BJP Candidate List: ಗಡಿನಾಡು ಕಾಸರಗೋಡು ಕ್ಷೇತ್ರದಿಂದ ಟಿಕೆಟ್‌ ಗಿಟ್ಟಿಸಿಕೊಂಡ ಕನ್ನಡತಿ; ಯಾರು ಈ ಅಶ್ವಿನಿ? - Vistara News

Lok Sabha Election 2024

BJP Candidate List: ಗಡಿನಾಡು ಕಾಸರಗೋಡು ಕ್ಷೇತ್ರದಿಂದ ಟಿಕೆಟ್‌ ಗಿಟ್ಟಿಸಿಕೊಂಡ ಕನ್ನಡತಿ; ಯಾರು ಈ ಅಶ್ವಿನಿ?

BJP Candidate List: ಲೋಕಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪೈಕಿ ಭಾರೀ ಕುತೂಹಲ ಕೆರಳಿಸಿದ ಗಡಿನಾಡು ಕಾಸರಗೋಡಿನಿಂದ ಬಿ.ಎಸ್‌.ಅಶ್ವಿನಿ ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ. ಅವರ ಹಿನ್ನೆಲೆಯ ಪರಿಚಯ ಇಲ್ಲಿದೆ.

VISTARANEWS.COM


on

ashwini
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಸರಗೋಡು: ಲೋಕಸಭೆ ಚುನಾವಣೆ (Lok Sabha Election)ಗೆ ಸಜ್ಜಾಗಿರುವ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ (BJP Candidate List). ಅಳೆದೂ ತೂಗಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿದೆ. ಕೇರಳದ 20 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಪೈಕಿ ಗಡಿನಾಡು, ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಬಾರಿ ಶಿಕ್ಷಕಿಯಾಗಿದ್ದ, ಕನ್ನಡತಿ ಎಂ.ಎಲ್‌.ಅಶ್ವಿನಿ (M.L.Ashwini) ಅವರಿಗೆ ಟಿಕೆಟ್‌ ಲಭಿಸಿದೆ.

ಮೂಲತಃ ಕರ್ನಾಟಕದವರು

ಸದ್ಯ ತಾಲೂಕು ಪಂಚಾಯತ್‌ ಸದಸ್ಯೆಯಾಗಿರುವ ಅಶ್ವಿನಿ ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಪಜ್ವ ನಿವಾಸಿ. ಇವರಿಗೆ ಕರ್ನಾಟಕದ ನಂಟೂ ಇದೆ. ಇವರು ಹುಟ್ಟಿದ್ದು, ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮಂಜೇಶ್ವರದ ವ್ಯಕ್ತಿಯನ್ನು ವಿವಾಹವಾಗಿ ಅವರು ಗಡುನಾಡಿಗೆ ಕಾಲಿಟ್ಟರು. ಆರಂಭದಲ್ಲಿ ವರ್ಕಾಡಿಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಜತೆಗೆ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಬಳಿಕ ಬಿಜೆಪಿಯ ಸದಸ್ಯತ್ವ ಪಡೆದು ರಾಜಕೀಯಕ್ಕೆ ಪ್ರವೇಶಿಸಿದರು.

ಮಂಜೇಶ್ವರ ತಾಲೂಕು ಪಂಚಾಯತ್‌ ಕಡಂಬಾರ್ ಡಿವಿಷನ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು, ಮೊದಲ ಪ್ರಯತ್ನದಲ್ಲೇ ಜಯಗಳಿಸಿದರು. ಜತೆಗೆ ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆಯಾಗಿಯೂ ಛಾಪು ಮೂಡಿಸಿದರು. ಇದೀಗ ಕಾಸರಗೋಡು ಲೋಕಸಭಾ ಕ್ಷೇತ್ರದ ಅಭ್ಯರ್ತಿಯಾಗುವ ಮೂಲಕ ಮತ್ತೊಂದು ಸುತ್ತಿನ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಅನಿರೀಕ್ಷಿತ ಆಯ್ಕೆ

ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾಸರಗೋಡು ಲೋಕಸಭಾ ಕ್ಷೇತ್ರದತ್ತ ಸಹಜವಾಗಿ ಕುತೂಹಲ ಮೂಡಿದೆ. ಕರ್ನಾಟಕದವರೂ ಇಲ್ಲಿನ ಫಲಿತಾಂಶದ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಾರೆ. ಹೀಗಾಗಿ ಬಿಜೆಪಿ ಭಾರೀ ಕಸರತ್ತು ನಡೆಸಿ ಅಭ್ಯರ್ಥಿಯ ಆಯ್ಕೆ ನಡೆಸಿದೆ. ರಾಜ್ಯ ಬಿಜೆಪಿ ಪದಾಧಿಕಾರಿ ಪಿ.ಕೆ.ಕೃಷ್ಣದಾಸ್‌ ಮತ್ತು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಪ್ರಮೀಳಾ ಸಿ. ನಾಯಕ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಪಕ್ಷದ ಜಿಲ್ಲಾಧ್ಯಕ್ಷ ರವೀಶ್ ತಂತ್ರಿ ಅವರು ತಾನು ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಮೊದಲೇ ಹೇಳಿದ್ದರು. ಹೀಗಾಗಿ ಯಾರಿಗೆ ಟಿಕೆಟ್‌ ಸಿಗಲಿದೆ ಎನ್ನುವ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಅಂತಿಮವಾಗಿ ಅಶ್ವಿನಿ ಹೆಸರನ್ನು ಪಕ್ಷ ಘೋಷಿಸಿದೆ. ಸಮರ್ಥ ನಾಯಕತ್ವವೇ ಅವರ ಆಯ್ಕೆಗೆ ಕಾರಣ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Madhavi Lata: ಓವೈಸಿ ವಿರುದ್ಧ ಹಿಂದು ಸಿಂಹಿಣಿಗೆ ಟಿಕೆಟ್‌ ಕೊಟ್ಟ ಬಿಜೆಪಿ; ಯಾರಿವರು ಮಾಧವಿ?

ʼಕಮಲʼದ ಕೈ ಹಿಡಿಯುತ್ತಾರಾ ಮತದಾರರು?

ಈ ಬಾರಿ ಕೇರಳದಲ್ಲಿ ಕೇಸರಿಯ ವಿಜಯ ಪತಾಕೆ ಹಾರಿಸಲೇಬೇಕೆಂಬ ಹಠ ಬಿಜೆಪಿಯಲ್ಲಿದೆ. ಹೀಗಾಗಿ ಗೆಲುವಿನ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. ತಿರುವನಂತಪುರ ಕ್ಷೇತ್ರದಿಂದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಪಾಲಕ್ಕಾಡ್‌ನಿಂದ ಸಿ.ಕೃಷ್ಣ ಕುಮಾರ್‌, ಕಣ್ಣೂರಿನಿಂದ ಸಿ. ರಘುನಾಥ್‌, ತ್ರಿಶ್ಯೂರ್‌ನಿಂದ ಚಲನಚಿತ್ರ ನಟ, ಮಾಜಿ ಸಂಸದ ಸುರೇಶ್‌ ಗೋಪಿ, ಆಲಪ್ಪುಳದಿಂದ ಶೋಭಾ ಸುರೇಂದ್ರನ್‌, ಪತ್ತನಂತಿಟ್ಟದಿಂದ ಅನಿಲ್‌ ಆ್ಯಂಟನಿ, ವಡಕರದಿಂದ ಪ್ರಫುಲ್‌ ಕೃಷ್ಣನ್‌, ಅಟ್ಟಿಂಗಲ್‌ನಿಂದ ಕೇಂದ್ರ ಸಚಿವ ವಿ.ಮುರಳೀಧರನ್‌, ಕೋಝಿಕ್ಕೋಡ್‌ನಿಂದ ಎಂ.ಟಿ.ರಮೇಶ್‌, ಮಲಪ್ಪುರದಿಂದ ಡಾ.ಅಬ್ದುಲ್‌ ಸಲಾಂ ಹಾಗೂ ಪೊನ್ನಾನಿಯಿಂದ ನಿವೇದಿತಾ ಸುಬ್ರಮಣ್ಯಂ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಪ್ರಚಾರದ ಮಧ್ಯೆಯೇ ರಾಮಮಂದಿರಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮೋದಿ

Narendra Modi: ರಾಮಲಲ್ಲಾ ದರ್ಶನ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಮೋದಿ ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

VISTARANEWS.COM


on

Narendra Modi
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ.

