ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಮಾಜಿ ವೇಗಿ, ಕನ್ನಡಿಗ ದೊಡ್ಡ ಗಣೇಶ್(Dodda Ganesh) ಅವರು ಶುಕ್ರವಾರ ಬಿಜೆಪಿ(dodda ganesha join bjp) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B. S. Yediyurappa) ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. 90ರ ದಶಕದಲ್ಲಿ ಭಾರತ ಮತ್ತು ಕರ್ನಾಟಕ ರಣಜಿ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿದ ಹೆಗ್ಗಳಿಕೆ ಇವರದ್ದು.
50 ವರ್ಷದ ದೊಡ್ಡ ಗಣೇಶ್ ನೇರ ನುಡಿಗಳಿಂದಲೇ ಹೆಸರುವಾಸಿ. 1997ರಲ್ಲಿ ಭಾರತ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 104 ಪಂದ್ಯಗಳಿಂದ 365 ವಿಕೆಟ್ ಪಡೆದಿದ್ದಾರೆ. ಭಾರತ ತಂಡದ ಪರ 6 ವಿಕೆಟ್ ಕಿತ್ತಿದ್ದಾರೆ. ಲಿಸ್ಟ್ ‘ಎ’ ಕ್ರಿಕೆಟ್ನಲ್ಲಿ 89 ಪಂದ್ಯಗಳನ್ನಾಡಿ 128 ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್ನಲ್ಲಿಯೂ ಉತ್ತಮ ದಾಖಲೆ ಹೊಂದಿರುವ ಇವರು ಲಿಸ್ಟ್ ‘ಎ’ ಮತ್ತು ಪ್ರಥಮ ದರ್ಜೆ ಕ್ರಿಕೆಟ್ ಸೇರಿ ಒಟ್ಟು 2,548 ರನ್ ಬಾರಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರೊಂದಿಗೆ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿ ಸೇರಿದ ವಿಚಾರವನ್ನು ದೊಡ್ಡ ಗಣೇಶ ಅವರು ತಮ್ಮ ಟ್ವಿಟರ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ‘ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡೆ. ಕನ್ನಡಿಗರ ಆಶೀರ್ವಾದ ನನ್ನ ಮೇಲೆ ಹೀಗೇ ಇರಲಿ ಎಂದು ಬಯಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ Lok Sabha Election 2024: ಸುಮಲತಾ ಅಂಬರೀಶ್ ಪಕ್ಷೇತರ ಸ್ಪರ್ಧೆ ಇಲ್ಲ; ಬಿಜೆಪಿ ಸೇರ್ಪಡೆ ಘೋಷಣೆ
ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ @BSYBJP ಯಡಿಯೂರಪ್ಪನವರ ಸಮ್ಮುಖದಲ್ಲಿ @BJP4India ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡೆ. ಕನ್ನಡಿಗರ ಆಶೀರ್ವಾದ ನನ್ನ ಮೇಲೆ ಹೀಗೇ ಇರಲಿ ಎಂದು ಬಯಸುತ್ತೇನೆ.
— Dodda Ganesh | ದೊಡ್ಡ ಗಣೇಶ್ (Modi Ka Parivar) (@doddaganesha) April 5, 2024
Thanking Shri @narendramodi ji @AmitShah ji @JPNadda ji for providing me this opportunity. Will promise to work for… pic.twitter.com/1yvL50bMZV
ಬಿಜೆಪಿ ಸೇರಿದ ಸುಮಲತಾ
ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾದರು. ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದು, ಕಮಲ ಪಾಳಯ ಸೇರಿದ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪತಿಪಕ್ಷ ನಾಯಕ ಆರ್.ಅಶೋಕ್ ಸೇರಿ ಬಿಜೆಪಿಯ ಹಲವು ನಾಯಕರು ಸ್ವಾಗತಿಸಿದರು.
ಬಿಜೆಪಿ ಸೇರಿದ ಬಳಿಕ ಮಾತನಾಡಿದ ಸುಮಲತಾ ಅಂಬರೀಶ್, “ಇಂದಿನ ದಿನವು ನನ್ನ ರಾಜಕೀಯ ಜೀವನದಲ್ಲಿ ಮಹತ್ವ ಪಡೆದಿರುವ ಸುದಿನವಾಗಿದೆ. ಐದು ವರ್ಷಗಳ ಹಿಂದೆ ಮಂಡ್ಯ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಿಕ್ಕಿತ್ತು. ಆ ಚುನಾವಣೆ, ಆ ಸಂದರ್ಭವನ್ನು ಎಂದಿಗೂ ಮರೆಯುವುದಿಲ್ಲ. ಮಂಡ್ಯದ ಜನತೆ, ಅಂಬರೀಶ್ ಅಭಿಮಾನಿಗಳ ಬಳಗವು ನನಗೆ ಬೆನ್ನೆಲುಬಾಗಿ ನಿಂತಿದೆ. 5 ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ನನಗೆ ಬೆಂಬಲ ನೀಡಿದ್ದರು. ಅದನ್ನು ನಾನು ಎಂದಿಗೂ ಮರೆಯುವುದಿಲ್ಲ. ಈಗ ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂಬ ದೃಷ್ಟಿಯಿಂದ ಬಿಜೆಪಿ ಸೇರಿದ್ದೇನೆ. ಮುಂದಿನ ದಿನಗಳಲ್ಲೂ ಜನರ ಬೆಂಬಲ ಹೀಗೆಯೇ ಇರಲಿ” ಎಂದು ಹೇಳಿದರು.