ನಮ್ಮ ಜೀವನ ಶೈಲಿ (life style), ಆಹಾರ (food) ಪದ್ಧತಿಯಿಂದ ಕೆಲವೊಂದು ರೋಗಗಳನ್ನು ಆಹ್ವಾನಿಸುತ್ತಿದ್ದೇವೆ. ಅದರಲ್ಲಿ ಕ್ಯಾನ್ಸರ್ ಕೂಡ ಒಂದು. ಕ್ಯಾನ್ಸರ್‌ಗೆ (Cancer Risk) ಮುಖ್ಯ ಕಾರಣ ನಮ್ಮ ದೈನಂದಿನ ಆಹಾರಗಳು ಎನ್ನುತ್ತಾರೆ ತಜ್ಞರು. ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುವ ಹಲವಾರು ಅಂಶಗಳಿವೆ. ವಿಶೇಷವಾಗಿ ಪ್ರಸ್ತುತ ಹೆಚ್ಚಿನ ಜನರು ತಮ್ಮ ಆಹಾರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ.
ಜೀನ್‌ಗಳು ಮತ್ತು ಕುಟುಂಬದ ಇತಿಹಾಸವನ್ನು ಹೊರತುಪಡಿಸಿ ಆಹಾರ ಪದ್ಧತಿಯಂತಹ ಬಾಹ್ಯ ಅಂಶಗಳು ಕ್ಯಾನ್ಸರ್ ಹರಡುವಿಕೆಯಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಿದೆ. ಕ್ಯಾನ್ಸರ್ ಬಾರದಂತೆ ನಾವು ನಮ್ಮನ್ನು ರಕ್ಷಿಸಿಕೊಳ್ಳಲು ಕೆಲವೊಂದು ಆಹಾರವನ್ನು ತ್ಯಜಿಸಲೇಬೇಕು. ಕ್ಯಾನ್ಸರ್ ಅನೇಕ ಅಪಾಯಕಾರಿ ಅಂಶಗಳನ್ನು ಹೊಂದಿರುವ ಭಯಾನಕ ಕಾಯಿಲೆಯಾಗಿದೆ. ತಜ್ಞರ ಪ್ರಕಾರ, ಈ ಭಯಾನಕ ಕಾಯಿಲೆಯು ನಾವು ಪ್ರತಿದಿನ ಸೇವಿಸುವ ಆಹಾರದಿಂದಲೇ ಬರುತ್ತವೆ. ಈ ಆಹಾರಗಳಲ್ಲಿ ಹೆಚ್ಚಿನವು ರುಚಿಕರ ಮತ್ತು ವ್ಯಸನಕಾರಿಯಾಗಿರುತ್ತದೆ.
ಈ ವರ್ಷದ ಆರಂಭದಲ್ಲಿ ಅಮೆರಿಕನ್ ಕ್ಯಾನ್ಸರ್ ಸೊಸೈಟಿ ಮಾಡಿರುವ ವರದಿ ಪ್ರಕಾರ 55 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕ್ಯಾನ್ಸರ್ ರೋಗಿಗಳ ಸಂಖ್ಯೆ ಒಂದು ದಶಕದ ಹಿಂದೆ ಹೋಲಿಸಿದರೆ ದ್ವಿಗುಣಗೊಂಡಿದೆ. ಹೀಗಾಗಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ತ್ಯಜಿಸಬೇಕು.
