Fact Check : ಹಿಂದುಗಳ ಮತ ಕಾಂಗ್ರೆಸ್‌ಗೆ ಬೇಡ; ಮುಸ್ಲಿಂ ಮತ ಮಾತ್ರವೇ ಸಾಕೆಂದರೇ ಸಿಎಂ ಸಿದ್ದರಾಮಯ್ಯ? - Vistara News

Lok Sabha Election 2024

Fact Check : ಹಿಂದುಗಳ ಮತ ಕಾಂಗ್ರೆಸ್‌ಗೆ ಬೇಡ; ಮುಸ್ಲಿಂ ಮತ ಮಾತ್ರವೇ ಸಾಕೆಂದರೇ ಸಿಎಂ ಸಿದ್ದರಾಮಯ್ಯ?

Fact Check : ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು. ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ ಎಂದು ವಾರ್ನಿಂಗ್‌ ನೀಡಿದ್ದಾರೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ “ಹಿಂದುಗಳ ಮತ (Hindu Votes) ನಮಗೆ ಬೇಡ, ಮುಸ್ಲಿಮರ ವೋಟು (Muslims Vote) ನಮಗೆ ಸಾಕು” ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಾಂಗ್ರೆಸ್‌ ಕಾರ್ಯಕರ್ತರ ಹೋಬಳಿ ಮಟ್ಟದ ಸಭೆಯಲ್ಲಿ ಹೇಳಿದ್ದಾರೆಂಬ ಸುದ್ದಿಯು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಬಳಿಕ ಈ ಕುರಿತು ಫ್ಯಾಕ್ಟ್‌ ಚೆಕ್‌ (Fact Check) ಸಹ ನಡೆದು ಸುಳ್ಳು ಸುದ್ದಿ ಎಂದು ಗೊತ್ತಾಗಿದೆ. ಇದಕ್ಕೀಗ ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ತಾವು ಇಂಥ ಹೇಳಿಕೆಯನು ತಾವು ನೀಡಿಯೇ ಇಲ್ಲ. ಇಂಥ ಸುಳ್ಳು ಸುದ್ದಿಗಳನ್ನು (Fake News) ಪ್ರಕಟ ಮಾಡಿದವರ ಚಳಿ ಬಿಡಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ ಸಿದ್ದರಾಮಯ್ಯ, ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಎಚ್ಚರಿಕೆಯನ್ನು ರವಾನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾ ಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ” ಎಂದು ಖಡಕ್‌ ವಾರ್ನಿಂಗ್‌ ಅನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಒಕ್ಕಲಿಗ ಪಾಲಿಟಿಕ್ಸ್‌ಗೆ ನಿರ್ಮಲಾನಂದನಾಥ ಶ್ರೀಗಳ ಎಳೆದು ತಂದ ಡಿಕೆಶಿ! ತಿರುಗಿಬಿದ್ದ ನಾಯಕರು

ಟ್ವೀಟ್‌ ಮಾಡಿ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಿಂದ ದೂರು

ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾನೂನು ಘಟಕದ ಹರೀಶ್ ನಾಗರಾಜು ಎಂಬುವವರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗಿರುವ ಸುದ್ದಿಯ ತುಣುಕು ಸುಳ್ಳಾಗಿದ್ದು, ಇದು ವೈರಲ್‌ ಆಗಿದೆ. ಹೀಗಾಗಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Rupali Ganguly: ನಾನು ಮೋದಿಯ ʻಡೈ ಹಾರ್ಡ್‌ ಫ್ಯಾನ್‌ʼ ಎಂದು ಬಿಜೆಪಿ ಸೇರಿದ ಖ್ಯಾತ ಕಿರುತೆರೆ ನಟಿ!

Rupali Ganguly: ರೂಪಾಲಿ ಗಂಗೂಲಿ (Rupali Ganguly) ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. 1990ರ ಸಮಯದಲ್ಲಿ ನಟಿ ರೂಪಾಲಿ ಗಂಗೂಲಿಯವರು ಧಾರಾವಾಹಿ ಕ್ಷೇತ್ರದಲ್ಲಿ ಬಹಳಷ್ಟು ಹೆಸರು ಮಾಡಿದ್ದರು. ಹಲವಾರು ವಿಭಿನ್ನವಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡ ಇವರು ತಮ್ಮ ನಟನೆಯ ಮೂಲಕ ಮನೆ ಮಾತಾಗಿದ್ದರು. ರೂಪಾಲಿ ಗಂಗೂಲಿ ರಾಜಕೀಯ ವೃತ್ತಿಜೀವನವನ್ನು ಘೋಷಿಸಿದ್ದರೂ, 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ ಎಂದು ಅವರು ಇನ್ನೂ ಖಚಿತಪಡಿಸಿಲ್ಲ.

