ನು ಹೊಂದಿದ್ದಾನೆ. ಆತ ಅಧಿಕೃತ ದಾಖಲೆಗಳನ್ನು ನಕಲಿ ಮಾಡುವ ಮೂಲಕ ಅಕ್ರಮ ಆಸ್ತಿಗಳನ್ನು ಸಂಪಾದಿಸಿದ್ದಾನೆ ಮತ್ತು ಆತನ ಬಳಿ ಅನೇಕ ಐಷಾರಾಮಿ ಕಾರುಗಳು ಇರುವುದು ತಿಳಿದುಬಂದಿದೆ.

ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ನೇಮಕಗೊಂಡಿರುವ ಜೈಸ್ವಾಲ್ ಮೊದಲು ನಜೀರ್ ಎಂಬ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದರಿಂದ ಈಗ ಆತನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಜೈಸ್ವಾಲ್ ತನ್ನ ಆಸ್ತಿಗೆ ಸಂಬಂಧಪಟ್ಟ ಫೈಲ್‍ಗಳನ್ನು ತಿರುಚಿದ್ದಾನೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆಗಿನ ಆಯುಕ್ತ ಯೋಗೇಶ್ವರ್ ರಾಮ್ ಮಿಶ್ರಾ ತನಿಖೆ ನಡೆಸಿದ್ದರು. ಅದರ ತನಿಖೆಯ ವರದಿ ಈಗ ಬಹಿರಂಗವಾದ ಕಾರಣ ಆತನನ್ನು ಅಮಾನತುಗೊಳಿಸಲಾಯಿತು ಮತ್ತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಆರೋಪಿ ನೈರ್ಮಲ್ಯ ಕಾರ್ಮಿಕ ಕಾನೂನುಬಾಹಿರವಾಗಿ ಸ್ವಾಧೀನಪಡಿಸಿಕೊಂಡಿರುವ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಸದರ್ ತಹಶೀಲ್ದಾರ್ ದೇವೇಂದ್ರ ಯಾದವ್ ಅವರಿಗೆ ಸೂಚನೆ ನೀಡಲಾಯಿತು. ಆಯುಕ್ತರಾಗಿದ್ದ ಯೋಗೇಶ್ವರ್ ರಾಮ್ ಮಿಶ್ರಾ ಅವರ ಆದೇಶದ ಮೇರೆಗೆ ಸದರ್ ತಹಶೀಲ್ದಾರ್ ಅವರು ಜೈಸ್ವಾಲ್ ಒಡೆತನದ ಐಷಾರಾಮಿ ವಾಹನಗಳ ಬಗ್ಗೆ ಮಾಹಿತಿ ಪಡೆಯಲು ಸಾರಿಗೆ ಅಧಿಕಾರಿಗೆ ಪತ್ರ ಬರೆದಿದ್ದರು. ಆಮೇಲೆ ದೇವಿಪಟನ್ ಮಂಡಲದ ಪ್ರಸ್ತುತ ಆಯುಕ್ತ ಶಶಿ ಭೂಷಣ್ ಲಾಲ್ ಸುಶೀಲ್ ಅವರು ಅಧಿಕಾರ ವಹಿಸಿಕೊಂಡ ನಂತರ ವಾಹನಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಹಾಯಕ ವಿಭಾಗೀಯ ಸಾರಿಗೆ ಅಧಿಕಾರಿಗೆ ಸೂಚನೆ ನೀಡಿದ್ದರು. ವಾಹನಗಳನ್ನು ಪರಿಶೀಲಿಸಿದ ನಂತರ ಸಹಾಯಕ ವಿಭಾಗೀಯ ಸಾರಿಗೆ ಅಧಿಕಾರಿ ಸಲ್ಲಿಸಿದ ವರದಿಯಲ್ಲಿ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ನೈರ್ಮಲ್ಯ ಕಾರ್ಮಿಕನು ಒಂದಲ್ಲ, ಒಂಬತ್ತು ಐಷಾರಾಮಿ ವಾಹನಗಳನ್ನು ಹೊಂದಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮತ್ತು ಅವುಗಳು ಅವನ, ಅವನ ಸಹೋದರ ಮತ್ತು ಅವನ ಹೆಂಡತಿಯ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಆರೋಪಿ ಸಂತೋಷ್ ಜೈಸ್ವಾಲ್ ಸ್ವಿಫ್ಟ್ ಡಿಜೈರ್, ಎರ್ಟಿಗಾ ಮಾರುತಿ ಸುಜುಕಿ, ಮಹೀಂದ್ರಾ ಸ್ಕಾರ್ಪಿಯೋ, ಇನ್ನೋವಾ ಮತ್ತು ಮಹೀಂದ್ರಾ ಕ್ಸೈಲೋ ಹೊಂದಿದ್ದರೆ, ಅವರ ಸಹೋದರ ಉಮಾಶಂಕರ್ ಜೈಸ್ವಾಲ್ ಎರ್ಟಿಗಾ ಮಾರುತಿ ಸುಜುಕಿ ಮತ್ತು ಅವರ ಪತ್ನಿ ಬೇಬಿ ಜೈಸ್ವಾಲ್ ಟೊಯೋಟಾ ಇನ್ನೋವಾ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಇವಿಷ್ಟು ಮಾಹಿತಿ ಬಹಿರಂಗವಾದ ನಂತರ, ತನಿಖಾಧಿಕಾರಿಗಳು ಈಗ ಅವನ ಆದಾಯದ ಮೂಲವನ್ನು ಪರಿಶೀಲಿಸಲು ಬ್ಯಾಂಕ್ ಖಾತೆಯ ವಿವರಗಳನ್ನು ಕಲೆಹಾಕುತ್ತಿದ್ದಾರೆ. ದಾಖಲೆಗಳನ್ನು ಪಡೆದ ನಂತರ, ಆರೋಪಿ ನೈರ್ಮಲ್ಯ ಕಾರ್ಮಿಕ ಸಂತೋಷ್ ಕುಮಾರ್ ಜೈಸ್ವಾಲ್ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಿಸ್ತೂಲ್ ಹಿಡಿದು ಚಿನ್ನ ದೋಚಲು ಬಂದವರನ್ನು ಕೋಲು ಹಿಡಿದು ಓಡಿಸಿದ ಅಂಗಡಿ ಮಾಲೀಕ!

ಜೈಸ್ವಾಲ್ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಈ ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುವಾಗ ಜೈಸ್ವಾಲ್ ಕಡಿಮೆ ವೇತನದೊಂದಿಗೆ ಅಕ್ರಮ ಆಸ್ತಿಯನ್ನು ಹೇಗೆ ಸಂಪಾದಿಸಿದರು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Continue Reading

Latest

Raksha Bandhan 2024: ರಕ್ಷಾ ಬಂಧನದ ಹಿನ್ನೆಲೆ ಏನು? ರಾಖಿ ಕಟ್ಟಲು ಯಾವುದು ಶುಭ ಮುಹೂರ್ತ?

ರಕ್ಷಾ ಬಂಧವನ್ನು ‘ರಾಖಿ ಹಬ್ಬ’, ‘ಅಣ್ಣ ತಂಗಿ’ ಹಬ್ಬ ಎಂದು ಕರೆಯುತ್ತಾರೆ. ರಕ್ಷಾಬಂಧನವು (Raksha Bandhan 2024) ಭಾರತದಲ್ಲಿ ಒಂದು ವಿಶೇಷ ಹಬ್ಬ. ಇದು ಸಹೋದರ ಸಹೋದರಿಯರ ನಡುವಿನ ಬಂಧವನ್ನು ಗಟ್ಟಿಗೊಳಿಸುವಂತಹ ಹಬ್ಬವಾಗಿದೆ. ಈ ಬಾರಿ ರಕ್ಷಾಬಂಧನವನ್ನು ಸೋಮವಾರ, ಆಗಸ್ಟ್ 19ರಂದು ಆಚರಿಸಲಾಗುತ್ತದೆ. ಹಾಗಾಗಿ ಈ ಹಬ್ಬದ ಮುಹೂರ್ತ, ಮಹತ್ವ, ಹಿನ್ನಲೆ ಹಾಗೂ ಆಚರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

