Kids Care: ಪ್ರಯಾಣದ ವೇಳೆ ಮಕ್ಕಳು ಅಸ್ವಸ್ಥರಾಗದಂತೆ ನೋಡಿಕೊಳ್ಳಲು ಹೀಗೆ ಮಾಡಿ - Vistara News

ಆರೋಗ್ಯ

Kids Care: ಪ್ರಯಾಣದ ವೇಳೆ ಮಕ್ಕಳು ಅಸ್ವಸ್ಥರಾಗದಂತೆ ನೋಡಿಕೊಳ್ಳಲು ಹೀಗೆ ಮಾಡಿ

ಬಸ್ಸು, ಕಾರುಗಳಲ್ಲಿ ಓಡಾಡಿದರೆ (kids Care) ಎಷ್ಟೋ ಮಕ್ಕಳು ಹೊಟ್ಟೆ ತೊಳೆಸಿ ವಾಂತಿ ಮಾಡುವುದು ಸಾಮಾನ್ಯ. ಅದರಲ್ಲೂ ನಾಲ್ಕಾರು ದಿನಗಳ ಕಾಲ ತಿರುಗಾಟದಲ್ಲೇ ಇರುವಂಥ ಪ್ರವಾಸವನ್ನು ಕೈಗೆತ್ತಿಕೊಳ್ಳುವಾಗ, ಹೀಗೆ ತಿಂದಿದ್ದೆಲ್ಲ ಮಗುಚುವ ಮಕ್ಕಳಿದ್ದರೆ ಹೆತ್ತವರ ಪಡಿಪಾಟಲು ಹೇಳತೀರದು. ಮಕ್ಕಳಲ್ಲಿ ಕಾಣುವ ಈ ಲಕ್ಷಣಗಳನ್ನು ನಿಭಾಯಿಸಲು ಸಾಧ್ಯವೇ? ಸಾಧ್ಯ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kids Care
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಕ್ಕಳಿಗೆ ಬೇಸಿಗೆ (kids Care) ರಜ ಬಂದಿದೆ. ಅವರೊಂದಿಗೆ ಎಲ್ಲಾದರೂ ತಿರುಗಾಡುವುದು ಈ ದಿನಗಳಲ್ಲಿ ಸಾಮಾನ್ಯ. ರೈಲು, ವಿಮಾನಗಳಲ್ಲಿ ಓಡಾಡಿದರೆ ಆ ಕತೆ ಬೇರೆ. ಆದರೆ ಬಸ್ಸು, ಕಾರುಗಳಲ್ಲಿ ಓಡಾಡಿದರೆ ಎಷ್ಟೋ ಮಕ್ಕಳು ಹೊಟ್ಟೆ ತೊಳೆಸಿ ವಾಂತಿ ಮಾಡುವುದು ಸಾಮಾನ್ಯ. ಅದರಲ್ಲೂ ನಾಲ್ಕಾರು ದಿನಗಳ ಕಾಲ ತಿರುಗಾಟದಲ್ಲೇ ಇರುವಂಥ ಪ್ರವಾಸವನ್ನು ಕೈಗೆತ್ತಿಕೊಳ್ಳುವಾಗ, ಹೀಗೆ ತಿಂದಿದ್ದೆಲ್ಲ ಮಗುಚುವ ಮಕ್ಕಳಿದ್ದರೆ ಹೆತ್ತವರ ಪಡಿಪಾಟಲು ಹೇಳತೀರದು. ಮೋಜು, ಮಸ್ತಿಯ ಬದಲು ಪ್ರವಾಸದಲ್ಲಿ ತಲೆಬಿಸಿಯೇ ತುಂಬಿಕೊಳ್ಳುತ್ತದೆ.
ಕಾರು, ಬಸ್ಸುಗಳು ಮಾತ್ರವಲ್ಲ, ಅಮ್ಯೂಸ್‌ಮೆಂಟ್‌ ಪಾರ್ಕುಗಳಿಗೆ ಹೋದರೂ ಪರಿಸ್ಥಿತಿ ಭಿನ್ನವಾಗಿರುವುದಿಲ್ಲ. ಯಾವುದೇ ತಿರುಗಿಸುವ ರೈಡ್‌ಗಳಿಗೆ ಹತ್ತಿದರೆ, ಹೊಟ್ಟೆಯೆಲ್ಲ ತಿರುಗುವುದೇ! ವಯಸ್ಕರಿಗೂ ಇಂಥವೆಲ್ಲ ಆಗಬಾರದೆಂದಿಲ್ಲ. ಆದರೆ ದೊಡ್ಡವರಿಗೆ ಹೋಲಿಸಿದಲ್ಲಿ ಮಕ್ಕಳಲ್ಲಿ ಈ ಪ್ರಯಾಣದ ಅಸ್ವಸ್ಥತೆಯ ಪ್ರಮಾಣ ಹೆಚ್ಚು. ಇನ್ನೂ ಬೆಳೆಯದ ಅವರ ವೆಸ್ಟಿಬ್ಯುಲರ್‌ ವ್ಯವಸ್ಥೆಯೇ ಇದಕ್ಕೆ ಕಾರಣ ಎನ್ನುತ್ತದೆ ವೈದ್ಯ ವಿಜ್ಞಾನ. ಆದರೆ ಇದರಲ್ಲೇ ಕೊಂಚ ವ್ಯತ್ಯಾಸವಿದೆ. ದೊಡ್ಡವರು ಅನುಭವಿಸಿದಂತೆ ಮಾಮೂಲಿ ಹೊಟ್ಟೆ ತೊಳೆಸುವುದನ್ನಷ್ಟೇ ಈ ಮಕ್ಕಳು ಅನುಭವಿಸುವುದಿಲ್ಲ. ಬದಲಿಗೆ, ಸುಸ್ತು, ಆಯಾಸ, ಕಿರಿಕಿರಿ, ತಲೆ ಸುತ್ತಿದ ಅನುಭವ, ವಿಪರೀತ ಆಕಳಿಸುವುದು, ನಿದ್ದೆ ಬಂದಂತಾಗುವುದು- ಇವೆಲ್ಲ ಲಕ್ಷಣಗಳನ್ನು ಮಕ್ಕಳಲ್ಲಿ ಗಮನಿಸಬಹುದು.