1. ಕೆಂಪು ಮಾಂಸ
ಹಂದಿ, ಕುರಿ ಮತ್ತು ಗೋಮಾಂಸ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ಹಾರ್ವರ್ಡ್ ಹೆಲ್ತ್ ಪ್ರಕಾರ, ಮಾಂಸದ ಹೆಚ್ಚಿನ ಸೇವನೆಯು ಸ್ಯಾಚುರೇಟೆಡ್ ಕೊಬ್ಬುಗಳು ಮತ್ತು ಸೋಡಿಯಂನೊಂದಿಗೆ ಪ್ಯಾಕ್ ಮಾಡಲ್ಪಟ್ಟಿರುವುದರಿಂದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ವಾರದಲ್ಲಿ 18 ಔನ್ಸ್ ಕೆಂಪು ಮಾಂಸವನ್ನು ತಿನ್ನಬಹುದು. ಅದನ್ನು ಬೇಯಿಸುವಾಗ ತಾಪಮಾನವನ್ನು ಗಮನಿಸಬೇಕು. ಯಾಕೆಂದರೆ ಅದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಬರ್ಗರ್ ಮತ್ತು ಸ್ಟೀಕ್ಸ್‌ಗಳಂತಹ ಸುಟ್ಟ ಮಾಂಸಗಳು ಬೇಕಿಂಗ್ ಅಥವಾ ಸೌಸ್ ವೈಡ್‌ನಂತಹ ವಿಧಾನಗಳನ್ನು ಬಳಸಿಕೊಂಡು ಕಡಿಮೆ ತಾಪಮಾನದಲ್ಲಿ ತಯಾರಿಸಲಾಗುತ್ತದೆ. ಇದರಿಂದ ಅಪಾಯ ಹೆಚ್ಚಾಗಿರುತ್ತದೆ.
2. ಮದ್ಯ
ಆಲ್ಕೋಹಾಲ್ ಸೇವನೆ ಈಗ ಎಲ್ಲರಲ್ಲೂ ಸಾಮಾನ್ಯವಾಗಿದೆ. ಇದು ವಿಶೇಷವಾಗಿ ಯುವಜನರಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ವೈದ್ಯರ ಪ್ರಕಾರ, ಆಲ್ಕೋಹಾಲ್ ಸೇವನೆಯು ಹೊಟ್ಟೆ, ಕರುಳು, ಅನ್ನನಾಳ, ಯಕೃತ್ತು, ಪ್ಯಾಂಕ್ರಿಯಾಟಿಕ್ ಮತ್ತು ಸ್ತನ ಕ್ಯಾನ್ಸರ್ ಗಳಿಗೆ ಕಾರಣವಾಗುತ್ತದೆ. ಕಾಲಾನಂತರದಲ್ಲಿ ಇದು ಅಂಗಾಂಶಗಳಿಗೆ ಹಾನಿಯನ್ನು ಉಂಟು ಮಾಡುತ್ತದೆ. ಜೀವಕೋಶದ ಡಿಎನ್ ಎ ಯಲ್ಲಿ ಅನೇಕ ಬದಲಾವಣೆಗಳನ್ನು ಉಂಟುಮಾಡುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ, ಆಲ್ಕೋಹಾಲ್ ಅನ್ನು ಸಂಪೂರ್ಣವಾಗಿ ತ್ಯಜಿಸುವುದು ಒಳ್ಳೆಯದು.
3. ಸಕ್ಕರೆ ಪಾನೀಯಗಳು
ಬೇಸಿಗೆಯಲ್ಲಿ ಹೆಚ್ಚಿನ ಜನರು ಸಕ್ಕರೆ ತುಂಬಿದ ತಂಪಾದ ಪಾನೀಯಗಳನ್ನು ಕುಡಿಯುತ್ತಾರೆ. ಹಾರ್ವರ್ಡ್ ಟಿ ಎಚ್ ಚಾನ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಪ್ರಕಾರ, ದಿನಕ್ಕೆ ಎರಡಕ್ಕಿಂತ ಹೆಚ್ಚು ಸಕ್ಕರೆ ಪಾನೀಯಗಳನ್ನು ಸೇವಿಸಿದವರು ಕೊಲೊರೆಕ್ಟಲ್ ಕ್ಯಾನ್ಸರ್‌ನ ಆರಂಭಿಕ ಹಂತಕ್ಕಿಂತ ಎರಡು ಪಟ್ಟು ಹೆಚ್ಚು ಅಪಾಯವನ್ನು ಹೊಂದಿರುತ್ತಾರೆ. ಅಲ್ಲದೇ ಇದು ತೂಕ ಮತ್ತು ಬೊಜ್ಜಿಗೂ ಕಾರಣವಾಗುವುದು. ಇದರ ಬದಲು ನೀರು, ಹಾಲು ಅಥವಾ ಸಿಹಿಗೊಳಿಸದ ಚಹಾ ಅಥವಾ ಕಾಫಿ ಸೇವನೆ ಸೂಕ್ತ.
