Viral Video: ಮಗನನ್ನು ಕೊಲ್ಲಲು ಕತ್ತಿ ಬೀಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ! ವಿಡಿಯೊ ನೋಡಿ - Vistara News

Latest

Viral Video: ಮಗನನ್ನು ಕೊಲ್ಲಲು ಕತ್ತಿ ಬೀಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ! ವಿಡಿಯೊ ನೋಡಿ

ಮಹಾರಾಷ್ಟ್ರದ ಕೊಲ್ಹಾಪುರ (Viral Video) ಜಿಲ್ಲೆಯಲ್ಲಿ ಹಾಡಹಗಲೇ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮೇಲೆ ಹಿಂದಿನಿಂದ ಹಲ್ಲೆ ನಡೆಸಿದ ಪರಿಣಾಮ ಅವರು ಗಾಯಗೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೊದಲ್ಲಿ, ವ್ಯಕ್ತಿಯೊಬ್ಬರು ತನ್ನ ತಾಯಿಯ ಜೊತೆ ಮಾತನಾಡುತ್ತಾ ಸ್ಕೂಟರ್‌ನಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದಾಗ ಆಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಹಠಾತ್ ದಾಳಿಗೆ ಹೆದರದ ಮಹಿಳೆ ಬೇಗನೆ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಕಲ್ಲನ್ನು ಎತ್ತಿಕೊಂಡು ದಾಳಿಕೋರರನ್ನು ಬೆನ್ನಟ್ಟಿದ್ದಾಳೆ. ಇದನ್ನು ನೋಡಿದ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ತಾಯಿ ಯಾವಾಗಲೂ ತನ್ನ ಮಕ್ಕಳ ರಕ್ಷಣೆಗೆ ಸದಾ ಸಿದ್ಧಳಾಗಿರುತ್ತಾಳೆ. ಎಂತಹ ಪರಿಸ್ಥಿತಿ ಬಂದರೂ ಹೆದರದೆ ತನ್ನ ಪ್ರಾಣವನ್ನು ನೀಡಿಯಾದರೂ ತನ್ನ ಮಕ್ಕಳ ರಕ್ಷಣೆ ಮಾಡುತ್ತಾಳೆ. ಅಂತಹ ಮಹಾನ್ ತಾಯಿಯೊಬ್ಬಳು ಇತ್ತೀಚೆಗೆ ತನ್ನ ಮಗನನ್ನು ದುಷ್ಕರ್ಮಿಗಳಿಂದ ಕಾಪಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಗನ ಮೇಲೆ ನಡೆದ ಆಘಾತಕಾರಿ ದಾಳಿ ಹಾಗೂ ತಾಯಿಯ ಸಾಹಸದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video)ಆಗಿ ಎಲ್ಲರ ಗಮನ ಸೆಳೆಯುತ್ತಿದೆ. ಅಲ್ಲದೇ ಈ ಘಟನೆ ಆ ಪ್ರದೇಶದ ಜನರ ಮನದಲ್ಲಿ ಆತಂಕವನ್ನು ಉಂಟುಮಾಡಿದೆ.

ವರದಿಗಳ ಪ್ರಕಾರ, ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಹಾಡಹಗಲೇ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮೇಲೆ ಹಿಂದಿನಿಂದ ಹಲ್ಲೆ ನಡೆಸಿದ ಪರಿಣಾಮ ಅವರು ಗಾಯಗೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೊದಲ್ಲಿ, ವ್ಯಕ್ತಿಯೊಬ್ಬರು ತನ್ನ ತಾಯಿಯ ಜೊತೆ ಮಾತನಾಡುತ್ತಾ ಸ್ಕೂಟರ್‌ನಲ್ಲಿ ರಸ್ತೆಯ ಬದಿಯಲ್ಲಿ ನಿಂತಿದ್ದಾರೆ. ಆಗ ಬೈಕ್‍ನಲ್ಲಿ ಬಂದ ಇಬ್ಬರು ಪುರುಷರು, ತಾಯಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿಯ ಕಡೆಗೆ ಬಂದು ಅದರಲ್ಲಿ ಒಬ್ಬ ಹಿಂದಿನಿಂದ ವ್ಯಕ್ತಿಯ ಮೇಲೆ ದಾಳಿ ಮಾಡುತ್ತಾರೆ. ಆಗ ಹಠಾತ್ ದಾಳಿಗೆ ಹೆದರದ ಮಹಿಳೆ ಬೇಗನೆ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಕಲ್ಲನ್ನು ಎತ್ತಿಕೊಂಡು ದಾಳಿಕೋರರನ್ನು ಬೆನ್ನಟ್ಟಲು ಪ್ರಾರಂಭಿಸುತ್ತಾಳೆ. ಇದನ್ನು ನೋಡಿದ ದಾಳಿಕೋರರು ಬೈಕ್‍ನಲ್ಲಿ ಸ್ಥಳದಿಂದ ಪರಾರಿಯಾಗಿದ್ದು, ಆಕೆಯ ಮಗ ಕೂಡ ಕಲ್ಲನ್ನು ಎತ್ತಿಕೊಂಡು ಅವರ ಹಿಂದೆ ಓಡಿದ್ದಾನೆ.

