Site icon Vistara News

Pneumonia Remedy: ನ್ಯುಮೋನಿಯಾಗೆ ಸೂಪರ್‌ಫುಡ್‌ ಯಾವುವೆಂದು ತಿಳಿದಿದೆಯೇ?

Pneumonia Remedy

ಕೆಲವೊಮ್ಮೆ ಕೆಲವರಿಗೆ ಸಾಮಾನ್ಯ ಜ್ವರ ನ್ಯುಮೋನಿಯಾಕ್ಕೆ (pneumonia) ತಿರುಗುವುದುಂಟು. ಸಾಮಾನ್ಯ ಜ್ವರ (viral fever) ಎಂದುಕೊಂಡು ಔಷಧಿಗಳನ್ನು ತೆಗೆದುಕೊಂಡರೂ, ದಿನಗಳೆದಂತೆ, ಕಫ, ಮೂಗು ಕಟ್ಟಿರುವುದು, ಕಡಿಮೆಯಾಗದ ಜ್ವರ, ಜೊತೆಗೆ ಚಳಿ ಎಲ್ಲವೂ ಉಲ್ಬಣಿಸಿ ಇದು ನ್ಯುಮೋನಿಯಾ ಎಂಬ ತೀರ್ಮಾನಕ್ಕೆ ವೈದ್ಯರು ಪರೀಕ್ಷೆಗಳಿಂದ ದೃಢಪಡಿಸುತ್ತಾರೆ. ಶ್ವಾಸಕೋಶದೊಳಗಿನ ಗಾಳಿಚೀಲಗಳಿಗೂ ಇನ್‌ಫೆಕ್ಷನ್‌ (Infection) ಹರಡಿಕೊಂಡು ಎದೆನೋವು ಕೂಡಾ ಕಾಣಿಸಿಕೊಳ್ಳುತ್ತದೆ. ಉಸಿರಾಟಕ್ಕೆ ಕಷ್ಟವಾಗುವುದು, ನಿರ್ಜಲೀಕರಣ (dehydration), ನಿತ್ರಾಣ, ಉಬ್ಬಸದಂತಹ ಸಮಸ್ಯೆ, ಕೆಮ್ಮಿನ ಸಂದರ್ಭ ಹಸಿರು ಮಿಶ್ರಿತ ಹಳದಿ ಬಣ್ಣದ ಕಫ ಹೊರಗೆ ಬರುವುದು, ಕೆಲವೊಮ್ಮೆ ರಕ್ತವೂ ಸೇರಿ ಕಫ ಹೊರಗೆ ಬರುವುದು ಇತ್ಯಾದಿಗಳೆಲ್ಲ ಆಗಿ ನ್ಯುಮೋನಿಯಾ ಬಹಳವಾಗಿ ಕಾಡುತ್ತದೆ. ಹೀಗೆ ನ್ಯುಮೋನಿಯಾ ಜ್ವರದಿಂದ ಬಳಲಿ ವೈದ್ಯರ ಆರೈಕೆಯ ನಂತರ ಗುಣಮುಖರಾದರೂ ಕೂಡಾ, ಬಹಳ ದಿನಗಳವರೆಗೆ ಶಿಸ್ತುಬದ್ಧ ಆಹಾರ ಸೇವನೆ, ಆರೋಗ್ಯದ ಬಗ್ಗೆ ಕಾಳಜಿ ಎಲ್ಲವೂ ಅತ್ಯಂತ ಅಗತ್ಯ. ಇದರ ನಿರ್ಲಕ್ಷ್ಯ ಸಲ್ಲದು. ಅತ್ಯಂತ ಕಾಳಜಿಯುಕ್ತ ಆಹಾರ ಸೇವನೆಯೂ (Food habit) ಅಗತ್ಯ. ಹಾಗಾಗಿ ಬನ್ನಿ, ನ್ಯುಮೋನಿಯಾ ಸಂದರ್ಭ ಹಾಗೂ, ಗುಣಮುಖರಾದ (pneumonia cure) ಮೇಲೂ ಯಾವೆಲ್ಲ ಕೆಲವು ಆಹಾರಗಳು ನ್ಯುಮೋನಿಯಾದಿಂದ ಬಹುಬೇಗನೆ ಗುಣಮುಖರಾಗುವಂತೆ (pneumonia remedy) ಮಾಡುತ್ತದೆ ಎಂಬುದನ್ನು ನೋಡೋಣ.

1. ಜೇನುತುಪ್ಪ: ಜೇನುತುಪ್ಪ ಶ್ವಾಸಕೋಶದ ಸಮಸ್ಯೆಗಳಿಗೆ ಅತ್ಯಂತ ಒಳ್ಳೆಯದು. ಇದು ಕಫ, ಶೀತ, ನೆಗಡಿ ಮತ್ತಿತರ ಸಮಸ್ಯೆಗಳಿಗೂ ಅತ್ಯುತ್ತಮ ಪರಿಹಾರ ನೀಡುತ್ತದೆ. ನಿತ್ಯವೂ ಒಂದು ಚಮಚ ಜೇನುತುಪ್ಪ ಸೇವನೆಯಿಂದ ಅಥವಾ ಜೇನುತುಪ್ಪದ ಜೊತೆಗೆ ತುಳಸಿರಸ, ಶುಂಠಿರಸ ಸೇರಿಸಿ ಸೇವಿಸುವುದರಿಂದ ಕಫ ಬಹುಬೇಗನೆ ಕರಗಿ ಶ್ವಾಸಕೋಶಗಳಿಗೆ ಆರಾಮ ದೊರೆಯುತ್ತದೆ.

