Lucky plants: ನಿಮ್ಮ ರಾಶಿಗೆ ಹೊಂದುವ ಈ ಗಿಡ ಬೆಳೆಸಿ ಸುಖ, ಸಮೃದ್ಧಿ ನೆಮ್ಮದಿ ಹೊಂದಿ! - Vistara News

ಭವಿಷ್ಯ/ಧಾರ್ಮಿಕ

Lucky plants: ನಿಮ್ಮ ರಾಶಿಗೆ ಹೊಂದುವ ಈ ಗಿಡ ಬೆಳೆಸಿ ಸುಖ, ಸಮೃದ್ಧಿ ನೆಮ್ಮದಿ ಹೊಂದಿ!

ನೀವು ತಂದು ಸಾಕುವ ಗಿಡ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಎನರ್ಜಿ ನೀಡುವುದಷ್ಟೇ ಅಲ್ಲ, ನಿಮ್ಮ ಅದೃಷ್ಟಕ್ಕೂ (Lucky plants) ಕಾರಣ. ಹಾಗಾದರೆ ನಿಮ್ಮ ರಾಶಿಗೆ ಹೊಂದುವ ಗಿಡ (zodiac plants) ಯಾವುದು ಎಂಬುದನ್ನು ನೋಡೋಣ.

VISTARANEWS.COM


on

lucky plants
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂದಿನ ಬಾರಿ ನಿಮ್ಮ ಮನೆಗೊಂದು ಚೆಂದನೆಯ ಗಿಡ ತರುವ ಮುನ್ನ ನೀವೂ ಹೀಗೂ ಯೋಚಿಸಬಹುದು. ಅದು ನಿಮ್ಮ ಜನ್ಮರಾಶಿಗೆ (zodiac) ಹೊಂದುತ್ತದೋ ಇಲ್ಲವೋ ಎಂದು! ಆಶ್ಚರ್ಯವಾಯಿತೇ? ಗಿಡದ ಜೊತೆಗೂ ತಾಳಮೇಳ ಇದೆಯೇ ಎಂದು ಹುಬ್ಬೇರಿಸಬೇಡಿ. ಖಂಡಿತಾ ಇದೆಯಂತೆ! ನೀವು ತಂದು ಸಾಕುವ ಗಿಡ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಏನರ್ಜಿ ನೀಡುವುದಷ್ಟೇ ಅಲ್ಲ, ನಿಮ್ಮ ಅದೃಷ್ಟಕ್ಕೂ ಬೆಳವಣಿಗೆಗೂ (Lucky plants) ಕಾರಣವಾಗುತ್ತದಂತೆ. ಹಾಗಾದರೆ ಬನ್ನಿ, ನಿಮ್ಮ ರಾಶಿಗೆ ಹೊಂದುವ ಗಿಡ (zodiac plants) ಯಾವುದು ಎಂಬುದನ್ನು ನೋಡೋಣ.

1. ಮೇಷ: ಈ ರಾಶಿಯ ಮಂದಿಗೆ ಆಲೋವೆರಾ ಒಳ್ಳೆಯದು. ಅದೃಷ್ಟ ಹಾಗೂ ಸಂಪತ್ತು ಆರೋಗ್ಯ ವೃದ್ಧಿಗೆ ಮೇಷ ರಾಶಿಯ ಮಂದಿ ತಮ್ಮ ಮನೆಯಲ್ಲಿ ಅಲೊವೆರಾ ಅಂದರೆ ಲೋಳೆಸರದ ಗಿಡವನ್ನು ಇಟ್ಟುಕೊಳ್ಳಬಹುದಂತೆ. ಝೀಬ್ರಾ ಗಿಡವೂ ಕೂಡಾ ಆದೀತು. ಕೆಂಪು ಗುಲಾಬಿ ಗಿಡ, ಕೊತ್ತಂಬರಿ ಗಿಡಗಳೂ ಕೂಡಾ ಒಳ್ಳೆಯದೇ.

2. ವೃಷಭ: ಈ ರಾಶಿಯ ಮಂದಿಯ ಆರೋಗ್ಯ ಹಾಗೂ ಸಂಪತ್ತು ವೃದ್ಧಿಗೆ ಅದೃಷ್ಟ ತರುವ ಗಿಡವೆಂದರೆ ಅದು ಮನಿಪ್ಲಾಂಟ್‌. ಅಥವಾ ಯಾವುದೇ ಹೃದಯಾಕಾರದ ಎಲೆಯುಳ್ಳ ಗಿಡ ಒಳ್ಳೆಯದಂತೆ. ಬಸಳೆಯೂ ಆದೀತು!