ಈ ದೃಶ್ಯ ಅಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ವರದಿಯ ಪ್ರಕಾರ, ಸಿಸಿಟಿವಿ ದೃಶ್ಯಾವಳಿಗಳು ಕೊಲ್ಹಾಪುರದ ಶಾಹು ನಗರ ಪ್ರದೇಶದಿಂದ ಬಂದಿವೆ ಎನ್ನಲಾಗಿದೆ. ಹಗಲು ಹೊತ್ತಿನಲ್ಲಿ ಮಾರುಕಟ್ಟೆಯ ಜೆರಾಕ್ಸ್ ಅಂಗಡಿಯ ಮುಂದೆ ಈ ಘಟನೆ ನಡೆದಿದೆ. ಸಿಸಿಟಿವಿ ವಿಡಿಯೊದಲ್ಲಿ ಈ ಘಟನೆ ಮಧ್ಯಾಹ್ನ ನಡೆದಿದೆ ಎಂದು ಸೂಚಿಸುತ್ತದೆ. ಆದಾಗ್ಯೂ, ಘಟನೆಯ ನಿಖರವಾದ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಇದನ್ನೂ ಓದಿ:ತಾಯಿಯೊಂದಿಗೆ ಮಲಗಿದ್ದ 3 ವರ್ಷದ ಹೆಣ್ಣು ಮಗುವನ್ನುಎಳೆದೊಯ್ದು ಅತ್ಯಾಚಾರ ಎಸಗಿದ ಪಾಪಿ

ಹಲ್ಲೆಗೊಳಗಾದ ವ್ಯಕ್ತಿಯನ್ನು ಸುನಿಲ್ ರಾಮಪ್ಪ ಲಮಾಣಿ ಎಂದು ಗುರುತಿಸಲಾಗಿದೆ. ಇವರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ವಿನೋದ್ ಕಾಸು ಪವಾರ್, ಅರವಿಂದ್ ಕಾಸು ಪವಾರ್ ಮತ್ತು ವಿನೋದ್ ಬಾಬು ಜಾಧವ್ ಎಂಬ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮತ್ತು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ನೆರೆಹೊರೆಯವರೊಂದಿಗೆ ಜಗಳವಾಡುತ್ತಲೇ ಹೃದಯಾಘಾತದಿಂದ ಸತ್ತ ಮಹಿಳೆ!

ಪುಣೆಯ ಕಲ್ಯಾಣಿನಗರದಲ್ಲಿ ಮಹಿಳೆಯೊಬ್ಬಳು ಪೀಠೋಪಕರಣಗಳ (Viral Video) ರಿಪೇರಿ ವಿಚಾರವಾಗಿ ನೆರೆಹೊರೆಯವರೊಂದಿಗೆ ಜಗಳವಾಡಿದ್ದಾಳೆ. ಈ ಸಮಯದಲ್ಲಿ ಮಹಿಳೆ ಅಸ್ವಸ್ಥಳಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ ಎಂಬುದಾಗಿ ತಿಳಿದು ಬಂದಿದೆ. ಮಹಿಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ಜೋರು ದನಿಯಲ್ಲಿ ಜಗಳವಾಡುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ.