Family on Vacation Travel by Car

ನಿಯಂತ್ರಣ ಹೇಗೆ?

ಮಕ್ಕಳಲ್ಲಿ ಕಾಣುವ ಈ ಲಕ್ಷಣಗಳನ್ನು ನಿಭಾಯಿಸಲು ಸಾಧ್ಯವೇ? ಮಕ್ಕಳು ಪ್ರೌಢಾವಸ್ಥೆಗೆ ಬಂದಂತೆ ಪ್ರಯಾಣದ ಅಸ್ವಸ್ಥತೆಯು ತನ್ನಷ್ಟಕ್ಕೇ ಕಡಿಮೆಯಾಗಬಹುದು; ಆಗದೆಯೂ ಇರಬಹುದು. ಅದೇನೇ ಇದ್ದರು, ಆಯಾ ಪ್ರವಾಸಗಳು ಪ್ರಯಾಸಕರ ಆಗದಂತೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ.
ಪ್ರಯಾಣ ದೀರ್ಘವಾಗಿದ್ದರೆ, ಅದನ್ನು ತುಂಡರಿಸಿ. ಉದಾ, ಆರೆಂಟು ತಾಸುಗಳ ಪ್ರಯಾಣವಿದ್ದರೆ, ಅದನ್ನು ಪ್ರತಿ ಎರಡು ತಾಸುಗಳಿಗೆ ತುಂಡರಿಸಲು ಸಾಧ್ಯವೇ ನೋಡಿ. ನಡುವೆ ಚಹಾ, ತಿಂಡಿ ಅಥವಾ ಊಟದ ವಿರಾಮವನ್ನು ಅಳವಡಿಸಿಕೊಳ್ಳಲು ಅವಕಾಶವಿದ್ದರೆ ಇನ್ನೂ ಒಳ್ಳೆಯದು. ಪ್ರಯಾಣಿಸುತ್ತಿರುವ ವಾಹನದಲ್ಲಿ ಸಾಕಷ್ಟು ತಾಜಾ ಗಾಳಿ ಇರಲಿ. ಕಿಟಕಿಗಳೆಲ್ಲ ಮುಚ್ಚಿದ್ದು, ಉಸಿರು ಕಟ್ಟುವಂತಿದ್ದರೆ ಪ್ರಯಾಣದ ಅಸ್ವಸ್ಥತೆ ಇನ್ನಷ್ಟು ಬಾಧಿಸುತ್ತದೆ.

