ಧಾರವಾಡ: ಲೋಕಸಭೆ ಚುನಾವಣೆಯಲ್ಲಿ (Election Results 2024) ಗೆಲುವು -ಸೋಲಿನ ಲೆಕ್ಕಚಾರ ನಡೆಯುತ್ತಿರುವಾಗಲೇ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದ ಬಳಿ ದುಷ್ಕರ್ಮಿಗಳಿಂದ ವಾಮಾಚಾರ (Black Magic) ನಡೆದಿದೆ. ಮರದ ಪೊದೆಯಲ್ಲಿ ಎರಡು ಮೊಟ್ಟೆಗಳನ್ನು ಇಟ್ಟು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಮರದಡಿ ಮೊಟ್ಟೆ ಇರುವುದನ್ನು ಕಂಡು ಕ್ಷಣಕಾಲ ಅಲ್ಲಿದ್ದವರು ಆತಂಕಗೊಂಡರು.
ಚುನಾವಣೆಯ ಫಲಿತಾಂಶದಲ್ಲಿ ಗೆಲವು ಸಾಧಿಸಲು ಯಾರಾದರೂ ಹೀಗೆ ಮಾಡಿದ್ದರಾ ಎಂಬ ಅನುಮಾನ ಮೂಡಿದೆ. ಮೊಟ್ಟೆಯನ್ನು ತಂದಿಟ್ಟವರು ಯಾರು? ನಿಜಕ್ಕೂ ಅಲ್ಲಿ ವಾಮಾಚಾರ ನಡೆದಿದ್ಯಾ ಅಥವಾ ಮರದಡಿ ಕುಳಿತಾಗ ಮರೆತು ಬಿಟ್ಟು ಹೋಗಿದ್ದರಾ ಎಂಬುದು ತಿಳಿದು ಬಂದಿಲ್ಲ.
ಅಂದಹಾಗೇ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ ಗೆಲುವು ಸಾಧಿಸಿದ್ದಾರೆ. ಐದನೆಯ ಬಾರಿಯೂ ಮತದಾರರು ಪ್ರಲ್ಹಾದ್ ಜೋಶಿ ಅವರನ್ನು ಗೆಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ 6,82,400 ಮತ ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ 5,87,397 ಮತ ಪಡೆದು, 95,003 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.
ಇದನ್ನೂ ಓದಿ:Election Results 2024: ಮೈತ್ರಿಕೂಟಕ್ಕೆ ಕಡಿಮೆ ಸ್ಥಾನ; ವಿಷಯ ತಿಳಿದು ಬಿಜೆಪಿ ಅಭಿಮಾನಿ ಹೃದಯಾಘಾತಕ್ಕೆ ಬಲಿ
ಚಿಕ್ಕೋಡಿಯಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದ ಕಿಡಿಗೇಡಿ
ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಹಿನ್ನೆಲೆಯಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾನೆ. ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ಘಟನೆ ನಡೆದಿದೆ. ಪಾಕಿಸ್ತಾನ್‌ಗೆ ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್ ಎಂದು ಕೂಗಿದ್ದಾನೆ.
ಈ ಹಿಂದೆ ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದಾಗ ಕಾಂಗ್ರೆಸ್ ನೂತನ ಸದಸ್ಯ ನಾಸಿರ್ ಹುಸೇನ್ (Nasir Hussain) ಬೆಂಬಲಿಗರು ವಿಧಾನಸೌಧದೊಳಗೇ ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಜೈಕಾರ ಕೂಗಿದ್ದರು. ದೇಶದ್ರೋಹದ (Sedition Case) ಕೆಲಸ ಮಾಡಿ ಉದ್ಧಟತನ ಮೆರೆದಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದವು.
ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ (Vidhana Soudha) ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಘೋಷಣೆ ಮಾಡಿದ ಪ್ರಕರಣಕ್ಕೆ (Sedition Case) ಸಂಬಂಧಿಸಿ ಬಂಧಿತರಾದ ಮೂವರಿಗೆ (Three Accused gets Bail) ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು (Bangalore Court) ನೀಡಿತ್ತು.
ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ಗೆ ಗೆಲವು
ಇನ್ನೂ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಣ್ಣಸಾಬ್ ಜೊಲ್ಲೆ ವಿರುದ್ಧ 96,253 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ ಜೋಲ್ಲೆ 5,83,926 ಮತ ಪಡೆದು, 96,253 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಬಿಜೆಪಿಯ ಭದ್ರಕೋಟೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮನೆ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಹೋಳಿಗೆ ಗುಲಾಬಿ ಬಣ್ಣ ಹಂಚಿ ಸಂಭ್ರಮಾಚರಣೆ ಮಾಡಿದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