Site icon Vistara News

Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

Bakrid; CM Yogi gives warning to Muslims

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath ) ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ. ಜೂನ್ 17ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಅವರು ಎಲ್ಲೆಂದರಲ್ಲಿ ಕುಳಿತು ನಮಾಜ್ (Namaz)ಮಾಡುವುದು ಹಾಗೂ ಪ್ರಾಣಿಗಳನ್ನು ಬಲಿ ಕೊಡುವ ಕೆಲಸ ಮಾಡುತ್ತಾರೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ ಮುಸ್ಲಿಂರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ಅದಕ್ಕಾಗಿ ನಿಗದಿ ಪಡಿಸಿದ ಸ್ಥಳಗಳಲ್ಲಿ ಮಾತ್ರ ನಮಾಜ್ ಮಾಡಬೇಕು. ಹಾಗೇ ಗೊತ್ತುಪಡಿಸದ ಸ್ಥಳಗಳಲ್ಲಿ ಪ್ರಾಣಿ ಬಲಿ ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ನಿಷೇಧ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಬಲಿ ಕೊಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.‌

ಬಕ್ರೀದ್‌ನಲ್ಲಿ ಬಲಿದಾನ ಮಾಡುವ ಸ್ಥಳವನ್ನು ಮೊದಲೇ ಗುರುತಿಸಬೇಕು. ಇತರ ಸ್ಥಳಗಳಲ್ಲಿ ಬಲಿದಾನ ಮಾಡಬಾರದು ಹಾಗೂ ವಿವಾದಿತ ಸ್ಥಳಗಳಲ್ಲಿ ಬಲಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹಾಗೇ ಬಲಿದಾನದ ನಂತರ ತ್ಯಾಜ್ಯ ವಿಲೇವಾರಿಗೆ ವ್ಯವಸ್ಥಿತ ಕ್ರಿಯಾ ಯೋಜನೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭಿಸಬೇಕು ಎಂದು ಸಿಎಂ ಯೋಗಿ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಹಾಗೇ ಈ ದಿನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಅವರು ಆಡಳಿತ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮುಂಬರುವ ಹಬ್ಬದ ಸಮಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ ಬಲವಾದ ಹಿಡಿತವನ್ನಿಟ್ಟುಕೊಳ್ಳಬೇಕು. ಹಿಂದೂಗಳು ಜೂನ್ 16ರಂದು ಗಂಗಾ ದಸರವನ್ನು ಆಚರಿಸಿದರೆ, ಮುಸ್ಲಿಂರು ಜೂನ್ 17ಕ್ಕೆ ಬಕ್ರೀದ್ ಅನ್ನು ಆಚರಿಸುತ್ತಾರೆ. ಹಾಗೇ ಜೂನ್ 18ರಂದು ಬಡಾ ಮಂಗಲ್ ಹಬ್ಬವಿದೆ, ಜೂನ್ 21ಕ್ಕೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಇದೆ. ಅಲ್ಲದೇ ಜುಲೈ ತಿಂಗಳಿನಲ್ಲಿ 17ಕ್ಕೆ ಮೊಹರಂ, 22ಕ್ಕೆ ಹಿಂದೂಗಳು ಕನ್ವರ್ ಯಾತ್ರೆ ಪ್ರಾರಂಭಿಸುತ್ತಾರೆ. ಹಾಗಾಗಿ ಈ ದಿನ ಕಾನೂನು ಸುವ್ಯವಸ್ಥೆ ಕಾಪಾಡುವುದು ಅಗತ್ಯ. ಹಾಗಾಗಿ ಸರ್ಕಾರ ಮತ್ತು ಆಡಳಿತ ವರ್ಗದವರು ಪ್ರತಿದಿನ 24 ಗಂಟೆಗಳ ಕಾಲ ಸಕ್ರಿಯವಾಗಿರಬೇಕೆಂದು ಸಿಎಂ ಯೋಗಿ ತಿಳಿಸಿದ್ದಾರೆ.‌

ಇದನ್ನೂ ಓದಿ: ಹಿಂದೂ ಹುಡುಗಿಯ ಖಾಸಗಿ ಫೋಟೊ ತೆಗೆದು ಬ್ಲ್ಯಾಕ್‌ಮೇಲ್‌; ಮತಾಂತರಕ್ಕೆ ಒತ್ತಡ

ಅಲ್ಲದೇ ಗಂಗಾ ದಸರದ ಪ್ರಯುಕ್ತ ಜೂನ್ 15ರಿಂದ 22ರವರೆಗೆ ರಾಜ್ಯದಲ್ಲಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಬೇಕು. ಗಂಗಾ ನದಿಯ ಘಾಟ್‌ಗಳನ್ನು ಸ್ವಚ್ಛಗೊಳಿಸಿ ಅಲಂಕರಿಸಬೇಕು. ಸ್ನಾನ ಪ್ರದೇಶವನ್ನು ಮೊದಲೇ ಗೊತ್ತುಪಡಿಸಬೇಕು ಎಂದು ಸಿಎಂ ಯೋಗಿ ಅವರು ಸಭೆಯಲ್ಲಿ ಹೇಳಿದ್ದಾರೆ. ಹಾಗೇ ಸುರಕ್ಷತೆಗೆಗಾಗಿ ಡ್ರೈವರ್‌ಗಳು ಸಶಸ್ತ್ರಧಾರಿ ಕಾನ್ಸ್‌ಟೇನಲ್, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅನ್ನು ನಿಯೋಜಿಸಲಾಗುವುದು. ಹಾಗೇ ಅನಗತ್ಯ ವಿದ್ಯುತ್ ಕಡಿತವನ್ನು ತಪ್ಪಿಸಬೇಕು ಎಂದು ಅವರು ತಿಳಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.

Exit mobile version