ಬೆಂಗಳೂರು: ಮೊನ್ನೆ ಬೆಂಗಳೂರು ಜಿಲ್ಲಾಡಳಿತದ ಅದೊಂದು ಆದೇಶಕ್ಕೆ ಮದ್ಯ ಪ್ರಿಯರು ಮದ್ಯದಂಗಡಿಗಳಿಗೆ ಮುಗಿಬೀಳುತ್ತಿದ್ದಾರೆ. 5 ದಿನಗಳ ಕಾಲ ಮದ್ಯದಂಗಡಿಗಳು ಕ್ಲೋಸ್ (Liquor ban) ಆಗುವ ಕಹಿ ಸುದ್ದಿಯನ್ನು ಕೇಳಿದ್ದೆ ತಡ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್ ಇಟ್ಟುಕೊಳ್ಳಲು ಮುಂದಾಗುತ್ತಿದ್ದಾರೆ.
ಅಂದಹಾಗೇ ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜಧಾನಿ ಬೆಂಗಳೂರಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಮತ ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧ (Liquor Bandh) ಮಾಡಿ ಮದ್ಯ ಮಾರಾಟ ರಹಿತ ದಿನಗಳೆಂದು (Dry day) ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ
ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3 ರವರೆಗೆ ಬಾರ್ ಬಂದ್ ಬಂದ್ ಆಗಲಿದೆ. ಅದೇ ರೀತಿ, ಜೂನ್ 4 ರಂದು ದೇಶದಾದ್ಯಂತ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಇದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.
ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಆ ದಿನವು ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಹೀಗಾಗಿ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್ ಇಟ್ಟುಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