VISTARANEWS.COM


on

Viral Video
Koo


ಪುಣೆ: ಕ್ಷುಲ್ಲಕ ಕಾರಣಕ್ಕೆ ನೆರೆಹೊರೆಯವರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿರುವುದನ್ನು ನಾವು ನಮ್ಮ ಸುತ್ತಮುತ್ತಲೂ ಯಾವಾಗಲೂ ನೋಡುತ್ತಿರುತ್ತೇವೆ. ಇಂತಹ ಜಗಳಗಳು ಕೆಲವೊಮ್ಮೆ ತೀವ್ರ ಸ್ವರೂಪ ತಾಳಿದಾಗ ಇದರಿಂದ ಅನೇಕ ಅನಾಹುತಗಳು ಸಂಭವಿಸಿತ್ತು. ಇಷ್ಟಾದರೂ ಜನರಲ್ಲಿ ಸುಧಾರಣೆ ಎಂಬುದೇ ಕಂಡುಬಂದಿಲ್ಲ. ಇದೀಗ ಅಂತಹದೊಂದು ಘಟನೆ ಪುಣೆಯಲ್ಲಿ ನಡೆದಿದೆ. ಪೀಠೋಪಕರಣಗಳ ರಿಪೇರಿ ವಿಚಾರವಾಗಿ ನೆರೆಹೊರೆಯವರೊಂದಿಗೆ ತೀವ್ರ ವಾಗ್ವಾದ ನಡೆಸಿದ ಮಹಿಳೆಯೊಬ್ಬರು ನಂತರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಪುಣೆಯ ಕಲ್ಯಾಣಿನಗರದಲ್ಲಿ ಶನಿವಾರ ಮಹಿಳೆಯೊಬ್ಬಳು ಪೀಠೋಪಕರಣಗಳ ರಿಪೇರಿ ವಿಚಾರವಾಗಿ ನೆರೆಹೊರೆಯವರೊಂದಿಗೆ ಜಗಳವಾಡಿದ್ದಾಳೆ.ಈ ಘಟನೆಯ ನಂತರ 65 ವರ್ಷದ ಮಹಿಳೆ ಸಾವನಪ್ಪಿದ್ದಾಳೆ. ಮೃತ ಮಹಿಳೆ ತಾರಾ ರಾಜಾರಾಮ್ ಅಗರ್ವಾಲ್ ಎಂಬುದಾಗಿ ತಿಳಿದುಬಂದಿದೆ. ಸ್ನೇಹಿತನ ಫ್ಲಾಟ್‍ನಲ್ಲಿ ಪೀಠೋಪಕರಣಗಳ ದುರಸ್ತಿ ಕಾರ್ಯದಿಂದ ಬಂದ ಧೂಳು ಪಕ್ಕದ ಅಪಾರ್ಟ್ಮೆಂಟ್‍ಗೆ ಹರಡಿತು. ಈ ವಿಚಾರಕ್ಕೆ ಅಪಾರ್ಟ್‍ಮೆಂಟ್ ಸದಸ್ಯರ ಮಧ್ಯ ಜಗಳ ನಡೆದಿದೆ. ಸೊಸೈಟಿಯ ನಿರ್ವಹಣಾ ಮಂಡಳಿಯ ಸದಸ್ಯರಾಗಿರುವ ಅಗರ್ವಾಲ್ ಅವರ ಮಗ ಈ ಗಲಾಟೆಯಲ್ಲಿ ಭಾಗಿಯಾದ ಕಾರಣ ಈ ಜಗಳ ದೊಡ್ಡದಾಗಿದೆ.

ಇದರಿಂದ ತೀವ್ರ ವಾಗ್ವಾದ ನಡೆಯಿತು, ಈ ಸಮಯದಲ್ಲಿ ಅಗರ್ವಾಲ್ ಅಸ್ವಸ್ಥಳಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಮಹಿಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸೊಸೈಟಿಯ ನಿವಾಸಿ ಮತ್ತು ಮೃತರ ಸಂಬಂಧಿ ಕೇತನ್ ಅಗರ್ವಾಲ್, ಕುಟುಂಬವು ಅಂತಿಮ ವಿಧಿಗಳನ್ನು ನಡೆಸುತ್ತಿದೆ ಮತ್ತು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ. ಕುಟುಂಬವು ಈ ಬಗ್ಗೆ ಸುಧಾರಿಸಿಕೊಂಡ ನಂತರ ಅಪರಾಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಗನನ್ನು ಕೊಲ್ಲಲು ಕತ್ತಿ ಬೀಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ! ವಿಡಿಯೊ ನೋಡಿ

ಈ ಘಟನೆಯು ಪರಿಹರಿಸಲಾಗದ ಸಂಘರ್ಷಗಳಿಂದ ಎಂತಹ ವಿನಾಶಕಾರಿ ಪರಿಣಾಮಗಳು ಉಂಟಾಗುತ್ತದೆ ಎಂಬುದನ್ನು ತೋರಿಸುತ್ತದೆ. ಮತ್ತು ಕ್ಷುಲ್ಲಕ ವಿವಾದಗಳನ್ನು ಪರಿಹರಿಸುವಲ್ಲಿ ಅನುಭೂತಿ ಮತ್ತು ತಿಳಿವಳಿಕೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ.

