ಬೆಂಗಳೂರು: ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ (Election Results 2024) ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. 2024ರ ಚುನಾವಣೆಯ ಫಲಿತಾಂಶದ ದಿನದಂದು ಅವರು ತಮ್ಮ ತಾಯಿಯ ಆಶೀರ್ವಾದವನ್ನು ಪಡೆದರು. ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಸ್ಪರ್ಧಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಅವರು 6 ಬಾರಿ ಸಿಎಂ ಆಗಿದ್ದ ವೀರಭದ್ರ ಸಿಂಗ್ ಹಾಗೂ ಹಾಲಿ ಮಂಡಿ ಸಂಸದೆ ಪ್ರತಿಭಾ ಸಿಂಗ್ ಅವರ ಪುತ್ರ.
ಕಂಗನಾ ತಾಯಿಯ ಆಶೀರ್ವಾದ ಪಡೆದ ಫೋಟೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. . “ತಾಯಿಯೇ ದೇವರ ರೂಪ, ಇಂದು ನನ್ನ ತಾಯಿ ನನಗೆ ಮೊಸರು ಮತ್ತು ಸಕ್ಕರೆಯನ್ನು ತಿನ್ನಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಗೆಲುವಿನ ವಿಶ್ವಾಸದಲ್ಲಿರುವ ಕಂಗನಾಗೆ ಇದು ದೊಡ್ಡ ದಿನ. “ಮಂಡಿಯು ಹೆಣ್ಣು ಮಕ್ಕಳಿಗೆ ಆಗುವ ಅವಮಾನಗಳನ್ನು ನಾನು ಸಹಿಸುವುದಿಲ್ಲ. ಹಿಮಾಚಲ ಪ್ರದೇಶ ನನ್ನ ‘ಜನ್ಮಭೂಮಿ’ ಮತ್ತು ನಾನು ಇಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆʼʼ ಎಂದು ಕಂಗನಾ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: AP Election results 2024 live: ಆಂಧ್ರ ಪ್ರದೇಶ ವಿಧಾನಸಭೆ: ಭರ್ಜರಿ ಗೆಲುವಿನತ್ತ ಟಿಡಿಪಿ
ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಟನೆ ತೊರೆಯುವುದಾಗಿ ಕಂಗನಾ ರಣಾವತ್ ಈಗಾಗಲೇ ಘೋಷಣೆ ಮಾಡಿದ್ದಾರೆ. ಆಜ್ ತಕ್ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.