Site icon Vistara News

Health Tips Kannada: ಊಟದ ನಂತರ ಮೊಸರು ಸೇವಿಸಿದರೆ ಎಷ್ಟೊಂದು ಪ್ರಯೋಜನ ಗೊತ್ತೆ?

Health Tips Kannada

ಕ್ಯಾಲ್ಸಿಯಂ, ಪ್ರೊಟೀನ್, ವಿಟಮಿನ್ ಬಿ2, (Health Tips Kannada) ವಿಟಮಿನ್ ಬಿ12, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ಗಳು ಹೇರಳವಾಗಿರುವ ಮೊಸರನ್ನು (curd) ಊಟದ ಅನಂತರ (After Meal ) ಸೇವಿಸುವುದರಿಂದ ಸಾಕಷ್ಟು (Health Benefits) ಪ್ರಯೋಜನಗಳಿವೆ. ಮೊಸರು ಸೇವನೆಯು ಜೀರ್ಣಕ್ರಿಯೆಗೆ (digestion) ಸಹಾಯ ಮಾಡುತ್ತದೆ, ಕರುಳಿನ ಆರೋಗ್ಯವನ್ನು (gut health) ಹೆಚ್ಚಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಮೊಸರು ದೇಹವನ್ನು ತಂಪಾಗಿಸುವ ಪರಿಣಾಮವನ್ನು ಹೊಂದಿದೆ. ದೇಹದ ಪೋಷಣೆ ಮಾಡುವುದರ ಜೊತೆಗೆ ಮನಸ್ಸನ್ನು ಶಾಂತಗೊಳಿಸುತ್ತದೆ. ಲ್ಯಾಕ್ಟಿಕ್ ಆಸಿಡ್ ಬ್ಯಾಕ್ಟೀರಿಯಾವನ್ನು ಸೇರಿಸುವ ಮೂಲಕ ಹುದುಗಿಸಿದ ಹಾಲಿನಲ್ಲಿ ಮೊಸರನ್ನು ತಯಾರಿಸಲಾಗುತ್ತದೆ. ಇದು ಮೂಳೆಯ ಆರೋಗ್ಯ ಮತ್ತು ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಆರೋಗ್ಯ ಪ್ರಯೋಜನಗಳನ್ನು ಉತ್ತೇಜಿಸಲು ದಿನಕ್ಕೆ 100- 200 ಗ್ರಾಂ ಮೊಸರನ್ನು ಮಾತ್ರ ಸೇವಿಸಬೇಕು. ಆದರೂ ಅತಿಯಾಗಿ ಮೊಸರು ತಿನ್ನುವುದು ಜೀರ್ಣಕ್ರಿಯೆಯಲ್ಲಿ ಅಸ್ವಸ್ಥತೆ, ತೂಕ ಹೆಚ್ಚಳ ಮತ್ತು ಲ್ಯಾಕ್ಟೋಸ್ ವೈಪರೀತ್ಯಕ್ಕೆ ಕಾರಣವಾಗುತ್ತದೆ.

ಮೊಸರು ಸೇವಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ. ಯಾಕೆಂದರೆ ಇದು ಪ್ರೋಬಯಾಟಿಕ್‌ಗಳ ಪೂರೈಕೆಗೆ ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಅದರಲ್ಲಿರುವ ಪೌಷ್ಟಿಕಾಂಶದ ಅಂಶ ಮತ್ತು ಪ್ರೋಬಯಾಟಿಕ್ ಗುಣಲಕ್ಷಣಗಳಿಂದಾಗಿ ಒಟ್ಟಾರೆ ಆರೋಗ್ಯಕ್ಕೆ ಇದು ತುಂಬಾ ಪ್ರಯೋಜನಕಾರಿಯಾಗಿದೆ.

ಮೊಸರನ್ನು ಊಟದ ನಂತರ ಸೇವಿಸಿದರೆ ಅದು ಶಕ್ತಿಯನ್ನು ಹೆಚ್ಚಿಸುವುದು. ಊಟದ ಅನಂತರ ಸೇವಿಸಿದರೆ ಜೀರ್ಣಕ್ರಿಯೆಯನ್ನು ವರ್ಧಿಸಲು ಸಹಾಯ ಮಾಡುತ್ತದೆ. ಆದರೆ ರಾತ್ರಿಯ ಅನಂತರ ಮೊಸರು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಯಾಕೆಂದರೆ ಅದು ನಿದ್ರೆಗೆ ಸಮಸ್ಯೆಯಾಗಬಹುದು ಮತ್ತು ಅಜೀರ್ಣಕ್ಕೆ ಕಾರಣವಾಗಬಹುದು.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದರಿಂದ ಹಿಡಿದು ಹೃದಯದ ಆರೋಗ್ಯವನ್ನು ಉತ್ತೇಜಿಸುವ ಮೊಸರನ್ನು ಊಟದ ಬಳಿಕ ಸೇವಿಸುವುದರಿಂದ ಐದು ಪ್ರಮುಖ ಪ್ರಯೋಜನಗಳಿವೆ.