Continue Reading

ಬೆಂಗಳೂರು

Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

ನಿರ್ದೇಶಕಿ ಸಂಜೋತ ಭಂಡಾರಿ ಅವರು ಕಥೆ ಬರೆದು ನಿರ್ದೇಶಿಸಿರುವ “ಲಂಗೋಟಿ ಮ್ಯಾನ್” ಚಿತ್ರದ (Kannada New Movie) ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ (Kannada New Movie) ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ನಾನು ಹತ್ತು ವರ್ಷಗಳ ಹಿಂದೆ “ಮಿರ್ಚಿ ಮಂಡಕ್ಕಿ ಖಡಕ್ ಚಾಯ್” ಚಿತ್ರವನ್ನು ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕಿ ಸಂಜೋತ ಭಂಡಾರಿ, ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಾನ್ಸೆಪ್ಟ್ ಬಂತು‌. ಆ ಚಿತ್ರದ ಕಥೆ ಮಾಡುತ್ತಿದ್ದಾಗಲೂ ನನಗೆ ಇದೇ ಕಥೆ ತಲೆಗೆ ಬರುತ್ತಿತ್ತು. ಕೊನೆಗೆ “ಲಂಗೋಟಿ ಮ್ಯಾನ್” ಸಿನಿಮಾ ಸ್ವರೂಪ ಪಡೆದುಕೊಂಡಿತು.

ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ “ಲಂಗೋಟಿ” ನೇ. ಆಕಾಶ್ ರಾಂಬೊ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಗಿಲ್ಲಿ ನಟ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ‌. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ. ಚಿತ್ರ ಗೆಲುವ ವಿಶ್ವಾಸ ನನಗಂತೂ ಇದೆ‌. ಟೀಸರ್ ಬಿಡುಗಡೆ ಮಾಡಿಕೊಟ್ಟ ಶರಣ್ ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ತಂಡಕ್ಕೆ ಧನ್ಯವಾದ ಎಂದರು‌.

ಈ ಸಮಾರಂಭಕ್ಕೆ ಬಂದು ನಿರ್ದೇಶಕರ ಮಾತು ಕೇಳಿದ ಮೇಲೆ ಅವರಿಗೆ ಚಿತ್ರದ ಮೇಲಿರುವ ಭರವಸೆ ಹಾಗೂ ತಾವೊಬ್ಬರೆ ಕ್ರೆಡಿಟ್ ತೆಗೆದುಕೊಳ್ಳದೆ, ಚಿತ್ರತಂಡದ ಪ್ರತಿಯೊಬ್ಬರನ್ನು ಪರಿಚಯಿಸಿದ ರೀತಿ ಕಂಡು ಸಂತೋಷವಾಯಿತು. ಈಗಂತೂ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನೇ ಜನ ಹೆಚ್ಚು ಇಷ್ಟಪಡುತ್ತಿದ್ದಾರೆ. ಆ ಸಾಲಿಗೆ “ಲಂಗೋಟಿ ಮ್ಯಾನ್” ಸಹ ಸೇರಲಿ ಎಂದು ನಟ ಶರಣ್ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೌತ್ ಡಿಸಿಸಿ ಪ್ರೆಸಿಡೆಂಟ್ ಓ. ಮಂಜುನಾಥ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಚಿತ್ರದಲ್ಲಿ ನಟಿಸಿರುವ ಆಕಾಶ್ ರಾಂಬೊ, ಧೀರೇಂದ್ರ, ಸಂಹಿತ ವಿನ್ಯ ಮುಂತಾದ ಕಾಲವಿದರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

“ಲಂಗೋಟಿ ಮ್ಯಾನ್” ಚಿತ್ರದ ಟೀಸರ್ ‌ಹಾಗೂ ಪೋಸ್ಟರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟೀಸರ್ ನೋಡಿದಾಗ ಮನೋರಂಜನಾ ಪ್ರಧಾನ ಚಿತ್ರ ಎನಿಸಿದರೂ, ಚಿತ್ರದ ಮೂಲಕ‌‌ ಬೇರೊಂದು ವಿಷಯವನ್ನು ಹೇಳ ಹೊರಟಿರುವುದು ತಿಳಿಯುತ್ತದೆ.‌

