Site icon Vistara News

World Oral Health Day: ಈ ಸೂತ್ರ ಪಾಲಿಸಿ; ಶಿಶುಗಳ ಹಲ್ಲು ಹುಳುಕು ತಪ್ಪಿಸಿ

World Oral Health Day

ಪ್ರತಿ ವರ್ಷ ಮಾರ್ಚ್ 20ರಂದು ವಿಶ್ವ ಬಾಯಿಯ ಆರೋಗ್ಯ ದಿನವನ್ನು (World Oral Health Day) ಆಚರಿಸಲಾಗುತ್ತದೆ. ಈ ದಿನದಂದು ಬಾಯಿಯ ಆರೋಗ್ಯದ ಕಾಳಜಿ ಕುರಿತು ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಾರ್ಗವೇ ಉತ್ತಮ ಆಹಾರ ಸೇವನೆ. ಈ ನಿಟ್ಟಿನಲ್ಲಿ ಬಾಯಿ ಪ್ರಮುಖ ಪಾತ್ರವಹಿಸುತ್ತದೆ. ಉತ್ತಮ ಆಹಾರ ಸೇವನೆಯಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಬಾಯಿಯ ಆರೋಗ್ಯವನ್ನು ಶಿಶುವಿನ ಹಂತದಲ್ಲೇ ತಿಳಿಯುವುದು ಸಹಕಾರಿ. ಈ ಕುರಿತು ಬೆಂಗಳೂರಿನ ಕಿಂಡರ್‌ ಆಸ್ಪತ್ರೆಯ ಮಕ್ಕಳ ದಂತ ವೈದ್ಯೆ ಡಾ. ಪ್ರಭಾವತಿ ಹೆಚ್‌.ಬಿ. ಸಮಗ್ರ ಮಾಹಿತಿಯನ್ನು ನೀಡಲಿದ್ದಾರೆ.

ಏನಿದು ಶಿಶುಗಳ ಬಾಯಿಯ ಆರೋಗ್ಯ?

ಶಿಶುವಿನ ಹಂತದಲ್ಲೇ ಬಾಯಿಯ ಆರೋಗ್ಯ ಕಾಳಜಿ ಮುಖ್ಯ. ಉತ್ತಮ ಅಭ್ಯಾಸಗಳನ್ನು ಈ ಹಂತದಿಂದಲೇ ಆರಂಭಿಸುವುದರಿಂದ ಮಕ್ಕಳ ಹಲ್ಲು ಬೆಳವಣಿಗೆಗೆ ಸಹಕಾರಿಯಾಗುತ್ತದೆ.

ಶಿಶುವಿನ ಬಾಯಿ ಆರೋಗ್ಯ ಏಕೆ ಮುಖ್ಯ?

ಮಕ್ಕಳ ಬೆಳವಣಿಗೆಯ ಹಂತದಲ್ಲಿ ಬಾಯಿಯ ಆರೋಗ್ಯ ತುಂಬಾನೆ ಪ್ರಮುಖ ಪಾತ್ರವಹಿಸುತ್ತದೆ. ಏಕೆಂದರೆ ಮಗುವಿನ ಒಟ್ಟಾರೆ ಯೋಗಕ್ಷೇಮಕ್ಕೆ ಇದು ಪ್ರಮುಖವಾದುದು. ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಬಾಯಿ ಸ್ವಚ್ಛತೆಯ ಅಭ್ಯಾಸಗಳನ್ನು ಮಾಡದಿದ್ದಲ್ಲಿ ಹಲ್ಲು ಹುಳುಕು ಕಾಣಿಸಿಕೊಳ್ಳಬಹುದು. ತದನಂತರ ಹಲ್ಲು ನೋವು, ಸೋಂಕುಗಳು ಕಾಣಿಸಿಕೊಂಡು ಮಗುವಿನ ಆರೋಗ್ಯಯುತ ಬದುಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಶಿಶುಗಳಲ್ಲಿ ಹಲ್ಲು ಹುಳುಕಾಗಲು ಕಾರಣಗಳು

ಶಿಶುಗಳಲ್ಲಿ ಹಲ್ಲು ಹುಳುಕು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳು

ಪೋಷಕರು ಶಿಶುಗಳಲ್ಲಿ ಹಲ್ಲು ಹುಳುಕಾಗುವುದನ್ನು ತಡೆಗಟ್ಟಲು ಬಾಯಿಯ ಸ್ವಚ್ಛತೆಗೆ ಉತ್ತಮ ಅಭ್ಯಾಸಗಳನ್ನು ಮಾಡಬೇಕು. ಶಿಶುವಿನ ಹಲ್ಲುಗಳನ್ನು ದಿನಕ್ಕೆ ಎರಡು ಬಾರಿ ಮೃದುವಾದ ಬ್ರಷ್ ಬಳಸಿ ಸ್ವಚ್ಛಗೊಳಿಸಬೇಕು. ಸಕ್ಕರೆಯುತ ಆಹಾರ ಮತ್ತು ಪಾನೀಯ ಸೇವನೆಯನ್ನು ಮಿತಿಗೊಳಿಸಬೇಕು. ದೀರ್ಘಕಾಲದ ಹಾಲಿನ ಬಾಟಲಿಗಳ ಬಳಕೆಯನ್ನು ನಿಷೇಧಿಸಬೇಕು. ವಿಶೇಷವಾಗಿ ಶಿಶುವಿನಲ್ಲಿ ಪ್ರಾಥಮಿಕ ಹಲ್ಲು ಕಾಣಿಸಿಕೊಂಡ ನಂತರ ಹೆಚ್ಚು ಜಾಗ್ರತೆವಹಿಸಬೇಕು.

ಶಿಶುವಿನಲ್ಲಿ ಹಲ್ಲು ಹುಳುಕು ಕಂಡುಬಂದರೆ ಪರಿಹಾರವೇನು?

ಶಿಶುವಿನಲ್ಲಿ ಹಲ್ಲು ಹುಳುಕು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ತೆಗೆದುಕೊಳ್ಳುವುದು ಒಳಿತು. ವೈದ್ಯರ ಸಲಹೆಯಂತೆ ಫ್ಲೋರೈಡ್ ವಾರ್ನಿಷ್ ಬಳಕೆ, ಆಹಾರ ಪದ್ಧತಿ ಮತ್ತು ಮೌಖಿಕ ನೈರ್ಮಲ್ಯದ ಅಭ್ಯಾಸಗಳಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದರಿಂದಲೂ ಹುಳುಕು ಹಲ್ಲಿಗೆ ಪರಿಹಾರವನ್ನು ಕಂಡುಕೊಳ್ಳಬಹುದು.

ಶಿಶುವಿನ ಹಲ್ಲಿನ ಆರೈಕೆಗೆ ಸಲಹೆಗಳು

ಇದನ್ನೂ ಓದಿ: Weight Loss Tips: ಕಚೇರಿಯ ಧಾವಂತದಲ್ಲಿಯೂ ತೂಕ ಇಳಿಸಲು ಇವಿಷ್ಟು ನೆನಪಿಡಿ!

Exit mobile version