3. ಮಿಥುನ: ಈ ರಾಶಿಯ ಮಂದಿಗೆ ಪಾಸಿಟಿವ್‌ ಎನರ್ಜಿ ಹಾಗೂ ಅದೃಷ್ಟ ತರಲು ಲ್ಯಾವೆಂಡರ್‌ ಗಿಡ ಒಳ್ಳೆಯದಂತೆ. ಇಂಗ್ಲೀಷ್‌ ಐವಿ ಗಿಡವೂ ಒಳ್ಳೆಯದೇ. ಕ್ಯಾರೆಟ್‌, ಲಿಲ್ಲಿ, ಸೋಂಪು ಗಿಡ ಕೂಡಾ ಒಳ್ಳೆಯದು.

4. ಕರ್ಕ: ಜೇಡ್‌ ಗಿಡವನ್ನು ನೀವು ಬೆಳೆಸುವುದರಿಂದ ನಿಮಗೆ ಹಣಕಾಸಿನ ವಿಚಾರದಲ್ಲಿ ಅದೃಷ್ಟ ದೊರೆಯುತ್ತದಂತೆ. ಅಷ್ಟೇ ಅಲ್ಲ, ಆರೋಗ್ಯ ಹಾಗೂ ಸಮೃದ್ಧಿಗೆ ಈ ಗಿಡ ಶುಭವಂತೆ. ಲಕ್ಕಿ ಬ್ಯಾಂಬೂ ಅಂದರೆ ಅದೃಷ್ಟ ತರುವ ಬಿದಿರು ಕೂಡಾ ಆದೀತು. ಪುದಿನ, ಬ್ರೊಕೋಲಿ, ಡೈಸಿ, ಬಿಳಿ ಗುಲಾಬಿ, ನಿಂಬೆಹುಲ್ಲು, ನೀರಲ್ಲಿ ಬೆಳೆವ ಲಿಲ್ಲಿ ಹೂಗಳು ಕೂಡಾ ಆಗಬಹುದು.

5. ಸಿಂಹ: ಸಿಂಹ ರಾಶಿಯ ಮಂದಿಗೆ ಯಶಸ್ಸು ತರಲು ಸೂರ್ಯಕಾಂತಿ ಒಳ್ಳೆಯದಂತೆ. ಸೂರ್ಯಕಾಂತಿ ಹೂವಿನ ಗಿಡವನ್ನು ಇವರು ಇಟ್ಟುಕೊಂಡರೆ ಸದಾ ಅದೃಷ್ಟವಷ್ಟೇ ಅಲ್ಲ, ಮನೆಯಲ್ಲಿ ಪಾಸಿಟಿವ್‌ ಶಕ್ತಿಯ ಹರಿವು ವೃದ್ಧಿಸುತ್ತದಂತೆ. ಕ್ಯಾಮೋಮೈಲ್‌, ಮರಿಗೋಲ್ಡ್‌, ಕ್ಯಾಬೇಜು, ಜೋಳ, ಡೇಲಿಯಾಗಳೂ ಕೂಡಾ ಒಳ್ಳೆಯದು.

6. ಕನ್ಯಾ: ಕನ್ಯಾ ರಾಶಿಯ ಮಂದಿಗೆ ಅದೃಷ್ಟ, ಬೆಳವಣಿಗೆ ಹಾಗೂ ಸಾಮರ್ಥ್ಯ ಹೆಚ್ಚಳಕ್ಕೆ ಬಿದಿರು ಒಳ್ಳೆಯದಂತೆ. ಬಿದಿರನ್ನು ತಮ್ಮ ಕೋಣೆಯಲ್ಲಿ ಅಥವಾ ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಇವರ ಅದೃಷ್ಟ ಖುಲಾಯಿಸುತ್ತದಂತೆ. ಬಾಳೆಗಿಡವೂ ಕೂಡಾ ಒಳ್ಳೆಯದಂತೆ. ಹಾಗಾಗಿ ಜಾಗ ಬೇಕಾದಷ್ಟಿದ್ದರೆ ಬಾಳೆ ತೋಟವನ್ನೇ ಬೆಳೆಸಬಹುದು!