ಮೋದಿ ಭರ್ಜರಿ ರೋಡ್‌ ಶೋ

ರಾಮಲಲ್ಲಾ ದರ್ಶನ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಮೋದಿ ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂದ ಸಿಂಗರಿಸಲಾಗಿತ್ತು. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ನರೇಂದ್ರ ಮೋದಿ ಅವರ ರೋಡ್‌ ಶೋನಲ್ಲಿ ಸಾಧು-ಸಂತರು ಕೂಡ ಭಾಗವಹಿಸಿರುವುದು ವಿಶೇಷವಾಗಿದೆ. ಇನ್ನು ರೋಡ್‌ ಶೋಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ. ಇನ್ನು, ರೋಡ್‌ ಶೋ ಉದ್ದಕ್ಕೂ ಮೋದಿ ಅವರ ಮೇಲೆ ಜನ ಹೂಮಳೆ ಸುರಿಸುವ ಜತೆಗೆ ಜೈ ಶ್ರೀರಾಮ್‌ ಎಂಬ ಘೋಷಣೆಗಳು ಕೂಡ ಮೊಳಗಿದವು.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನರೇಂದ್ರ ಮೋದಿ ಅವರ ರೋಡ್‌ ಶೋ ಪ್ರಾಮುಖ್ಯತೆ ಪಡೆದಿದೆ. ಉತ್ತರ ಪ್ರದೇಶ ಸೇರಿ ದೇಶಾದ್ಯಂತ ರಾಮಮಂದಿರ ನಿರ್ಮಾಣವು ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯವೂ ಆಗಿದೆ.

ಇದನ್ನೂ ಓದಿ: Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Continue Reading

ದೇಶ

Narendra Modi: ಅಯೋಧ್ಯೆಯಲ್ಲಿ ಮೋದಿ ಬೃಹತ್‌ ರೋಡ್ ಶೋ;‌ ಎಲ್ಲೆಡೆ ಜೈ ಶ್ರೀರಾಮ್‌ ಘೋಷಣೆ

Narendra Modi: ಕಳೆದ ಜನವರಿ 22ರಂದು ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೀಗ ಭಾನುವಾರ ಮತ್ತೆ ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದಾದ ಬಳಿಕ ಮೋದಿ ಅವರು ಭರ್ಜರಿ ರೋಡ್‌ ಶೋ ಕೂಡ ನಡೆಸುತ್ತಿದ್ದಾರೆ.

VISTARANEWS.COM


on

Narendra Modi
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದಾದ ಬಳಿಕ ನರೇಂದ್ರ ಮೋದಿ ಅವರು ರಾಮನಗರಿಯಲ್ಲಿ ಭರ್ಜರಿ ರೋಡ್‌ ಶೋ (Modi Road Show) ನಡೆಸುತ್ತಿದ್ದಾರೆ. ರೋಡ್‌ ಶೋ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ.

ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂದ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ಧತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಮೋದಿ ಅವರ ರೋಡ್‌ಶೋನಲ್ಲಿ ಸಾಧು ಸಂತರು ಕೂಡ ಭಾಗಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನರೇಂದ್ರ ಮೋದಿ ಅವರ ರೋಡ್‌ ಶೋ ಪ್ರಾಮುಖ್ಯತೆ ಪಡೆದಿದೆ. ಉತ್ತರ ಪ್ರದೇಶ ಸೇರಿ ದೇಶಾದ್ಯಂತ ರಾಮಮಂದಿರ ನಿರ್ಮಾಣವು ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯವೂ ಆಗಿದೆ.

