Solo dining | ಹೆಚ್ಚುತ್ತಿರುವ ಸೋಲೋ ಡೈನಿಂಗ್:‌ ಒಬ್ಬರೇ ಕೂತುಂಡರೆ ಏನಾಗುತ್ತೆ? - Vistara News

ಲೈಫ್‌ಸ್ಟೈಲ್

Solo dining | ಹೆಚ್ಚುತ್ತಿರುವ ಸೋಲೋ ಡೈನಿಂಗ್:‌ ಒಬ್ಬರೇ ಕೂತುಂಡರೆ ಏನಾಗುತ್ತೆ?

ಊಟದ ಸಮಯ ಎಂದರೆ ಹೆಚ್ಚಿನ ದೇಶ-ಕಾಲ-ಸಂಸ್ಕೃತಿಗಳಲ್ಲಿ ಕುಟುಂಬಕ್ಕೆ ನೀಡುವ ಸಮಯವಾಗಿತ್ತು. ಆದರೆ ಇಂದು ರೆಸ್ಟೋರೆಂಟ್‌ಗಳಲ್ಲೂ ಮನೆಯಲ್ಲೂ ಒಬ್ಬರೇ ಊಟ ಮಾಡುವ ಸಂಸ್ಕೃತಿ ವಿಶ್ವದೆಲ್ಲೆಡೆ ಹೆಚ್ಚುತ್ತಿದೆ. ಯಾಕಾಗುತ್ತಿದೆ, ಏನಾಗುತ್ತಿದೆ?

VISTARANEWS.COM


on

solo dining
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಗಿನ ದಿನಗಳಲ್ಲಿ ಇದನ್ನು ʻಒಂಟಿ ಊಟದ ಸೆಳೆತʼ ಎನ್ನೋಣ ಬೇಕಿದ್ದರೆ. ಒಂಟಿಯಾಗಿರುವುದು ಊಟವೋ ಅಥವಾ ಊಟ ಮಾಡುವವರೋ ಎಂಬ ಪ್ರಶ್ನೆ ಸಹಜವಾಗಿಯೇ ಬಂದೀತು. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಎಲ್ಲಾ ದೇಶಗಳಲ್ಲೂ ಇಂಥದ್ದೊಂದು ಒಂಟಿತನ ಒಪ್ಪಿತವಾಗಿದೆ ಎಂದರೆ ಸುಳ್ಳಲ್ಲ. ಹಾಗಿಲ್ಲದಿದ್ದರೆ, ಊಟದ ಸಮಯ ಎಂದರೆ ಹೆಚ್ಚಿನ ದೇಶ-ಕಾಲ-ಸಂಸ್ಕೃತಿಗಳಲ್ಲಿ ಅದು ಕುಟುಂಬಕ್ಕೆ ನೀಡುವ, ನೀಡಲೇಬೇಕಾದ ಸಮಯ. ಪೂರ್ವ ದೇಶದ ಸಂಸ್ಕೃತಿಗಳಲ್ಲಿ ಇದು ಕೌಟುಂಬಿಕ ಸಮಯ ಎನಿಸಿಕೊಂಡರೆ, ಪಶ್ಚಿಮ ದೇಶಗಳಲ್ಲಿ ಇದೊಂದು ಸಭ್ಯತೆಯ ವಿಷಯ. ಮಂತ್ರಕ್ಕಿಂತ ಉಗುಳೇ ಹೆಚ್ಚು ಎನ್ನುವಂತೆ, ವಿಷಯಕ್ಕಿಂತ ಪೀಠಿಕೆಯೇ ಹೆಚ್ಚು ಎಂದು ಗೊಣಗಬೇಡಿ. ಹೊಟೇಲ್‌-ರೆಸ್ಟೋರೆಂಟ್‌ಗಳಲ್ಲಿ ಒಬ್ಬರೇ ಊಟ ಮಾಡುವ ಸಂಸ್ಕೃತಿ ವಿಶ್ವದೆಲ್ಲೆಡೆ ಹೆಚ್ಚುತ್ತಿರುವ ಕುರಿತಾಗಿ ಇದಿಷ್ಟೂ ಪ್ರವರವನ್ನು ಹೇಳಿದ್ದೀಗ.

