World's Oldest Bus Driver: ಇವರು ವಿಶ್ವದ ಅತ್ಯಂತ ಹಿರಿಯ ಬಸ್ ಚಾಲಕ! ವಯಸ್ಸು ಎಷ್ಟು ನೋಡಿ! - Vistara News

Latest

World’s Oldest Bus Driver: ಇವರು ವಿಶ್ವದ ಅತ್ಯಂತ ಹಿರಿಯ ಬಸ್ ಚಾಲಕ! ವಯಸ್ಸು ಎಷ್ಟು ನೋಡಿ!

World’s Oldest Bus Driver: ಅಮೆರಿಕದ ಮಿನ್ನೆಸೋಟದ 94 ವರ್ಷದ ಜಿಮ್ ಒಪೆಗಾರ್ಡ್ ವಿಶ್ವದ ಅತ್ಯಂತ ಹಿರಿಯ ಬಸ್ ಚಾಲಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ತಮ್ಮ ಜೀವನದ ಅರ್ಧಕ್ಕಿಂತ ಹೆಚ್ಚು ಕಾಲವನ್ನು ಅವರು ಬಸ್ಸುಗಳನ್ನು ಓಡಿಸುವುದರಲ್ಲೇ ಕಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಪ್ರಸ್ತುತ ನಾರ್ತ್ಸ್ಟಾರ್ ಬಸ್‌ಲೈನ್ಸ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ, ಸ್ಕೂಲ್ ಬಸ್ ಓಡಿಸುವ ಮೂಲಕ ಶಾಲಾ ಮಕ್ಕಳಿಗೆ ನೆರವಾಗುತ್ತಿದ್ದಾರೆ. ಮೂರು ಮೊಮ್ಮಕ್ಕಳನ್ನು ಹೊಂದಿರುವ ಜಿಮ್ ಅವರು ತನ್ನ ಈ ಕೆಲಸವನ್ನು ಖುಷಿಯಿಂದ ನಿರ್ವಹಿಸುತ್ತಿದ್ದಾರೆ.

VISTARANEWS.COM


on

World's Oldest Bus Driver
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ


ಅಮೆರಿಕದ ಮಿನ್ನೆಸೋಟದ 94 ವರ್ಷದ ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ಹಿರಿಯ ಬಸ್ ಚಾಲಕ (World’s Oldest Bus Driver) ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರನ್ನು ಜಿಮ್ ಒಪೆಗಾರ್ಡ್ ಎಂದು ಗುರುತಿಸಲಾಗಿದೆ ಮತ್ತು ಅವರಿಗೆ ಈಗ 94 ವರ್ಷ ವಯಸ್ಸಾಗಿದೆ. ತಮ್ಮ ಜೀವನದ ಅರ್ಧಕ್ಕಿಂತ ಹೆಚ್ಚು ಕಾಲವನ್ನು ಅವರು ಬಸ್ಸುಗಳನ್ನು ಓಡಿಸುವುದರಲ್ಲೇ ಕಳೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಅವರು 65 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ಸಿಟಿ ಬಸ್ ಚಾಲಕನಾಗಿ 20 ವರ್ಷಗಳ ವೃತ್ತಿಜೀವನವನ್ನು ನಡೆಸಿದರು. ಆದರೆ ನಿವೃತ್ತಿ ನಂತರ ಅವರಿಗೆ ಜೀವನ ಬೋರ್ ಎನಿಸಿದೆ.