ಇದನ್ನೂ ಓದಿ: Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Continue Reading

ದೇಶ

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಇದಕ್ಕೂ ಮೊದಲು ಮೋದಿ ಅವರು ರಾಮಲಲ್ಲಾನ ದರ್ಶನ ಪಡೆಯಲಿದ್ದಾರೆ. ರೋಡ್‌ ಶೋ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಇನ್ನು ಮೋದಿ ಅವರನ್ನು ಸ್ವಾಗತಿಸಲು ಜನರೂ ಸಜ್ಜಾಗಿದ್ದಾರೆ.

VISTARANEWS.COM


on

Narendra Modi
Koo

ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲವೇ ಕ್ಷಣಗಳಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 7 ಗಂಟೆಗೆ ರಾಮಮಂದಿರದಲ್ಲಿ (Ram Mandir) ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ 7.30ರ ಸುಮಾರಿಗೆ 2 ಕಿಲೋ ಮೀಟರ್‌ ರೋಡ್‌ಶೋ ನಡೆಸಲಿದ್ದಾರೆ. ಈ ರೋಡ್‌ ಶೋ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ. ಈ ಬೃಹತ್‌ ರೋಡ್‌ಶೋದಲ್ಲಿ (Modi Road Show) ಸಿಂಧಿ, ಪಂಜಾಬಿಗಳು ಮತ್ತು ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಿಯಾಗಲಿದ್ದಾರೆ. ಇಡೀ ರೋಡ್‌ ಶೋ ಕಾರ್ಯಕ್ರಮವನ್ನು ನೀವು ಇಲ್ಲಿ ಲೈವ್‌ ವೀಕ್ಷಣೆ ಮಾಡಬಹುದಾಗಿದೆ.

ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂದ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ದತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನರೇಂದ್ರ ಮೋದಿ ಅವರ ರೋಡ್‌ ಶೋ ಪ್ರಾಮುಖ್ಯತೆ ಪಡೆದಿದೆ. ಉತ್ತರ ಪ್ರದೇಶ ಸೇರಿ ದೇಶಾದ್ಯಂತ ರಾಮಮಂದಿರ ನಿರ್ಮಾಣವು ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯವೂ ಆಗಿದೆ.

ಇದನ್ನೂ ಓದಿ: Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Continue Reading

ದೇಶ

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ನಿಕಟ ಸಂಬಂಧ ಹೊಂದಿದ್ದ ಪೊಲೀಸ್‌ ಅಧಿಕಾರಿಯ ಗುಂಡಿನಿಂದ ಹೇಮಂತ್‌ ಕರ್ಕರೆ ಹುತಾತ್ಮರಾದರು ಎಂದು ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Vijay Namdevrao Wadettiwar
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆದಿವೆ. ಪ್ರತಿಸ್ಪರ್ಧಿಗಳ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದಾರೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

“2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ” ಎಂಬುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ (ಇವರು ಮುಂಬೈ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದವರು. ಅಜ್ಮಲ್‌ ಕಸಬ್‌ ಗಲ್ಲಿಗೇರಿಸುವಲ್ಲಿ ಇವರ ಪಾತ್ರವೂ ಇದೆ) ಉಜ್ವಲ್‌ ನಿಕಮ್‌ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್‌ ನಾಯಕ ಅಜ್ಮಲ್‌ ಕಸಬ್‌ ಪರವಾಗಿ ಮಾತನಾಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಸರಿಯಾಗಿ ತಿರುಗೇಟು ನೀಡಿದ್ದಾರೆ.

