ಬೆಂಗಳೂರು: ಈಗಾಗಲೆ ಕೇರಳ, ದೇಶದ ರಾಜಧಾನಿ ನವದೆಹಲಿ, ಹಿಮಾಚಲ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಮಂಕಿಪಾಕ್ಸ್ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮಂಕಿ ಪಾಕ್ಸ್ ಲಕ್ಷಣಗಳು ಇರುವ ವ್ಯಕ್ತಿಯನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚಿದೆ. ಆಫ್ರಿಕಾ ಮೂಲದ 55 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು ಪತ್ತೆಯಾಗಿದ್ದು, ಕೂಡಲೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಶುಶ್ರೂಶೆ ಹಾಗೂ ನಿಗಾ ವಗಹಿಸಲಾಗುತ್ತಿದೆ.
ಈ ವ್ಯಕ್ತಿ ಹೊರತಾಗಿ ಸಂಪರ್ಕಿತ ವ್ಯಕ್ತಿಗಳಲ್ಲಿ ಯಾವುದೇ ಗುಣ ಲಕ್ಷಣಗಳು ಇಲ್ಲ ಎಂದು ತಿಳಿದು ಬಂದಿದೆ. ಈ ವ್ಯಕ್ತಿಯ ಜತೆ ಇಬ್ಬರು ವ್ತಕ್ತಿಗಳು ಇದ್ದು, ಅವರನ್ನೂ ಪರೀಕ್ಷೆ ಮಾಡಲಾಗುತ್ತಿದೆ.
ಈ ವ್ಯಕ್ತಿ ಜುಲೈ 4ರಂದು ಇಥಿಯೋಪಿಯದಿಂದ ಬೆಂಗಳೂರಿಗೆ ಆಗಮಿಸಿದ್ದರು. ಕಿಡ್ನಿ ಕಸಿ ಮಾಡಲು ಬೆಂಗಳೂರಿಗೆ ಆಗಮಿಸಿದ್ದ ಆಫ್ರಿಕಾ ಮೂಲದ ವ್ಯಕ್ತಿಯ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿದ್ದವು. ಹಾಗೂ ಜ್ವರವೂ ಇತ್ತು.
ಈ ಕುರಿತು ತಪಾಸಣೆ ನಡೆಸಿದಾಗ ಮಂಕಿ ಪಾಕ್ಸ್ ಲಕ್ಷಣಗಳು ಕಂಡುಬಂದಿವೆ. ವ್ಯಕ್ತಿಯ ರಕ್ತದ ಮಾದರಿಯನ್ನು ಪಡೆದು ಪುಣೆಯ ರಾಷ್ಟ್ರೀಯ ವೈರಾಲಜಿ ಇನ್ಸ್‌ಟಿಟ್ಯೂಟ್‌ಗೆ ರವಾನೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.
ಇದನ್ನೂ ಓದಿ | Monkeypox: ಮಂಕಿ ಪಾಕ್ಸ್ ಭಾರತಕ್ಕೆ ಬಂದಿಲ್ಲ, ಆದರೂ ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚನೆ