Sugar Eating: ನಾವು ತಿನ್ನುವ ಸಕ್ಕರೆ ಪ್ರಮಾಣ ಅತಿಯಾಗುತ್ತಿದೆ ಅನ್ನೋದನ್ನ ತಿಳಿಯೋದು ಹೇಗೆ? - Vistara News

ಆರೋಗ್ಯ

Sugar Eating: ನಾವು ತಿನ್ನುವ ಸಕ್ಕರೆ ಪ್ರಮಾಣ ಅತಿಯಾಗುತ್ತಿದೆ ಅನ್ನೋದನ್ನ ತಿಳಿಯೋದು ಹೇಗೆ?

Sugar Eating: ಸಕ್ಕರೆ ಅಂದಾಕ್ಷಣ ಹಾವು ಮೆಟ್ಟಿದಂತೆ ಆಡಬೇಕಿಲ್ಲ. ಅದೂ ನಮ್ಮ ದೇಹಕ್ಕೆ ಬೇಕಾದಂಥದ್ದೆ; ಆದರೆ ಅತ್ಯಂತ ಮಿತ ಪ್ರಮಾಣದಲ್ಲಿ. ಆ ಪ್ರಮಾಣ ಹೆಚ್ಚಾದರೆ ದೇಹದಲ್ಲಿ ಕೊಬ್ಬಿನಂಶವಾಗಿ ಪರಿವರ್ತನೆಗೊಂಡು, ಎಲ್ಲೆಂದರಲ್ಲಿ ಅಡಗಿ ಕೂರುತ್ತದೆ. ನಾವು ತಿನ್ನುವ ಸಕ್ಕರೆಯ ಪ್ರಮಾಣ ಅತಿಯಾಗುತ್ತಿದೆ ಎಂಬುದನ್ನು ತಿಳಿಯುವುದು ಹೇಗೆ? ಈ ಲೇಖನ ಓದಿ.