7. ತುಲಾ: ಲಿಲ್ಲಿ ಹೂವಿನ ಗಿಡ ಈ ರಾಶಿಯ ಮಂದಿಯಲ್ಲಿ ಹೇರಳವಾಗಿ ಪಾಸಿಟಿವ್‌ ತಾಕತ್ತನ್ನು ವೃದ್ಧಿಸುತ್ತದೆಯಂತೆ. ಅಷ್ಟೇ ಅಲ್ಲ, ಅಚ್ಚ ಬಿಳಿಯ ಲಿಲ್ಲಿ ಇವರ ಜೀವನದಲ್ಲಿ ಶಾಂತಿ ನೆಮ್ಮದಿಯನ್ನೂ ತರುತ್ತದೆ. ಲೋಭವನ್ನು ಕಡಿಮೆ ಮಾಡಿ ಸಮತೋಲನವನ್ನು ವೃದ್ಧಿಸುತ್ತದೆ. ಬ್ರೊಕೊಲಿ, ಬದನೆ, ಸೇಬು, ಪುದಿನ, ಬಸಳೆ, ಬಟಾಣಿ ಇತ್ಯಾದಿ ಗಿಡಗಳೂ ಸೈ.

8. ವೃಶ್ಚಿಕ: ಈ ರಾಶಿಯ ಮಂದಿಗೆ ಸ್ನೇಕ್‌ ಪ್ಲಾಂಟ್‌ ಒಳ್ಳೆಯದಂತೆ. ಇವರು ಸ್ನಾಕ್‌ಪ್ಲಾಂಟ್‌ ಬೆಳೆಸಿದರೆ, ಇದು ಇದವರಿಗೆ ರಕ್ಷಣೆಯನ್ನು ನೀಡುವುದಲ್ಲದೆ, ಸಮತೋಲನವನ್ನೂ ವೃದ್ಧಿಸುತ್ತದೆ. ಕರಿಮೆಣಸು, ಅಣಬೆ, ಮೂಲಂಗಿ ಇತ್ಯಾದಿಗಳೂ ಕೂಡಾ ಒಳ್ಳೆಯದೇ.

ಇದನ್ನೂ ಓದಿ: Shani Jayanti 2023 : ಕರ್ಮಫಲ ನೀಡುವ ಶನಿ ದೇವರ ಬಗ್ಗೆ ನಿಮಗೆಷ್ಟು ಗೊತ್ತು?

9. ಧನು:‌ ಈ ರಾಶಿಯ ಮಂದಿಗೆ ಸಿಟ್ರಸ್‌ ಗಿಡ ಒಳ್ಳೆಯದು. ಅದು ನಿಂಬೆ ಗಿಡವೇ ಆಗಬೇಕೆಂದಿಲ್ಲ. ಯಾವುದೇ ಸಿಟ್ರಸ್‌ ಗಿಡ ಅಂದರೆ ನಿಂಬೆ, ಕಿತ್ತಳೆ, ಮುಸಂಬಿ ಇತ್ಯಾದಿಗಳಾದರೂ ಒಕೆ. ಈ ಸಿಟ್ರಸ್‌ ಗಿಡ ಈ ರಾಶಿಯ ಮಂದಿಯಲ್ಲಿ ಸುಖ ಶಾಂತಿ ಸಮೃದ್ಧಿಯ ಜೊತೆಗೆ ಉತ್ತಮ ಭವಿಷ್ಯವನ್ನೂ ತರುತ್ತದೆ. ಟೊಮೆಟೋ, ಆಸ್ಪರಾಗಸ್‌, ಆಲಿವ್‌, ದಾಂಡೇಲಿಯನ್‌, ಪುದಿನ ಗಿಡಗಳೂ ಶುಭವೇ.

lucky plants

10.ಮಕರ: ಪಚೀರಾ ಅಕಾಟಿಕಾ ಎಂಬ ಗಿಡ ಈ ರಾಶಿಯ ಮಂದಿಗೆ ಸೂಕ್ತ. ಇದು ಇವರನ್ನು ಗುರಿಗಳತ್ತ ಮುನ್ನಡೆಯುವಲ್ಲಿ ಸಕಾರಾತ್ಮಕ ಭಾವನೆಗಳ ವೃದ್ಧಿಗೆ ಸಹಾಯ ಮಾಡುತ್ತದೆ. ಜೇಡ್‌ ಗಿಡವೂ ಆದೀತು. ಬೀಟ್‌ರೂಟ್‌, ಬಸಳೆ, ಪುದಿನ, ಲಕ್ಕಿ ಬ್ಯಾಂಬೂ ಕೂಡಾ ಒಳ್ಳೆಯದು.