VISTARANEWS.COM


on

Rupali Ganguly Of Anupamaa Fame Joins BJP
Koo

ಬೆಂಗಳೂರು: ದೂರದರ್ಶನ ನಟಿ ರೂಪಾಲಿ ಗಂಗೂಲಿ (Rupali Ganguly) ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಮೇ 1ರಂದು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. 1990ರ ಸಮಯದಲ್ಲಿ ನಟಿ ರೂಪಾಲಿ ಗಂಗೂಲಿಯವರು ಧಾರಾವಾಹಿ ಕ್ಷೇತ್ರದಲ್ಲಿ ಬಹಳಷ್ಟು ಹೆಸರು ಮಾಡಿದ್ದರು. ಹಲವಾರು ವಿಭಿನ್ನವಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡ ಇವರು ತಮ್ಮ ನಟನೆಯ ಮೂಲಕ ಮನೆ ಮಾತಾಗಿದ್ದರು.

ಬಿಜೆಪಿ ಸೇರ್ಪಡೆ ಬಳಿಕ ನಟಿ ಮಾಧ್ಯಮದವರೊಂದಿಗೆ ಮಾತನಾಡಿ “ನಾನು ಬಿಜೆಪಿಗೆ ಸೇರ್ಪಡೆಯಾಗಿರುವುದು ತುಂಬಾ ಗೌರವ ಎಂದೆನಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದಾರೆ. ನಾನು ಪ್ರಧಾನಿ ಮೋದಿಯವರ ದೊಡ್ಡ ಅಭಿಮಾನಿ. ಬಿಜೆಪಿ ಉತ್ತಮ ಕೆಲಸ ಮಾಡುತ್ತಿದೆ. ಹಾಗಾಗಿ ನಾನು ಬಿಜೆಪಿ ಸೇರಲು ಬಯಸುತ್ತೇನೆ. ನಾನು ಪಕ್ಷಕ್ಕೆ ತುಂಬಾ ಕೃತಜ್ಞನಾಗಿದ್ದೇನೆʼʼ ಎಂದು ಹೇಳಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಮುಖಂಡ ವಿನೋದ್ ತಾವ್ಡೆ ಮತ್ತು ಅನಿಲ್ ಬಲುನಿ ಕೂಡ ಇದ್ದರು. ನಟಿ ರೂಪಾಲಿ ಗಂಗೂಲಿ ಅವರು ‘ಸುಕನ್ಯಾ’ ಧಾರಾವಾಹಿ ಮೂಲಕ ಕಿರುತೆರೆ ಕ್ಷೇತ್ರಕ್ಕೆ ಕಾಲಿಟ್ಟರು. ನಂತರ ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ಧಾರಾವಾಹಿಯಿಂದ ಬಹಳಷ್ಟು ಮನೆ ಮಾತಾಗಿದ್ದರು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೇಲೆ ಒಂದು ದೊಡ್ಡ ಬ್ರೇಕ್ ತೆಗೆದುಕೊಂಡಿರುವ ನಟಿ ರೂಪಾಲಿ ಗಂಗೂಲಿ ‘ಅನುಪಮಾ’ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟರು. ʻಅನುಪಮಾʼ ಧಾರಾವಾಹಿ ಕೂಡ ಪ್ರೇಕ್ಷಕರ ಮೆಚ್ಚಿನ ಧಾರಾವಾಹಿಯಾಗಿ ಹೊರಹೊಮ್ಮಿತು.

ಇದನ್ನೂ ಓದಿ: Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

ರೂಪಾಲಿ ಗಂಗೂಲಿ ರಾಜಕೀಯ ವೃತ್ತಿಜೀವನವನ್ನು ಘೋಷಿಸಿದ್ದರೂ, 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ ಎಂದು ಅವರು ಇನ್ನೂ ಖಚಿತಪಡಿಸಿಲ್ಲ.

ತಿಂಗಳ ಮುಂಚೆ ಮೋದಿಯವರನ್ನು ಭೇಟಿಯಾಗಿದ್ದ ನಟಿ!