ಆರೋಗ್ಯಕರ ಜೀರ್ಣಕ್ರಿಯೆ

ಮೊಸರು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಇದರಲ್ಲಿರುವ ವಿಟಮಿನ್, ಪ್ರೋಟೀನ್ ಮತ್ತು ಲ್ಯಾಕ್ಟೋಬಾಸಿಲಸ್ ಬ್ಯಾಕ್ಟೀರಿಯಾಗಳು ಸಮೃದ್ಧವಾಗಿವೆ.

ರೋಗನಿರೋಧಕ ಶಕ್ತಿ ಹೆಚ್ಚಳ

ಮೊಸರಿನಲ್ಲಿರುವ ಪ್ರೋಬಯಾಟಿಕ್ ಕರುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ಅದರ ಸಕ್ರಿಯ ಬ್ಯಾಕ್ಟೀರಿಯಾ ಗುಣಲಕ್ಷಣಗಳು ಸೂಕ್ಷ್ಮಜೀವಿಗಳಿಂದ ಉಂಟಾಗುವ ಕಾಯಿಲೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಮಧುಮೇಹ ನಿಯಂತ್ರಣ

ಮೊಸರಿನಲ್ಲಿರುವ ಜೀರ್ಣವಾಗುವ ಪ್ರೋಟೀನ್‌ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಗ್ರೀಕ್ ಮೊಸರು ಹೃದ್ರೋಗದ ಅಪಾಯವನ್ನು ಕಾಪಾಡಿಕೊಳ್ಳಲು ಬಹಳ ಸಹಾಯಕವಾಗಿದೆ.

ತೂಕ ನಷ್ಟ

ಮೊಸರಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಅದು ಕಾರ್ಟಿಸೋಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಸರಿನ ಸೇವನೆಯು ಕಾರ್ಟಿಸೋಲ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ. ಯಾಕೆಂದರೆ ಇದು ಅಸಮತೋಲಿತ ಜೀವನಶೈಲಿಯಿಂದ ಉತ್ತುಂಗಕ್ಕೇರುವ ಹಾರ್ಮೋನ್ ಆಗಿದ್ದು, ಸೊಂಟದ ರೇಖೆಯಲ್ಲಿ ಕೊಬ್ಬನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ.

ಹೃದಯದ ಆರೋಗ್ಯ

ದೈನಂದಿನ ದಿನಚರಿಯಲ್ಲಿ ಮೊಸರು ಸೇರಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು.

ರಕ್ತದೊತ್ತಡ ನಿಯಂತ್ರಣ

ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಿ ಹೃದಯವನ್ನು ಆರೋಗ್ಯಕರವಾಗಿಡಬಹುದು.

ಹಲ್ಲಿನ ಆರೋಗ್ಯ

ಮೊಸರು ಕ್ಯಾಲ್ಸಿಯಂ ಮತ್ತು ರಂಜಕದ ಮೂಲವಾಗಿದೆ. ಇದು ಹಲ್ಲುಗಳ ಎನಾಮೆಲ್‌ಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ಹಲ್ಲಿನ ಕೊಳೆತವನ್ನು ತಡೆಯುತ್ತದೆ. ದೈನಂದಿನ ಆಹಾರದಲ್ಲಿ ಮೊಸರನ್ನು ಸೇರಿಸುವುದರಿಂದ ಬಾಯಿಯ ನೈರ್ಮಲ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಹಲ್ಲಿನ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Mobile Addiction: ನಿಮ್ಮ ಮಗುವನ್ನು ಮೊಬೈಲ್ ಚಟದಿಂದ ತಪ್ಪಿಸಬೇಕೆ? ಈ 5 ಸಲಹೆ ಅನುಸರಿಸಿ

ಊಟದ ಅನಂತರ ಮೊಸರು ಯಾಕೆ ಸೇವಿಸಬೇಕು?

ಮೊಸರನ್ನು ಯಾವಾಗಲೂ ಊಟದ ಅನಂತರ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಇದು ಕರುಳಿನ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುವುದು. ಅದರಲ್ಲಿ ಪ್ರೋಬಯಾಟಿಕ್ ಅಂಶ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರು ಶೀತವನ್ನು ಉಂಟು ಮಾಡುತ್ತದೆ. ಹೀಗಾಗಿ ಇದನ್ನು ಬೆಚ್ಚಗಿನ ವಾತಾವರಣದಲ್ಲಿ ದೇಹವನ್ನು ತಂಪಾಗಿರಿಸಲು ಸೇವಿಸುವುದು ಉತ್ತಮ. ಯಾವುದೇ ರೀತಿಯ ಡೈರಿ ಉತ್ಪನ್ನದ ಅಲರ್ಜಿ ಇದ್ದರೆ ಮೊಸರು ತಿನ್ನಬಾರದು ಅಥವಾ ತಿನ್ನುವ ಮೊದಲು ವೈದ್ಯರನ್ನು ಸಂಪರ್ಕಿಸಿ.

Exit mobile version