VISTARANEWS.COM


on

Sugar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಾಯಿ ಸಿಹಿ ಮಾಡಿಕೊಳ್ಳುವುದಕ್ಕೆ (Sugar Eating) ಕಾರಣಗಳನ್ನು ಹುಡುಕುವುದೇ ಬೇಡ, ತಾವಾಗಿಯೇ ಸೃಷ್ಟಿಯಾಗುತ್ತವೆ. ಇನ್‌ಸ್ಟಾದಲ್ಲಿ ಹೆಚ್ಚಿನ ಲೈಕ್‌ ಸಿಕ್ಕಿದ್ದರಿಂದ ಹಿಡಿದು ಶುರುವಾಗುವ ಕಾರಣಗಳು, ಸಂಖ್ಯೆಯಲ್ಲಿ ನೂರಾರು ಇರಬಹುದು. ಜೀವನವಿಡೀ ಸಂಭ್ರಮಿಸಬಹುದು ಎಂಬ ಸಮಾಧಾನದ ಜೊತೆಗೆ, ಅದೇ ನೆವದಲ್ಲಿ ಜೀವನವಿಡೀ ಸಿಹಿ ತಿನ್ನುತ್ತಲೇ ಇರುತ್ತೇವೆ ಎಂಬುದು ಆತಂಕಕ್ಕೂ ಕಾರಣವಾಗುತ್ತವೆ. ಸ್ವಲ್ಪ-ಸ್ವಲ್ಪ ಎನ್ನುತ್ತಲೇ ಮಿತಿಮೀರಿ ಹೋಗುತ್ತದೆ ದೇಹಕ್ಕೆ ಸಕ್ಕರೆಯಂಶ. ನಾವು ತಿನ್ನುವ ಸಕ್ಕರೆಯ ಪ್ರಮಾಣ ಅತಿಯಾಗುತ್ತಿದೆ ಎಂಬುದನ್ನು ತಿಳಿಯುವುದು ಹೇಗೆ? ಸಕ್ಕರೆ ಅಂದಾಕ್ಷಣ ಹಾವು ಮೆಟ್ಟಿದಂತೆ ಆಡಬೇಕಿಲ್ಲ. ಅದೂ ನಮ್ಮ ದೇಹಕ್ಕೆ ಬೇಕಾದಂಥದ್ದೆ; ಆದರೆ ಅತ್ಯಂತ ಮಿತ ಪ್ರಮಾಣದಲ್ಲಿ. ಆ ಪ್ರಮಾಣ ಹೆಚ್ಚಾದರೆ ದೇಹದಲ್ಲಿ ಕೊಬ್ಬಿನಂಶವಾಗಿ ಪರಿವರ್ತನೆಗೊಂಡು, ಎಲ್ಲೆಂದರಲ್ಲಿ ಅಡಗಿ ಕೂರುತ್ತದೆ. ಬೊಜ್ಜು ಹೆಚ್ಚುತ್ತಿದ್ದಂತೆ, ಮಧುಮೇಹ, ಬಿಪಿ, ಹೃದಯದ ಸಮಸ್ಯೆಗಳು ನೆಂಟರಾಗಿ ಬಿಡಬಹುದು. ದೇಹದಲ್ಲಿ ಊರಿಯೂತ ಹೆಚ್ಚಿ, ಎಲ್ಲೆಂದರಲ್ಲಿ ನೋವು ತೀವ್ರವಾಗುತ್ತದೆ. ನಿದ್ದೆ ದೂರವಾಗುತ್ತದೆ. ಹಲ್ಲಿನ ಆರೋಗ್ಯವಂತೂ ದೇವರಿಗೇ ಪ್ರೀತಿ! ಉರಿಯೂತ ಮಿತಿಮೀರಿದರೆ ಕ್ಯಾನ್ಸರ್‌ನಂಥ ರೋಗಗಳ ಭೀತಿಯೂ ಅಮರಿಕೊಳ್ಳುತ್ತದೆ. ಈ ಎಲ್ಲ ಕಾರಣಗಳಿಗಾಗಿ ಸಕ್ಕರೆಯಂಶ ಮಿತವಾಗಿರಲಿ. ಮಿತಿಮೀರಿದ್ದು ತಿಳಿಯಬೇಕಾದರೆ, ದೇಹದಲ್ಲಿನ ಇಂಥ ಕೆಲವು ಲಕ್ಷಣಗಳ ಬಗ್ಗೆ ಗಮನ ನೀಡಿ.

Sugar Side Effects

ಪ್ರಮಾಣವೆಷ್ಟು?

ಇದನ್ನು ಮೊದಲು ತಿಳಿಯಬೇಕು ನಾವು. ಆಗ ತಿಂದಿದ್ದೆಷ್ಟು ಎಂಬುದು ಅಂದಾಜಾಗಬಹುದು ನಮಗೆ. ದಿನವೊಂದಕ್ಕೆ ಮಹಿಳೆಯರು ಮತ್ತು 2 ವರ್ಷಕ್ಕೆ ಮೇಲ್ಪಟ್ಟ ಮಕ್ಕಳು ನೂರು ಕ್ಯಾಲರಿಗಿಂತ ಹೆಚ್ಚು ಸಕ್ಕರೆಯನ್ನು ತಿನ್ನುವಂತಿಲ್ಲ. ಇದು ಹಣ್ಣುಗಳಲ್ಲಿರುವ ನೈಸರ್ಗಿಕ ಸಕ್ಕರೆಯಂಶದ ಹೊರತಾಗಿ ಹೆಚ್ಚುವರಿ ಸೇರಿಸಿದ ಸಕ್ಕರೆ ಪ್ರಮಾಣ. ಇನ್ನೂ ಸರಿಯಾಗಿ ಹೇಳುವುದಾದರೆ, 6 ಟೀ ಚಮಚ ಸಕ್ಕರೆಯನ್ನು ಮೀರಿವಂತಿಲ್ಲ. ಪುರುಷರು 150 ಕ್ಯಾಲರಿ, ಅಂದರೆ 9 ಟೀ ಚಮಚ ಸಕ್ಕರೆಯನ್ನು ಮೀರುವಂತಿಲ್ಲ. 2 ವರ್ಷಕ್ಕಿಂತ ಚಿಕ್ಕ ಮಕ್ಕಳಿಗೆ ನೈಸರ್ಗಿಕ ಸಕ್ಕರೆಯಂಶ ಮಾತ್ರವೇ ಸಾಕು, ಹೆಚ್ಚುವರಿ ಬೇಡವೇ ಬೇಡ ಎನ್ನುವುದು ತಜ್ಞರ ಅಭಿಪ್ರಾಯ. ಆದರೆ ನಮ್ಮಲ್ಲಿ ವರ್ಷದೊಳಗಿನ ಮಕ್ಕಳಿಗೇ ಕ್ಯಾಂಡಿ, ಚಾಕಲೇಟ್‌, ಐಸ್‌ಕ್ರೀಮ್‌, ಸೋಡಾ ಮುಂತಾದ ಹಾಳುಮೂಳನ್ನೆಲ್ಲ ರುಚಿ ತೋರಿಸಿ ಆಗಿರುತ್ತದೆ ನಮಗೆ!