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಗ್ಗೆ ನಟಿ ಮಾರ್ಚ್‌ನಲ್ಲಿ ಇನ್‌ಸ್ಟಾ ಮೂಲಕ ಹೇಳಿಕೊಂಡಿದ್ದರು. ʻʻ ನನ್ನ ಕನಸು ನನಸಾಯಿತು…ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಅವರನ್ನು ಭೇಟಿ ಮಾಡುವ ದಿನ. ಇದು ನಿಜಕ್ಕೂ ಅಭಿಮಾನಿ ಹುಡುಗಿಯ ಕ್ಷಣ! 14 ವರ್ಷಗಳ ಕಾಲ ನಾನು ಅಂತಹ ಒಂದು ದೊಡ್ಡ ವೇದಿಕೆ ಹಂಚಿಕೊಳ್ಳಬೇಕು ಎಂದು ಕಾಯುತ್ತಿದ್ದೆʼʼಎಂದು ಸಂತಸ ವ್ಯಕ್ತಪಡಿಸಿದ್ದರು.

ಹೆಚ್ಚು ಕಮ್ಮಿ ಆರರಿಂದ ಏಳು ವರ್ಷಗಳ ಕಾಲ ಯಾವುದೇ ನಟನೆಯಲ್ಲಿ ಕಾಣಿಸಿಕೊಳ್ಳದ ನಟಿ ರೂಪಾಲಿ ಗಂಗೂಲಿ ʻಅನುಪಮಾʼ ಮೂಲಕ ಮತ್ತೆ ಕಿರುತೆರೆಗೆ ಬಂದಿದ್ದರು. ʻʻದಶಕಗಳ ಹಿಂದೆ ನಮ್ಮ ಮನೆಯಲ್ಲಿ ಆರ್ಥಿಕ ಸಂಕಷ್ಟವಿತ್ತು. ನನ್ನ ತಂದೆ ಆರೋಗ್ಯ ಸರಿ ಇರಲಿಲ್ಲ. ಯಾವುದೇ ವ್ಯವಸ್ಥೆ ಇಲ್ಲದ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ಸೇರಿಸಲು ನನಗೆ ಇಷ್ಟವಿರಲಿಲ್ಲ. ಹಾಗಾಗಿ ನಾನು ಧಾರಾವಾಹಿ ಕ್ಷೇತ್ರಕ್ಕೆ ಕಾಲಿಟ್ಟೆ. ಆಗ ಬರುತ್ತಿದ್ದ ಹಣ ನನಗೆ ಬಹಳ ಮುಖ್ಯವಾಗಿತ್ತು ಎಂದು ರೂಪಾಲಿ ಈ ಹಿಂದೆ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Continue Reading

ಪ್ರಮುಖ ಸುದ್ದಿ

Lok Sabha Election 2024: ಎರಡು ಹಂತದ ಚುನಾವಣೆ ವೇಳೆ ಶೇ.84ರಷ್ಟು ಕ್ಷೇತ್ರಗಳಲ್ಲಿ ಮತದಾನ ಕುಸಿತ; ಎಫೆಕ್ಟ್ ಏನು?

Lok Sabha Election 2024: ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಹಂತ 1ರಲ್ಲಿ 66.14%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.71% ರಷ್ಟು ಮತದಾನವಾಗಿದೆ. 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಒಟ್ಟು ಮತ ಎಣಿಕೆಗೆ ಅಂಚೆ ಮತಪತ್ರಗಳನ್ನು ಸೇರಿಸಿದ ನಂತರವೇ ಅಂತಿಮ ಮತದಾನದ ಪ್ರಮಾಣ ಲಭ್ಯವಾಗಲಿದೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ.

VISTARANEWS.COM


on

lok sabha election 2024 voting
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ (first phase voting) ಹನ್ನೊಂದು ದಿನಗಳ ನಂತರ ಮತ್ತು ಎರಡನೇ ಹಂತದ (second phase voting) ನಾಲ್ಕು ದಿನಗಳ ನಂತರ, ಭಾರತೀಯ ಚುನಾವಣಾ ಆಯೋಗ (Election commission of India – ECI) ಮಂಗಳವಾರ ಅಧಿಕೃತವಾಗಿ ಮತದಾನ ಮಾಹಿತಿಯನ್ನು (Voting data) ಬಿಡುಗಡೆ ಮಾಡಿದೆ. ಶೇ.84ರಷ್ಟು ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ಕುಸಿತವಾಗಿರುವುದು ಕಂಡುಬಂದಿದೆ.

ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಹಂತ 1ರಲ್ಲಿ 66.14%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.71% ರಷ್ಟು ಮತದಾನವಾಗಿದೆ. 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಒಟ್ಟು ಮತ ಎಣಿಕೆಗೆ ಅಂಚೆ ಮತಪತ್ರಗಳನ್ನು ಸೇರಿಸಿದ ನಂತರವೇ ಅಂತಿಮ ಮತದಾನದ ಪ್ರಮಾಣ ಲಭ್ಯವಾಗಲಿದೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ.

ಅಂಕಿಅಂಶಗಳ ಪ್ರಕಾರ 102 ಕ್ಷೇತ್ರಗಳಲ್ಲಿ 1ನೇ ಹಂತದಲ್ಲಿ ಮತದಾನ ಮಾಡಲು ಅರ್ಹತೆ ಪಡೆದ 16.63 ಕೋಟಿ ಜನರಲ್ಲಿ ಸುಮಾರು 11.0 ಕೋಟಿ ಜನರು ಮತ ಚಲಾಯಿಸಿದ್ದಾರೆ. ಆದರೆ ಹಂತ 2ರಲ್ಲಿ 88 ಕ್ಷೇತ್ರಗಳಲ್ಲಿ ಮತ ಚಲಾಯಿಸಲು ಅರ್ಹತೆ ಪಡೆದ 15.88 ಕೋಟಿ ಜನರಲ್ಲಿ ಸುಮಾರು 10.6 ಕೋಟಿ ಜನರು ಮತ ಚಲಾಯಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯೊಂದಿಗೆ ಮತದಾನದ ಹೋಲಿಕೆ ಸಾಧ್ಯವಿರುವ 176 ಸ್ಥಾನಗಳಲ್ಲಿ 148ರಲ್ಲಿ ವಿವಿಧ ಹಂತದ ಕುಸಿತವನ್ನು ಗಮನಿಸಲಾಗಿದೆ ಎಂದು ಡೇಟಾ ತೋರಿಸಿದೆ. ಉಳಿದವು ಡಿಲಿಮಿಟೇಶನ್‌ಗೆ ಒಳಗಾಗಿವೆ. 2019ರ ಲೋಕಸಭಾ ಚುನಾವಣೆಯ ನಂತರ 12 ಕ್ಷೇತ್ರಗಳಿಗೆ (ಅಸ್ಸಾಂನಲ್ಲಿ 10 ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು) ಹೋಲಿಕೆ ಸಾಧ್ಯವಿಲ್ಲ. ಇವು ಕ್ಷೇತ್ರ ಮರುಹಂಚಿಕೆಗೆ ಒಳಗಾಗಿವೆ. ಔಟರ್ ಮಣಿಪುರ ಪಿಸಿಯ ಹೋಲಿಕೆ ಸಾಧ್ಯವಿಲ್ಲ. ಏಕೆಂದರೆ ಅದು ಎರಡೂ ಹಂತಗಳಲ್ಲಿ ಭಾಗಶಃ ಮತದಾನ ಕಂಡಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ, 2019ರೊಂದಿಗೆ ಹೋಲಿಕೆ ಸಾಧ್ಯವಿರುವ ಮೊದಲ ಹಂತದಲ್ಲಿ ಮತದಾನ ಮಾಡಿದ 19 ರಾಜ್ಯಗಳು ಮತ್ತು ಯುಟಿಗಳಲ್ಲಿ, 16 ಕುಸಿತವನ್ನು ಕಂಡಿದೆ. ಎರಡನೇ ಹಂತದಲ್ಲಿ 11 ಪ್ರಾಂತ್ಯಗಳಲ್ಲಿ ಎಂಟರಲ್ಲಿ ಮತದಾನವು ಕುಸಿದಿದೆ. ಖಚಿತವಾಗಿ ಹೇಳುವುದಾದರೆ, ಅಂಚೆ ಮತಪತ್ರಗಳನ್ನು ಎಣಿಸಿದಾಗ ಮತದಾನದಲ್ಲಿ ಸಣ್ಣ ಇಳಿಕೆಯನ್ನು ಸರಿದೂಗಿಸಬಹುದು. 2024ರ ಮತದಾನದ ಸಂಖ್ಯೆಯಲ್ಲಿ ಇದನ್ನು ಇನ್ನೂ ಸೇರಿಸಿಲ್ಲ.

