Site icon Vistara News

Covid Origin: ಪ್ರಾಣಿಗಳಿಂದಲೇ ಮನುಷ್ಯರಿಗೆ ತಗುಲಿದ ಕೋವಿಡ್ ಸೋಂಕು!

1590 fresh Covid 19 cases record in 24 hours in India

ನವದೆಹಲಿ: ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್-19 ಮೂಲ ಯಾವುದು ಎಂಬ ಚರ್ಚೆ ಇನ್ನೂ ನಿಂತಿಲ್ಲ. ಕೆಲವರು ಇದು ಮಾನವ ನಿರ್ಮಿತ ಎಂದು ವಾದಿಸುತ್ತಾರೆ, ಮತ್ತೆ ಕೆಲವರು ಚೀನಾದಿಂದಲೇ ಈ ವೈರಸ್ ಇಡೀ ಜಗತ್ತಿಗೆ ಅಂಟಿದೆ ಎಂದು ಹೇಳುತ್ತಾರೆ. ಈಗ ಹೊಸ ಅಧ್ಯಯನ ವರದಿಯೊಂದರಲ್ಲಿ ಕೋವಿಡ್-19 ಮೂಲ (Covid Origin) ಯಾವುದು ಎಂಬುದರ ಮೇಲೆ ಬೆಳಕು ಚೆಲ್ಲಲಾಗಿದೆ. ಚೀನಾ ವುಹಾನ್ ಮಾರುಕಟ್ಟೆಯಿಂದ ಪಡೆದ ಕೆಲವು ಸ್ಯಾಂಪಲ್‌ಗಳನ್ನು ಅಧ್ಯಯನ ಮಾಡಿರುವ ಸಂಶೋಧಕರು, ಕೋವಿಡ್-19 ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ತಗಲಿದೆ ಎಂಬ ನಿರ್ಣಯಕ್ಕೆ ಬಂದಿದ್ದಾರೆ.

ರೋಗಕ್ಕೆ ತುತ್ತಾಗುವ ರಕೂನ್ ನಾಯಿಗಳು ಸೇರಿದಂತೆ ಅನೇಕ ಪ್ರಾಣಿಗಳ ಆನುವಂಶಿಕ ವಸ್ತುಗಳ ಜೊತೆಗೆ ನಾವೆಲ್ ಕೊರೊನಾ ವೈರಸ್ ಇರುವ ಪುರಾವೆಗಳನ್ನು ಮಾದರಿಗಳು ಕಂಡುಕೊಂಡಿವೆ. ಈ ಬಗ್ಗೆ ಓಪನ್ ಸೈನ್ಸ್ ಜಾಲತಾಣವಾಗಿರುವ Zenodo.orgನಲ್ಲಿ ವರದಿಯೊಂದನ್ನು ಪ್ರಕಟಿಸಲಾಗಿದೆ. ಈ ವರದಿಯ ಪ್ರಕಾರ, ಹುವಾನಾನ್ ಸಗಟು ಸಮುದ್ರಾಹಾರ ಮಾರುಕಟ್ಟೆಯು ಸಾಂಕ್ರಾಮಿಕದ ಕೇಂದ್ರಬಿಂದುವಾಗಿದೆ ಎಂದು ತಿಳಿಸಲಾಗಿದೆ.

ಕೆಲವು ಸ್ಯಾಂಪಲ್‌ಗಳಲ್ಲಿ ಪ್ರಾಣಿಗಳಲ್ಲಿ ಸಂಭವನೀಯ SARS-CoV-2 ಸೋಂಕನ್ನು ಸೂಚಿಸುವ ಮಾನವ ಆನುವಂಶಿಕ ವಸ್ತುಗಳಿಗಿಂತ ಹೆಚ್ಚು ಪ್ರಾಣಿಗಳ ಆನುವಂಶಿಕ ವಸ್ತುಗಳು ಕಂಡುಬಂದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಈ ವರದಿಗೆ ಇನ್ನೂ ಯಾವುದೇ ವೈಜ್ಞಾನಿಕ ಸಮುದಾಯವು ತನ್ನ ಒಪ್ಪಿಗೆ ನೀಡಿಲ್ಲ. ಸಾಂಕ್ರಾಮಿಕ ಸಮಯದಲ್ಲಿ ಅನೇಕ ಅಧ್ಯಯನ ವರದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ವೈಜ್ಞಾನಿಕ ಸಮುದಾಯವು ಈ ಎಲ್ಲ ವರದಿಗಳನ್ನು ಪರಿಶೀಲಿಸಲು ಹೋಗಿಲ್ಲ.

ಇದನ್ನೂ ಓದಿ: H3N2 Virus : ಹಾಸನದ ವ್ಯಕ್ತಿ H3N2ಗೆ ಬಲಿ, ಕೋವಿಡ್‌ನಂತೆ ದೇಶದ ಮೊದಲ ಸಾವು ರಾಜ್ಯದಲ್ಲೆ, ಹರಿಯಾಣದಲ್ಲಿ 2ನೇ ಮೃತ್ಯು

ಈಗಾಗಲೇ ಹೇಳಿದಂತೆ, ಕೋವಿಡ್-19 ಸಾಂಕ್ರಾಮಿಕ ಸ್ಫೋಟಗೊಳ್ಳುತ್ತಿದ್ದಂತೆ ಜಗತ್ತಿನಾದ್ಯಂತ ಸಂಶೋಧಕರು ಕೋವಿಡ್ ಮೂಲ ಹುಡುಕಲು ಆರಂಭಿಸಿದರು. ಬಹುತೇಕ ಅಧ್ಯಯನ ವರದಿಗಳು ಚೀನಾದ ವುಹಾನ್ ಮಾರುಕಟ್ಟೆಯತ್ತಲೇ ಬೊಟ್ಟು ಮಾಡಿ ತೋರಿಸಿವೆ. ಆದರೆ, ಈ ವರೆಗೂ ಚೀನಾ ಕೋವಿಡ್-19 ಸಾಂಕ್ರಾಮಿಕಕ್ಕೆ ತನ್ನ ದೇಶದ ಮಾರುಕಟ್ಟೆ ಎಂಬುದನ್ನು ಒಪ್ಪಿಕೊಂಡಿಲ್ಲ. ಈಗ ಹೊಸ ವರದಿ ಕೂಡ ಚೀನಾವೇ ಮೂಲ ಎಂಬ ಸತ್ಯವನ್ನು ಕಂಡುಕೊಂಡಿದೆ. ಈ ವರದಿಗೆ ಚೀನಾ ಹೇಗೆ ಪ್ರತಿಕ್ರಿಯಿಸಲಿದೆ ಎಂದು ಕಾದು ನೋಡಬೇಕು.

Exit mobile version