Site icon Vistara News

COVID Subvariant JN.1: ರಾಜ್ಯದಲ್ಲಿ ಕೋವಿಡ್‌ ಹೈ ಅಲರ್ಟ್‌; 60 ವರ್ಷ ದಾಟಿದವರಿಗೆ ಮಾಸ್ಕ್‌ ಕಡ್ಡಾಯ

old age waring mask

ಬೆಂಗಳೂರು/ಕೊಡಗು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 (COVID Subvariant JN.1) ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ (State Health Department) ಹೈ ಅಲರ್ಟ್‌ (High alert) ಆಗಿದೆ. 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ (Heart problem) ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೊರೊನಾ ಲಕ್ಷಣ ಇರುವವರಿಗೂ ಮಾಸ್ಕ್‌ ಕಡ್ಡಾಯ ಮಾಡಲಾಗದೆ.

ಈ ಸಂಬಂಧ ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿಯ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಸಭೆ ಮಾಡಿ ಚರ್ಚಿಸಿದ್ದೇವೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ಜತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ ಇರುವವರು ಹಾಗೂ ಕೊರೊನಾ ಲಕ್ಷಣ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳಿದರು.

ರಾಜ್ಯದ ಎಲ್ಲ ಆಸ್ಪತ್ರೆಗಳನ್ನು ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್ ರೆಡಿಯಾಗಿಡಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ನಿಷೇಧ ಸೇರಿದಂತೆ ಇನ್ನಿತರ ಕ್ರಮಗಳನ್ನು ತೆಗೆದುಕೊಳ್ಳಬಹುದು. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ದೃಢಪಟ್ಟರೆ ಕ್ರಿಸ್‌ಮಸ್‌, ನ್ಯೂ ಇಯರ್‌ ಸೆಲೆಬ್ರೇಷನ್‌ಗೆ ನಿರ್ಬಂಧ

ನೆರೆಯ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಆರೋಗ್ಯ ಇಲಾಖೆ ಹಾಗೂ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಆಯೋಜಿಸಿದೆ. ಈಗಾಗಲೇ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟ್ ಹೆಚ್ಚಳವಾಗಿದೆ. ಕೆಲ ಸೋಂಕಿತರ ಗಂಟಲು ದ್ರವ ಜಿನೋಮಿಕ್ ಸಿಕ್ವೆನ್ಸ್‌ಗೆ ರವಾನೆ ಮಾಡಲಾಗಿದೆ. ರೂಪಾಂತರಿ ವೈರಸ್ ದೃಢಪಟ್ಟರೆ ಕ್ರಿಸ್‌ಮಸ್ ಹಾಗೂ ನ್ಯೂ ಇಯರ್‌ ಸೆಲೆಬ್ರೇಷನ್‌ಗೆ ಕೋವಿಡ್ ನಿರ್ಬಂಧ ಹೇರುವ ಸಾಧ್ಯತೆ ಇದೆ.

ನ್ಯೂ ಇಯರ್ ಗೈಡ್‌ಲೆನ್ಸ್ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಶರಣ ಪ್ರಕಾಶ್‌ ಪಾಟೀಲ್‌

ಈ ಕೊರೊನಾ ಎಷ್ಟರಮಟ್ಟಿಗೆ ಅಪಾಯಕಾರಿ ಇದೆ ಎಂಬುದು ಇನ್ನೂ ತಿಳಿದಿಲ್ಲ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ನ್ಯೂ ಇಯರ್ ಗೈಡ್‌ಲೆನ್ಸ್ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್‌ ಪ್ರತಿಕ್ರಿಯೆ ನೀಡಿದ್ದಾರೆ.

ಸಭೆ ನಡೆಸಿರುವ ದಿನೇಶ್‌ ಗುಂಡೂರಾವ್

ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಶನಿವಾರ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ವರದಿಯಾಗುತ್ತಿದೆ. ಕರ್ನಾಟಕದಲ್ಲಿ ಈವರೆಗೆ 58 ಕೋವಿಡ್ ಪಾಸಿಟಿವ್ ಕೇಸ್ ಇವೆ. ಈ ಪೈಕಿ 11 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ತಿಂಗಳಿನಲ್ಲಿ ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದು, ಈಗ ಕೊರೊನಾ ಹೆಚ್ಚಾಗಲಿದೆ ಎಂಬ ಮಾಹಿತಿಯಿದೆ. ಹೀಗಾಗಿ ಕೇಂದ್ರದ ಅಧಿಕಾರಿಗಳ ಜತೆ ನಮ್ಮ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಐಎಲ್‌ಐ ಹಾಗೂ ಸಾರಿ ಪ್ರಕರಣ ಕಂಡು ಬಂದರೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಕೊರೊನಾ ಲಕ್ಷಣ ಕಂಡು ಬಂದರೆ ಕಡ್ಡಾಯ ಪರೀಕ್ಷೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.‌

ಇದನ್ನೂ ಓದಿ: Heavy Rain: ತಮಿಳುನಾಡಿನಲ್ಲಿ ಭಾರೀ ಮಳೆ; 4 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ, ರೈಲುಗಳ ಸಂಚಾರ ರದ್ದು

ಏಕೆ ಆತಂಕ ಬೇಡ?

Exit mobile version