2019ರಲ್ಲಿ ಹಿಂದುಳಿದಿರುವ 148 ಕ್ಷೇತ್ರಗಳಲ್ಲಿ, 124 ಶೇಕಡಾ ಕ್ಷೇತ್ರಗಳಲ್ಲಿ ಎರಡು ಅಂಕಗಳಿಗಿಂತ ಹೆಚ್ಚು ಕುಸಿತ ದಾಖಲಿಸಿದೆ. ಈ 124 ಸ್ಥಾನಗಳಲ್ಲಿ, 57 ಕಡೆ ಶೇಕಡಾ ಐದಕ್ಕಿಂತ ಅಧಿಕ ಮತ್ತು 7 ಕಡೆ ಶೇಕಡಾ 10ಕ್ಕಿಂತ ಹೆಚ್ಚಿನ ಶೇಕಡಾವಾರು ಅಂಕಗಳ ಮತದಾನದ ಕುಸಿತವನ್ನು ದಾಖಲಿಸಿದೆ.

ಮತದಾನದಲ್ಲಿ ಅತಿ ಹೆಚ್ಚು ಕುಸಿತ ಕಂಡ ಏಳು ಸ್ಥಾನಗಳೆಂದರೆ: ನಾಗಾಲ್ಯಾಂಡ್ (2019ಕ್ಕೆ ಹೋಲಿಸಿದರೆ ಶೇಕಡಾ 25.2 ಕುಸಿತ); ಮಧ್ಯಪ್ರದೇಶದಲ್ಲಿ ಸಿಧಿ (ಶೇಕಡಾ 13); ಉತ್ತರ ಪ್ರದೇಶದ ಮಥುರಾ (ಶೇಕಡಾ 11.6); ಮಧ್ಯಪ್ರದೇಶದ ಖಜುರಾಹೊ (ಶೇ. 11.31), ಮಧ್ಯಪ್ರದೇಶದ ರೇವಾ (ಶೇ. 10.9); ಕೇರಳದ ಪತ್ತನಂತಿಟ್ಟ (ಶೇಕಡಾ 10.9 ಅಂಕಗಳು); ಮತ್ತು ಮಧ್ಯಪ್ರದೇಶದ ಶಾಧೋಲ್ (10.1 ಶೇಕಡಾ ಅಂಕಗಳು).

ಮೊದಲ ಸುತ್ತಿನ ಮತದಾನದಲ್ಲಿ 66.22% ಪುರುಷ ಮತದಾರರು ತಮ್ಮ ಹಕ್ಕು ಚಲಾಯಿಸಿದರೆ, 66.07% ಮಹಿಳಾ ಮತದಾರರು ಮತದಾನ ಮಾಡಿದರು. 31.32% ಅರ್ಹ ತೃತೀಯ ಲಿಂಗಿ ಮತದಾರರು ಮತ ಚಲಾಯಿಸಿದ್ದಾರೆ ಎಂದು ಡೇಟಾ ತೋರಿಸಿದೆ. ಎರಡನೇ ಹಂತದಲ್ಲಿ, 66.99% ಅರ್ಹ ಪುರುಷ ಮತದಾರರು ಮತ ಚಲಾಯಿಸಿದರೆ, ಈ ಅಂಕಿ ಅಂಶವು ಮಹಿಳಾ ಮತದಾರರಿಗೆ 66.42% ಆಗಿತ್ತು. ಸುಮಾರು 24% ತೃತೀಯ ಲಿಂಗಿಗಳು ಮತ ಚಲಾಯಿಸಿದರು. 85 ವರ್ಷಕ್ಕಿಂತ ಮೇಲ್ಪಟ್ಟ ಜನರು ಅಥವಾ ಅಂಗವಿಕಲರ ಬಗ್ಗೆ ಡೇಟಾವನ್ನು ಇಸಿ ಬಿಡುಗಡೆ ಮಾಡಿ. ಇವರು ಮನೆಯಿಂದ ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಈ ಲೋಕಸಭಾ ಚುನಾವಣೆ ಭಾರತದ ಸುವರ್ಣ ಯುಗಕ್ಕೆ ನಾಂದಿ: ಪ್ರಲ್ಹಾದ್‌ ಜೋಶಿ