solo dining

ನಾವು ಖಾಯಂ ಹೋಗುವ ದರ್ಶಿನಿಗಳೋ, ಖಾನಾವಳಿಗಳದ್ದೋ ಮಾತಲ್ಲ ಈಗ; ಅಲ್ಲಿ ಹೋಗುವುದೇ ಅವಸರಕ್ಕೆ ಒಂದಿಷ್ಟು ಹೊಟ್ಟೆಗೆ ಸುರಿದುಕೊಂಡು ಓಡುವುದಕ್ಕೆ. ಆದರೆ ದೊಡ್ಡ ಹೊಟೇಲ್‌ಗಳಿಗೆ ಹೋದಾಗ, ʻಟೇಬಲ್‌ ಎಷ್ಟು ಜನಕ್ಕೆ?ʼ ಎಂಬ ಸಿಬ್ಬಂದಿಯ ಸಹಜ ಪ್ರಶ್ನೆಗೆ, ʻಒಬ್ಬರಿಗೆʼ ಎಂಬುದನ್ನು ಗ್ರಾಹಕ ಮತ್ತು ಸಿಬ್ಬಂದಿಗಳಿಬ್ಬರೂ ಅತ್ಯಂತ ಸಹಜ ಎಂದು ನೋಡುವಂಥ ದೃಷ್ಟಿಕೋನ ಎಲ್ಲೆಡೆ ವ್ಯಾಪಿಸುತ್ತಿದೆ. ಹಾಗೆ ಡಿನ್ನರ್‌ಗೆಂದು ಹೊರಗೆ ಹೋಗುವುದೇ ಒಂದಿಷ್ಟು ಜನ ಸ್ನೇಹಿತರೋ, ಕುಟುಂಬದವರೋ ಸೇರಿ ಎಂಬಂಥ ಮನಸ್ಥಿತಿಯಲ್ಲಿ ನಿಧಾನವಾಗಿ ಆಗುತ್ತಿರುವ ಮತ್ತು ಆಗಲೇಬೇಕಾಗಿರುವ ಅನಿವಾರ್ಯ ಬದಲಾವಣೆಯಿದು. ಹಾಗಾದರೆ ಈ ʻಸೋಲೋ ಡೈನಿಂಗ್‌ʼ ಎನ್ನುವ ಬದಲಾವಣೆ ಏನನ್ನು ಪ್ರತಿಬಿಂಬಿಸುತ್ತದೆ?

ವಿಘಟನೆ ಹೆಚ್ಚಾಗುತ್ತಿದೆಯೇ?: ಮಾನವಶಾಸ್ತ್ರಗಳ ಪರಿಣತರನ್ನು ಈ ಬಗ್ಗೆ ಮಾತನಾಡಿಸಿದರೆ ಇನ್ನಷ್ಟು ವಿಕ್ಷಿಪ್ತ ಎನ್ನುವಂಥ ವಿಷಯಗಳು ನಮಗೆ ದೊರೆಯಬಹುದು. ಮೊದಲಿಗೆ ಕೋವಿಡ್‌ ಕಾಲದ್ದು. ಎಲ್ಲಾ ದೇಶಗಳಲ್ಲೂ ಇದ್ದಕ್ಕಿದ್ದಂತೆ ಲಾಕ್‌ಡೌನ್‌ ಹೇರಿದಾಗ ಕುಟುಂಬದ ಜೊತೆಗಿದ್ದವರು ಮುಂದಿನ ಹಲವಾರು ತಿಂಗಳುಗಳ ಕಾಲ ಕುಟುಂಬದ ಜೊತೆಗೇ ಉಳಿದರು. ಮನೆಯಿಂದ ಕೆಲಸ ಮಾಡುವುದು ಕೆಲವು ಉದ್ದಿಮೆಗಳಲ್ಲಿ ಸಾಧ್ಯವೂ ಆಯಿತು. ಎಲ್ಲರೂ ಇದ್ದಂಥ ಮನೆಗಳಲ್ಲಿ ಊಟ-ತಿಂಡಿಗಳು ಅತ್ಯಂತ ಆಪ್ತ ಕ್ಷಣಗಳು ಎನಿಸಿದವು. ಆದರೆ ಒಬ್ಬರೇ ಇದ್ದವರು ಸುದೀರ್ಘಕಾಲ ತಮ್ಮ ತಾವಿನಲ್ಲಿ ಒಬ್ಬರೇ ಉಳಿವಂತಾಯ್ತ. ಪರಿಣಾಮ, ಒಬ್ಬರಿಗಾಗಿಯೇ ಅಡುಗೆ ಮಾಡುವುದು, ಅಡುಗೆ ತರುವುದು, ತರಿಸಿಕೊಳ್ಳುವುದು- ಅಂದರೆ, ಆಹಾರದೊಂದಿಗಿನ ಕ್ಷಣಗಳೇ ಆಪ್ತ ಎನಿಸಿ, ಒಂಟಿ ಊಟ ಸಾಮಾನ್ಯ ಎನಿಸಲಾರಂಭಿಸಿತು. ವಿಚ್ಛೇದಿತರು, ಒಬ್ಬೊಂಟಿಗರು ಅಥವಾ ಕುಟುಂಬದ ಕವಚ ಇಲ್ಲದವರು ಒಬ್ಬರೇ ಡೈನಿಂಗ್‌ ಸುಖದಿಂದ ಹಿಂದೆ ಸರಿಯುವ ಬದಲು, ʻಹೀಗೂ ಇರಬಹುದುʼ ಎಂಬಂತೆ ಬದುಕಲಾರಂಭಿಸಿದರು. ಹಾಗಾದರೆ ಸಮಾಜ ಇನ್ನಷ್ಟು ವಿಘಟನೆಯತ್ತ ಹೋಗುತ್ತಿದೆಯೇ? ಅಂದರೆ, ಕುಟುಂಬಗಳ ಪರಿಧಿಯಿಂದ ಈಗಾಗಲೇ ದೂರವಾಗುತ್ತಿರುವ ಜನ, ʻನಾನು-ನನ್ನಿಷ್ಟʼ ಎಂಬತ್ತ ಇನ್ನಷ್ಟು ಸರಿಯುತ್ತಿರುವುದರ ದೂರಗಾಮಿ ಪರಿಣಾಮಗಳೇನು ಎಂಬುದರ ಬಗ್ಗೆ ಅಧ್ಯಯನ ಅಗತ್ಯ.