“ಅಜ್ಮಲ್‌ ಕಸಬ್‌ಗೆ ಬಿರಿಯಾನಿ ನೀಡಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ ಉಜ್ವಲ್‌ ನಿಕಮ್‌ ಅವರು ಕಾಂಗ್ರೆಸ್‌ಗೆ ಮಾನಹಾನಿ ಮಾಡಿದ್ದಾರೆ. ಯಾರಾದರೂ ಕಸಬ್‌ಗೆ ಬಿರಿಯಾನಿ ಕೊಡುತ್ತಾರಾ? ಇದಾದ ಬಳಿಕ ಕುತಂತ್ರವನ್ನು ಉಜ್ವಲ್‌ ನಿಕಮ್‌ ಒಪ್ಪಿಕೊಂಡರು. ಇವರನ್ನು ಯಾರದರೂ ವಕೀಲ ಎನ್ನುತ್ತಾರಾ? ಇವರು ಎಂತಹ ವಿಶ್ವಾಸಘಾತುಕ ಇರಬಹುದು? ಹೇಮಂತ್‌ ಕರ್ಕರೆ ಅವರಿಗೆ ತಗುಲಿದ ಗುಂಡು ಆರ್‌ಎಸ್‌ಎಸ್‌ ಜತೆ ನಂಟು ಹೊಂದಿರುವ ಪೊಲೀಸ್‌ ಅಧಿಕಾರಿಯ ಗನ್‌ನಿಂದ. ಇಂತಹ ಪ್ರಕರಣದಲ್ಲಿ ಬಿಜೆಪಿಯು ದೇಶದ್ರೋಹಿ ಉಜ್ವಲ್‌ ನಿಕಮ್‌ ಅವರಿಗೆ ಟಿಕೆಟ್‌ ನೀಡಿದೆ. ಆ ಮೂಲಕ ಬಿಜೆಪಿಯು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತದೆಯೇ” ಎಂಬುದಾಗಿ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ.

ತಿರುಗೇಟು ಕೊಟ್ಟ ಬಿಜೆಪಿ

ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಪ್ರತಿಕ್ರಿಯಿಸಿದ್ದಾರೆ. “ಕಾಂಗ್ರೆಸ್‌ ತನ್ನ ಮತಬ್ಯಾಂಕ್‌ ಅನ್ನು ಭದ್ರಪಡಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್‌ ಹಿರಿಯ ನಾಯಕರೊಬ್ಬರು ಮುಂಬೈ ದಾಳಿಯ ಉಗ್ರನಿಗೆ ಕ್ಲೀನ್‌ ಚಿಟ್‌ ನೀಡುತ್ತಾರೆ ಎಂದರೆ ಇದಕ್ಕಿಂತಹ ಕೆಳ ಹಂತಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಪ್ರಕಾರ, ಹೇಮಂತ್‌ ಕರ್ಕರೆ ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ನಿಂದ ಅಲ್ಲ ಎಂಬುದು ಅವರ ಹೇಳಿಕೆಯಾಗಿದೆ. ಹಾಗಾದರೆ, ಕಾಂಗ್ರೆಸ್‌ ಉಗ್ರರನ್ನು ಬೆಂಬಲಿಸುತ್ತದೆ ಎಂದಾಯಿತಲ್ಲವೇ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

Continue Reading
Advertisement
IPL 2024
ಪ್ರಮುಖ ಸುದ್ದಿ36 seconds ago

IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

Narendra Modi
ದೇಶ3 mins ago

Narendra Modi: ಪ್ರಚಾರದ ಮಧ್ಯೆಯೇ ರಾಮಮಂದಿರಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮೋದಿ

Viral News
ವೈರಲ್ ನ್ಯೂಸ್4 mins ago

Viral News: ಕಾಳಿಂಗ ಸರ್ಪವನ್ನು ಈ ಕುಟುಂಬ ಹೇಗೆ ಪೂಜಿಸುತ್ತಿದೆ ನೋಡಿ!

Narendra Modi
ದೇಶ14 mins ago

Narendra Modi: ಅಯೋಧ್ಯೆಯಲ್ಲಿ ಮೋದಿ ಬೃಹತ್‌ ರೋಡ್ ಶೋ;‌ ಎಲ್ಲೆಡೆ ಜೈ ಶ್ರೀರಾಮ್‌ ಘೋಷಣೆ

Prajwal Revanna Case
ಪ್ರಮುಖ ಸುದ್ದಿ21 mins ago

Prajwal Revanna Case: ಪ್ರಜ್ವಲ್‌ ಕೇಸ್‌ನಲ್ಲಿ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿದ ಎಸ್‌ಐಟಿ

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ30 mins ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Gadag News
ಕರ್ನಾಟಕ1 hour ago

Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Drought Relief
ಕರ್ನಾಟಕ2 hours ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ2 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ2 hours ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ30 mins ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