Site icon Vistara News

Actor Chetan Ahimsa: ಮತ್ತೆ ಮೋದಿಯೇ ಪ್ರಧಾನಿ, ಆದರೆ ಬಿಜೆಪಿಗಿದು ಪಾಠ ಎಂದ ನಟ ಚೇತನ್!

Actor Chetan Ahimsa says NDA is needed for BJP to come to power

ಬೆಂಗಳೂರು: ನಿರೀಕ್ಷೆಯಂತೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್‌ಡಿಎ ಅಗತ್ಯವಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಎಕ್ಸ್‌ ಮೂಲಕ ನಟ ಚೇತನ್‌ ಅವರು ಹೇಳಿಕೊಂಡಿದ್ದಾರೆ.

“ಪ್ರಧಾನಿ ಮೋದಿ ಮೂರನೇ ಬಾರಿ ಅಧಿಕಾರ ಮುಂದುವರಿಸಬಹುದು. ಆದರೆ ಬಿಜೆಪಿಗೆ ಇದೊಂದು ದೊಡ್ಡ ಪಾಠ. ಇದರರ್ಥ ಬಿಜೆಪಿ ಹಿಂದುತ್ವ ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ. ಇದು ಒಳ್ಳೆಯದೇ. ಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ” ಎಂದು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಚೇತನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

ಸರ್ಕಾರ ರಚನೆಗೆ 272 ಸ್ಥಾನಗಳು ಸರಳ ಬಹುಮತವಾಗಿದೆ. ಎನ್‌ಡಿಎ ಮೈತ್ರಕೂಟ 296 ಸ್ಥಾನಗಳಲ್ಲಿ ಗೆಲುವುದು ಖಚಿತವಾಗಿದ್ದು ಸರ್ಕಾರ ರಚಿಸುವ ಸಾಧ್ಯತೆ ಇದೆ. ಆದರೂ 228 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಇಂಡಿಯಾ ಮೈತ್ರಿಕೂಟ ಎನ್‌ಡಿಎ ಹೊರಗಿಟ್ಟು ಸರ್ಕಾರ ರಚಿಸುವ ಲೆಕ್ಕಾಚಾರದಲ್ಲಿದೆ.

ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದಿದ್ದ ನಟ ಚೇತನ್!

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ವಿರೋಧ ಪಕ್ಷಗಳ ಗುಮ್ಮ, ಆ ಆರೋಪಗಳನ್ನು ನಾನೂ ಒಪ್ಪಲ್ಲ. ಕಾಂಗ್ರೆಸ್ ಕೂಡ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ. ಇನ್ನು ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಡಿಮೆಯಿಲ್ಲ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ (Actor Chetan Ahimsa) ಹೇಳಿದ್ದರು.

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ಬಿಜೆಪಿ ವಿರೋಧಿ ಪಕ್ಷಗಳ ಗುಮ್ಮ. ಅದನ್ನು ನಾನೂ ಒಪ್ಪಲ್ಲ. ಬಿಜೆಪಿ ಎಷ್ಟೋ ವಿಚಾರದಲ್ಲಿ ಸಂವಿಧಾನ ವಿರೋಧಿ ಇದೆ, ಅದೇ ರೀತಿ ಕಾಂಗ್ರೆಸ್ ಕೂಡ. ಆದರೆ, ಸಂವಿಧಾನ ಉಳಿಸುತ್ತಿರುವವರು ನಮ್ಮಂತಹ ಸಮಾನತವಾದಿಗಳು. ಸಂವಿದಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದ್ದರು.

Exit mobile version