Continue Reading

ಪ್ರಮುಖ ಸುದ್ದಿ

Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

Narendra Modi: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಪರೋಕ್ಷ ದಾಳಿ ನಡೆಸಿದ ಮೋದಿ, ರಾಜ್ಯದಲ್ಲಿ ಡಬಲ್ ಆರ್ (ಆರ್​ಆರ್​ಆರ್​​) ತೆರಿಗೆ ಮೂಲಕ ಸಂಗ್ರಹಿಸಿದ ಹಣವನ್ನು ದೆಹಲಿಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿದರು. ಜಾಗತಿಕ ಮೆಚ್ಚುಗೆ ಪಡೆದ ಬ್ಲಾಕ್ಬಸ್ಟರ್ ತೆಲುಗು ಚಿತ್ರ ‘ಆರ್​ಆರ್​​ಆರ್​ ಅನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

VISTARANEWS.COM


on

Narendra modi
Koo

ನವದೆಹಲಿ: ನಾನು ಬದುಕಿರುವವರೆಗೂ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಸಿಗುತ್ತಿರುವ ಮೀಸಲಾತಿಯ ಪಾಲನ್ನು ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಕೊಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಮಂಗಳವಾರ ಹೇಳಿದ್ದಾರೆ. ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್​ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಪ್ರೇರೇಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಅಲ್ಲದೆ, ತಮ್ಮ ಮೂರನೇ ಅವಧಿಯಲ್ಲಿ ಸಂವಿಧಾನದ 75 ನೇ ವರ್ಷವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತನೆ ಎಂದು ಹೇಳಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಪರೋಕ್ಷ ದಾಳಿ ನಡೆಸಿದ ಮೋದಿ, ರಾಜ್ಯದಲ್ಲಿ ಡಬಲ್ ಆರ್ (ಆರ್​ಆರ್​ಆರ್​​) ತೆರಿಗೆ ಮೂಲಕ ಸಂಗ್ರಹಿಸಿದ ಹಣವನ್ನು ದೆಹಲಿಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿದರು. ಜಾಗತಿಕ ಮೆಚ್ಚುಗೆ ಪಡೆದ ಬ್ಲಾಕ್ಬಸ್ಟರ್ ತೆಲುಗು ಚಿತ್ರ ‘ಆರ್​ಆರ್​​ಆರ್​ ಅನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

ನಕಲಿ ವೀಡಿಯೊ ಪ್ರಕರಣದ ಬಗ್ಗೆ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡ ಅವರು, ಜನರನ್ನು ದಾರಿತಪ್ಪಿಸಲು ಮತ್ತು ಸಮಾಜದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಕಾಂಗ್ರೆಸ್​ ಈ ರೀತಿ ಮಾಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತಿನ ಶೇಕಡಾ 55 ರಷ್ಟು ಆನುವಂಶಿಕ ತೆರಿಗೆಯನ್ನು ವಿಧಿಸುತ್ತದೆ ಎಂದು ಆರೋಪಿಸಿದ ಮೋದಿ, ಇಡೀ ಜಗತ್ತು ಆರ್ಥಿಕವಾಗಿ ಪ್ರಗತಿ ಹೊಂದುತ್ತಿರುವಾಗ ಹಿಂದಿನ ಯುಪಿಎ ಸರ್ಕಾರದ ಅಡಿಯಲ್ಲಿ ಭಾರತವು ನೀತಿ ನಿಷ್ಕ್ರಿಯತೆಯಿಂದ ಬಳಲುತ್ತಿತ್ತು ಎಂದು ಹೇಳಿದರು.