Weight gain

ತೂಕ ಹೆಚ್ಚಳ

ಇದು ಮೊದಲ ಸೂಚನೆ. ತೂಕ ಇದ್ದಕ್ಕಿದ್ದಂತೆ ಹೆಚ್ಚುತ್ತಿದೆ ಎಂದಾದರೆ ಸೋಡಾ, ಫ್ರೂಟ್‌ಜ್ಯೂಸ್‌ ಸೇರಿದಂತೆ ಹೆಚ್ಚುವರಿ ಸಕ್ಕರೆಯನ್ನೆಷ್ಟು ಸೇವಿಸುತ್ತಿದ್ದೀರಿ ಎಂಬುದನ್ನು ಮೊದಲು ನೋಡಿ. ಕಾರಣ, ಸಕ್ಕರೆಯನ್ನು ಹೆಚ್ಚು ತಿಂದಷ್ಟೂ ಹಸಿವೆ ಹೆಚ್ಚುತ್ತದೆ. ತಿಂದ ತಕ್ಷಣ ಹೆಚ್ಚು ಶಕ್ತಿ ಬಂದಂತೆ ಭಾಸವಾದರೂ, ಆ ಸಕ್ಕರೆಯಂಶ ಹೆಚ್ಚು ಸಮಯದವರೆಗೆ ದೇಹಕ್ಕೆ ಶಕ್ತಿಯನ್ನು ಕೊಡಲಾರದು. ಪ್ರೊಟೀನ್‌, ಸಂಕೀರ್ಣ ಪಿಷ್ಟಗಳು ಅಥವಾ ನಾರುಗಳು ದೀರ್ಘ ಕಾಲದವರೆಗೆ ದೇಹಕ್ಕೆ ಶಕ್ತಿಯನು ನೀಡುತ್ತಲೇ ಇರುತ್ತವೆ. ಆದರೆ ಸಕ್ಕರೆ ಹಾಗಲ್ಲ, ಏರಿದಷ್ಟೇ ಬೇಗ ಇಳಿಯುತ್ತದೆ ಇದರ ಶಕ್ತಿ. ಮತ್ತೆ ಹಸಿವೆ, ಮತ್ತೆ ತಿನ್ನು, ತೂಕ ಏರು… ಚಕ್ರ ಮುಂದುವರಿಯುತ್ತದೆ.