Continue Reading

Latest

Viral Video: ಈಜಲು ಹೋಗಿದ್ದವನ ಶರ್ಟ್‍ನೊಳಗೆ ನುಸುಳಿದ ಬೃಹತ್‌ ಹಾವು! ಮುಂದೇನಾಯ್ತು ನೋಡಿ

ವ್ಯಕ್ತಿಯೊಬ್ಬ ಈಜಲು (Viral Video) ನದಿಯೊಂದಕ್ಕೆ ಇಳಿದಿದ್ದಾನೆ. ಅಲ್ಲಿ ಆತ ಖುಷಿಯಿಂದ ಈಜಲು ಶುರು ಮಾಡಿದ್ದಾನೆ. ಈ ಮಧ್ಯೆ, ತನ್ನ ಬಟ್ಟೆಗಳಿಂದ ಏನೋ ಜಾರಿದಂತೆ ಅವನಿಗೆ ಅನಿಸಿತು. ನೀರಿನಿಂದ ಮೇಲೆ ಬಂದು ತನ್ನ ಬಟ್ಟೆಯನ್ನು ಮೇಲಕ್ಕೆತ್ತಿದಾಗ ಅದರೊಳಗೆ ದೊಡ್ಡ ಹಾವು ಸೇರಿಕೊಂಡಿರುವುದು ಕಂಡುಬಂದಿದೆ. ಹೆದರಿದ ಆತ ಅದು ಎಲ್ಲಿ ತನಗೆ ಕಚ್ಚುತ್ತದೆಯೋ ಎಂದು ಭಯಭೀತನಾಗಿ ಕೊನೆಗೆ ಹಾವನ್ನು ಹಿಡಿದು ಹೊರಗೆ ಎಸೆದು ಬಹಳ ದೂರ ಓಡಿದ್ದಾನೆ. ಈ ಕುರಿತ ವಿಡಿಯೊ ಇಲ್ಲಿದೆ.

VISTARANEWS.COM


on

Viral Video
Koo


ಹಾವುಗಳನ್ನು ನೋಡಿದಾಗ ಬಹುತೇಕ ಜನ ಹೆದರಿ ಓಡಿ ಹೋಗುತ್ತಾರೆ. ಕಾಡುಗಳು, ಕೊಳಗಳು ಮತ್ತು ದಟ್ಟವಾದ ಮರಗಳಲ್ಲಿ ಹಾವುಗಳು ಹೆಚ್ಚಾಗಿ ಕಂಡುಬರುತ್ತವೆ. ಇದೇ ಹಾವು ನಮ್ಮ ಮೈಮೇಲೆ ಕಂಡುಬಂದರೆ ನಮ್ಮ ಪರಿಸ್ಥಿತಿ ಏನಾಗಬಹುದು ಎಂದು ಊಹಿಸಲೂ ಸಾಧ್ಯವಿಲ್ಲ. ಹಾಗೆಯೇ ಹಾವುಗಳಿಗೆ ಸಂಬಂಧಪಟ್ಟ ವಿವಿಧ ರೀತಿಯ ವಿಡಿಯೊಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತದೆ. ಕೆಲವು ತುಂಬಾ ವೈರಲ್ ಆಗುತ್ತವೆ. ಅದೇರೀತಿ ಇತ್ತೀಚೆಗೆ ಹಾವಿನ ಸಂಬಂಧಪಟ್ಟ ಆಘಾತಕಾರಿ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗುತ್ತಿದೆ.