solo dining

ಊಟದ ಖುಷಿ ಇರುವುದೇ ಹಂಚಿ ಉಣ್ಣುವುದರಲ್ಲಿ ಎಂಬ ಸಂಸ್ಕೃತಿ ವಿಶ್ವದ ಬಹಳಷ್ಟು ದೇಶಗಳಲ್ಲಿದೆ. ಉಣ್ಣುವುದಷ್ಟೇ ಈ ಹೊತ್ತಿನ ಕಾರ್ಯಸೂಚಿ ಆಗಿರದೆ, ಒಬ್ಬರಿಗೊಬ್ಬರು ಆಪ್ತರಾಗುವ, ದಿನವಿಡೀ ನಡೆದಿದ್ದನ್ನು ಹಂಚಿಕೊಳ್ಳುವ, ಅಲ್ಲಿರುವವರ ನಡುವಿನ ನಂಟು ಬಲಗೊಳ್ಳುವ ಕೌಟುಂಬಿಕ ಮತ್ತು ಸಾಮಾಜಿಕ ಮನೋವ್ಯಾಪಾರವದು. ಒಬ್ಬರಿಗಾಗೇ ಅಡುಗೆ ಮಾಡುವುದಾದರೆ, ʻಏನೋ ಒಂದುʼ ಎಂದು ಬೇಯಿಸಿಡುವ ಜನರೂ, ಊಟಕ್ಕೆ ನಾಲ್ಕಾರು ಜನರಿದ್ದಾರೆ ಎನ್ನುವಾಗ ತುಂಬಾ ಮುತುವರ್ಜಿಯಿಂದ, ನಾನಾ ರುಚಿಗಳನ್ನು ತಯಾರಿಸುವುದು ಇದಕ್ಕೆ ಸಾಕ್ಷಿ. ಆಯಸ್ಸು ದೀರ್ಘವಾಗಿ, ಕಡೆಗಾಲದಲ್ಲಿ ಒಬ್ಬರೇ ಬದುಕುವ ಸಂದರ್ಭಗಳು ಜಗತ್ತಿನೆಲ್ಲೆಡೆ ಹೆಚ್ಚುತ್ತಿರುವ ಈ ದಿನಗಳಲ್ಲಿ, ʻಏನೋ ಒಂದುʼ ಬೇಯಿಸಿಕೊಂಡೇ ಅಪೌಷ್ಟಿಕತೆಗೆ ತುತ್ತಾಗುತ್ತಿರುವ ಪ್ರಕರಣಗಳು ಪಶ್ಚಿಮ ದೇಶಗಳಲ್ಲಿ ಹೆಚ್ಚುತ್ತಿವೆ.

