ಚಿಕ್ಕೋಡಿ: ಲೋಕಸಭೆ ಚುನಾವಣೆಯಲ್ಲಿ (Election Results 2024) ಚಿಕ್ಕೋಡಿಯಲ್ಲಿ (Chikkodi Lok Sabha Election 2024 Results) ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾನೆ. ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ಘಟನೆ ನಡೆದಿದೆ. ಪಾಕಿಸ್ತಾನ್‌ಕ್ಕೆ, ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್ ಎಂದು ಕೂಗಿದ್ದಾನೆ.
ಈ ಹಿಂದೆ ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದಾಗ ಕಾಂಗ್ರೆಸ್ ನೂತನ ಸದಸ್ಯ ನಾಸಿರ್ ಹುಸೇನ್ (Nasir Hussain) ಬೆಂಬಲಿಗರು ವಿಧಾನಸೌಧದೊಳಗೇ ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಜೈಕಾರ ಕೂಗಿದ್ದರು. ದೇಶದ್ರೋಹದ (Sedition Case) ಕೆಲಸ ಮಾಡಿ ಉದ್ಧಟತನ ಮೆರೆದಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದವು.
ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ (Vidhana Soudha) ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಘೋಷಣೆ ಮಾಡಿದ ಪ್ರಕರಣಕ್ಕೆ (Sedition Case) ಸಂಬಂಧಿಸಿ ಬಂಧಿತರಾದ ಮೂವರಿಗೆ (Three Accused gets Bail) ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು (Bangalore Court) ನೀಡಿತ್ತು.
ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ಗೆ ಗೆಲವು
ಇನ್ನೂ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಣ್ಣಸಾಬ್ ಜೊಲ್ಲೆ ವಿರುದ್ಧ 96,253 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ ಜೋಲ್ಲೆ 5,83,926 ಮತ ಪಡೆದು, 96,253 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಬಿಜೆಪಿಯ ಭದ್ರಕೋಟೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮನೆ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಹೋಳಿಗೆ ಗುಲಾಬಿ ಬಣ್ಣ ಹಂಚಿ ಸಂಭ್ರಮಾಚರಣೆ ಮಾಡಿದರು.
ಮೈತ್ರಿಕೂಟಕ್ಕೆ ಕಡಿಮೆ ಸ್ಥಾನ; ವಿಷಯ ತಿಳಿದು ಬಿಜೆಪಿ ಅಭಿಮಾನಿ ಹೃದಯಾಘಾತಕ್ಕೆ ಬಲಿ
ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ (lok sabha Election 2024) ಎನ್‌ಡಿಎಗೆ (NDA) ಕಡಿಮೆ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಫಲಿತಾಂಶ (Election Results 2024) ನೋಡಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಘಟನೆ ನಡೆದಿದೆ. ಶಿವಪ್ರಕಾಶ್ ಹಿರೇಮಠ ಮೃತ ದುರ್ದೈವಿ.
ಶಿವಪ್ರಕಾಶ್ ಹಿರೇಮಠ ಕಟ್ಟಾ ಬಿಜೆಪಿ ಅಭಿಮಾನಿಯಾಗಿದ್ದರು. ಮನೆಯ ಸೋಫಾದಲ್ಲಿ ಕುಳಿತು ಟಿವಿಯಲ್ಲಿ ಫಲಿತಾಂಶ ನೋಡುವಾಗ ಶಿವಪ್ರಕಾಶ್ ಕುಸಿದು ಬಿದ್ದಿದ್ದಾರೆ. ಎನ್‌ಡಿಎ 300ರಷ್ಟು ಗಡಿ ದಾಟಲಿಲ್ಲ ಎಂದು ಸುದ್ದಿ ತಿಳಿದ ಶಿವಪ್ರಕಾಶ್ ಆಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