Site icon Vistara News

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

Rahul Gandhi And Tejashwi Yadav

INDIA bloc in Bihar seals seat-sharing deal, RJD gets 26 seats, Congress 9

ಪಟನಾ: ಲೋಕಸಭೆ ಚುನಾವಣೆಗೆ (Lok Sabha Election) ಇಂಡಿಯಾ ಒಕ್ಕೂಟವೂ (India Bloc) ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅಥವಾ ಮಹಾಘಟಬಂಧನದ ಪಕ್ಷಗಳು ಸೀಟು ಹಂಚಿಕೆ ಮಾಡಿಕೊಂಡಿವೆ. ಆರ್‌ಜೆಡಿಯು (RJD) 26 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಇನ್ನು ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಎಡ ಪಕ್ಷವು ಐದು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ. ಇದರೊಂದಿಗೆ ಇಂಡಿಯಾ ಒಕ್ಕೂಟದಲ್ಲಿ ಬಿಹಾರದಲ್ಲಿ ಒಮ್ಮತ ಮೂಡಿದಂತಾಗಿದೆ.

ಕಿಶನ್‌ ಗಂಜ್‌ ಹಾಗೂ ಪಟನಾ ಸಾಹಿಬ್‌ ಕ್ಷೇತ್ರಗಳು ಕಾಂಗ್ರೆಸ್‌ ಪಾಲಾಗಿವೆ. ಪೂರ್ಣಿಯಾ ಹಾಗೂ ಕಟಿಹಾರ್‌ನಲ್ಲಿ ಜೆಡಿಯು ಗೆಲುವು ಸಾಧಿಸಿದ್ದು, ಪೂರ್ಣಿಯಾದಲ್ಲಿ ಆರ್‌ಜೆಡಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮೊದಲು ಪೂರ್ಣಿಯಾ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ರಾಜ್ಯಸಭೆ ಸದಸ್ಯೆ ರಂಜೀತ್‌ ರಂಜನ್‌ ಅವರ ಪತಿ ಪಪ್ಪು ಯಾದವ್‌ ಅವರು ಇಲ್ಲಿ ಸ್ಪರ್ಧಿಸಲಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಪಪ್ಪು ಯಾದವ್‌ ಕೂಡ ಟಿಕೆಟ್‌ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಬಿಹಾರದಲ್ಲಿ ಲೋಕ ಸಭಾ ಚುನಾವಣೆಗೆ ಎನ್​ಡಿಎ ಬಣದ ಸೀಟು ಹಂಚಿಕೆ ಒಪ್ಪಂದ ನಡೆದಿದೆ. ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಿತ್ರ ಪಕ್ಷ ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಪ್ರಕಟಿಸಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ 17, ಜೆಡಿಯು 16, ಎಲ್​ಜೆಪಿ (ರಾಮ್ ವಿಲಾಸ್) 5, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ತಲಾ 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ತಾವ್ಡೆ ಎಎನ್ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

ಬಿಹಾರದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧಿಸಲಿದೆ

  1. ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): ವೈಶಾಲಿ, ಹಾಜಿಪುರ, ಸಮಸ್ತಿಪುರ, ಖಗರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಎಲ್ಜೆಪಿ (ರಾಮ್ ವಿಲಾಸ್) ಸ್ಪರ್ಧಿಸಲಿದೆ.
  2. ಹಿಂದೂಸ್ತಾನಿ ಅವಾಮ್ ಮೋರ್ಚಾ ಗಯಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ
  3. ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಕರಕಾಟ್ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version