2. ಅರಿಶಿನ: ನಿತ್ಯವೂ ಭಾರತೀಯರು ಅಡುಗೆಯಲ್ಲಿ ಬಳಸುವ ಮಸಾಲೆಗಳಲ್ಲಿ ಒಂದು. ಇದನ್ನು ನಮ್ಮ ಹಲವು ಸಮಸ್ಯೆಗಳಿಗೂ ನಮಗೆ ಬಳಸಿ ಗೊತ್ತು. ಯಾಕೆಂದರೆ ಇದು ತನ್ನಲ್ಲಿ ಆಂಟಿಸೆಪ್ಟಿಕ್‌ ಗುಣಗಳನ್ನು ಹೊಂದಿರುವ ಮಸಾಲೆ ಪದಾರ್ಥ. ಇದರ ಸೇವನೆಯಿಂದಲೂ ಕೂಡಾ ಇನ್‌ಫೆಕ್ಷನ್‌ ಬಹುಬೇಗನೆ ದೇಹದಿಂದ ವಾಸಿಯಾಗಿ, ಆರೋಗ್ಯ ನಮ್ಮದಾಗುತ್ತದೆ.

3. ಶುಂಠಿ: ಶೀತ, ಕಫ, ನೆಗಡಿಯಂತಹ ಸಮಸ್ಯೆಗಳಿಗೆ ಎಲ್ಲರಿಗೂ ಮೊದಲು ನೆನಪಾಗುವ ಮನೆಮದ್ದು ಎಂದರೆ ಶುಂಠಿ. ಈ ಶುಂಠಿಯೂ ನ್ಯುಮೋನಿಯಾದಂತಹ ಸಮಸ್ಯೆಗೂ ಕೂಡಾ ಅತಯುತ್ತಮ ಕೆಲಸವನ್ನೇ ಮಾಡುತ್ತದೆ. ಜೇನುತುಪ್ಪದ ಜೊತೆ ಶುಂಠಿ ರಸ ಸೇರಿಸಿ ಸೇವನೆ ಮಾಡುವುದು, ಶುಂಠಿ ಸೇರಿಸಿ ಕಷಾಯ ಮಾಡುವುದು ಅಥವಾ ಶುಂಠಿ ಟೀ ಮಾಡಿ ಕುಡಿಯುವುದರಿಂದಲೂ ಸಮಸ್ಯೆಗೆ ಉತ್ತಮ ಫಲ ಸಿಗುತ್ತದೆ.

ಇದನ್ನೂ ಓದಿ: Cashew Health Tips: ಗೋಡಂಬಿ ತಿಂದರೆ ಏನಾಗುತ್ತದೆ?

4. ಸಿಟ್ರಸ್‌ ಹಣ್ಣುಗಳು: ನಿಂಬೆಹಣ್ಣು, ಮುಸಂಬಿ ಹಾಗೂ ಕಿತ್ತಳೆ ಹಣ್ಣುಗಳಲ್ಲಿ ಹೇರಳವಾಗಿ ವಿಟಮಿನ್‌ ಸಿ ಇರುವುದರಿಂದ ಇವು ಕೂಡಾ ಶೀತ, ನೆಗಡಿ, ಕಫದಂತಹ ಸಮಸ್ಯೆಗಳಿಗೆ ನೆರವಾಗಬಲ್ಲುದು. ನ್ಯುಮೋನಿಯಾ ನಂತರಕ್ಕಿಂತ, ಇವನ್ನು ಮೊದಲೇ ನಮ್ಮ ಆಹಾರಗಳಲ್ಲಿ ಸೇವಿಸುವುದರಿಂದ ದೇಹಕ್ಕೆ ಮೊದಲೇ ವಿಟಮಿನ್‌ ಸಿ ಸರಿಯಾಗಿ ಲಭ್ಯವಾಗುವ ಮೂಲಕ ಇಂತಹ ಇನ್‌ಫೆಕ್ಷನ್‌ಗಳಿಂದ ಇವು ನಮ್ಮನ್ನು ದೂರ ಇರಿಸುವಲ್ಲಿ ನೆರವಾಗುತ್ತವೆ. ರೋಗನಿರೋಧಕ ಶಕ್ತಿಯನ್ನು ಇವು ಹೆಚ್ಚಿಸುವ ಮೂಲಕ ಇನ್‌ಫೆಕ್ಷನ್‌ಗಳಿಂದ ನಮ್ಮನ್ನು ದೂರವಿರಿಸುತ್ತವೆ.

5. ಬೀಜಗಳು: ಬಾದಾಮಿ, ಪಿಸ್ತಾ, ವಾಲ್‌ನಟ್‌ನಂತಹ ಬೀಜಗಳನ್ನು ಸೇವನೆ ಮಾಡುವ ಮೂಲಕವೂ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಪ್ರೊಟೀನ್‌ ಹಾಗೂ ಪೋಷಕಾಂಶಗಳನ್ನು ನೀಡುತ್ತಾ ರೋಗಗಳಿಂದ ರಕ್ಷಿಸಿಕೊಳ್ಳಬಹುದು.

ಇದನ್ನೂ ಓದಿ: Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!

Exit mobile version