ಬೆಂಗಳೂರು: ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ (Election Results 2024) ಗೆದ್ದು ಬೀಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ವಿನ್ ಆಗಿದ್ದಾರೆ.
ಟಿವಿ ರಾಮ ಅರುಣ್ ಗೋವಿಲ್
ರಮಾನಂದ್ ಸಾಗರ್ ಅವರ `ರಾಮಾಯಣ’ ಶೋನ ಭಗವಾನ್ ರಾಮನ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟ ಅರುಣ್ ಗೋವಿಲ್ ಅವರು ಉತ್ತರ ಪ್ರದೇಶದ ಮೀರತ್‌ನಿಂದ ಗೆದ್ದಿದ್ದಾರೆ.
ಸುರೇಶ್ ಗೋಪಿ
ಈ ಹಿಂದಿನ ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಆಗ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.
ಇದನ್ನೂ ಓದಿ: Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್
ಶತ್ರುಘ್ನ ಸಿನ್ಹಾ (ಟಿಎಂಸಿ, ಅಸನ್ಸೋಲ್)
ಪಶ್ಚಿಮ ಬಂಗಾಳ ಅಸನ್ಸೋಲ್ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರಿ ಬಾಬು ಎಂದೇ ಖ್ಯಾತರಾಗಿರುವ ಶತ್ರುಘ್ನ ಸಿನ್ಹಾ ಟಿ ಎಂ ಸಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 63,000 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುರಿಂದರ್ ಸಿಂಗ್ ಅಹ್ಲುವಾಲಿಯಾ ಅವರನ್ನು ಸೋಲಿಸಿದ್ದಾರೆ.
ಹೇಮಾ ಮಾಲಿನಿ (ಬಿಜೆಪಿ, ಮಥುರಾ)
2024ರ ಲೋಕಸಭಾ ಚುನಾವಣೆಯಲ್ಲೂ ಮಥುರಾ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿರುವ ಹೇಮಾ ಮಾಲಿನಿ, ಈ ಬಾರಿಯೂ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿಯ ಸುರೇಶ್ ಸಿಂಗ್ ಅವರನ್ನು 106924 ಮತಗಳ ಅಂತರದಿಂದ ಸೋಲಿಸಿದ್ದಾರೆ.
ರಾಧಿಕಾ ಶರತ್‌ಕುಮಾರ್ (ಬಿಜೆಪಿ, ವಿರುದ್‌ನಗರ)
ನಟಿ ರಾಧಿಕಾ ಶರತ್‌ಕುಮಾರ್ ಅವರು ತಮಿಳುನಾಡಿನ ವಿರುದ್‌ನಗರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ ಸೋತಿದ್ದಾರೆ.
ಸ್ಮೃತಿ ಇರಾನಿ
ಗಾಂಧಿ ಕುಟುಂಬದ ಕ್ಷೇತ್ರ ಅಮೇಠಿಯಲ್ಲಿ ಸ್ಮೃತಿ ಇರಾನಿಗೆ ಈ ಬಾರಿ ಸೋಲಾಗಿದೆ. ಗಾಂಧಿ ಕುಟುಂಬದ ಬಲಗೈ ಬಂಟ ಕಿಶೋರಿ ಲಾಲ್ ಶರ್ಮಾ ಇಲ್ಲಿ ಇರಾನಿಗೆ ಸೋಲಿನ ರುಚಿ ತೋರಿಸಿದ್ದಾರೆ. ಈ ಮೂಲಕ ಕಳೆದ ಬಾರಿ ರಾಹುಲ್ ಗಾಂಧಿಯನ್ನೇ ಸೋಲಿಸಿದ್ದ ಇರಾನಿ, ಇದೀಗ ಅವರ ಬಂಟನ ಕೈಯಲ್ಲಿ ಸೋಲು ಕಾಣುವಂತಾಗಿದೆ.
ಮನೋಜ್ ತಿವಾರಿ (ಬಿಜೆಪಿ, ಈಶಾನ್ಯ ದೆಹಲಿ)
ಈಶಾನ್ಯ ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಭೋಜ್‌ಪುರಿ ನಟ, ಗಾಯಕ ಮನೋಜ್ ತಿವಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕನ್ಹಯ್ಯ ಕುಮಾರ್ ವಿರುದ್ಧ ಭರ್ಜರಿ ಮತಗಳಿಂದ ಗೆದ್ದಿದ್ದಾರೆ.
ರವಿ ಕಿಶನ್
ರಾಜಕಾರಣಿ ಹಾಗೂ ಬಿಜೆಪಿ ನಾಯಕ ರವಿ ಕಿಶನ್ ಉತ್ತರ ಪ್ರದೇಶದ ಗೋರಖ್‌ಪುರ ಕ್ಷೇತ್ರದಿಂದ 74,536 ಮತಗಳ ಅಂತರದಿಂದ ಗೆದ್ದಿದ್ದಾರೆ.
ಪವನ್ ಸಿಂಗ್
ಜನಪ್ರಿಯ ಭೋಜ್‌ಪುರಿ ನಟ ಮತ್ತು ಗಾಯಕ ಪವನ್ ಸಿಂಗ್ ಬಿಹಾರದ ಕಾರಕಟ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮುನ್ನಡೆ ಸಾಧಿಸಿದ್ದಾರೆ.