hungry

ಹಸಿವೆ ಹೆಚ್ಚು

ಅದೂ ಸಿಹಿಯನ್ನೇ ಮತ್ತೆ ಮತ್ತೆ ಬಯಸುತ್ತದೆ ದೇಹ! ಇದಕ್ಕೆ ಕಾರಣಗಳು ಇಲ್ಲದಿಲ್ಲ. ಹೊಟ್ಟೆಯಲ್ಲಿರುವ ಬ್ಯಾಕ್ಟೀರಿಯಗಳ ನಾಡಿನಲ್ಲಿ ಒಳ್ಳೆಯವೂ ಇವೆ, ಕೆಟ್ಟವೂ ಇವೆ. ಸಕ್ಕರೆಯಂಶ ಸಲ್ಲುವುದು ಕೆಟ್ಟ ಬ್ಯಾಕ್ಟೀರಿಯಗಳಿಗೆ. ಅವುಗಳಿಗೆ ಅಹಾರ ದೊರೆಯುತ್ತಿದ್ದಂತೆ, ಅವುಗಳ ಸಂಖ್ಯೆ ಹೆಚ್ಚಿ, ಮತ್ತೆ ಅದದೇ ಆಹಾರವನ್ನೇ ಹೊಟ್ಟೆ ಕೇಳತೊಡಗುತ್ತದೆ. ಹೆಚ್ಚು ಸಕ್ಕರೆ ತಿಂದಷ್ಟೂ ಹಸಿವೆ ಹೆಚ್ಚು… ಸರಣಿ ಮುಂದುವರಿಯುತ್ತಲೇ ಹೋಗುತ್ತದೆ.

Tips For Healthy Skin

ಮೊಡವೆ

ಸಕ್ಕರೆಯಂಶ ಹೆಚ್ಚಾದರೆ ಆಂಡ್ರೋಜೆನ್‌ ಚೋದಕದ ಪ್ರಮಾಣ ದೇಹದಲ್ಲಿ ಹೆಚ್ಚುತ್ತದೆ. ಇದು ಚರ್ಮದ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. ಮೊಡವೆ, ಚರ್ಮ ಸುಕ್ಕಾಗುವುದು, ಹೊಳಪು ಕಳೆದುಕೊಳ್ಳುವುದು, ಎಕ್ಸಿಮಾ ಮುಂತಾದ ಚರ್ಮದ ತೊಂದರೆಗಳು ಹೆಚ್ಚಿದರೆ, ಆಹಾರದಲ್ಲಿ ಸಕ್ಕರೆಯಂಶ ಹೆಚ್ಚಿದೆಯೇ ಎಂಬುದನ್ನು ಪರಿಶೀಲಿಸುವುದು ಒಳಿತು.

ಇದನ್ನೂ ಓದಿ: Tips For Better Energy: ದಿನವಿಡೀ ಎಷ್ಟೇ ಕೆಲಸ ಮಾಡಿದರೂ ಉಲ್ಲಾಸದಿಂದ ಇರುವುದು ಹೇಗೆ?

ಕಿರಿಕಿರಿ

ಆಗಾಗ ಮೂಡ್‌ ಬದಲಾಗುತ್ತಿದೆಯೇ? ಒಮ್ಮೆ ಸ್ವರ್ಗಕ್ಕೆ ಮೂರೇ ಗೇಣು ಎಂಬಂತಿದ್ದರೆ, ಇನ್ನೊಮ್ಮೆ ನರಕದ ಬಾಗಿಲಲ್ಲಿ ಇದ್ದ ಅನುಭವವೇ? ಸಿಟ್ಟು, ಅಶಾಂತಿ, ಆತಂಕ ಮುಂತಾದ ಮಾನಸಿಕ ಕಿರಿಕಿರಿಗಳು ಹೆಚ್ಚಾಗಿವೆಯೇ? ಸಿಹಿ ತಿಂದಿದ್ದು ಹೆಚ್ಚಾಗಿರಬೇಕು. ದೇಹದಲ್ಲಿ ಸಕ್ಕರೆಯಂಶ ತೀವ್ರವಾಗಿ ಏರಿಳಿಯುತ್ತಿರುವುದ ಸೂಚನೆಯಿರಬಹುದು ಇವೆಲ್ಲ. ಸಕ್ಕರೆಯಂಶ ಸಾಮಾನ್ಯ ಸ್ಥಿತಿಯಲ್ಲಿ ಇದ್ದರಷ್ಟೇ ಮೆದುಳು ಸುಸ್ಥಿರವಾಗಿ ಕೆಲಸ ಮಾಡಬಲ್ಲದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