ಹಾಗಾಗಿ ಅವರು ಪ್ರಸ್ತುತ ನಾರ್ತ್‍ಸ್ಟಾರ್ ಬಸ್‌ಲೈನ್ಸ್ ನಲ್ಲಿ ಕೆಲಸ ಮಾಡುತ್ತಿದ್ದಾರೆ, ಸ್ಕೂಲ್ ಬಸ್ ಓಡಿಸುವ ಮೂಲಕ ಶಾಲಾ ಮಕ್ಕಳಿಗೆ ನೆರವಾಗುತ್ತಿದ್ದಾರೆ. ಮೂರು ಮೊಮ್ಮಕ್ಕಳನ್ನು ಹೊಂದಿರುವ ಜಿಮ್ ಅವರು ತನ್ನ ಈ ಕೆಲಸವನ್ನು ಖುಷಿಯಿಂದ ನಿರ್ವಹಿಸುತ್ತಿದ್ದಾರೆ, ಏಕೆಂದರೆ ಅದು ಅವರನ್ನು ಕಾರ್ಯನಿರತರಾಗಿರುವಂತೆ ಮಾಡುತ್ತದೆ. ಮತ್ತು ಆಫ್ರಿಕಾದಲ್ಲಿ ತನ್ನ ಮಗಳು ಸ್ಥಾಪಿಸಿದ ಕ್ರೈಸ್ತ ಆಶ್ರಮಕ್ಕೆ ಹಣವನ್ನು ನೀಡಲು ಈ ಕೆಲಸ ನೆರವಾಗುತ್ತದೆ. ಅವರ ಮ್ಯಾನೇಜರ್ ಪ್ರಕಾರ, ಜಿಮ್ ಅವರು ಒಬ್ಬ ಒಳ್ಳೆಯ ಚಾಲಕ. ಅವರು ಅತ್ಯಂತ ಸುರಕ್ಷಿತವಾಗಿ ಬಸ್ ಚಲಾಯಿಸುತ್ತಾರೆ ಮತ್ತು ಎಂದಿಗೂ ತಡಮಾಡುವುದಿಲ್ಲ. ಆದರೆ ಅವರ ವಯಸ್ಸಿನ ಕಾರಣದಿಂದಾಗಿ, ಅವರು ಪ್ರತಿ ವರ್ಷ ದೈಹಿಕ ಪರೀಕ್ಷೆ ಮತ್ತು ಡ್ರೈವಿಂಗ್ ಸಾಮರ್ಥ್ಯದಲ್ಲಿ ಉತ್ತೀರ್ಣರಾಗಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಜಿಮ್ ಅವರು ಆರೋಗ್ಯಕರವಾದ ದೇಹವನ್ನು ಹೊಂದಿದ್ದಾರೆ. ಅವರು ಆರೋಗ್ಯ ಪೂರಕಗಳನ್ನು ತೆಗೆದುಕೊಳ್ಳುವ ಮೂಲಕ ಮತ್ತು ಪ್ರತಿದಿನ 45 ನಿಮಿಷಗಳ ಕಾಲ ವ್ಯಾಯಾಮ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾರೆ ಎಂದು ಅವರು ಜಿಮ್ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿವೃತ್ತಿಯ ನಂತರ ಜಿಮ್ ಎರಡು ಉದ್ಯೋಗಗಳನ್ನು ನಿರ್ವಹಿಸುತ್ತಾರೆ. ಒಂದು ಇಂಟರ್ ಸಿಟಿ ಕೋಚ್‍ಗಳನ್ನು ಓಡಿಸುವುದು ಮತ್ತು ಇನ್ನೊಂದು ಶಾಲಾ ಬಸ್ ಓಡಿಸುವುದು. ಆದರೆ ಈ ನಡುವೆ ಅವರು ತಮ್ಮ 84ನೇ ವಯಸ್ಸಿನಲ್ಲಿ ಬಿದ್ದು ಕುತ್ತಿಗೆ ಮುರಿತಕ್ಕೆ ಒಳಗಾಗಿದ್ದರು. ನಂತರ ಅವರು ಚೇತರಿಸಿಕೊಳ್ಳಲು ನಾಲ್ಕೂವರೆ ತಿಂಗಳುಗಳನ್ನು ಕಳೆದರು, ಆಮೇಲೆ ಅವರನ್ನು ಇಂಟರ್ ಸಿಟಿ ಕೋಚ್‍ ಕಂಪೆನಿ ಕೈಬಿಟ್ಟ ಕಾರಣ ಶಾಲಾ ಬಸ್ ಚಾಲಕನಾಗಿ ಮಾತ್ರ ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. “ನಾನು ಕೆಲಸ ಮಾಡಲು ಇಷ್ಟಪಡುತ್ತೇನೆ, ವಿಶೇಷವಾಗಿ ಶಾಲಾ ಬಸ್ ಓಡಿಸುವುದು ನನಗೆ ತುಂಬಾ ಇಷ್ಟ” ಎಂದು ಜಿಮ್ ಹೇಳಿದ್ದಾರೆ.

ಇದನ್ನೂ ಓದಿ:ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷನ ಬಂಧನ

ಜಿಮ್ ಅವರು ಬಸ್ ಡ್ರೈವ್ ಮಾಡುವುದು ಮಾತ್ರವಲ್ಲ ಮಕ್ಕಳನ್ನು ಕಾಳಜಿಯಿಂದ ನೋಡಿಕೊಳ್ಳುತ್ತಾರೆ. ಅವರ ಕೆಲಸದ ವೇಳಾಪಟ್ಟಿಯಲ್ಲಿ ಬೆಳಿಗ್ಗೆ ಮೂರು ಗಂಟೆಗಳ ಡ್ರೈವ್ ಮಾಡುವುದು, ನಂತರ ಮೂರು ಗಂಟೆಗಳ ಕಾಲ ವಿರಾಮ ಮಾಡಿ ನಂತರ ಮಧ್ಯಾಹ್ನ ಇನ್ನೂ ನಾಲ್ಕು ಗಂಟೆಗಳ ಡ್ರೈವ್ ಮಾಡುತ್ತಾರೆ. ವಿರಾಮದ ಸಮಯದಲ್ಲಿ, ಅವರು ಹಿರಿಯ ಸಹಕಾರಿ ವಸತಿಯಲ್ಲಿ ಇರುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading
Advertisement
ಪ್ರಮುಖ ಸುದ್ದಿ2 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest3 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest2 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest2 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest3 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