ಸ್ಕ್ರೀನ್‌ ಬೇಡ

ಪ್ರಯಾಣಿಸುವಾಗ ಓದುವುದು, ಸ್ಕ್ರೀನ್‌ ನೋಡುವುದು ಬೇಡ. ಇದರಿಂದ ಹೊಟ್ಟೆಯ ತಳಮಳ ಇನ್ನಷ್ಟು ಹೆಚ್ಚುತ್ತದೆ. ಇದರ ಬದಲಿಗೆ ಕಿಟಕಿಯಾಚೆಯ ಲೋಕ ಎಷ್ಟು ಸುಂದರವಾಗಿದೆ ಎಂಬುದನ್ನು ಗಮನಿಸಬಹುದು. ನಮ್ಮೊಂದಿಗೇ ಓಡುವ ಸೂರ್ಯ-ಚಂದ್ರರೊಂದಿಗೆ ಮೋಜು ಮಾಡಬಹುದು. ಕಿವಿಗೆ ಇಯರ್‌ಫೋನ್‌ ಹಾಕಿ ಬೇಕಾದ್ದನ್ನು ಕೇಳಬಹುದು. ಅಂತೂ ಕಣ್ಣಿಗೆ ಕೆಲಸ ನೀಡದೆಯೇ, ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಆಗಬೇಕಿದೆ.

ಶುಂಠಿ ಪೆಪ್ಪರಮಿಂಟು

ಶುಂಠಿ ಮಿಠಾಯಿಗಳು, ಪೆಪ್ಪರಮಿಂಟುಗಳು, ಜಿಂಜರ್‌ ಕುಕಿಗಳು ಅಥವಾ ಶುಂಠಿ ಪಾನಕದಂಥವು ಇಂಥ ಸಮಯದಲ್ಲಿ ನೆರವಾಗಬಹುದು. ಒಂದೊಮ್ಮೆ ಶುಂಠಿಯ ಘಾಟು ಇಷ್ಟವಾಗದಿದ್ದರೆ, ನಿಂಬೆಹಣ್ಣಿನ ಸಿಪ್ಪೆಯ ಸೊನೆ, ಕಿತ್ತಳೆ ಸಿಪ್ಪೆಯ ಸೊನೆ, ಏಲಕ್ಕಿಯ ಪರಿಮಳ- ಇಂಥವೆಲ್ಲ ಹೊಟ್ಟೆ ತೊಳೆಸುವುದು ಮತ್ತು ಓಕರಿಕೆಯನ್ನು ನಿಯಂತ್ರಿಸುತ್ತವೆ. ಕೆಲವು ಅಕ್ಯುಪ್ರೆಷರ್‌ ಬಿಂದುಗಳಲ್ಲಿ ಒತ್ತುವುದರಿಂದಲೂ ಹೊಟ್ಟೆಯ ತಳಮಳವನ್ನು ನಿಯಂತ್ರಿಸಬಹುದು.

Child Kid Eating Apple Fruit Outdoor Autumn Fall Nature Healthy

ಆಹಾರ ಲಘುವಾಗಿರಲಿ

ಪ್ರಯಾಣ ಮಾಡುವುದಿದೆ ಎಂಬುದು ಗೊತ್ತಿರುವಾಗ, ಮಕ್ಕಳ ಆಹಾರ ಲಘುವಾಗಿರಲಿ. ಕರಿದ ಅಥವಾ ಜಿಡ್ಡಿನ ತಿಂಡಿಗಳು, ಅತಿಯಾದ ಹುಳಿ ರುಚಿಯವು, ಖಾರ-ಮಸಾಲೆ ಹೊಂದಿದವು, ಹೊಟ್ಟೆ ಉಬ್ಬರಿಸುವಂಥವು ಪ್ರಯಾಣಕ್ಕೆ ಮುನ್ನ ಬೇಡ. ಸುಲಭವಾಗಿ ಜೀರ್ಣವಾಗಲು ಲಘು ಆಹಾರ ಸೇವಿಸುವುದು ಒಳ್ಳೆಯದು. ನೀರು ಸಾಕಷ್ಟು ಕುಡಿಯುವುದು ಸೂಕ್ತ. ಮಗುವಿಗೆ ಸಾಕಷ್ಟು ವಿಶ್ರಾಂತಿ ನೀಡಿ. ಅರ್ಧ ನಿದ್ದೆಯಲ್ಲಿ ಎಬ್ಬಿಸುವುದು ಅಸ್ವಸ್ಥತೆಯನ್ನು ಇಮ್ಮಡಿಕೊಳಿಸುತ್ತದೆ.
ದೀರ್ಘ ಉಸಿರಾಟದಂಥವು, ಮಾನಸಿಕವಾಗಿ ಮಗುವಿನ ಪ್ರಯಾಣದ ಆತಂಕವನ್ನು ಕಡಿಮೆ ಮಾಡಬಲ್ಲದು. ಕೆಲವೊಮ್ಮೆ ಪ್ರಯಾಣದ ಬಗೆಗಿನ ಆತಂಕ, ಅತಿ ಉತ್ಸುಕತೆ ಸಹ ಹೊಟ್ಟೆಯಲ್ಲಿ ತಳಮಳ ಸೃಷ್ಟಿಸುತ್ತದೆ ಅಥವಾ ಇದ್ದಿದ್ದನ್ನು ಹೆಚ್ಚಿಸುತ್ತದೆ. ಇಷ್ಟಾಗಿಯೂ ಪ್ರಯಾಣದಲ್ಲಿ ಪದೇಪದೆ ವಾಂತಿಯಾಗುತ್ತಿದ್ದು, ಅಸ್ವಸ್ಥತೆ ಹೆಚ್ಚಿದರೆ, ವೈದ್ಯರನ್ನು ಸಂಪರ್ಕಿಸಿ. ಅವರ ಸಲಹೆಯ ಮೇರೆಗೆ ವಾಂತಿ ನಿಲ್ಲಿಸುವ ಔಷಧಿ ನೀಡಿ.

