Site icon Vistara News

Fact Check : ಹಿಂದುಗಳ ಮತ ಕಾಂಗ್ರೆಸ್‌ಗೆ ಬೇಡ; ಮುಸ್ಲಿಂ ಮತ ಮಾತ್ರವೇ ಸಾಕೆಂದರೇ ಸಿಎಂ ಸಿದ್ದರಾಮಯ್ಯ?

CM Siddaramaiah

Lok Sabha Election: INDIA Bloc May Not Get Absolute Majority, Says CM Siddaramaiah

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ “ಹಿಂದುಗಳ ಮತ (Hindu Votes) ನಮಗೆ ಬೇಡ, ಮುಸ್ಲಿಮರ ವೋಟು (Muslims Vote) ನಮಗೆ ಸಾಕು” ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಾಂಗ್ರೆಸ್‌ ಕಾರ್ಯಕರ್ತರ ಹೋಬಳಿ ಮಟ್ಟದ ಸಭೆಯಲ್ಲಿ ಹೇಳಿದ್ದಾರೆಂಬ ಸುದ್ದಿಯು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಬಳಿಕ ಈ ಕುರಿತು ಫ್ಯಾಕ್ಟ್‌ ಚೆಕ್‌ (Fact Check) ಸಹ ನಡೆದು ಸುಳ್ಳು ಸುದ್ದಿ ಎಂದು ಗೊತ್ತಾಗಿದೆ. ಇದಕ್ಕೀಗ ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ತಾವು ಇಂಥ ಹೇಳಿಕೆಯನು ತಾವು ನೀಡಿಯೇ ಇಲ್ಲ. ಇಂಥ ಸುಳ್ಳು ಸುದ್ದಿಗಳನ್ನು (Fake News) ಪ್ರಕಟ ಮಾಡಿದವರ ಚಳಿ ಬಿಡಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ ಸಿದ್ದರಾಮಯ್ಯ, ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಎಚ್ಚರಿಕೆಯನ್ನು ರವಾನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾ ಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ” ಎಂದು ಖಡಕ್‌ ವಾರ್ನಿಂಗ್‌ ಅನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಒಕ್ಕಲಿಗ ಪಾಲಿಟಿಕ್ಸ್‌ಗೆ ನಿರ್ಮಲಾನಂದನಾಥ ಶ್ರೀಗಳ ಎಳೆದು ತಂದ ಡಿಕೆಶಿ! ತಿರುಗಿಬಿದ್ದ ನಾಯಕರು

ಟ್ವೀಟ್‌ ಮಾಡಿ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಿಂದ ದೂರು

ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾನೂನು ಘಟಕದ ಹರೀಶ್ ನಾಗರಾಜು ಎಂಬುವವರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗಿರುವ ಸುದ್ದಿಯ ತುಣುಕು ಸುಳ್ಳಾಗಿದ್ದು, ಇದು ವೈರಲ್‌ ಆಗಿದೆ. ಹೀಗಾಗಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

Exit mobile version