ಇದನ್ನೂ ಓದಿ: Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅವರು ಆನುವಂಶಿಕ ತೆರಿಗೆಯನ್ನು ತರುತ್ತಾರೆ. ಪಿತ್ರಾರ್ಜಿತ ಆಸ್ತಿಯ ಮೇಲೆ (ಪೋಷಕರಿಂದ ಪಡೆದ) ಅರ್ಧಕ್ಕಿಂತ ಹೆಚ್ಚು ತೆರಿಗೆ ಸಂಗ್ರಹಿಸಲು ಕಾಂಗ್ರೆಸ್ ಯೋಜಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಸುಳ್ಳು ಭರವಸೆ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೆಲ್ಲಾ ಅದು ಐದು ರಾಜಕೀಯ ಅಜೆಂಡಾಗಳನ್ನು ಹೊಂದಿತ್ತು. ಮೊದಲನೆಯದು, ಸುಳ್ಳು ಭರವಸೆಗಳು; ಎರಡನೆಯದು, ವೋಟ್ ಬ್ಯಾಂಕ್ ರಾಜಕಾರಣ, ಮೂರನೆಯದು, ಮಾಫಿಯಾ ಮತ್ತು ಅಪರಾಧಿಗಳನ್ನು ಬೆಂಬಲಿಸುವುದು, ನಾಲ್ಕನೆಯದು ವಂಶಪಾರಂಪರ್ಯ ರಾಜಕಾರಣ ಮತ್ತು ಐದನೆಯದು ಭ್ರಷ್ಟಾಚಾರ.ಮೊದಲು ತೆಲಂಗಾಣವನ್ನು ಲೂಟಿ ಮಾಡಿದ್ದು ಬಿಆರ್​ಎಸ್​್. ಈಗ ಕಾಂಗ್ರೆಸ್ ಎಂದು ಮೋದಿ ಆರೋಪಿಸಿದರು.

Continue Reading

Lok Sabha Election 2024

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

Lok Sabha Election: ಲೋಕಸಭಾ ಚುನಾವಣೆಯ ಎರಡು ಹಂತಗಳ ಮತದಾನ ಯಶಸ್ವಿಯಾಗಿ ಮುಗಿದಿದೆ. ಈ ಎರಡು ಹಂತಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನ ನಡೆದಿದೆ ಎನ್ನುವ ಅಂತಿಮ ಅಂಕಿ-ಅಂಶವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ಶೇ. 66.14ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದರೆ, ಎರಡನೇ ಹಂತದಲ್ಲಿ ಶೇ. 66.71ರಷ್ಟು ಮತದಾನವಾಗಿದೆ. 2019ಕ್ಕೆ ಹೋಲಿಸಿದರೆ ಮತದಾನದ ಪ್ರಮಾಣ ಕುಸಿದಿದೆ. ಕಳೆದ ಬಾರಿ ಮೊದಲ ಮತ್ತು ಎರಡನೇ ಹಂತಗಳಲ್ಲಿ ಕ್ರಮವಾಗಿ ಶೇ. 69.43 ಮತ್ತು ಶೇ. 69.17ರಷ್ಟು ಮತದಾನವಾಗಿತ್ತು.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಎರಡು ಹಂತಗಳ ಮತದಾನ ಯಶಸ್ವಿಯಾಗಿ ಮುಗಿದಿದೆ. ಇನ್ನು 5 ಹಂತಗಳ ಮತದಾನ ಬಾಕಿ ಇದೆ. ಈ ಮಧ್ಯೆ ಚುನಾವಣಾ ಆಯೋಗ (Election Commission) ಎರಡೂ ಹಂತಗಳಲ್ಲಿ ನಡೆದ ಒಟ್ಟು ಮತದಾನದ ನಿಖಿರ ಅಂಕಿ ಅಂಶವನ್ನು ಮಂಗಳವಾರ ಬಿಡುಗಡೆ ಮಾಡಿದೆ. ಈ 18ನೇ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ. 66.14ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದರೆ, ಎರಡನೇ ಹಂತದಲ್ಲಿ ಶೇ. 66.71ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮೊದಲ ಹಂತದಲ್ಲಿ ಏಪ್ರಿಲ್ 19ರಂದು 102 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಎರಡನೇ ಹಂತದಲ್ಲಿ ಏಪ್ರಿಲ್ 26ರಂದು ಕರ್ನಾಟಕದ 14 ಕ್ಷೇತ್ರ ಸೇರಿ ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ಮುಗಿದಿದೆ. 2019ರ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯ ಎರಡು ಹಂತಗಳಲ್ಲಿ ಮತದಾನದ ಪ್ರಮಾಣವು ಕುಸಿತ ಕಂಡಿದೆ. 2019ರಲ್ಲಿ ಮೊದಲ ಮತ್ತು ಎರಡನೇ ಹಂತಗಳಲ್ಲಿ ಕ್ರಮವಾಗಿ ಶೇ. 69.43 ಮತ್ತು ಶೇ. 69.17ರಷ್ಟು ಮತದಾನವಾಗಿತ್ತು.