VISTARANEWS.COM


on

ನವದೆಹಲಿ: ಜಗತ್ತು ಈಗ ಮತ್ತೊಂದು ಮಾರಕ ರೋಗದ ಆತಂಕದಲ್ಲಿದೆ. ಈ ಆತಂಕಕ್ಕೆ ಕಾರಣವಾಗಿದ್ದು ಹ್ಯಾಂಟವೈರಸ್‌. ಇದನ್ನು ಕೊರೋನಾ ವೈರಸ್‌ ಸಹೋದರಿ ಎಂದೇ ಹೇಳಲಾಗುತ್ತಿದೆ.
ಡಚ್‌ ಪ್ರವಾಸಿ ಹಡಗು ಎಂವಿ ಹೊಂಡಿಯಸ್‌ನಲ್ಲಿ ಹ್ಯಾಂಟವೈರಸ್‌ ಹರಡಿರುವ ಸುದ್ದಿ ಜಗತ್ತನ್ನೇ ಆತಂಕಕ್ಕೆ ದೂಡಿದೆ. ೧೪೯ ಜನರಿದ್ದ ಈ ಹಡಗಿನಲ್ಲಿ ಮೂವರು ಹ್ಯಾಂಟವೈರಸ್‌ಗೆ ಬಲಿಯಾಗಿದ್ದಾರೆ. ಈ ಹಡಗಿನಲ್ಲಿ ಇಬ್ಬರು ಭಾರತೀಯರೂ ಪ್ರವಾಸ ಮಾಡುತಿದ್ದರು ಎಂದು ಕೆಲವು ವರದಿಗಳು ಹೇಳಿವೆ. ಸದ್ಯ ಈ ಹಡಗು ಆಫ್ರಿಕಾದ ಬಂದರಿನಲ್ಲಿ ಲಂಗರು ಹಾಕಿದೆ. ಅಸ್ವಸ್ಥ ಪ್ರಯಾಣಿರನ್ನು ಚಿಕಿತ್ಸೆಗೆ ರವಾನಿಸಲಾಗಿದೆ.
ಹ್ಯಾಂಟವೈರಸ್ ಅಂದರೇನು?
ಹ್ಯಾಂಟವೈರಸ್ ಒಂದು ಅಪರೂಪದ ಆದರೆ ಅಪಾಯಕಾರಿ ವೈರಸ್. ಇದು ಇಲಿಗಳ ಮೂತ್ರ, ಜೊಲ್ಲು ಅಥವಾ ಮಲದ ಮೂಲಕ ಹರಡುತ್ತದೆ. ಹ್ಯಾಂಟ ವೈರಸ್ ಗಾಳಿಯಲ್ಲಿ ಹರಡೋದಿಲ್ಲ. ಮನುಷ್ಯನಿಂದ ಮನುಷ್ಯನಿಗೆ ಹರಡುವ ಸಾಂಕ್ರಾಮಿಕವೂ ಇದಲ್ಲ. ಇಲಿ ಹಾಗೂ ಹೆಗ್ಗಣದ ಜಾತಿಯ ‘ದಂಶಕ’ಗಳಲ್ಲಿ ಈ ವೈರಸ್‌ ಕಾಣಿಸಿಕೊಳ್ಳುತ್ತೆ. ಈ ದಂಶಕಗಳ ಮಲ, ಮೂತ್ರ ಅಥವಾ ಜೊಲ್ಲು ರಸ ಮಾನವನ ಸಂಪರ್ಕಕ್ಕೆ ಬಂದಾಗ ಮಾನವನಿಗೂ ಹ್ಯಾಂಟ ವೈರಸ್ ಹರಡುತ್ತೆ. ಜ್ವರ, ತಲೆನೋವು, ಹೊಟ್ಟೆ ನೋವು, ಮೈ-ಕೈ ನೋವು, ವಾಂತಿ, ಭೇದಿ ಇತ್ಯಾದಿ ಈ ರೋಗದ ಲಕ್ಷಣಗಳು.

Continue Reading

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

Doctors at Fortis Hospital remove fish bone from man's stomach for 5 years

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

Breast Cancer Awareness Month celebrated through bikethon

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading
Advertisement
Latest16 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest21 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest21 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest2 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest2 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ2 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest2 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest2 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest2 days ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest3 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