VISTARANEWS.COM


on

Raksha Bandhan 2024
Koo


ಶ್ರಾವಣ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನವನ್ನು ನೂಲು ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಈ ದಿನ ರಕ್ಷಾಬಂಧನವನ್ನು ಆಚರಿಸುತ್ತಾರೆ. ಈ ರಕ್ಷಾ ಬಂಧವನ್ನು ‘ರಾಖಿ ಹಬ್ಬ’, ‘ಅಣ್ಣ ತಂಗಿ’ ಹಬ್ಬ ಎಂದೂ ಕರೆಯುತ್ತಾರೆ. ರಕ್ಷಾಬಂಧನವು ಭಾರತದಲ್ಲಿ ಒಂದು ವಿಶೇಷ ಹಬ್ಬವಾಗಿದ್ದು, ಇದು ಸಹೋದರ ಸಹೋದರಿಯರ ನಡುವಿನ ಬಂಧವನ್ನು ಗಟ್ಟಿಗೊಳಿಸುವಂತಹ ಹಬ್ಬವಾಗಿದೆ. ಈ ಬಾರಿ ರಕ್ಷಾಬಂಧನವನ್ನು (Raksha Bandhan 2024) ಸೋಮವಾರ, ಆಗಸ್ಟ್ 19ರಂದು ಆಚರಿಸಲಾಗುತ್ತದೆ. ಹಾಗಾಗಿ ಈ ಹಬ್ಬದ ಮುಹೂರ್ತ, ಮಹತ್ವ, ಹಿನ್ನೆಲೆ ಹಾಗೂ ಆಚರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

Raksha Bandhan 2024
Raksha Bandhan 2024

ರಾಖಿ ಕಟ್ಟಲು ಶುಭ ಮುಹೂರ್ತ ಯಾವುದು?

ಸಮಯ ಬಹಳ ಮುಖ್ಯವಾಗುತ್ತದೆ. ಈ ಬಾರಿ ರಾಖಿ ಮುಹೂರ್ತವು ಬೆಳಗ್ಗೆ 5.50ಕ್ಕೆ ಪ್ರಾರಂಭವಾಗಿ ಸಂಜೆ 6:58ವರೆಗೆ ಇರುತ್ತದೆ. ದೇವರ ಆಶೀರ್ವಾದ ಪಡೆಯಲು ಮತ್ತು ನಿಮ್ಮ ಇಷ್ಟಾರ್ಥಗಳು ಈಡೇರಲು ಈ ಸಮಯದಲ್ಲಿ ರಾಖಿ ಕಟ್ಟುವಂತೆ ಪಂಡಿತರು ಸಲಹೆ ನೀಡಿದ್ದಾರೆ.

Raksha Bandhan 2024
Raksha Bandhan 2024

ರಾಖಿ ಹಬ್ಬದ ಹಿನ್ನೆಲೆ ಏನು?

ರಕ್ಷಾ ಬಂಧನವನ್ನು ಪುರಾತನ ಕಾಲದಿಂದಲೂ ಆಚರಿಸುತ್ತ ಬರಲಾಗಿದೆ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ಹಬ್ಬವು ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ. ಅದರೊಂದಿಗೆ ಅನೇಕ ದಂತಕಥೆಗಳನ್ನು ಹೊಂದಿದೆ.

Raksha Bandhan 2024
Raksha Bandhan 2024

ರಕ್ಷಾ ಬಂಧನಕ್ಕೆ ಸಂಬಂಧಿಸಿದ ಒಂದು ಜನಪ್ರಿಯ ಕಥೆ ಮಹಾಭಾರತದ ಕೃಷ್ಣ-ದ್ರೌಪದಿಯಿಂದ ಬಂದಿದೆ ಎನ್ನಲಾಗಿದೆ. ಶ್ರೀಕೃಷ್ಣನು ಕಬ್ಬಿನ ತುಂಡನ್ನು ಕತ್ತರಿಸುವಾಗ ಅವನ ಬೆರಳಿಗೆ ಗಾಯವಾಯಿತು. ಆಗ ಪಾಂಡವರ ಪತ್ನಿ ದ್ರೌಪದಿ ತನ್ನ ಸೀರೆಯ ತುಂಡನ್ನು ಹರಿದು ಆತನನ್ನು ರಕ್ಷಿಸಲು ಬೆರಳಿಗೆ ಸುತ್ತಿದಳು. ಆಗ ಕೃಷ್ಣನು ಅವಳಲ್ಲಿ ಸಹೋದರ ಪ್ರೇಮವನ್ನು ಕಂಡು ಅಗತ್ಯದ ಸಮಯದಲ್ಲಿ ಅವಳನ್ನು ಕಾಪಾಡುವುದಾಗಿ ಪ್ರತಿಜ್ಞೆ ಮಾಡಿದನು. ಅದರಂತೆ ರಕ್ಷಾ ಬಂಧನವನ್ನು ಅಣ್ಣ-ತಂಗಿ ಹಬ್ಬವೆಂದು ರಾಖಿ ಕಟ್ಟುವ ಮೂಲಕ ಆಚರಿಸಲಾಗುತ್ತದೆ.

