ಕೋಟ್ಯಂತರ ಭಾರತೀಯರಿಗೆ(indians) ಉಚಿತ ಆರೋಗ್ಯ ಸೇವೆ (free health service) ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಕುರಿತು ಜನರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ ಕೊನೆಯ ದಿನವಾದ ಏಪ್ರಿಲ್ 30ರಂದು ಆಯುಷ್ಮಾನ್ ಭಾರತ್ ದಿನವನ್ನು (Ayushman Bharat Diwas) ಆಚರಿಸಲಾಗುತ್ತದೆ.
ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಮತ್ತು ಅದರ ಗುರಿ ಏನು ಎಂಬುದರ ಕುರಿತು ಜನರಿಗೆ ತಿಳಿಸಲು ಈ ದಿನ ಆಚರಣೆ ನಡೆಸಲು ಕರೆ ನೀಡಿದೆ. ಈ ಯೋಜನೆಯೊಂದಿಗೆ ಭಾರತ ಸರ್ಕಾರವು ಪ್ರತಿಯೊಬ್ಬರೂ ಸರ್ಕಾರದಿಂದ ನಿಭಾಯಿಸಲ್ಪಡುವ ಉತ್ತಮ ಆರೋಗ್ಯವನ್ನು ಪಡೆಯಬಹುದೆಂದು ಖಚಿತಪಡಿಸಿಕೊಳ್ಳಲು ಬಯಸುತ್ತದೆ.
ಬಡವರಿಗೆ ಆರೋಗ್ಯ ರಕ್ಷಣೆ ಒದಗಿಸಲು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿ ಮಾಡಿದ್ದು ಈ ಮೂಲಕ ಸರ್ಕಾರಿ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಈ ಯೋಜನೆಯು ಲಕ್ಷಾಂತರ ನಾಗರಿಕರಿಗೆ ಗುಣಮಟ್ಟದ ವೈದ್ಯಕೀಯ ಆರೈಕೆಯನ್ನು ಉಚಿತವಾಗಿ ಹೆಚ್ಚು ಸುಲಭವಾಗಿ ಸಿಗುವಂತೆ ಮಾಡುವ ಗುರಿಯನ್ನು ಹೊಂದಿದೆ.
ಇದನ್ನೂ ಓದಿ: Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?
ಇದು ಜಾರಿಯಾಗಿದ್ದು ಯಾವಾಗ?
ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರಲ್ಲಿ ಘೋಷಿಸಿದರು. ಇದು ಎರಡು ಮುಖ್ಯ ಸ್ತಂಭಗಳನ್ನು ಹೊಂದಿದೆ.
1. ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು (AB-HWCs)
ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಜನರ ಮನೆಗಳಿಗೆ ಹತ್ತಿರ ತರುವ ಗುರಿಯನ್ನು ಹೊಂದಿವೆ.
2. ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PM-JAY)
ಇದು ಆರೋಗ್ಯ ವಿಮಾ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ನಗದು ರಹಿತ ಮತ್ತು ಕೈಗೆಟುಕುವ ವೈದ್ಯಕೀಯ ರಕ್ಷಣೆಯನ್ನು ನೀಡುವ ಉದ್ದೇಶ ಹೊಂದಿದೆ.
ಆಯುಷ್ಮಾನ್ ಭಾರತ್ ದಿವಸ್‌ನ ಮಹತ್ವ
ಆಯುಷ್ಮಾನ್ ಭಾರತ್ ದಿವಸ್ ಹಲವಾರು ಉದ್ದೇಶಗಳನ್ನು ಹೊಂದಿದೆ. ಅವುಗಳಲ್ಲಿ ಮುಖ್ಯವಾಗಿ:
1. ಆಯುಷ್ಮಾನ್ ಭಾರತ್ ಯೋಜನೆಯ ಗುರಿ ಮತ್ತು ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಆಯುಷ್ಮಾನ್ ಭಾರತ್ ದಿವಸ್ ಅನ್ನು ಆಚರಿಸಲಾಗುತ್ತದೆ.
2. ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಮಾಡಿದ ದೊಡ್ಡ ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯು ಭಾರತದಲ್ಲಿ 10 ಕೋಟಿಗೂ ಹೆಚ್ಚು ಬಡ ಮತ್ತು ದುರ್ಬಲ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವ ಗುರಿಯನ್ನು ಹೊಂದಿದೆ.
3. ಅರ್ಹ ಕುಟುಂಬಗಳು ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ವರ್ಷಕ್ಕೆ 5 ಲಕ್ಷ ರೂ.ವರೆಗೆ ವೈದ್ಯಕೀಯ ಸೇವೆಗಳನ್ನು ಪಡೆಯಬಹುದು.
4. ಸರ್ಕಾರವು ಆಯುಷ್ಮಾನ್ ಮಿತ್ರ ಎಂಬ ಹೊಸ ಉದ್ಯೋಗವನ್ನು ಆರೋಗ್ಯ ಕ್ಷೇತ್ರದಲ್ಲಿ ಸೃಷ್ಟಿಸಿದೆ. ಇದಕ್ಕಾಗಿ ಸಾಕಷ್ಟು ಯುವಕರನ್ನು ನೇಮಿಸಿಕೊಳ್ಳಲಾಗಿದೆ.
5. ಆಯುಷ್ಮಾನ್ ಭಾರತ್ ಯೋಜನೆಯಡಿ ಯುವಜನರಿಗೆ ಉದ್ಯೋಗ ನೀಡಲು ಆಯುಷ್ಮಾನ್ ಮಿತ್ರರನ್ನು ಆಸ್ಪತ್ರೆಗಳು ನೇಮಿಸಿಕೊಂಡಿವೆ.
6. ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಉತ್ತಮ ಆರೋಗ್ಯ ವಿಮಾ ಯೋಜನೆಯ ಅಗತ್ಯವಿದೆ.