ಇದಕ್ಕೆ ಒಂದಿಷ್ಟು ಕುತೂಹಲಕರ ಆಯಾಮಗಳೂ ಒದಗಿಬರುತ್ತಿವೆ. ಒಬ್ಬರಿಗಾಗಿಯೇ ಅಡುಗೆ ಮಾಡುವ ಪುಸ್ತಕಗಳು (ಕುಕ್‌ಬುಕ್‌) ಈಗ ಮಾರುಕಟ್ಟೆಯಲ್ಲಿ ಲಭ್ಯವಿದೆ. ಅಂದರೆ, ನಾಲ್ಕು ಜನರಿಗಾಗುವಷ್ಟು ಅಡುಗೆ ಮಾಡಿ, ಇರುವ ಒಬ್ಬ ವ್ಯಕ್ತಿ ಅದನ್ನೇ ಮೂರು ದಿನ ತಿನ್ನುವ ಅಗತ್ಯವಿಲ್ಲ. ಒಬ್ಬರಿಗೆ ಒಂದು ಹೊತ್ತಿಗೆ ಅಡುಗೆ ಮಾಡುವಾಗ ಯಾವುದನ್ನು ಎಷ್ಟು ಪ್ರಮಾಣದಲ್ಲಿ ಹಾಕಬೇಕು ಎಂದು ನಿಖರವಾಗಿ ತಿಳಿಸುವ ಪುಸ್ತಕಗಳಿವು! ಒಬ್ಬರೇ ತಿನ್ನುವಾಗ ಇಷ್ಟವಾಗುವ ತಿನಿಸುಗಳು ಯಾವುವು ಎಂಬ ಬಗ್ಗೆ ಹಲವಾರು ಖ್ಯಾತ ರೆಸ್ಟೋರೆಂಟ್‌ಗಳು ಮುತುವರ್ಜಿ ವಹಿಸುತ್ತಿವೆ. ಬ್ರಿಟನ್‌ನ ಹೊಟೇಲ್‌ಗಳ ಮಾಹಿತಿಯನ್ನು ನಂಬುವುದಾದರೆ ಕಳೆದೆರಡು ವರ್ಷಗಳಲ್ಲಿ ಒಂಟಿ ಗ್ರಾಹಕರ ಸಂಖ್ಯೆ ಸುಮಾರು ಶೇ. ೧೬೦ರಷ್ಟು ಹೆಚ್ಚಿದೆಯಂತೆ. ʻಸೋಲೊ ಟೇಬಲ್‌ಗಳ ಗ್ರಾಹಕರು ತಮ್ಮ ಸಿಬ್ಬಂದಿಯೊಂದಿಗೆ ಹೆಚ್ಚು ಮಾತನಾಡುತ್ತಾರೆ. ಇದರಿಂದ ಗ್ರಾಹಕರನ್ನು ತೃಪ್ತಿ ಪಡಿಸುವಲ್ಲಿ ನಮ್ಮ ಮನೋಬಲವೂ ಹೆಚ್ಚುತ್ತದೆʼ ಎಂಬುದು ಈ ರೆಸ್ಟೋರೆಂಟ್‌ಗಳ ಅಭಿಪ್ರಾಯ.

ಇದನ್ನೂ ಓದಿ| Cold Feeling | ಕೆಲವರಿಗೆ ಮಾತ್ರ ಏಕೆ ಚಳಿ ಹೆಚ್ಚು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

By

Doctors at Fortis Hospital remove fish bone from man's stomach for 5 years
Koo

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years
Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

By

Breast Cancer Awareness Month celebrated through bikethon
Koo

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

By

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia
African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading

ಬೆಂಗಳೂರು

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Pink Strong walkathon to raise awareness among people about breast cancer
Koo

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚೆಗೆ ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಿರಬೇಕು, ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರರಾದ ಡಾ, ಮೋನಿಕಾ ಪನ್ಸಾರಿ ಮಾತನಾಡಿ, ಸ್ತನಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ, ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿ. ಹೀಗಾಗಿ ಹೆಣ್ಣುಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

Continue Reading
Advertisement
Dina Bhavishya
ಭವಿಷ್ಯ18 ಗಂಟೆಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ2 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ2 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು3 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು3 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು3 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ4 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Medical negligence
ಪ್ರಮುಖ ಸುದ್ದಿ4 ದಿನಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

assault case
ಬೆಂಗಳೂರು4 ದಿನಗಳು ago

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