ಇತೀಚೆಗೆ ಭಾರೀ ಮಳೆಯಿಂದಾಗಿ ಅಣೆಕಟ್ಟುಗಳು ಮತ್ತು ಕೊಳಗಳು ತುಂಬಿ ಹರಿಯುತ್ತಿವೆ. ಹೀಗಾಗಿ ಅನೇಕ ಜನರು ಅಣೆಕಟ್ಟುಗಳು ಮತ್ತು ಕೊಳಗಳಿಗೆ ಹೋಗಿ ಈಜುವುದು, ಸ್ನಾನ ಮಾಡುವುದು ಸಹಜ. ಇತ್ತೀಚೆಗೆ ಒಬ್ಬ ವ್ಯಕ್ತಿ ಈಜಲು ನದಿಯೊಂದಕ್ಕೆ ಇಳಿದಿದ್ದಾನೆ. ಅಲ್ಲಿ ಆತ ಖುಷಿಯಿಂದ ಈಜಲು ಶುರುಮಾಡಿದ್ದಾನೆ. ಈ ಮಧ್ಯೆ, ತನ್ನ ಬಟ್ಟೆಗಳಿಂದ ಏನೋ ಜಾರಿದಂತೆ ಅವನಿಗೆ ಅನಿಸಿತು. ಅವನು ನೀರಿನಿಂದ ಮೇಲೆ ಬಂದು ತನ್ನ ಬಟ್ಟೆಯನ್ನು ಮೇಲಕ್ಕೆತ್ತಿದಾಗ ಅದರೊಳಗೆ ದೊಡ್ಡ ಹಾವು ಸೇರಿಕೊಂಡಿರುವುದು ಕಂಡುಬಂದಿದೆ. ಆಗ ಆತನ ಸ್ಥಿತಿ ಊಹಿಸಲು ಅಸಾಧ್ಯ. ಹೆದರಿದ ಆತ ಅದು ಎಲ್ಲಿ ತನಗೆ ಕಚ್ಚುತ್ತದೆ ಎಂದು ಭಯ ಭೀತನಾಗಿ ಕೊನೆಗೆ ಹಾವನ್ನು ಹಿಡಿದು ಹೊರಗೆ ಎಸೆದು ಬಹಳ ದೂರಓಡಿದ್ದಾನೆ. ಆದರೆ ಆತನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ನಗುತ್ತಿದ್ದಾರೆ. ಇದು ಟ್ವಿಸ್ಟ್ ಎಂದು ತಮಾಷೆಯ ಕಾಮೆಂಟ್‍ಗಳನ್ನು ಮಾಡಿದ್ದಾರೆ. ಮಳೆಗಾಲದಲ್ಲಿ ಉಕ್ಕಿ ಹರಿಯುವ ನದಿಗಳಿಗೆ ಇಳಿಯುವುದು ಎಷ್ಟು ಅಪಾಯಕಾರಿ ಎಂಬುದನ್ನು ಈ ವಿಡಿಯೊ ತಿಳಿಸುತ್ತದೆ.

ಈ ಹಿಂದೆ ಈ ವರ್ಷದ ಜುಲೈ ಆರಂಭದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಇದೇ ತರಹದ ವಿಡಿಯೊವೊಂದು ವೈರಲ್ ಆಗಿತ್ತು. ಅದರಲ್ಲಿ ಜಲಪಾತದಲ್ಲಿ ಎಂಜಾಯ್ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಪ್ಯಾಂಟ್‍ನೊಳಗೆ ಹಾವೊಂದು ಸೇರಿಕೊಂಡಿತ್ತು. ಈ ವಿಡಿಯೊದಲ್ಲಿ, ಕೆಲವು ಯುವಕರು ಎತ್ತರದಿಂದ ಬೀಳುವ ಜಲಪಾತದ ಕೆಳಗೆ ಮೋಜು ಮಾಡುತ್ತಿರುವುದನ್ನು ನೀವು ನೋಡಬಹುದು.

ಇದನ್ನೂ ಓದಿ: ಮಗನನ್ನು ಕೊಲ್ಲಲು ಕತ್ತಿ ಬೀಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ! ವಿಡಿಯೊ ನೋಡಿ

ಜಲಪಾತದಲ್ಲಿ ಈಜುವಾಗ, ಹಾವು ಇದ್ದಕ್ಕಿದ್ದಂತೆ ಯುವಕನ ಪ್ಯಾಂಟ್ ಒಳಗೆ ನುಗ್ಗಿದೆ. ಆಗ ಯುವಕ ನೀರಿನಿಂದ ಹೊರಬಂದನು. ಆದರೆ ಅವನು ಸೇರಿದಂತೆ ಅವನ ಎಲ್ಲಾ ಸ್ನೇಹಿತರು ಹಾವನ್ನು ನೋಡಿ ಭಯಭೀತರಾಗಿದ್ದರು. ಆದರೂ, ಅವರು ಸ್ನೇಹಿತನ ಜೀವವನ್ನು ಉಳಿಸಲು ತುಂಬಾ ಪ್ರಯತ್ನ ಮಾಡಿ ಅವನ ಪ್ಯಾಂಟ್‍ನಿಂದ ಹಾವನ್ನು ಹೊರತೆಗೆದಿದ್ದಾರೆ.