Raksha Bandhan 2024
Raksha Bandhan 2024

ಹಾಗೇ ಇನ್ನೊಂದು ಇತಿಹಾಸದ ಕಥೆಯಲ್ಲಿ ಚಿತ್ತೋರಿನ ರಾಣಿ ಕರ್ಣಾವತಿ ಆಕ್ರಮಣಕಾರರ ವಿರುದ್ಧ ಸಹಾಯವನ್ನು ಕೋರಿ ಚಕ್ರವರ್ತಿ ಹುಮಾಯೂನ್‌ಗೆ ರಾಖಿಯನ್ನು ಕಳುಹಿಸಿದಳು. ಆಗ ಹುಮಾಯೂನ್ ತಕ್ಷಣವೇ ಅವಳ ಸಹಾಯಕ್ಕೆ ಬಂದನು ಎನ್ನಲಾಗಿದೆ. ರಾಖಿ ಮೂಲಕ ಅವರ ನಡುವೆ ಸಹೋದರ ಸಹೋದರಿಯ ಸಂಬಂಧ ಬೆಳೆಯಿತು ಎನ್ನಲಾಗಿದೆ.

Raksha Bandhan 2024
Raksha Bandhan 2024

ರಾಖಿ ಹಬ್ಬದ ಆಚರಣೆ

ರಕ್ಷಾ ಬಂಧನ ಸಹೋದರ-ಸಹೋದರಿಯರ ಪ್ರೀತಿಯ ಹಬ್ಬ. ಈ ದಿನ ಸಹೋದರಿಯರು ತಮ್ಮ ಸಹೋದರ ಒಳ್ಳೆಯದಾಗಲೆಂದು ಹಾರೈಸುತ್ತ ಅವರಿಗೆ ಆರತಿ ಬೆಳಗಿ ಕುಂಕುಮ ಹಚ್ಚಿ ಸಿಹಿ ತಿನ್ನಿಸಿ ಅವರ ಕೈಯ ಮಣಿಕಟ್ಟಿನ ಮೇಲೆ ತಮ್ಮ ಪ್ರೀತಿ ಮತ್ತು ಸ್ನೇಹದ ಸಂಕೇತವಾದ ರಾಖಿಯನ್ನು ಕಟ್ಟಿ ದೀರ್ಘಾಯುಷ್ಯವನ್ನು ಹಾರೈಸಿ ಆಶೀರ್ವಾದ ಪಡೆಯುತ್ತಾರೆ. ಇದಕ್ಕೆ ಪ್ರತಿಯಾಗಿ ಸಹೋದರ ಸಹೋದರಿಯನ್ನು ರಕ್ಷಿಸುವ ಭರವಸೆ ನೀಡುತ್ತಾರೆ. ಅಲ್ಲದೇ ಸಹೋದರರು ತಮ್ಮ ಸಹೋದರಿಯರಿಗೆ ಅವರ ಪ್ರೀತಿಯ ಸಂಕೇತವಾಗಿ ಅವರಿಗಿಷ್ಟವಾದ ಉಡುಗೊರೆಗಳನ್ನು ನೀಡುವುದು ಸಾಮಾನ್ಯವಾಗಿದೆ. ಕೊನೆಗೆ ಕುಟುಂಬಗಳೊಂದಿಗೆ ಹಬ್ಬದ ಊಟವನ್ನು ಸವಿಯುತ್ತಾರೆ. ಆದರೆ ಕೆಲವೊಮ್ಮೆ ದೂರ ದೂರ ಇರುವ ಸಹೋದರ ಸಹೋದರಿಯರು ಭೇಟಿ ಆಗಲು ಸಾಧ್ಯವಾಗದಿದ್ದಾಗ ಅವರಿಗೆ ರಾಖಿಯನ್ನು ಕಳುಹಿಸಿಕೊಡುತ್ತಾರೆ.

ರಾಖಿ ಹಬ್ಬದ ಮಹತ್ವ ಏನು?

ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಹಬ್ಬವಾಗಿದೆ. ಇದು ಒಡಹುಟ್ಟಿದವರ ನಡುವೆ ಪ್ರೀತಿ ಮತ್ತು ಬೆಂಬಲವನ್ನು ಹೆಚ್ಚಿಸುತ್ತದೆ. ಸಹೋದರಿಯರು ತಮ್ಮ ಸಹೋದರರ ಸಮೃದ್ಧಿ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸಿದರೆ ಸಹೋದರರು ಸಹೋದರಿಯರನ್ನು ರಕ್ಷಿಸುವ ಪ್ರತಿಜ್ಞೆ ಮಾಡುತ್ತಾರೆ. ರಕ್ಷಾಬಂಧನ ಯುಗಯುಗಾಂತರಗಳಿಂದ ಬಂದಿರುವ ಒಂದು ಸಾಂಪ್ರದಾಯಿಕ ಹಬ್ಬವಾಗಿದೆ. ಇದು ಕುಟುಂಬದ ನಡುವೆ ಪ್ರೀತಿ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ಮೂಡಿಸುತ್ತದೆ.

ಇದನ್ನೂ ಓದಿ: ಅಪಹರಣಕಾರನಿಂದ ಪುಟ್ಟ ಮಗುವನ್ನು ರಕ್ಷಿಸಿದ ಸಾಕು ನಾಯಿ! ನಾಯಿಯ ಸಾಹಸದ ವಿಡಿಯೊ ನೋಡಿ

ಒಟ್ಟಾರೆ ಈ ವರ್ಷದಲ್ಲಿ ಬರುವ ಈ ರಕ್ಷಾಬಂಧನವನ್ನು ನಿಮ್ಮ ಸಹೋದರ ಸಹೋದರಿಯರ ಜೊತೆ ವಿಜೃಂಭಣೆಯಿಂದ ಆಚರಿಸಿ ನಿಮ್ಮ ನಡುವಿನ ಸಂಬಂಧವನ್ನು ಗಟ್ಟಿಗೊಳಿಸಿ. ನಿಮ್ಮ ಸಹೋದರ-ಸಹೋದರಿ ಪ್ರೇಮ ದೀರ್ಘಕಾಲದವರೆಗೆ ಒಳ್ಳೆ ರೀತಿಯಲ್ಲಿ ಇರಲೆಂದು ದೇವರಲ್ಲಿ ಪ್ರಾರ್ಥಿಸಿ.

Continue Reading

ಆರೋಗ್ಯ

Benefits Of Apples: ದಿನಕ್ಕೊಂದು ಸೇಬು ತಿನ್ನಲು ಇಲ್ಲಿವೆ 10 ಕಾರಣ!

ನೋಡಲು ಆಕರ್ಷಕ, ತಿನ್ನಲು ರುಚಿಯಾಗಿರುವ ಈ ಹಣ್ಣು ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಮೆಚ್ಚಿಕೊಂಡು ತಿನ್ನುತ್ತಾರೆ. ಸೇಬಿನಲ್ಲಿರುವ ಹಲವಾರು ಪೋಷಕಾಂಶಗಳು ದೇಹಕ್ಕೆ ತುಂಬಾ ಒಳ್ಳೆಯದು. ಇದರಿಂದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಸೇಬು ತಿನ್ನುವುದರಿಂದ (Benefits Of Apples) ಏನೆಲ್ಲಾ ಪ್ರಯೋಜನವಿದೆ ಗೊತ್ತೇ?