11. ಕುಂಭ: ಕುಂಭ ರಾಶಿಯ ಮಂದಿಗೆ ಏರ್‌ ಪ್ಲಾಂಟ್‌ ಒಳ್ಳೆಯದಂತೆ. ಏರ್‌ ಪ್ಲ್ಯಾಂಟ್‌ ಅತ್ಯಂತ ವಿಶೇಷ ಹಾಗೂ ಅಪರೂಪದ್ದಾಗಿದ್ದು ಇದನ್ನು ಈ ರಾಶಿಯ ಮಂದಿ ಬೆಳೆಸಿದರೆ, ತಮ್ಮ ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಇವರ ವ್ಯಕ್ತಿತ್ವ ವಿಕಸನವಾಗುತ್ತದಂತೆ. ಕ್ಯಾಮೋಮೈಲ್‌, ಅಲೋವೆರಾ, ಲವಂಗ ಇತ್ಯಾದಿ ಕೂಡಾ ಶುಭ.

12. ಮೀನ: ಈ ರಾಶಿಯ ಮಂದಿಗೆ ಲಕ್ಕಿ ಬ್ಯಾಂಬೂ ಅಂದರೆ ಅದೃಷ್ಟದ ಬಿದಿರು ಒಳ್ಳೆಯದಂತೆ. ಉತ್ತಮ ಭವಿಷ್ಯ ಹಾಗೂ ಸುಖ ಸಂತೋಷ ವೃದ್ಧಿಗೆ ಈ ಗಿಡ ಅವರಿಗೆ ಒಳ್ಳೆಯದು. ಇವರು ಮಲ್ಲಿಗೆ, ನೀರಲ್ಲಿ ಬೆಳೆವ ಲಿಲ್ಲಿ, ಟೊಮೇಟೋ, ಬೀಟ್‌ರೂಟ್‌ ಇತ್ಯಾದಿಗಳನ್ನೂ ಬೆಳೆಸುವುದೂ ಒಳ್ಳೆಯದೇ!

ಇದನ್ನೂ ಓದಿ: Friendship Day 2023: ಗೆಳೆತನವೂ ರಾಶಿಗುಣವೂ! ಅಂದಹಾಗೆ, ನಿಮ್ಮ ಗೆಳೆಯರ ರಾಶಿ ಯಾವುದು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರವು ಮೀನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನಗತ್ಯವಾಗಿ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ಮಿಥುನ ರಾಶಿಯವರು ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (03-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 23:23 ವಾರ: ಶುಕ್ರವಾರ
ನಕ್ಷತ್ರ: ಶತಭಿಷಾ 24:05 ಯೋಗ: ಬ್ರಹ್ಮ 14:17
ಕರಣ: ವಣಿಜ 12:40 ಅಮೃತಕಾಲ: ಸಂಜೆ 05:25 ರಿಂದ 06:54
ದಿನದ ವಿಶೇಷ: ಚಂದ್ರಮೌಳೇಶ್ವರ ಉತ್ಸವ

ಸೂರ್ಯೋದಯ : 05:58   ಸೂರ್ಯಾಸ್ತ : 06:35

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಗತ್ಯವಾಗಿ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ‌ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ:ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ:ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಜವಾಬ್ದಾರಿ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ. ಆರ್ಥಿಕ ಸಹಾಯ ಬೇಡುವ ಪರಿಸ್ಥಿತಿ ಬರಬಹುದು. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ ಸಿಗುವುದು. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗಬಹುದು. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ ಇದೆ. ತಾಳ್ಮೆ ಅವಶ್ಯಕ. ವ್ಯಾಪಾರ ವ್ಯವಹಾರದಲ್ಲಿ ಇಮ್ಮಡಿ ಲಾಭ. ಆರ್ಥಿಕವಾಗಿ ಬಲಿಷ್ಠರಾಗಿ ಇರುವಿರಿ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು:ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು, ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಬುದ್ಧಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ದೈಹಿಕ ಆರೋಗ್ಯ ಉತ್ತಮ, ಮಾನಸಿಕ ಆರೋಗ್ಯ ವಾಗಿ ಇರಲು ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಭವಿಷ್ಯ