Continue Reading

ಬೆಂಗಳೂರು

CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ಭಾರತೀಯ ಜನತಾ ಪಕ್ಷದವರು (CM Siddaramaiah) ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಕಾಂಗ್ರೆಸ್‌ ಪಕ್ಷ (Congress Party) ಅಸಮಾನತೆಯನ್ನು ಹೋಗಲಾಡಿಸಲು ಬಯಸುತ್ತದೆ. ಈಗಲೂ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತಿದೆ. ಹಾಗಾಗಿ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಅಸಮಾನತೆ ವಿರುದ್ಧ ಕಾರ್ಯಕ್ರಮ ನೀಡುತ್ತೇನೆಂಬ ಕಾರಣಕ್ಕೇ ಬಿಜೆಪಿ (BJP) ನನ್ನನ್ನು ಸಹಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಈಗ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಕ್ಕೆ ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜೀವ ಗಾಂಧಿ ಹಾಗೂ ದೇವರಾಜ ಅರಸರ ಬದುಕು-ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ ಕನಸನ್ನು ಕಂಡಿದ್ದರು. ಯುವಜನತೆಯ ಮೇಲೆ ಅಪಾರ ವಿಶ್ವಾಸವಿಟ್ಟುಕೊಂಡಿದ್ದರು. ಅವರು ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಕಾರಣಕರ್ತರಾಗಿದ್ದರು. ಯಾವಾಗಲೂ ಸಾಮಾಜಿಕ ನ್ಯಾಯದ ಪರವಿದ್ದರು. ದೇಶದಲ್ಲಿ ಬದಲಾವಣೆ ಆಗಬೇಕು. ಸಮಾನ ಅವಕಾಶ ಸಿಗಬೇಕು ಎಂದು ಹಂಬಲಿಸಿದರು. ಯಾವುದೇ ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಭೇದ ಮರೆತು, ಎಲ್ಲೇ ಇದ್ದರೂ ಭಾರತೀಯರು ಒಗ್ಗಟ್ಟಾಗಿರಬೇಕು ಎಂಬ ಕನಸನ್ನು ಕಂಡಿದ್ದರು.

ವಿಶೇಷವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪಾಲು ಸಿಗಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂವಿಧಾನಕ್ಕೆ 73 ಮತ್ತು 74 ನೇ ತಿದ್ದುಪಡಿ ಜಾರಿಗೆ ತಂದರು. ಈ ದೇಶದಲ್ಲಿ ಏನಾದರೂ ಮಹಿಳೆಯರಿಗೆ ರಾಜಕೀಯದಲ್ಲಿ ಪಾಲು ಸಿಕ್ಕಿದ್ದರೆ, ಸಂವಿಧಾನಕ್ಕೆ ತಂದ ಈ ತಿದ್ದುಪಡಿಗಳು ಕಾರಣ ಎಂದು ಹೇಳ ಬಯಸುತ್ತೇನೆ ಎಂದು ತಿಳಿಸಿದರು.

ಭಾರತೀಯ ಜನತಾ ಪಕ್ಷದವರು ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಇವತ್ತು ದೇಶದ ಸಂಪರ್ಕ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿಗೆ ರಾಜೀವ ಗಾಂಧಿಯವರು ಕಾರಣ. ರಾಜೀವ ಗಾಂಧಿಯವರು ಯುವ ಶಕ್ತಿ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಆದ್ದರಿಂದ ಮತದಾನದ ವಯಸ್ಸು 21 ರಿಂದ 18 ಕ್ಕೆ ಇಳಿಸಿದರು. ಅವರು ಇನ್ನೂ ಬದುಕಿರಬೇಕಾಗಿತ್ತು. ಅವರು ಇದ್ದಿದ್ದರೆ ದೇಶದಲ್ಲಿ ನಿಜವಾದ ಬದಲಾವಣೆ ಆಗಿರುತ್ತಿತ್ತು. ದೂರದೃಷ್ಟಿ, ದೇಶ, ಸಮಾಜದ ಬಗ್ಗೆ ಕಾಳಜಿ ಇದ್ದವರು, ಬಹಳ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನು ಅಗಲಿದರು ಎಂದು ವಿಷಾದಿಸಿದರು.

ದೇವರಾಜ ಅರಸು ಅವರು 1972 ರಿಂದ ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗ ರಚನೆ ಮಾಡಿ, ಹಿಂದುಳಿದವರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು. ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನಸೌಧ ಪ್ರವೇಶಿಸುವಂತೆ ಮಾಡಿದರು ಎಂದು ಸಿಎಂ ತಿಳಿಸಿದರು.