VISTARANEWS.COM


on

By

Benefits Of Apples
Koo

ದಿನಕ್ಕೊಂದು ಸೇಬು (apple) ತಿನ್ನಿ, ವೈದ್ಯರನ್ನು ದೂರವಿಡಿ ಎನ್ನುವ ಮಾತಿದೆ. ಆದರೆ ಇದು ಎಷ್ಟು ಪರಿಣಾಮಕಾರಿಯೂ ಗೊತ್ತಿಲ್ಲ. ಆದರೆ ಸೇಬು ತಿನ್ನುವುದು (Benefits Of Apples) ಆರೋಗ್ಯಕ್ಕೆ (health) ಸಾಕಷ್ಟು ಪ್ರಯೋಜನವನ್ನು ಕೊಡುತ್ತದೆ. ವಿವಿಧ ರೀತಿಯ ವಿಟಮಿನ್, ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳಾಗಿರುವಂತಹ ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಪೊಟಾಶಿಯಂ ಅನ್ನು ಹೊಂದಿರುವ ಸೇಬು ಹಣ್ಣು ಸೇವಿಸುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ನೋಡಲು ಆಕರ್ಷಕ, ತಿನ್ನಲು ರುಚಿಯಾಗಿರುವ ಈ ಹಣ್ಣು ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಮೆಚ್ಚಿಕೊಂಡು ತಿನ್ನುತ್ತಾರೆ. ಸೇಬಿನಲ್ಲಿರುವ ಹಲವಾರು ಪೋಷಕಾಂಶಗಳು ದೇಹಕ್ಕೆ ತುಂಬಾ ಒಳ್ಳೆಯದು. ಇದರಿಂದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಸೇಬು ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತೇ?


ಸಮೃದ್ಧವಾಗಿರುವ ಪೌಷ್ಟಿಕಾಂಶ

ಸೇಬಿನಲ್ಲಿ ಫೈಬರ್, ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ವಿವಿಧ ಉತ್ಕರ್ಷಣ ನಿರೋಧಕಗಳು ಸೇರಿದಂತೆ ಅಗತ್ಯವಾದ ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ. ಈ ಪೋಷಕಾಂಶಗಳು ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತದೆ.

ಹೃದಯದ ಆರೋಗ್ಯಕ್ಕಾಗಿ

ಸೇಬಿನಲ್ಲಿರುವ ಫೈಬರ್, ವಿಶೇಷವಾಗಿ ಪೆಕ್ಟಿನ್ ಎಂದು ಕರೆಯಲ್ಪಡುವ ಕರಗುವ ಫೈಬರ್, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೇಬುಗಳು ಫ್ಲೇವನಾಯ್ಡ್‌ ಮತ್ತು ಪಾಲಿಫಿನಾಲ್‌ಗಳಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ

ಸೇಬಿನಲ್ಲಿ ಫೈಬರ್‌ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದು ಆರೋಗ್ಯಕರ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಯನ್ನು ಬೆಂಬಲಿಸುತ್ತದೆ. ಫೈಬರ್ ಕರುಳಿನ ಚಲನೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ತೂಕ ನಿರ್ವಹಣೆಗೆ ಸೂಕ್ತ

ಸೇಬಿನಲ್ಲಿರುವ ಫೈಬರ್ ಮತ್ತು ನೀರಿನ ಅಂಶವು ಪೂರ್ಣತೆಯ ಭಾವನೆಗೆ ಕೊಡುಗೆ ನೀಡುತ್ತದೆ, ಇದು ಹಸಿವನ್ನು ನಿಯಂತ್ರಿಸಲು ಮತ್ತು ತೂಕ ನಿರ್ವಹಣೆಯನ್ನು ಬೆಂಬಲಿಸಲು ಸಹಾಯ ಮಾಡುತ್ತದೆ.


ಪ್ರತಿರಕ್ಷಣಾ ವ್ಯವಸ್ಥೆ ಹೆಚ್ಚಳ

ಸೇಬಿನಲ್ಲಿರುವ ವಿಟಮಿನ್ ಸಿ ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಬೆಂಬಲಿಸುವ ಮೂಲಕ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ ಮತ್ತು ಸೋಂಕುಗಳ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನು ಸುಧಾರಿಸುತ್ತದೆ.

ಆರೋಗ್ಯಕರ ಚರ್ಮಕ್ಕಾಗಿ

ಸೇಬಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಚರ್ಮವನ್ನು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಕಾಲಜನ್ ಉತ್ಪಾದನೆಯನ್ನು ಬೆಂಬಲಿಸುತ್ತದೆ ಮತ್ತು ಆರೋಗ್ಯಕರ ಮೈಬಣ್ಣಕ್ಕೆ ಕೊಡುಗೆ ನೀಡುತ್ತದೆ.

ಮೂಳೆ ಆರೋಗ್ಯಕ್ಕೆ ಪ್ರಯೋಜನ

ಸೇಬುಗಳು ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್‌ನಂತಹ ವಿವಿಧ ಖನಿಜಗಳನ್ನು ಹೊಂದಿರುತ್ತವೆ. ಇದು ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಮುಖ್ಯವಾಗಿದೆ.


ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆ

ನಿಯಮಿತ ಸೇಬಿನ ಸೇವನೆಯು ಟೈಪ್ 2 ಮಧುಮೇಹ ಮತ್ತು ಕೆಲವು ಕ್ಯಾನ್ಸರ್‌ಗಳಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಮೆದುಳಿನ ಆರೋಗ್ಯಕ್ಕೆ ಸಹಕಾರಿ

ಸೇಬುಗಳಲ್ಲಿನ ಉತ್ಕರ್ಷಣ ನಿರೋಧಕಗಳು ಮೆದುಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಲು ಮತ್ತು ಅರಿವಿನ ಕಾರ್ಯವನ್ನು ಬೆಂಬಲಿಸಲು ಸಹಾಯ ಮಾಡುತ್ತದೆ. ಇದು ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Benefits Of Onion Hair Oil: ಕೂದಲು ಬಿಳಿಯಾಗುತ್ತಿದೆಯೆ? ಈರುಳ್ಳಿ ತೈಲವನ್ನು ಈ ರೀತಿ ಬಳಸಿ

ದೇಹವನ್ನು ಹೈಡ್ರೇಟ್ ಇರಿಸುತ್ತದೆ

ಸೇಬುಗಳು ಹೆಚ್ಚಿನ ನೀರಿನ ಅಂಶವನ್ನು ಹೊಂದಿರುತ್ತವೆ. ಇದು ದೇಹವನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ ಮತ್ತು ಒಟ್ಟಾರೆ ದೈಹಿಕ ಕಾರ್ಯಗಳನ್ನು ಬೆಂಬಲಿಸುತ್ತದೆ.

ನಿಮ್ಮ ಆಹಾರದಲ್ಲಿ ಸೇಬುಗಳನ್ನು ಸೇರಿಸಿಕೊಳ್ಳುವುದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ ಮತ್ತು ಒಟ್ಟಾರೆ ಯೋಗಕ್ಷೇಮಕ್ಕೆ ಕೊಡುಗೆ ನೀಡುತ್ತದೆ.

Continue Reading
Advertisement
Bridge Collapse
ವೈರಲ್ ನ್ಯೂಸ್11 mins ago

Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

Manu Bhaker
ಕ್ರೀಡೆ27 mins ago

Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

Physical Abuse
ದೇಶ1 hour ago

Physical Abuse: ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ; ಬೆಚ್ಚಿಬೀಳಿಸುವ ಅಂಕಿ-ಅಂಶ ಬಹಿರಂಗ

Actor Nagabhushan birthday vidhyapathi promo Out
ಸ್ಯಾಂಡಲ್ ವುಡ್2 hours ago

Actor Nagabhushan: ನಾಗಭೂಷಣ್ ಬರ್ತ್‌ಡೇಗೆ ಡಾಲಿ ತಂಡದಿಂದ ಸ್ಪೆಷಲ್ ಗಿಫ್ಟ್‌; ನೋಡಿ ‘ವಿದ್ಯಾಪತಿ’ಯ ಕಿತಾಪತಿ!

Vinesh Phogat
ಕ್ರೀಡೆ2 hours ago

Vinesh Phogat: ತವರಿಗೆ ಮರಳಿದ ವಿನೇಶ್​​​ ಫೋಗಟ್​ಗೆ ಭರ್ಜರಿ ಸ್ವಾಗತ; ಅಭಿಮಾನಿಗಳನ್ನು ಕಂಡು ಕಣ್ಣೀರು

Government Employees
ಕರ್ನಾಟಕ2 hours ago

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಇಂದು ಸಿಎಂ, ಡಿಸಿಎಂಗೆ ಸನ್ಮಾನ; Live ಇಲ್ಲಿದೆ

Viral Video
Latest2 hours ago

Viral Video: ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಿದ; ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ!

Crorepati Sweeper
Latest2 hours ago

Crorepati Sweeper: ಕಸ ಗುಡಿಸುವ ಕಾರ್ಮಿಕನ ಬಳಿ ಇತ್ತು ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ! ಆತ ಸಂಪಾದಿಸಿದ್ದು ಹೇಗೆ?

70th National Film Awards ational Award winner Madhyantara Short Movie
ಸ್ಯಾಂಡಲ್ ವುಡ್2 hours ago

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

Viral Video
Latest2 hours ago

Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