Site icon Vistara News

Viral Video: ನಡು ರಸ್ತೆಯಲ್ಲಿ ಸ್ಟಂಟ್ ಮಾಡುತ್ತ ಬೈಕ್‍ ಸವಾರರ ರೀಲ್ಸ್; ಮುಂದೇನಾಯ್ತು ನೋಡಿ!

Viral Video

ರೀಲ್ಸ್‌ನ ಅವಾಂತರ ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬೈಕ್‍ನಲ್ಲಿ ನಡುರಸ್ತೆಯಲ್ಲಿ ಸ್ಟಂಟ್ ಮಾಡುತ್ತಾ ರೀಲ್ಸ್ ಮಾಡಲು ಹೋದ ಇಬ್ಬರು ಯುವಕರಿಗೆ ಕಾರು ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನ ಕಿರಾತ್ಪುರ ಪ್ರದೇಶದಲ್ಲಿ ನಡೆದಿದೆ. ಬೈಕ್‍ನಲ್ಲಿ ರೀಲ್ ಮಾಡುತ್ತಾ ಬೈಕ್ ಅನ್ನು ಅಡ್ಡಾದಿಡ್ಡಿ ಓಡಿಸಿದ ಪರಿಣಾಮ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಬುಧವಾರ ಈ ಅಪಘಾತ ಸಂಭವಿಸಿದ್ದು, ಬೈಕ್‍ನಲ್ಲಿದ್ದವರು ಮುಂಡಾಲ ಗ್ರಾಮದ ಸಮರ್ ಮತ್ತು ನೊಮನ್ ಎಂಬುದಾಗಿ ತಿಳಿದುಬಂದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ವರದಿ ಪ್ರಕಾರ, ಇಬ್ಬರು ಯುವಕರು ರಾಷ್ಟ್ರೀಯ ಹೆದ್ದಾರಿ 34 ರಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ರೀಲ್ಸ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಹೆದ್ದಾರಿಯಲ್ಲಿ ಬೈಕ್ ಅನ್ನು ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ತಿರುಗಿಸಿಕೊಂಡು ಹೋಗುವಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಇಬ್ಬರೂ ತಮ್ಮ ಬೈಕಿನಿಂದ ಹಾರಿ ದೂರ ಹೋಗಿ ಬಿದ್ದಿದ್ದಾರೆ. ಈ ಭಯಾನಕ ಅಪಘಾತವನ್ನು ಹಿಂದಿನಿಂದ ಬರುತ್ತಿದ್ದ ವ್ಯಕ್ತಿ ವಿಡಿಯೊ ಮಾಡಿದ್ದಾರೆ. ಈ ಅಪಘಾತದ ಲೈವ್ ವಿಡಿಯೊ ಈಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇದೀಗ ಇಬ್ಬರೂ ಯುವಕರು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಹನಗಳು ಎಡೆಬಿಡದೆ ಸಂಚರಿಸುತ್ತಿರುವ ಹೆದ್ದಾರಿಗಳಲ್ಲಿ ಇಂತಹ ಚಟುವಟಿಕೆಗಳಲ್ಲಿ ತೊಡಗುವುದು ತುಂಬಾ ಅಪಾಯಕಾರಿ ಎಂಬುದನ್ನು ಈ ವಿಡಿಯೊ ತಿಳಿಸುತ್ತದೆ. ಹಾಗಾಗಿ ಇದು ಹೆಚ್ಚಿನ ಜನರ ಗಮನ ಸೆಳೆದಿದೆ ಎನ್ನಲಾಗಿದೆ.
ಈ ರೀಲ್ಸ್ ಅವಾಂತರದ ಮತ್ತೊಂದು ಘಟನೆ ಇತ್ತೀಚೆಗೆ ವರದಿಯಾಗಿದೆ. ಘಟನೆಯಲ್ಲಿ, ಇನ್ಸ್ಟಾಗ್ರಾಂ ರೀಲ್ ಮಾಡುವಾಗ ಬಾಲಕಿಯೊಬ್ಬಳು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ.

ಇದನ್ನೂ ಓದಿ:ಹಿಂದೂ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಗೋಮಾಂಸ ತಿನ್ನಿಸಿ ದೌರ್ಜನ್ಯ

ವರದಿಗಳ ಪ್ರಕಾರ, ಅವಳು ತನ್ನ ಮನೆಯ ಬಾಲ್ಕನಿಯಲ್ಲಿ ರೀಲ್ ಮಾಡುತ್ತಿದ್ದಾಗ ಅವಳ ಮೊಬೈಲ್ ಅವಳ ಕೈಯಿಂದ ಜಾರಿತು. ಫೋನ್ ಹಿಡಿಯಲು ಪ್ರಯತ್ನಿಸುವಾಗ ಅವಳು ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ನೋವಿನಿಂದ ಅಳುತ್ತಿರುವ ಮತ್ತು ಅವಳ ತಾಯಿ ಅವಳನ್ನು ಬೈಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ. ಗಾಜಿಯಾಬಾದ್‍ನ ಇಂದಿರಾಪುರಂ ಪ್ರದೇಶದಲ್ಲಿರುವ ಕ್ಲೌಡ್ -9 ಸೊಸೈಟಿಯಲ್ಲಿ ವಾಸಿಸುತ್ತಿದ್ದ ಬಾಲಕಿಯನ್ನು ಮೋನಿಷಾ (16) ಎಂದು ಗುರುತಿಸಲಾಗಿದೆ. ಆರನೇ ಮಹಡಿಯಿಂದ ಬಿದ್ದ ನಂತರ ಆಕೆಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಅವಳು ಅಪಾಯದಿಂದ ಪಾರಾಗಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

Exit mobile version