ಅತ್ಯಧಿಕ ಎಲ್ಲಿ?

ಮೊದಲ ಹಂತದಲ್ಲಿ ಲಕ್ಷದ್ವೀಪದಲ್ಲಿ ಅತೀ ಹೆಚ್ಚು ಮತದಾನ ನಡೆದಿತ್ತು. ಇಲ್ಲಿ ಶೇ. 84.1 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು. ಅದೇ ರೀತಿ ಅತೀ ಕಡಿಮೆ ಬಿಹಾರದಲ್ಲಿ ದಾಖಲಾಗಿತ್ತು. ಇಲ್ಲಿ ಕೇವಲ ಶೇ. 49.26ರಷ್ಟು ಮತದಾನವಾಗಿತ್ತು. ಏಪ್ರಿಲ್‌ 19ರಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಆಯೋಜಿಸಲಾಗಿತ್ತು.

ಇನ್ನು ಎರಡನೇ ಹಂತದಲ್ಲಿ ಮಣಿಪುರದಲ್ಲಿ ಅಧಿಕ ಪ್ರಮಾಣದಲ್ಲಿ ಅಂದರೆ ಶೇ. 84.85 ಮತ ಚಲಾವಣೆಯಾದರೆ ಅತೀ ಕಡಿಮೆ ಉತ್ತರ ಪ್ರದೇಶದಲ್ಲಿ ದಾಖಲಾಗಿದೆ. ಇಲ್ಲಿ ಶೇ. 55.19 ಮಂದಿ ಮಾತ್ರ ವೋಟು ಹಾಕಿದ್ದಾರೆ. ಎರಡನೇ ಹಂತದಲ್ಲಿ ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಈ ವೇಳೆ 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ

ಕರ್ನಾಟಕದಲ್ಲಿ ದಾಖಲೆಯ ಮತದಾನ

ಕರ್ನಾಟಕದ 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ. 69.23 ಮತದಾನ ದಾಖಲಾಗಿತ್ತು. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿತ್ತು. ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಮೂರನೇ ಹಂತದಲ್ಲಿ ಅಂದರೆ ಮೇ 7ರಂದು ಕರ್ನಾಟಕದ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Continue Reading
Advertisement
Hassan Pen Drive Case HDK behind Prajwal Pen Drive release DK Brothers allegations
ಹಾಸನ47 seconds ago

Hassan Pen Drive Case: ಪ್ರಜ್ವಲ್‌ ಪೆನ್‌ಡ್ರೈವ್‌ ರಿಲೀಸ್‌ ಹಿಂದೆ ಎಚ್‌ಡಿಕೆ? ಡಿಕೆ ಬ್ರದರ್ಸ್‌ ಹೇಳಿದ ಸ್ಫೋಟಕ ಮಾಹಿತಿ ಏನು?

SMART Missile
ಪ್ರಮುಖ ಸುದ್ದಿ3 mins ago

SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Covishield vaccine supreme court
ಪ್ರಮುಖ ಸುದ್ದಿ14 mins ago

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Kantara Movie Massive Set Constructed In Kundapura
ಸ್ಯಾಂಡಲ್ ವುಡ್17 mins ago

Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Drowned in water in raichur and karwar
ಕ್ರೈಂ23 mins ago

Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

Viral News
ವೈರಲ್ ನ್ಯೂಸ್26 mins ago

Viral News: ಕೊಲೆಯಾಗಿದ್ದಾರೆ ಎನ್ನಲಾದ ಸಹೋದರಿಯರು ವರ್ಷದ ಬಳಿಕ ಪತ್ತೆ; ಯಾವ ಸಿನಿಮಾಕ್ಕೂ ಕಡಿಮೆ ಇಲ್ಲ ಈ ಘಟನೆ

IPL 2024 Points Table
ಕ್ರೀಡೆ28 mins ago

IPL 2024 Points Table: 3ನೇ ಸ್ಥಾನಕ್ಕೇರಿದ ಲಕ್ನೋ; ಕುಸಿತ ಕಂಡ ಹಾಲಿ ಚಾಂಪಿಯನ್​ ಚೆನ್ನೈ

Hassan Pen Drive Case
ದೇಶ49 mins ago

Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

australia t20 world cup
ಕ್ರೀಡೆ55 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

E-Pass Mandatory
ಪ್ರವಾಸ2 hours ago

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