Site icon Vistara News

COVID Subvariant JN1: ಆಕ್ಸಿಜನ್ ಸಿಲಿಂಡರ್, ಪ್ಲಾಂಟ್ ಎಷ್ಟಿದೆ? ವಾರದಲ್ಲಿ ವರದಿ ಕೊಡಲು ಸೂಚನೆ

Oxygen cylinder

ಬೆಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 (COVID Subvariant JN1) ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ (State Health Department) ಮತ್ತೊಂದು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯದಲ್ಲಿ ಆಕ್ಸಿಜನ್ ಸಿಲಿಂಡರ್, ಪಿಎಸ್‌ಎ (PSA) ಆಕ್ಸಿಜನ್ ಪ್ಲಾಂಟ್, ಲಿಕ್ವಿಡ್ ಆಕ್ಸಿಜನ್ ಘಟಕಗಳ ವಾಸ್ತವ ವರದಿ ನೀಡಲು ಸೂಚನೆ ನೀಡಲಾಗಿದೆ.

ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಮಂಗಳವಾರ (ಡಿ. 19) ಸಭೆ ನಡೆಸಿದ್ದು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಳ್ಳಲು ಚರ್ಚೆ ನಡೆಸಲಾಗಿದೆ. ಆಕ್ಸಿಜನ್ ಸಿಲಿಂಡರ್, ಪಿಎಸ್‌ಎ ಆಕ್ಸಿಜನ್ ಪ್ಲಾಂಟ್, ಲಿಕ್ವಿಡ್ ಆಕ್ಸಿಜನ್ ಘಟಕಗಳ ವಾಸ್ತವ ವರದಿ ನೀಡಲು ಸೂಚನೆ ನೀಡಲಾಗಿದೆ.

ವಿಭಾಗೀಯ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪ್ರಧಾನ ಕಾರ್ಯದರ್ಶಿ ನೀಡಿರುವ ಸೂಚನೆಗಳಿವು!

1) ಪಿಎಸ್‌ಎ ಪ್ಲಾಂಟ್‌ಗಳ ಕಾರ್ಯವೈಖರಿ ಬಗ್ಗೆ, ವರದಿ ನೀಡುವುದು
2) ಲಿಕ್ವಿಡ್‌ ಮೆಡಿಕಲ್‌ ಆಕ್ಸಿಜನ್‌ ಟ್ಯಾಂಕ್‌ (Liquid Medical Oxygen tank) ಗಳ ಬಗ್ಗೆ ವರದಿ ಸಲ್ಲಿಸುವುದು
3) ಮುಖ್ಯವಾಗಿ ಐ.ಸಿ.ಯು ಉಪಕರಣಗಳು ವೆಂಟಿಲೇಟರ್‌ಗಳನ್ನು ಸ್ವತಃ ಪರಿಶೀಲಿಸಿ ಕಾರ್ಯನಿರ್ವಹಣೆ
ಬಗ್ಗೆ ವರದಿ ನೀಡುವುದು
4) ಎಲ್ಲ ಆಕ್ಸಿಜನ್‌ ಸಿಲೆಂಡರ್‌ಗಳನ್ನು (Oxygen cylinder) ತುಂಬಿಸುವ ಬಗ್ಗೆ ಕ್ರಮ ಕೈಗೊಂಡು ವರದಿ ಸಲ್ಲಿಸುವುದು.
5) ಆಕ್ಸಿಜನ್‌ ಕಾನ್ಸಂಟ್ರೇಟರ್‌ (Oxygen concentrator) ಬಗ್ಗೆ ತಪಾಸಣೆ ಕೈಗೊಂಡು ವರದಿ ಸಲ್ಲಿಸುವುದು.
6) ಮೆಡಿಕಲ್‌ ಗ್ಯಾಸ್‌ ಪೈಪ್‌ಲೈನ್‌ (Medical Gas Pipeline) ಬಗ್ಗೆ ತಪಾಸಣೆ ಕೈಗೊಂಡು ವರದಿ ಸಲ್ಲಿಸುವುದು.
7) ಐಸಿಯುವಿನಲ್ಲಿ (ICU) ಇರುವ ಎಲ್ಲ ಯಂತ್ರೋಪಕರಣಗಳ ಬಗ್ಗೆ ತಪಾಸಣೆ ಮತ್ತು ಔಷಧಗಳ ಲಭ್ಯತೆ ಬಗ್ಗೆ ಕ್ರಮ ಕೈಗೊಳ್ಳುವುದು.

ಬೆಳಗ್ಗೆ ಬಿಡುಗಡೆ ಮಾಡಿದ್ದ 2 ಸುತ್ತೋಲೆ

ಮಂಗಳವಾರ ಬೆಳಗ್ಗೆ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾರ್ಗಸೂಚಿಯನ್ನು ರವಾನೆ ಮಾಡಲಾಗಿದೆ. ಒಂದರಲ್ಲಿ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಮತ್ತೊಂದರಲ್ಲಿ ಸಾರ್ವಜನಿಕ ಸಲಹಾ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಮುಂಜಾಗ್ರತಾ ಕ್ರಮಗಳ ಕುರಿತು ಸರ್ಕಾರದ ಸುತ್ತೋಲೆ

Whole genome sequencing (WGS) ಪರೀಕ್ಷೆಗೆ ಕಳುಹಿಸಲು ಸೂಚನೆ

ಈ ಕೆಳಕಂಡ ಪ್ರಕರಣಗಳ ಮಾದರಿಗಳನ್ನು Whole genome sequencing (WGS) ಪರೀಕ್ಷೆಗೆ ರವಾನಿಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಸಾರ್ವಜನಿಕರಿಗೆ ಸಲಹಾ ಮಾರ್ಗಸೂಚಿ

ಸಾರ್ವಜನಿಕರಿಗೆ ಸಲಹಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ಸೂಚನೆಯನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

  1. ಎಲ್ಲ ಹಿರಿಯ ನಾಗರಿಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು
  2. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ
  3. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
  4. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
  5. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ
  6. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರಿಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
  7. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
  8. ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ಇದನ್ನೂ ಓದಿ: Yettinahole Project: ಅಕ್ರಮದ ಹೊಳೆಯಾದ ಎತ್ತಿನಹೊಳೆ ಪ್ರಾಜೆಕ್ಟ್; ಭ್ರಷ್ಟಾಚಾರದ ಹಿಂದಿದೆಯಾ ಮಾಫಿಯಾ?

ಈ ಎಲ್ಲ ನಿಯಮಗಳನ್ನು ಪಾಲನೆ ಮಾಡುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ವಿಶೇಷವಾಗಿ ಸಾರ್ವಜನಿಕರು ಮನೆಯಲ್ಲಿ ಹಾಗೂ ಹೊರಗಡೆ ಹೇಗೆ ಇರಬೇಕು ಎಂಬ ಬಗ್ಗೆ ಕೆಲವು ಸೂಚನೆಗಳನ್ನು ನೀಡಲಾಗಿದ್ದು, ಅದನ್ನು ಪಾಲನೆ ಮಾಡುವಂತೆ ಹೇಳಲಾಗಿದೆ.

Exit mobile version