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಗುರುವಾರ ಮಧ್ಯಾಹ್ನ 02:51ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ದೈಹಿಕವಾಗಿ ಮಾನಸಿಕವಾಗಿ ಕುಗ್ಗುವ ಸಾಧ್ಯತೆ ಇದೆ. ಬ್ಯಾಂಕ್ ವ್ಯವಹಾರಗಳಲ್ಲಿ ಕಾಳಜಿ ವಹಿಸಬೇಕು. ನಿಮ್ಮ ಬಳಗದಲ್ಲಿ ಯಾವುದಾದರೂ ದುಃಖದ ಸನ್ನಿವೇಶ ನಡೆಯಬಹುದು. ವೃಷಭ ರಾಶಿಯವರು ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡಬೇಡಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (02-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 25:52 ವಾರ: ಗುರುವಾರ
ನಕ್ಷತ್ರ: ಧನಿಷ್ಠಾ 25:47 ಯೋಗ: ಶುಕ್ಲ 17:17
ಕರಣ: ತೈತುಲ 14:59 ಅಮೃತಕಾಲ: ಸಂಜೆ 04:00 ರಿಂದ 05:31
ದಿನದ ವಿಶೇಷ: ಕೊರಗಜ್ಜ ಉತ್ಸವ

ಸೂರ್ಯೋದಯ : 05:58   ಸೂರ್ಯಾಸ್ತ : 06:35

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ದೈಹಿಕವಾಗಿ ಮಾನಸಿಕವಾಗಿ ಕುಗ್ಗುವ ಸಾಧ್ಯತೆ ಇದೆ. ಬ್ಯಾಂಕ್ ವ್ಯವಹಾರಗಳಲ್ಲಿ ಕಾಳಜಿ ವಹಿಸಬೇಕು. ನಿಮ್ಮ ಬಳಗದಲ್ಲಿ ಯಾವುದಾದರೂ ದುಃಖದ ಸನ್ನಿವೇಶ ನಡೆಯಬಹುದು. ನಿಮ್ಮ ಶ್ರಮ ಮತ್ತು ಸಮರ್ಪಣೆ ನಿಮ್ಮ ಪರವಾಗಿ ಮಾತನಾಡುತ್ತವೆ ಮತ್ತು ನಿಮಗೆ ವಿಶ್ವಾಸ, ಬೆಂಬಲ ಗಳಿಸಿಕೊಡುತ್ತವೆ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡಬೇಡಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಕೆಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸುವ ಸಾಧ್ಯತೆ ಇದೆ. ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗದ ಸ್ಥಳದಲ್ಲಿ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ ತರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದಿಢೀರ್‌ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ ಇದೆ. ಆದಷ್ಟು ಆಹಾರ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ ಬೆಳೆಸುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ,ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದುವಿರಿ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading
Advertisement
Lok sabha Election
ದೇಶ5 mins ago

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

prajwal revanna case arrest
ಪ್ರಮುಖ ಸುದ್ದಿ11 mins ago

Prajwal Revanna Case: ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

Kim Jong Un
ವಿದೇಶ24 mins ago

Kim Jong Un: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಸುಖಕ್ಕೆ ಬೇಕು ಪ್ರತಿ ವರ್ಷ 25 ಹುಡುಗಿಯರು! ಏನಿದು ಆಹ್ಲಾದ ತಂಡ?

Hassan Pen Drive case Prajwal Revanna case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮೈಸೂರಿನಲ್ಲೂ ಒಂದು ಕೇಸ್‌; ತಾಯಿ ಮೇಲೆ ಲೈಂಗಿಕ ಕಿರುಕುಳ, ಅಪಹರಣ ಎಂದು ದೂರು ನೀಡಿದ ಮಗ

Health Tips Kannada
ಆರೋಗ್ಯ1 hour ago

Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

Karnataka Weather Forecast
ಮಳೆ2 hours ago

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

Religious Freedom
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಅಮೆರಿಕದ ಬುದ್ಧಿಗೇಡಿಗಳ ವರದಿಯಲ್ಲಿ ಭಾರತದ ಬಗ್ಗೆ ಹಸಿ ಸುಳ್ಳುಗಳು

Health Tips Kannada
ಆರೋಗ್ಯ2 hours ago

Health Tips Kannada: ಕಣ್ಣಿನ ಕೆಳಗೆ ಕಪ್ಪಾಗಿದೆಯೇ? ಇಲ್ಲಿದೆ ಸರಳ ಮನೆಮದ್ದು

Dina Bhavishya
ಭವಿಷ್ಯ3 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Lok Sabha Election
ಪ್ರಮುಖ ಸುದ್ದಿ8 hours ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ13 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