ನವದೆಹಲಿ: ಭಾರತವು (india) 2050ರ ವೇಳೆಗೆ 340 ಮಿಲಿಯನ್ ಹಿರಿಯ ನಾಗರಿಕರನ್ನು (Senior citizen) ಹೊಂದಲಿದೆ. ಇದು ವಿಶ್ವದ ವಯಸ್ಸಾದ ಜನಸಂಖ್ಯೆಯ (population) ಸರಿಸುಮಾರು ಶೇ. 17ರಷ್ಟು ಇರಲಿದೆ ಎಂದು ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಸಿಬಿಆರ್ ಇ (CBRE) ಸೌತ್ ಏಷ್ಯಾದ ವರದಿ ಬುಧವಾರ ತಿಳಿಸಿದೆ.
ವಿಶ್ವದಲ್ಲೇ ಇತ್ತೀಚಿನ ವರ್ಷಗಳಲ್ಲಿ ವಿಶೇಷ ಆರೈಕೆ ಮತ್ತು ಜೀವನಶೈಲಿಯ ಆಯ್ಕೆಗಳನ್ನು ಬಯಸುತ್ತಿರುವ ಹಿರಿಯರ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಹಿರಿಯ ಜೀವನ ಸೌಲಭ್ಯಗಳ ಬೇಡಿಕೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ವರದಿ ಹೇಳಿದೆ.
ದೇಶದಲ್ಲಿ ಪ್ರಸ್ತುತ ಹಿರಿಯರ ಆರೈಕೆ ಕೇಂದ್ರಗಳೂ ವೇಗವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ರಾಷ್ಟ್ರದಾದ್ಯಂತ 18,000 ಘಟಕಗಳಿದ್ದು, ಸಂಘಟಿತ ಹಿರಿಯ ಜೀವನ ಮತ್ತು ಆರೈಕೆ ವಿಭಾಗಗಳಲ್ಲಿ ಶೇ. 62ರಷ್ಟನ್ನು ಹೊಂದಿರುವ ದಕ್ಷಿಣ ಪ್ರದೇಶದಲ್ಲೇ ಇದು ಹೆಚ್ಚಾಗಿದೆ.
ಇದನ್ನೂ ಓದಿ: Eye Protection: ಡಿಜಿಟಲ್ ಪರದೆಗಳಿಂದ ಕಣ್ಣುಗಳನ್ನು ಕಾಪಾಡಿಕೊಳ್ಳುವುದು ಹೇಗೆ?
2024ರಲ್ಲಿ ಹಿರಿಯ ಜೀವನ ಸೌಲಭ್ಯಗಳ ಒಟ್ಟು ಅಂದಾಜು ಗುರಿ ಸುಮಾರು 1 ಮಿಲಿಯನ್ ಆಗಿದ್ದು, ಮುಂದಿನ 10 ವರ್ಷಗಳಲ್ಲಿ 2.5 ಮಿಲಿಯನ್‌ಗೆ ಹೆಚ್ಚಾಗುವ ನಿರೀಕ್ಷೆಯಿದೆ.
ವೇಗವಾಗಿ ಹೆಚ್ಚಳ
ಭಾರತದ ಹಿರಿಯ ಜನಸಂಖ್ಯೆಯು ಗಮನಾರ್ಹವಾಗಿ ಶೇ. 25.4 ಬೆಳವಣಿಗೆಯಾಗುವ ನಿರೀಕ್ಷೆಯಿದೆ. ಇದು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯಾಗಿದೆ. ಭಾರತ, ಆಗ್ನೇಯ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಲ್ಲಿ ಹಿರಿಯ ನಾಗರಿಕರ ಪ್ರಮಾಣ ವೇಗವಾಗಿ ಬೆಳೆಯುತ್ತಿದೆ ಎಂದು ಸಿಬಿಆರ್ ಇ ಯ ಅಧ್ಯಕ್ಷ ಮತ್ತು ಸಿಇಒ ಅಂಶುಮಾನ್ ಮ್ಯಾಗಜೀನ್ ತಿಳಿಸಿದ್ದಾರೆ.
ಹೆಚ್ಚುತ್ತಿದೆ ಬೇಡಿಕೆ
ಕಳೆದ ದಶಕದಲ್ಲಿ ಭಾರತವು ಹಿರಿಯ ಜೀವನ ಯೋಜನೆಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯನ್ನು ಕಂಡಿದೆ. ಈ ವಲಯದಲ್ಲಿ ಹೆಚ್ಚುತ್ತಿರುವ ಸ್ವೀಕಾರ ಮತ್ತು ಬೇಡಿಕೆಯನ್ನುಇದು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಿರಿಯ ಆರೈಕೆ ಘಟಕಗಳಲ್ಲಿ ಹೆಚ್ಚಿನವು ಚೆನ್ನೈ, ಬೆಂಗಳೂರು, ಹೈದರಾಬಾದ್, ಕೊಯಮತ್ತೂರು, ಪುಣೆ ಮತ್ತು ದೆಹಲಿ- ಎನ್ ಸಿಆರ್ ನಗರಗಳಲ್ಲಿ ಕೇಂದ್ರೀಕೃತವಾಗಿದೆ.
ಹಲವು ಕ್ರಮ
ಭಾರತದಲ್ಲಿ ವರ್ಧಿತ ವಯೋಸಹಜ ಆರೈಕೆಗಾಗಿ ಹಿರಿಯರ ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಕಾರ್ಯಕ್ರಮ (NPHCE), ರಾಷ್ಟ್ರೀಯ ಆರೋಗ್ಯ ನೀತಿ ಮತ್ತು ಸಮುದಾಯ ಆಧಾರಿತ ಕಾರ್ಯಕ್ರಮಗಳಂತಹ ಹಲವಾರು ನೀತಿ ಉಪಕ್ರಮಗಳನ್ನು ಸರ್ಕಾರವು ಕೈಗೊಳ್ಳುತ್ತದೆ.
ವಯಸ್ಸಾದ ಜನಸಂಖ್ಯೆಯ ವಿಕಸನಗೊಳ್ಳುತ್ತಿರುವ ಆದ್ಯತೆಗಳನ್ನು ಪೂರೈಸಲು ರಚನಾತ್ಮಕ ಆರೈಕೆ ಕಾರ್ಯಕ್ರಮಗಳು, ಉದ್ದೇಶಿತ ನೀತಿಗಳು ಮತ್ತು ವಿಶೇಷ ವೈದ್ಯಕೀಯ ಸೇವೆಗಳ ಅಗತ್ಯವನ್ನು ಗುರುತಿಸಲಾಗಿದೆ. ಭಾರತ ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಲ್ಲಿ ಹಿರಿಯ ಆರೈಕೆ ಕ್ಷೇತ್ರದ ಉದ್ಯಮದ ಬಗ್ಗೆ ಜನ ನಾಯಕರು ಮಾತನಾಡುತ್ತಿದ್ದಾರೆ ಎಂದು ಕನ್ಸಲ್ಟಿಂಗ್ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಮಿ ಕೌಶಲ್ ತಿಳಿಸಿದ್ದಾರೆ.