4. ಡೇರಿ ಉತ್ಪನ್ನ
ಹಾಲು, ಚೀಸ್ ಮತ್ತು ಮೊಸರುಗಳಂತಹ ಆಹಾರಗಳನ್ನು ಹೆಚ್ಚು ಸೇವಿಸುವುದರಿಂದ ಕ್ಯಾನ್ಸರ್ ಅಪಾಯ ಹೆಚ್ಚಾಗುತ್ತದೆ. ಎಂದು ಅನೇಕ ಅಧ್ಯಯನಗಳು ಹೇಳುತ್ತವೆ. ಸಂಶೋಧನೆಯ ಪ್ರಕಾರ, ಡೈರಿ ಇನ್ಸುಲಿನ್ ತರಹದ ಬೆಳವಣಿಗೆಯ ಅಂಶ 1 (IGF-1) ಮಟ್ಟವನ್ನು ಹೆಚ್ಚಿಸುತ್ತದೆ. ಇದು ಪ್ರಾಸ್ಟೇಟ್ ಕ್ಯಾನ್ಸರ್ ನ ಹೆಚ್ಚಿನ ಅಪಾಯಕ್ಕೆ ಸಂಬಂಧಿಸಿದೆ. IGF-1 ಪ್ರಾಸ್ಟೇಟ್ ಕ್ಯಾನ್ಸರ್ ಕೋಶಗಳ ಪ್ರಸರಣ ಅಥವಾ ಉತ್ಪಾದನೆಯನ್ನು ಹೆಚ್ಚಿಸುತ್ತದೆ.
ಇದನ್ನೂ ಓದಿ: Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?
ಕ್ಯಾನ್ಸರ್ ಅಪಾಯ ಕಡಿಮೆ ಮಾಡುವ ಆಹಾರಗಳು ಯಾವವು?
ವೈಜ್ಞಾನಿಕ ಸಂಶೋಧನೆಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಅನೇಕ ಆಹಾರಗಳಿವೆ.
1. ಹಣ್ಣು ಮತ್ತು ತರಕಾರಿಗಳು
ಹೆಚ್ಚಿನ ಹಣ್ಣು ಮತ್ತು ತರಕಾರಿಗಳು ರೋಗ ನಿರೋಧಕ ಗುಣಗಳಿಂದ ತುಂಬಿರುತ್ತವೆ. ಆಕ್ಸಿಡೇಟಿವ್ ಒತ್ತಡ ಮತ್ತು ಡಿಎನ್ಎ ಹಾನಿಯಿಂದ ಜೀವಕೋಶಗಳನ್ನು ರಕ್ಷಿಸುತ್ತವೆ.
2. ಬೀಜಗಳು
ಬೀಜಗಳ ನಿಯಮಿತ ಸೇವನೆಯು ಉರಿಯೂತ ಮತ್ತು ಕ್ಯಾನ್ಸರ್ ಅಪಾಯ ಕಡಿಮೆಯಾಗುತ್ತದೆ.
3. ಬೀನ್ಸ್ ಮತ್ತು ದ್ವಿದಳ ಧಾನ್ಯಗಳು
ಬೀನ್ಸ್, ದ್ವಿದಳ ಧಾನ್ಯಗಳು ಫೈಬರ್‌ನಿಂದ ಕೂಡಿದ್ದು, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
4. ಮೀನು
ಬಿಳಿ ಮೀನು ಒಮೆಗಾ-3 ಕೊಬ್ಬಿನಾಮ್ಲಗಳಿಂದ ತುಂಬಿರುತ್ತದೆ. ಇದು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಕೆಲವು ಕ್ಯಾನ್ಸರ್ ಗಳ ಅಪಾಯವನ್ನು ಕಡಿಮೆ ಮಾಡುತ್ತದೆ.