Site icon Vistara News

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

Disciplinary action if cases of mother and child deaths recur DC Diwakar warns

ಹೊಸಪೇಟೆ: ಆರೋಗ್ಯ ಇಲಾಖೆಯ ಆಡಳಿತ ವ್ಯೆದ್ಯರ ನಿರ್ಲಕ್ಷ್ಯ ಅಥವಾ ಆಸ್ಪತ್ರೆಯ ಯಾವುದಾದರು ಸಿಬ್ಬಂದಿಯ ನಿರ್ಲಕ್ಷ್ಯತೆಯಿಂದ ತಾಯಿ ಅಥವಾ ಮಗು ಸಾವಿಗೀಡಾದ ಬಗ್ಗೆ ದೂರು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಎಫ್‌ಐಆರ್ ದಾಖಲಿಸಿ ಸೇವೆಯಿಂದ ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಕೆ (Vijayanagara News) ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ತಾಯಿ ಮತ್ತು ಶಿಶು ಮರಣ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ತಾಯಿ ಮತ್ತು ಶಿಶು ಮರಣ ತಡೆಗೆ ವಿಶೇಷ ಗಮನ ಹರಿಸಬೇಕು. ತಾಯಿ ಮತ್ತು ಶಿಶು ಮರಣಕ್ಕೆ ವೈದ್ಯರು ಅಥವಾ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎನ್ನುವ ದೂರು ಬಾರದ ಹಾಗೆ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು. ಪ್ರತಿ ದಿನ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೈಕೆಯ ಬಗ್ಗೆ ಗಮನ ಹರಿಸಬೇಕು. ಶುಶ್ರೂಷಣಾ ಸಿಬ್ಬಂದಿ ರೋಗಿಗಳೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳಬೇಕು. ಚಿಕಿತ್ಸೆ ಕೊಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು. ಬೇರೊಬ್ಬರನ್ನು ಹೊಣೆಯಾಗಿಸಬಾರದು. ಸಕಾಲದಲ್ಲಿ ಸಿಗಬೇಕಾಗಿದ್ದ ಆರೋಗ್ಯ ಸೇವೆ ಸಿಗದ ಕಾರಣಕ್ಕೆ ತಾಯಿ ಮರಣ, ಶಿಶುಮರಣ ಪ್ರಕರಣಗಳು ದಾಖಲಾಗುತ್ತಿವೆ ಎನ್ನುವ ದೂರುಗಳು ಬಂದಲ್ಲಿ ಮತ್ತು ತಾಯಿ ಮತ್ತು ಶಿಶು ಮರಣ ಪ್ರಕರಣಗಳು ಮತ್ತೆ ಮರುಕಳಿಸಿದಲ್ಲಿ ಯಾವುದೇ ಮುಲಾಜಿಲ್ಲದೇ ತನಿಖೆಗೊಳಪಡಿಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅಂತವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

ಸರ್ಕಾರಿ ಆಸ್ಪತ್ರೆಗಳಿಗೆ ಬಹುತೇಕ ಕೃಷಿ ಕಾರ್ಮಿಕರು, ಕಡು ಬಡವರೇ ಹೆಚ್ಚಾಗಿ ಬರುತ್ತಾರೆ. ವೈದ್ಯರೇ ದೇವರೆಂದು ಭಾವಿಸಿ ಅವರು ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಪ್ರೀತಿ ವಿಶ್ವಾಸ ಇಟ್ಟುಕೊಂಡಿರುತ್ತಾರೆ. ವೈದ್ಯರು ಏನೇ ಹೇಳಿದರು ಅವರು ಅದಕ್ಕೆ ಸಮ್ಮತಿ ಸೂಚಿಸುತ್ತಾರೆ. ನನ್ನ ಮಗಳು ಆರಾಮಿರಬೇಕು. ಹೆರಿಗೆ ಸುಸೂತ್ರವಾಗಿ ನಡೆದು ಕೂಸು ಬದುಕಬೇಕು ಎಂಬುದು ಪ್ರತಿಯೊಬ್ಬ ತಂದೆ ತಾಯಿ ಪಾಲಕರ ಆಸೆ ಆಗಿರುತ್ತದೆ. ಆಸ್ಪತ್ರೆಗೆ ಯಾರೆ ಬರಲಿ ಅವರೊಂದಿಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ನಡೆದುಕೊಳ್ಳಬೇಕು. ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು.

ಹೆರಿಗೆಯಂತಹ ಸಂದರ್ಭದಲ್ಲಿ ವಿಳಂಬಕ್ಕೆ ಆವಕಾಶ ಮಾಡಿಕೊಡದೇ ಸಕಾಲಕ್ಕೆ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದೆ ಎಂಬುದು ಗೊತ್ತಾದಾಗ ವಿಳಂಬ ಮಾಡದೇ ಮೇಲಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಕೂಡಲೇ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರು ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಹಾಗೆ ಅವರಿಗೆ ಚಿಕಿತ್ಸೆ ನೀಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು, ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು, ಆಡಳಿತ ವ್ಯೆದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಹಾಜರಿದ್ದರು.

Exit mobile version