ಇದನ್ನೂ ಓದಿ: Eating Ice Cream In Summer: ಬೇಸಿಗೆಯಲ್ಲಿ ಐಸ್‌ಕ್ರೀಮ್ ತಿನ್ನುವುದರಿಂದ ಸೆಖೆ ಮತ್ತೂ ಹೆಚ್ಚಾಗುತ್ತದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

Doctors at Fortis Hospital remove fish bone from man's stomach for 5 years

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

Breast Cancer Awareness Month celebrated through bikethon

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading

ಬೆಂಗಳೂರು

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Pink Strong walkathon to raise awareness among people about breast cancer

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

Pink Strong walkathon to raise awareness among people about breast cancer

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚೆಗೆ ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಿರಬೇಕು, ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

Pink Strong walkathon to raise awareness among people about breast cancer

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರರಾದ ಡಾ, ಮೋನಿಕಾ ಪನ್ಸಾರಿ ಮಾತನಾಡಿ, ಸ್ತನಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ, ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿ. ಹೀಗಾಗಿ ಹೆಣ್ಣುಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

Continue Reading
Advertisement
HD Revanna
Latest14 hours ago

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

Latest14 hours ago

ಮತದಾನಕ್ಕೆ ಕ್ಯೂನಲ್ಲಿ ನಿಂತರೂ ಕಷ್ಟ; ನಿಲ್ಲದಿದ್ದರೂ ಕಷ್ಟ: ಹಾಗಾದ್ರೆ ನಟ ಕಮಲ್‌ ಹಾಸನ್‌ ಏನು ಮಾಡಬೇಕಿತ್ತು?

Latest14 hours ago

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

Latest15 hours ago

ಸಮಂತಾ ಕೇಳಿದ ಪ್ರಶ್ನೆಗೆ ದಿಗಂತ್ ಶಾಕ್! ‘ದೂದ್ ಪೇಡ’ ಅಂದ್ರೆ ಯಾರು ಎಂದಿದ್ದಕ್ಕೆ ‘ಚಾಕೊಲೇಟ್ ಹೀರೊ’ ನೀಡಿದ ರಿಯಾಕ್ಷನ್ ಹೇಗಿತ್ತು?

Latest15 hours ago

ಮಹಿಳಾ ಮೀಸಲಾತಿ: ಡಿಎಂಕೆ ಹುನ್ನಾರಕ್ಕೆ ರಾಜ್ಯ ಬಲಿ ಕೊಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಆರೋಪ

Latest15 hours ago

ಬೆಸ್ಕಾಂ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ; ಹೆಚ್‌ಟಿ ಗ್ರಾಹಕರಿಗೆ ಅನುಕೂಲ

Latest15 hours ago

ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಭಾರತಕ್ಕೆ ಅವಮಾನ: ಭಾರತ-ಚೀನಾ ‘ನರಕ’ ಎಂದ ಮೈಕೆಲ್ ಸ್ಯಾವೇಜ್ ಪೋಸ್ಟ್ ಹಂಚಿಕೊಂಡ ಅಧ್ಯಕ್ಷ

HD DeveGowda Wont celebrate 92nd birthday
Latest15 hours ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

Latest16 hours ago

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ; ಥಳಿಸಿದ ಗ್ರಾಮಸ್ಥರು

Latest16 hours ago

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