ಈ ಕುರಿತು ಪತ್ರಿಕೆಯಲ್ಲಿ ಓದಿದ ಘಟನೆಯೊಂದನ್ನು ನೆನಪಿಸಿಕೊಂಡ ಮುಖ್ಯಮಂತ್ರಿಗಳು, “ಅರಸು ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಜಾಫರ್‌ ಷರೀಫ್‌ ಅವರಿಗೆ ಟಿಕೆಟ್‌ ಕೊಟ್ಟರು. ನಾಗರತ್ನಮ್ಮ ಅವರು ಜಟಕಾ ಗಾಡಿ ಓಡಿಸುವವರಿಗೆ ಟಿಕೆಟ್‌ ಕೊಡ್ತೀಯಲ್ಲ ಎಂದು ಕೇಳಿದರು. ನೋಡಮ್ಮಾ, ಇನ್ನು ಮೇಲೆ ಜಟಕಾ ಸಾಹೇಬರಿಗೆ, ಕ್ಷೌರ ಮಾಡುವವರಿಗೆ ಟಿಕೆಟ್‌ ಕೊಡೋದು, ಶೋಕಿ ಮಾಡುವವರಿಗಲ್ಲ ಎಂದು ಉತ್ತರಿಸಿದರಂತೆ” ಎಂದು ತಾವು ಓದಿದ್ದನ್ನು ಸ್ಮರಿಸಿದರು.

ಮಲ ಹೊರುವ ಪದ್ಧತಿ, ಜೀತ ಪದ್ಧತಿ ನಿಷೇಧ, ಸಾಲ ಮನ್ನಾ ಇಂತಹ ಅನೇಕ ಪ್ರಗತಿಪರ ಕಾನೂನುಗಳನ್ನು ಮಾಡಿದ ಅವರು, ಅರಸು ಮನೆತನದಲ್ಲಿ ಹುಟ್ಟಿದರೂ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದರು ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ. ಜಾರ್ಜ್‌, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಹಾಗೂ ಇತರರು ಭಾಗವಹಿಸಿದ್ದರು.

Continue Reading
Advertisement
karnataka weather Forecast
ಮಳೆ2 mins ago

Karnataka Weather : ಮುಂದುವರಿದ ಮಳೆ ಅವಾಂತರ; ನಾಳೆ ಒಳನಾಡು, ಕರಾವಳಿಯಲ್ಲಿ ಅಬ್ಬರ

Paralympic 2024
ಕ್ರೀಡೆ3 mins ago

Paralympic 2024: ಒತ್ತಡಕ್ಕೆ ಒಳಗಾಗಬೇಡಿ; ಭಾರತದ ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸಲಹೆ

Celina Jaitley
ಸಿನಿಮಾ25 mins ago

Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

Viral Video
Latest30 mins ago

Viral Video: ನೆರೆಹೊರೆಯವರೊಂದಿಗೆ ಜಗಳವಾಡುತ್ತಲೇ ಹೃದಯಾಘಾತದಿಂದ ಸತ್ತ ಮಹಿಳೆ!

Kannada New Movie
ಬೆಂಗಳೂರು35 mins ago

Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

Viral Video
Latest37 mins ago

Viral Video: ಈಜಲು ಹೋಗಿದ್ದವನ ಶರ್ಟ್‍ನೊಳಗೆ ನುಸುಳಿದ ಬೃಹತ್‌ ಹಾವು! ಮುಂದೇನಾಯ್ತು ನೋಡಿ

Vinesh Phogat
ದೇಶ51 mins ago

Vinesh Phogat: ಸಹೋದರಿಯ ವಿರುದ್ಧವೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ವಿನೇಶ್​ ಫೋಗಟ್​?

DK Shivakumar
ಕರ್ನಾಟಕ1 hour ago

DK Shivakumar: ನಾನು ರಾಜ್ಯಪಾಲ, ಲೋಕಾಯುಕ್ತದ ವಕ್ತಾರನಲ್ಲ, ಕಾಂಗ್ರೆಸ್ ಪ್ರತಿನಿಧಿ ಎಂದ ಡಿಕೆಶಿ

Viral News
ದೇಶ1 hour ago

Viral News: ದರೋಡೆ, ಪಿಕ್‌ಪಾಕೆಟಿಂಗ್‌, ಕಳ್ಳತನವೇ ಸಬ್ಜೆಕ್ಟ್‌.. ಕ್ರಿಮಿನಲ್‌ಗಳಿಗಾಗಿಯೇ ಇಲ್ಲಿವೆ ಶಾಲೆಗಳು; ಫೀಸ್‌ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ

Supreme Court
ಪ್ರಮುಖ ಸುದ್ದಿ2 hours ago

Supreme Court: ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